ಸ್ಥಳೀಯ
Complaint-ಪುಂಜಲಾಕಟ್ಟೆ ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ದ್ವೇಷ ಭಾಷಣ : ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಯುವ ಕಾಂಗ್ರೆಸ್ ನಿಂದ ದೂರು ದಾಖಲು
ಸರ್ಕಾರಿ ಪ್ರಾಯೋಜಿತ ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಂಡು, ರಾಜಕೀಯ ಪಕ್ಷದ ವಿರುದ್ಧ ಹಾಗೂ ನಿರ್ದಿಷ್ಟ ನಾಯಕರ ಪರ ಘೋಷಣೆ ಕೂಗಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ ಕಾಂಗ್ರೆಸ್ ನಿಂದ ಮುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳ್ತಂಗಡಿ: ಸರ್ಕಾರಿ ಪ್ರಾಯೋಜಿತ ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಂಡು, ರಾಜಕೀಯ ಪಕ್ಷದ ವಿರುದ್ಧ ಹಾಗೂ ನಿರ್ದಿಷ್ಟ ನಾಯಕರ ಪರ ಘೋಷಣೆ ಕೂಗಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ ಕಾಂಗ್ರೆಸ್ ನಿಂದ ಮುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಘಟನೆಯ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಮುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನವೆಂಬರ್ 14, 2026 ರಂದು ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ಖಾಸಗಿ ಸಂಸ್ಥೆಯೊಂದಕ್ಕೆ ಅಭಿನಂದನೆ ಸಲ್ಲಿಸುವ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ ಅವರು ಮಾಡಿರುವ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ದೂರಿನಲ್ಲಿರುವ ಪ್ರಮುಖ ಆರೋಪಗಳು:
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, “ನಿಮ್ಮ ಶಾಲೆಗೆ ಒಂದು ರೂಪಾಯಿ ಸಹಾಯ ಮಾಡದ ದರಿದ್ರ ಪಾರ್ಟಿ ಕಾಂಗ್ರೆಸ್ ಬೆಳ್ತಂಗಡಿಯಲ್ಲಿದೆ. ಅವರು ದೂರು ಕೊಟ್ಟು ಇಲ್ಲಿಯ ಶಿಕ್ಷಕರಿಗೆ ಚಿತ್ರಹಿಂಸೆ ನೀಡಿ ಶಾಲೆಯ ಕಾರ್ಯಕ್ರಮ ಬದಲಿಸಿದ್ದಾರೆ. ಇಂತಹ ದರಿದ್ರ ಪಕ್ಷವನ್ನು ನಂಬಿ ಹೋಗಬೇಡಿ, ದೇಶ ಇರುವುದು ನರೇಂದ್ರ ಮೋದಿಯವರ ನೇತೃತ್ವದಲ್ಲಿ” ಎಂದು ರಾಜಕೀಯ ಪಕ್ಷವೊಂದರ ವಿರುದ್ಧ ಅವಹೇಳನಕಾರಿ ಹಾಗೂ ರಾಜಕೀಯ ಪ್ರೇರಿತ ಹೇಳಿಕೆ ನೀಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ಭಾಷಣದ ಕೊನೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ನರೇಂದ್ರ ಮೋದಿ ಅವರಿಗೆ ಜಯಕಾರದ ಘೋಷಣೆಗಳನ್ನು ಕೂಗಿಸಲಾಗಿದೆ ಎಂದು ಆರೋಪಿಸಲಾಗಿದೆ.
ಶಾಲೆಯು ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ಮತ್ತು ಉತ್ತಮ ನಾಗರಿಕ ಮೌಲ್ಯಗಳನ್ನು ಕಲಿಸಬೇಕಾದ ಪವಿತ್ರ ಸ್ಥಳವಾಗಿದ್ದು, ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರೋಧವಾಗಿ ಪ್ರಚಾರ ಮಾಡುವ ವೇದಿಕೆಯಲ್ಲ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮತ್ತು ಅವರ ಮೂಲಕ ಘೋಷಣೆ ಕೂಗಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಕಾನೂನಿಗೆ ವಿರುದ್ಧವಾಗಿದೆ.
ಮಕ್ಕಳಿಗೆ ರಾಜಕೀಯ ವಿಚಾರಗಳ ಬಗ್ಗೆ ಸ್ವತಂತ್ರವಾಗಿ ಯೋಚಿಸುವ ಮತ್ತು ಅಭಿಪ್ರಾಯ ರೂಪಿಸಿಕೊಳ್ಳುವ ಹಕ್ಕಿದ್ದು, ಅವರನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುವುದು ಅವರ ಶಿಕ್ಷಣದ ವಾತಾವರಣ ಹಾಗೂ ಮಕ್ಕಳ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವ ಕಾಂಗ್ರೆಸ್ ಆಗ್ರಹ:
ಶಾಲಾ ಕಾರ್ಯಕ್ರಮದಲ್ಲಿ ಶಾಸಕರು ರಾಜಕೀಯ ಭಾಷಣ ಮಾಡಿರುವುದು ಹಾಗೂ ವಿದ್ಯಾರ್ಥಿಗಳಿಂದ ಘೋಷಣೆ ಕೂಗಿಸಿರುವುದು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ತಟಸ್ಥತೆ ಮತ್ತು ಘನತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದ್ದರಿಂದ ಈ ದೂರನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಾನೂನಿನ ಪ್ರಕಾರ ಸೂಕ್ತ ಕ್ರಮ ಜರುಗಿಸಬೇಕೆಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ನವೀನ್ ಕುಮಾರ್ ಕೆ ಅವರು ಮುಂಜಾಲಕಟ್ಟೆ ಆರಕ್ಷಕ ಠಾಣಾಧಿಕಾರಿಗಳಿಗೆ ನೀಡಿದ ದೂರಿನಲ್ಲಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾವೂರು, ಹಾಗೂ ಜೋಶಿಲ್ ಲಾಯಿಲ, ನಜೀರ್ ಉಪಸ್ಥಿತರಿದ್ದರು.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬಿಗ್ ನ್ಯೂಸ್
Protest-ಮೇನಾಲ ಕೋಳಿ ತ್ಯಾಜ್ಯ ಘಟಕ ತೆರವಿಗೆ ಆಗ್ರಹ: ನ.17ರಂದು ಬೃಹತ್ ಪ್ರತಿಭಟನೆಗೆ ಕರೆ
ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ ಇಂದು (ನ.17) ಮಧ್ಯಾಹ್ನ 2 ಗಂಟೆಗೆ ಈಶ್ವರಮಂಗಲ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ ನ.17ರಂದು ಮಧ್ಯಾಹ್ನ 2 ಗಂಟೆಗೆ ಈಶ್ವರಮಂಗಲ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಜಾಗೃತ ಹಿಂದೂ ಜಾಗರಣ ಈಶ್ವರಮಂಗಲ, ಎಸ್‌ಕೆಎಸ್‌ಎಸ್‌ಎಫ್ ಮೇನಾಲ ಯೂನಿಟ್, ಎಸ್‌ಎಸ್‌ಎಫ್ ಮೇನಾಲ ಯೂನಿಟ್, ಸರ್ವಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತ್ತು ಮೇನಾಲ-ಈಶ್ವರಮಂಗಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಘಟಕದಿಂದ ಪರಿಸರದಲ್ಲಿ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರ ಆರೋಗ್ಯ ಮತ್ತು ನೆಮ್ಮದಿಗೆ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈಗಾಗಲೇ ಕಾನೂನು ಹೋರಾಟ ನಡೆಸಿದ್ದರು. ಈ ಸಂಬಂಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 21088/2024ರ ವಿಚಾರಣೆ ನಡೆದಿದ್ದು, 2026ರ ಅ.29ರಂದು ಆದೇಶ ಹೊರಡಿಸಲಾಗಿದೆ.
ವಿಚಾರಣೆ ವೇಳೆ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೆ.22ರಂದು ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ, ಆದೇಶ ಹೊರಬಿದ್ದಿದ್ದರೂ ಘಟಕವನ್ನು ವಾಸ್ತವವಾಗಿ ಮುಚ್ಚಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ಮೇನಾಲದ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪುತ್ತೂರು ತಹಶೀಲ್ದಾರ್, ಸಹಾಯಕ ಆಯುಕ್ತರು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಹೈಕೋರ್ಟ್ ಆದೇಶವನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ್ದಾರೆ.
ಘಟಕವನ್ನು ಕೂಡಲೇ ಮುಚ್ಚಬೇಕು, ಸ್ಥಗಿತ ಆದೇಶ ಜಾರಿಗೊಳಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ತನಿಖೆ ನಡೆಸಬೇಕು ಮತ್ತು ಘಟಕ ನಿಜವಾಗಿಯೂ ಸ್ಥಗಿತಗೊಂಡಿರುವುದನ್ನು ಸ್ಥಳ ಪರಿಶೀಲನೆ ಮೂಲಕ ಖಚಿತಪಡಿಸಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
ನ.17ರಂದು ಮಧ್ಯಾಹ್ನ 2 ಗಂಟೆಗೆ ಈಶ್ವರಮಂಗಲ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಮನವಿಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮುಂದಿನ ಹಂತದಲ್ಲಿ ಬೃಹತ್ ಸಾರ್ವಜನಿಕ ಪ್ರತಿಭಟನೆ, ಕಾಲ್ನಡಿಗೆ ಜಾಥಾ ಹಾಗೂ ಕಾನೂನು ಹೋರಾಟ ಮುಂದುವರಿಸುವುದಾಗಿಯೂ ನಾಗರಿಕ ಹಿತರಕ್ಷಣಾ ಸಮಿತಿ ಎಚ್ಚರಿಸಿದೆ.
ಶಿಕ್ಷಣ
Vivekananda-ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿವೇಕ ಸ್ಮೃತಿ ಕಾರ್ಯಕ್ರಮ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಇದರ ಸಹಯೋಗದಲ್ಲಿ ನಡೆದ ‘ವಿವೇಕ ಸ್ಮೃತಿ ಸಂಚಿಕೆ-34’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲದ ಟಿಎಪಿಎಂಐ ನ ಪ್ರೊ. ನಂದನ್ ಪ್ರಭು ಮಾತನಾಡಿದರು.
ಪುತ್ತೂರು: ನಮ್ಮಲ್ಲಿರುವ ತಪ್ಪು ವಿಚಾರವನ್ನು ತೊಡೆದು ಹಾಕುವುದೇ ಆಧ್ಯಾತ್ಮವಾಗಿದೆ. ತರ್ಕದ ಭಾಷೆಯಲ್ಲಿ ಆಧ್ಯಾತ್ಮವನ್ನು ಜಗತ್ತಿನ ಮುಂದಿಡಬೇಕು. ಆಗ ಜಗತ್ತಿಗೆ ಅಧ್ಯಾತ್ಮದ ಸಾರ ಪ್ರಕಟವಾಗುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾಮಿ ವಿವೇಕಾನಂದರ ಕೊಡುಗೆ ಅಪಾರ. ವಿಜ್ಞಾನ ಕ್ಷೇತ್ರದಲ್ಲಿ ಸದಾ ಹೊಸ ಅನ್ವೇಷಣೆಗಳು ನಡೆಯುತ್ತವೆ. ಅಂತೆಯೇ ಜಗತ್ತಿನಲ್ಲಿ ಬರುವಂತಹ ವಿನೂತನ ವಿಚಾರವನ್ನು ನಮ್ಮ ಕಲಿಕೆಯಲ್ಲೂ ಅಳವಡಿಸಿಕೊಳ್ಳಬಹುದು. ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯ ಜೊತೆಗೆ ನಮ್ಮ ಹೊಸ ಆಲೋಚನೆಗಳನ್ನು ಬಳಸಿಕೊಳ್ಳುವುದರ ಮೂಲಕ ಬದಲಾವಣೆ ತರಲು ಸಾಧ್ಯ ಎಂದು ಮಣಿಪಾಲದ ಟಿಎಪಿಎಂಐ ನ ಪ್ರೊ. ನಂದನ್ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಇದರ ಸಹಯೋಗದಲ್ಲಿ ನಡೆದ ‘ವಿವೇಕ ಸ್ಮೃತಿ ಸಂಚಿಕೆ-34’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ನಿರ್ದೇಶಕಿ ವೇದ ಲಕ್ಷಿö್ಮÃಕಾಂತ ಆಚಾರ್ಯ ಮಾತನಾಡಿ, ವಿವೇಕಾನಂದರು ಕೇವಲ ಆಧ್ಯಾತ್ಮಿಕ ಗುರುಗಳಾಗಿರದೆ, ಜಗತ್ತಿಗೆ ಭಾರತದ ಸಂಸ್ಕೃತಿ, ಆಧ್ಯಾತ್ಮಿಕ ಶಕ್ತಿ ಜೊತೆಗೆ ಮಾನವೀಯತೆಯನ್ನು ಪರಿಚಯಿಸಿದವರು. ಯುವ ಜನತೆ ದೇಶದ ಶಕ್ತಿ ಎನ್ನುವುದು ವಿವೇಕಾನಂದರ ನಂಬಿಕೆಯಾಗಿತ್ತು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಜೀವನವನ್ನು ಬೆಳೆಸಿಕೊಳ್ಳುವುದರೊಂದಿಗೆ ದೇಶಕ್ಕೆ ತಮ್ಮಿಂದಾಗುವ ಸಹಾಯವನ್ನು ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ವರದರಾಜ್ ಚಂದ್ರಗಿರಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ಕಾಲೇಜಿನ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್, ವಿವೇಕಾನಂದ ಉಪಸ್ಥಿತರಿದ್ದರು.
-
ರಾಜಕೀಯ23 hours agoPuttur-ಅಳಿಯ ಹರೀಶ್ ಪೂಂಜಾಗೆ ಮಾವ ಕೃಷ್ಣಪ್ರಸಾದ್ ಆಳ್ವ ತಿರುಗೇಟು: ‘ಮೊದಲು ಪಕ್ಷ, ಆಮೇಲೆ ಸಂಬಂಧ’!
-
ಅಪರಾಧ23 hours agoPuttur-ಪುತ್ತೂರು: ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: 9.50 ಲಕ್ಷ ರೂ. ಮೌಲ್ಯದ ವಾಹನ, ದನಗಳು ವಶ; ಚಾಲಕ ಸೇರಿ ಇಬ್ಬರ ವಿರುದ್ಧ ಕೇಸ್
-
ಅಪರಾಧ23 hours agoNDPS case-ಪುತ್ತೂರು: ಮಾದಕ ವಸ್ತು ಸೇವನೆ-ಮೂವರು ಯುವಕರ ವಿರುದ್ಧ NDPS ಕೇಸ್
-
ಅಂತರ ರಾಜ್ಯ18 hours agoArrested-ಲವ್ ಬ್ರೇಕಪ್ ನಿಂದ ಮನನೊಂದು ಮಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್
-
ಅಪರಾಧ16 hours agoMangalore-ಮಂಗಳೂರು: ಮೊಟ್ಟೆ ಸಾಗಾಟದ ಲಾರಿಯಲ್ಲಿ ಅಕ್ರಮವಾಗಿ 16 ಎತ್ತುಗಳ ಸಾಗಾಟ: ಲಾರಿ ಚಾಲಕ ಸಹಿತ ಇಬ್ಬರ ಬಂಧನ
-
ಅಂತರ ರಾಜ್ಯ22 hours agoCyclone-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಿಗೆ ಚಂಡಮಾರುತದ ಎಚ್ಚರಿಕೆ..!
-
ಶಿಕ್ಷಣ17 hours agoExcel-ಎಕ್ಸೆಲ್ ಗುರುವಾಯನಕೆರೆ: ರಾಷ್ಟ್ರ ಮಟ್ಟದ ಸಿಎಸ್ಇಇಟಿ ಫಲಿತಾಂಶದಲ್ಲಿ- ಮಹೋನ್ನತ ಸಾಧನೆ; ವಾಣಿಜ್ಯ ವಿಭಾಗದ 23 ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆ
-
ರಾಜಕೀಯ22 hours agoState government-ಮಂಗಳೂರಿನ ಒಂದೇ ದಿನದ ಸಂಪುಟ ಸಭೆಗೆ 3.83 ಕೋಟಿ ರೂ. ವೆಚ್ಚ..! ರಾಜ್ಯ ಸರಕಾರದ ಖರ್ಚು ಈಗ ಚರ್ಚೆಗೆ















