Connect with us

ಬಿಗ್ ನ್ಯೂಸ್

Government employees-ಸರ್ಕಾರಿ ನೌಕರರಿಗೆ ಡಿ.1ರಿಂದ ಹೊಸ ರೂಲ್ಸ್: ಕೈಯಲ್ಲಿರುವ ನಗದು, ಕಚೇರಿಯಿಂದ ಹೊರಹೋಗುವ ಮಾಹಿತಿ ಆ್ಯಪ್‌ನಲ್ಲಿ ದಾಖಲಿಸುವುದು ಕಡ್ಡಾಯ..!

Published

on



Ad Widget

Ad Widget

Ad Widget

Ad Widget

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ ವೈಯಕ್ತಿಕ ನಗದು ಮೊತ್ತ ಹಾಗೂ ಕಚೇರಿ ವೇಳೆಯಲ್ಲಿ ಹೊರಗೆ ತೆರಳುವ ಮಾಹಿತಿಯನ್ನು ಕಡ್ಡಾಯವಾಗಿ ‘ಕರ್ತವ್ಯ’ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸಬೇಕು ಎಂದು ಪ್ರಜಾಸೇವಾ ಇಲಾಖೆ ಆದೇಶ ಹೊರಡಿಸಿದೆ. ಈ ಹೊಸ ನಿಯಮ ಡಿಸೆಂಬರ್ 1ರಿಂದ ಜಾರಿಗೆ ಬರಲಿದೆ.

Ad Widget

Ad Widget

Ad Widget

ಬೆಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ ವೈಯಕ್ತಿಕ ನಗದು ಮೊತ್ತ ಹಾಗೂ ಕಚೇರಿ ವೇಳೆಯಲ್ಲಿ ಹೊರಗೆ ತೆರಳುವ ಮಾಹಿತಿಯನ್ನು ಕಡ್ಡಾಯವಾಗಿ ‘ಕರ್ತವ್ಯ’ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸಬೇಕು ಎಂದು ಪ್ರಜಾಸೇವಾ ಇಲಾಖೆ ಆದೇಶ ಹೊರಡಿಸಿದೆ. ಈ ಹೊಸ ನಿಯಮ ಡಿಸೆಂಬರ್ 1ರಿಂದ ಜಾರಿಗೆ ಬರಲಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರಿ ನೌಕರರು ಪ್ರತಿದಿನ ಕಚೇರಿಗೆ ಹಾಜರಾಗುವಾಗ ತಮ್ಮ ಬಳಿ ಇರುವ ವೈಯಕ್ತಿಕ ನಗದು ಮೊತ್ತವನ್ನು ನಗದು ವಹಿಯಲ್ಲಿ ನಮೂದಿಸಬೇಕಿತ್ತು. ಅಲ್ಲದೆ, ಕಚೇರಿ ವೇಳೆಯಲ್ಲಿ ಅಧಿಕೃತ ಕೆಲಸಗಳಿಗಾಗಿ ಹೊರಗೆ ತೆರಳುವ ಸಂದರ್ಭ ಚಲನವಲನ ವಹಿಯಲ್ಲಿ ವಿವರ ದಾಖಲಿಸಿ ಮೇಲಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿತ್ತು.

Ad Widget

Ad Widget <> Ad Widget

ಆದರೆ, ಹಲವು ಸರ್ಕಾರಿ ಕಚೇರಿಗಳಲ್ಲಿ ಈ ಭೌತಿಕ ರಿಜಿಸ್ಟರ್‌ಗಳನ್ನು ಸಮರ್ಪಕವಾಗಿ ನಿರ್ವಹಿಸದೆ ನಿರ್ಲಕ್ಷ್ಯ ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಳೆಯ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಿ, ಎರಡೂ ಪ್ರಕ್ರಿಯೆಗಳನ್ನು ‘ಕರ್ತವ್ಯ’ ಆ್ಯಪ್ ಮೂಲಕ ನಿರ್ವಹಿಸಲು ನಿರ್ಧರಿಸಲಾಗಿದೆ.



Ad Widget

ಕರ್ತವ್ಯ ಆ್ಯಪ್‌ನಲ್ಲೇ ಎಲ್ಲ ವಿವರ ದಾಖಲು
ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳು, ನಿಗಮಗಳು ಹಾಗೂ ಮಂಡಳಿಗಳ ನೌಕರರ ಹಾಜರಾತಿಗಾಗಿ ಈಗಾಗಲೇ ಜಾರಿಯಲ್ಲಿರುವ KAAMS ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್‌ನಲ್ಲೇ ನೂತನ ಸೌಲಭ್ಯವನ್ನು ಕಲ್ಪಿಸಲಾಗಿದೆ.

Ad Widget

Ad Widget

ಇದರಂತೆ, ನೌಕರರು ಕಚೇರಿಗೆ ಪ್ರವೇಶಿಸಿದ ತಕ್ಷಣ ತಮ್ಮ ಬಳಿ ಇರುವ ವೈಯಕ್ತಿಕ ನಗದು ಮೊತ್ತದ ವಿವರವನ್ನು ಆ್ಯಪ್‌ನಲ್ಲಿ ದಾಖಲಿಸಬೇಕು. ಅದೇ ರೀತಿ, ಕಚೇರಿ ವೇಳೆಯಲ್ಲಿ ಅಧಿಕೃತ ಕಾರ್ಯಗಳ ನಿಮಿತ್ತ ಹೊರಗೆ ತೆರಳುವಾಗಲೂ ಅದರ ಉದ್ದೇಶ ಮತ್ತು ಅಗತ್ಯ ಮಾಹಿತಿಯನ್ನು ನಮೂದಿಸಿ ಮೇಲಧಿಕಾರಿಗಳ ಅನುಮೋದನೆ ಪಡೆಯಬೇಕು.

ನಿಯಮ ಉಲ್ಲಂಘಿಸಿದರೆ ಶಿಸ್ತುಕ್ರಮದ ಎಚ್ಚರಿಕೆ
ನೌಕರರು ಆ್ಯಪ್‌ನಲ್ಲಿ ಅಗತ್ಯ ಮಾಹಿತಿಯನ್ನು ಸರಿಯಾಗಿ ದಾಖಲಿಸುತ್ತಿದ್ದಾರೆಯೇ ಎಂಬುದನ್ನು ಆಯಾ ಇಲಾಖೆಗಳ ಮುಖ್ಯಸ್ಥರು ಹಾಗೂ ಮೇಲಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ.

ಡಿಸೆಂಬರ್ 1ರಿಂದ ಈ ನಿಯಮ ಕಡ್ಡಾಯವಾಗಿ ಜಾರಿಯಾಗಲಿದ್ದು, ಮಾಹಿತಿ ದಾಖಲಿಸಲು ವಿಫಲರಾಗುವ ಅಥವಾ ನಿಯಮ ಪಾಲಿಸದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸಕ್ಷಮ ಪ್ರಾಧಿಕಾರದ ಮೂಲಕ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

Ad Widget
Click to comment

Leave a Reply

ಸ್ಥಳೀಯ

Soujanya murder case-BIG Breaking: ಸೌಜನ್ಯ ಕೊಲೆ ಪ್ರಕರಣ – ಮಣ್ಣ ಸಂಕಕ್ಕೆ ಆಗಮಿಸಿದ ಮೆಡಿಕಲ್ ಬೋರ್ಡ್ ತಂಡ ಮೂವರು FSL ತಜ್ಞ ವೈದ್ಯರಿಂದ ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಘಟನಾ ಸ್ಥಳದ ವೈಜ್ಞಾನಿಕ ಪರಿಶೀಲನೆಗೆ ಮುಂದಾಗಿದೆ. ಎಫ್‌ಎಸ್‌ಎಲ್ ವಿಭಾಗದ ತಜ್ಞ ವೈದ್ಯರನ್ನೊಳಗೊಂಡ ಮೆಡಿಕಲ್ ಬೋರ್ಡ್ ತಂಡ ನ.17ರಂದು ಸಂಜೆ ಧರ್ಮಸ್ಥಳ ಗ್ರಾಮದ ಮಣ್ಣಸಂಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Ad Widget

Ad Widget

Ad Widget

ಬೆಳ್ತಂಗಡಿ: ರಾಜ್ಯಾದ್ಯಂತ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ಘಟನಾ ಸ್ಥಳದ ವೈಜ್ಞಾನಿಕ ಪರಿಶೀಲನೆಗೆ ಮುಂದಾಗಿದೆ. ಇದರ ಭಾಗವಾಗಿ ಎಫ್‌ಎಸ್‌ಎಲ್ ವಿಭಾಗದ ತಜ್ಞ ವೈದ್ಯರನ್ನೊಳಗೊಂಡ ಮೆಡಿಕಲ್ ಬೋರ್ಡ್ ತಂಡ ನ.17ರಂದು ಸಂಜೆ ಧರ್ಮಸ್ಥಳ ಗ್ರಾಮದ ಮಣ್ಣಸಂಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Ad Widget

Ad Widget alt="Ad Widget"/>

Ad Widget

ಸೌಜನ್ಯ ಪ್ರಕರಣದ ಮರುತನಿಖೆಯ ಹಿನ್ನೆಲೆಯಲ್ಲಿ ಎಸ್‌ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಅವರ ನೇತೃತ್ವದಲ್ಲಿ ಮೆಡಿಕಲ್ ಬೋರ್ಡ್ ರಚಿಸಲಾಗಿದ್ದು, ಬೆಂಗಳೂರು, ಬೆಳಗಾವಿ ಹಾಗೂ ಹಾವೇರಿ ಭಾಗದ ಮೂವರು ನುರಿತ ಎಫ್‌ಎಸ್‌ಎಲ್ ತಜ್ಞ ವೈದ್ಯರನ್ನು ತಂಡದಲ್ಲಿ ಸೇರ್ಪಡೆಗೊಳಿಸಲಾಗಿದೆ. ತಂಡದಲ್ಲಿ ಓರ್ವ ಮಹಿಳಾ ವೈದ್ಯೆ ಹಾಗೂ ಇಬ್ಬರು ಪುರುಷ ವೈದ್ಯರು ಇದ್ದಾರೆ.

Ad Widget

Ad Widget <> Ad Widget

ನ.17ರಂದು ಸಂಜೆ ಸುಮಾರು 4 ಗಂಟೆಗೆ ಇಬ್ಬರು ಎಸ್‌ಐಟಿ ಅಧಿಕಾರಿಗಳೊಂದಿಗೆ ಮಣ್ಣಸಂಕಕ್ಕೆ ಆಗಮಿಸಿದ ಮೂವರು ತಜ್ಞ ವೈದ್ಯರು, ಸೌಜನ್ಯ ಅವರ ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಹಾಗೂ ಪೊಲೀಸ್ ಸಿಬ್ಬಂದಿಯೂ ಉಪಸ್ಥಿತರಿದ್ದರು.



Ad Widget

ಹಳೆಯ ಫೋಟೋ, ವಿಡಿಯೋಗಳ ಪರಿಶೀಲನೆ
ಘಟನಾ ಸ್ಥಳದ ಪರಿಶೀಲನೆಯ ಜೊತೆಗೆ ಸೌಜನ್ಯ ಅವರ ಮೃತದೇಹ ಪತ್ತೆಯಾದ ದಿನದ ಛಾಯಾಚಿತ್ರಗಳು ಹಾಗೂ ವಿಡಿಯೋ ದಾಖಲೆಗಳನ್ನೂ ಮೆಡಿಕಲ್ ಬೋರ್ಡ್ ಪರಿಶೀಲಿಸಲಿದೆ ಎಂದು ತಿಳಿದುಬಂದಿದೆ. ಲಭ್ಯವಿರುವ ದಾಖಲೆಗಳು ಮತ್ತು ಸ್ಥಳದಲ್ಲಿನ ಭೌತಿಕ ಅಂಶಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ, ಘಟನೆ ನಡೆದ ಸ್ಥಳದ ಕುರಿತು ನಿಖರವಾದ ಅಭಿಪ್ರಾಯವನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸುವುದು ತಜ್ಞರ ತಂಡದ ಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ.

Ad Widget

Ad Widget

ಈ ಪರಿಶೀಲನೆಯಿಂದ ಪ್ರಕರಣದ ಮರುತನಿಖೆಗೆ ಯಾವ ರೀತಿಯ ಹೊಸ ವೈಜ್ಞಾನಿಕ ಮಾಹಿತಿ ಲಭ್ಯವಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ತಜ್ಞ ವೈದ್ಯರ ಪರಿಶೀಲನೆ ಹಾಗೂ ವರದಿಯ ಆಧಾರದ ಮೇಲೆ ಎಸ್‌ಐಟಿ ಮುಂದಿನ ತನಿಖಾ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.

Ad Widget
Continue Reading

ಬಿಗ್ ನ್ಯೂಸ್

Venkatesh Prasad-ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಸ್ಕ್ರತ ಶಿಕ್ಷಕ ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ರಾಷ್ಟ್ರಮಟ್ಟಕ್ಕೆ

Published

on



Ad Widget

Ad Widget

Ad Widget

Ad Widget

ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು ನ.15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+ ವಯೋಮಾನದ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಹಾಗೂ 100ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಜಯಿಸಿರುತ್ತಾರೆ.

Ad Widget

Ad Widget

Ad Widget

ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು ನ.15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+ ವಯೋಮಾನದ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಹಾಗೂ 100ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಜಯಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಅಲ್ಲದೇ 5 ಕಿ. ಮೀ. ವೇಗದ ನಡಿಗೆಯಲ್ಲಿ 5ನೇ ಸ್ಥಾನ ಗಳಿಸಿ, ಮುಂದಿನ ವರ್ಷ ಜನವರಿಯಲ್ಲಿ ಉತ್ತರಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ಇವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ವಿದ್ಯಾ ಸಂಸ್ಥೆಗಳು, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.



Ad Widget

Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on



Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.



Ad Widget

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!