Connect with us

ಸ್ಥಳೀಯ

Rakshit Shivaram-ವಿದ್ಯಾದೇಗುಲದಲ್ಲಿ ದ್ವೇಷದ ಭಾಷಣ ಸಲ್ಲದು; ಮಕ್ಕಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿ ದ್ವೇಷವನ್ನಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Published

on



Ad Widget

Ad Widget

Ad Widget

Ad Widget

“ಶಾಲೆ ಎನ್ನುವುದು ಮಕ್ಕಳಿಗೆ ಜ್ಞಾನ, ಸಂಸ್ಕಾರ, ಮಾನವೀಯತೆ ಮತ್ತು ಸಹಬಾಳ್ವೆಯ ಪಾಠ ಕಲಿಸುವ ಪವಿತ್ರ ಸ್ಥಳವೇ ಹೊರತು, ಅದು ಯಾವುದೇ ರಾಜಕೀಯ ಪಕ್ಷದ ಪ್ರಚಾರ ವೇದಿಕೆಯಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

ಬೆಳ್ತಂಗಡಿ: “ಶಾಲೆ ಎನ್ನುವುದು ಮಕ್ಕಳಿಗೆ ಜ್ಞಾನ, ಸಂಸ್ಕಾರ, ಮಾನವೀಯತೆ ಮತ್ತು ಸಹಬಾಳ್ವೆಯ ಪಾಠ ಕಲಿಸುವ ಪವಿತ್ರ ಸ್ಥಳವೇ ಹೊರತು, ಅದು ಯಾವುದೇ ರಾಜಕೀಯ ಪಕ್ಷದ ಪ್ರಚಾರ ವೇದಿಕೆಯಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುಂಜಾಲಕಟ್ಟೆ ಶಾಲಾ ಆವರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ನಡೆದ ರಾಜಕೀಯ ಪ್ರೇರಿತ ಭಾಷಣವು ದ್ವೇಷ ಭಾವನೆಯಿಂದ ಕೂಡಿದೆ “ಮಕ್ಕಳ ಕೈಯಲ್ಲಿ ಪುಸ್ತಕಗಳಿರಬೇಕೇ ಹೊರತು ರಾಜಕೀಯ ದ್ವೇಷದ ವಿಷಬೀಜಗಳಲ್ಲ. ಅವರ ಮನಸ್ಸಿನಲ್ಲಿ ಪ್ರಶ್ನಿಸುವ ಜಿಜ್ಞಾಸೆ, ಪ್ರೀತಿಸುವ ಹೃದಯ ಮತ್ತು ಭವಿಷ್ಯದ ಕನಸುಗಳು ಬೆಳೆಯಬೇಕೇ ಹೊರತು ಪಕ್ಷಪಾತದ ಮನೋಭಾವವಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

Ad Widget

Ad Widget <> Ad Widget

“ಜ್ಞಾನದ ಮಂದಿರದಲ್ಲಿ ನಿಂತು ಮುಗ್ಧ ಮಕ್ಕಳ ಮುಂದೆ ವಿರೋಧ ಪಕ್ಷದ ವಿರುದ್ಧ ದ್ವೇಷದ ಮಾತುಗಳನ್ನಾಡುವುದು ಯಾವ ಸಂಸ್ಕಾರ ಮತ್ತು ಯಾವ ರಾಜಕೀಯ ಪ್ರಬುದ್ಧತೆ?” ಎಂದು ಪ್ರಶ್ನಿಸಿರುವ ಅವರು, ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾದರೂ ಅವುಗಳನ್ನು ಶಾಲಾ ಮಕ್ಕಳ ಮನಸ್ಸಿಗೆ ತುಂಬುವ ಹಕ್ಕು ಯಾರಿಗೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



Ad Widget

“ಶಾಲೆಗಳು ರಾಜಕೀಯ ದ್ವೇಷ ಬಿತ್ತುವ ಜಾಗಗಳಲ್ಲ; ಅವು ಭವಿಷ್ಯದ ಭಾರತವನ್ನು ಕಟ್ಟುವ ದೇವಾಲಯಗಳು. ರಾಜಕೀಯ ಲಾಭಕ್ಕಾಗಿ ಮಕ್ಕಳ ಭವಿಷ್ಯವನ್ನು ಬಲಿಕೊಡದೆ, ಶಾಲಾ ಆವರಣದ ಪಾವಿತ್ರ್ಯವನ್ನು ಕಾಪಾಡಬೇಕು. ಮಕ್ಕಳಿಗೆ ಶಿಕ್ಷಣ ನೀಡಿ, ದ್ವೇಷವನ್ನಲ್ಲ” ಎಂದು ರಕ್ಷಿತ್ ಶಿವರಾಂ ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Click to comment

Leave a Reply

ಶಿಕ್ಷಣ

Excel-ಎಕ್ಸೆಲ್ ಗುರುವಾಯನಕೆರೆ: ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶದಲ್ಲಿ- ಮಹೋನ್ನತ ಸಾಧನೆ; ವಾಣಿಜ್ಯ ವಿಭಾಗದ 23 ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್‌ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ ಎಸ್ ಎಕ್ಸಿಕ್ಯೂಟಿವ್ ಲೆವೆಲ್ ಗೆ ಆಯ್ಮೆಯಾಗಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Ad Widget

Ad Widget

Ad Widget

ಗುರುವಾಯನಕೆರೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್‌ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್‌ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ ಎಸ್ ಎಕ್ಸಿಕ್ಯೂಟಿವ್ ಲೆವೆಲ್ ಗೆ ಆಯ್ಮೆಯಾಗಿ ಕಾಲೇಜಿನ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆಯ್ಕೆಗೊಂಡ ವಿದ್ಯಾರ್ಥಿಗಳು
ಕೆ ಆರ್‌ ಧನುಷ್‌ – 274 ಅಂಕ
ದಿತೀಕ್ಷ್‌ ಹೆಗ್ಡೆ – 266
ನೀಲ್‌ ವಿಶ್ವನಾಥ್‌ – 257
ನಿಕ್ಷಯ್‌ ವಿ ಎ – 254
ಮೊಹಮ್ಮದ್‌ ನವೀದ್‌ – 257
ಎ ಶೀತಲ್‌ ಸಿಂಗ್‌ – 246
ಧನಂಜಯ್‌ ಕುಮಾರ್‌ ಎಂ.ಪಿ 244
ಮೋನಿಶಾ ಕೆ ಎಸ್‌ – 243
ರಿಧಿ ಶೆಟ್ಟಿ – 240
ಪ್ರನವ್‌ ಭಕ್ತ – 233
ದೇದಾಕ್ಷ – 227
ಕೆ ಜೆ ದಿಗಂತ್‌ ಜೈನ್‌ 220
ಅನ್ವಿತಾ ಎಂ ಆರ್‌ 219
ಮನ್ವಿತ್‌ ಜೆ – 212
ವಿದ್ಯಾ – 210
ಪ್ರವೀಣ್‌ ಪಿ ಆರ್‌ 208
ಯಶಸ್‌ ಎಸ್‌ 208
ಶ್ರಯಾಂತ್‌ ಕೆ ಗೌಡ 203
ಆಯಿಷತ್ತುಲ್‌ ಮಿಶ್ರಿಯಾ 202
ಮೊಹಮ್ಮದ್‌ ಶಾಜ್‌ 201
ಧನ್ವಿತ್‌ ಶೆಟ್ಟಿ 200
ಪಂಚಮಿ ಜೆ ಎನ್‌ 200
ಯತೀಶ್‌ ಎಸ್‌ 200

Ad Widget

Ad Widget <> Ad Widget

ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.



Ad Widget

ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್‌ ಜೈನ್‌, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಮಂಗಳೂರು

Mangalore-ಮಂಗಳೂರು: ಸುರತ್ಕಲ್ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತಾ ಇಲಾಖೆಯಿಂದ ಅನಿರೀಕ್ಷಿತ ದಾಳಿ

Published

on



Ad Widget

Ad Widget

Ad Widget

Ad Widget

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.

Ad Widget

Ad Widget

Ad Widget

ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಿ, ಸುರತ್ಕಲ್ ವ್ಯಾಪ್ತಿಯ ವಿವಿಧ ಹೋಟೆಲ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಆಹಾರ ತಯಾರಿಕಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಲಾಯಿತು.

Ad Widget

Ad Widget <> Ad Widget

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸುರತ್ಕಲ್‌ನ ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕಿಟ್ ಆನ್‌ಲೈನ್ ಪ್ಲಾಟ್‌ಫಾರ್ಮ್, ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್ ಹಾಗೂ ಎನ್‌ಐಟಿಕೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಆಹಾರ ಪೂರೈಕೆ ಮಾಡುವ ಅಡುಗೆ ಘಟಕಗಳಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಲಾಯಿತು.



Ad Widget

ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ, ಆಹಾರ ತಯಾರಿಕಾ ಕ್ರಮಗಳು ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು.

Ad Widget

Ad Widget

ಸಾರ್ವಜನಿಕರಿಗೆ ಸುರಕ್ಷಿತ, ಸ್ವಚ್ಛ ಹಾಗೂ ಗುಣಮಟ್ಟದ ಆಹಾರ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ವಿಭಾಗದ ಉಪಕುಲಸಚಿವ ವಿಪಿನ್ ನಾಯ್ಕ್ ಅವರಿಗೆ ಭೌತಶಾಸ್ತ್ರದಲ್ಲಿ ಪಿಎಚ್.ಡಿ. ಪದವಿ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ.

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಅವರು ಸಲ್ಲಿಸಿದ ‘ಸ್ಟಡಿ ಆಫ್ ಹೆವಿ ಮೆಸಾನ್ ಸ್ಪೆಕ್ಟ್ರಮ್ ಅಂಡ್ ಡೀಕೇಸ್ ಇನ್ ದಿ ಫ್ರೇಮ್ವರ್ಕ್ ಆಫ್ ಕ್ವಾರ್ಕ್ ಮೋಡೆಲ್ಸ್’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಈ ಪದವಿ ಲಭಿಸಿದೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಕೆ. ಬಿ. ವಿಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಸೈದ್ಧಾಂತಿಕ ಸಂಶೋಧನೆ ನಡೆಸಿರುವ ಇವರು, ಭೌತಶಾಸ್ತ್ರ ವಿಷಯದಲ್ಲಿ NET ಹಾಗೂ KSET ಅರ್ಹತೆ ಕೂಡ ಪಡೆದಿದ್ದಾರೆ.

Ad Widget

Ad Widget <> Ad Widget

ಅಂತಾರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ 6 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿರುವುದರ ಜೊತೆಗೆ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ 25ಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾಳದ ಸತೀಶ್ ನಾಯ್ಕ್ ಮತ್ತು ಉಷಾ ದಂಪತಿಯ ಪುತ್ರ.



Ad Widget

ಪ್ರಸ್ತುತ ಡಾ.ವಿಪಿನ್ ನಾಯ್ಕ್ ಕಾಲೇಜಿನ ಶೈಕ್ಷಣಿಕ ವಿಭಾಗದ ಉಪಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!