Connect with us

ಬಿಗ್ ನ್ಯೂಸ್

ಸುಬ್ರಹ್ಮಣ್ಯ : ನೆರೆಗೆ ಕೊಚ್ಚಿ ಹೋಗಿ ನಾಪತ್ತೆಯಾದ  ನಾಯಿ ಮರಿ 3 ದಿನಗಳ ಬಳಿಕ ಪತ್ತೆ – ಮನೆ , ಜಾನುವಾರು ಕಳಕೊಂಡು ನೋವಿನಲ್ಲಿದ್ದ ಕುಟುಂಬಸ್ಥರಲ್ಲಿ ಮೂಡಿತ್ತು ಸಂತೋಷದ ಬೆಳ್ಳಿ ಕಿರಣ

Published

on



Ad Widget

Ad Widget

Ad Widget

Ad Widget

ಸುರಿದ ರಣ ಭೀಕರ ಮಳೆಗೆ ಮನೆ ನೆಲಸಮವಾಗಿ ಸಾಕಿದ ಜಾನುವಾರುಗಳು ಮೃತಪಟ್ಟ ದಾರುಣ ಘಟನೆಯೊಂದು ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಗ್ರಾಮದಲ್ಲಿ ಸೋಮವಾರ  ರಾತ್ರಿ ನಡೆದಿತ್ತು . ಇದರ ಜತೆಗೆ ಮನೆ ಮಂದಿ ಪ್ರೀತಿಯಿಂದ ಸಾಕಿದ  ಎರಡು ಪಮೋರಿಯನ್‌ ತಳಿಯ ನಾಯಿ ಮರಿಗಳು ಕೂಡ ನಾಪತ್ತೆಯಾಗಿದ್ದವು. ಆದರೇ ಘಟನೆ ನಡೆದ 3 ದಿನಗಳ ಬಳಿಕ ಈ ನಾಯಿ ಮರಿಗಳು ಮನೆಯಿಂದ 2.5 ಕಿಮೀ ದೂರದಲ್ಲಿ ಪತ್ತೆಯಾಗಿದ್ದು ಮನೆ, ಜಾನುವಾರು  ಕಳಕೊಂಡ ನೋವಿನ ನಡುವೆಯೂ ಸಂತೋಷದ ಬೆಳ್ಳಿ ಕಿರಣವೊಂದು ಮೂಡುವಂತಾಗಿದೆ.

Ad Widget

Ad Widget

Ad Widget

Ad Widget

ಈ ಭಾಗದ ಇತಿಹಾಸದಲ್ಲೆ ಕಂಡು ಕೇಳರಿಯದ ರಣ ಭೀಕರ ಮಳೆಯೊಂದು ಸೋಮವಾರ ಸಂಜೆಯಿಂದ ಮಧ್ಯರಾತ್ರಿಯವರೆಗೆ ಕೊಲ್ಲಮೊಗ್ರು , ಹರಿಹರ ಕುಕ್ಕೆ ಸುಬ್ರಹ್ಮಣ್ಯ ಸಹಿತ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಸುರಿದಿತ್ತು. ಈ ಮಳೆಗೆ ಕೊಲ್ಲಮೊಗ್ರು ಗ್ರಾಮದ ದೋಲನ ಮನೆ ಎಂಬಲ್ಲಿನ ಲಲಿತಾ ಎಂಬವರ ಮನೆ ಕೊಚ್ಚಿ ಹೋಗಿತ್ತು. ಆದರೇ ಲಲಿತಾ ಅವರು ಕೊನೆ ಕ್ಷಣದಲ್ಲಿ ಮನೆ ಜಾನುವಾರುಗಳನ್ನು ಬಿಟ್ಟು ಬೇರೆ ಮನೆಗೆ ಸ್ಥಳಾಂತರಗೊಂಡ ಕಾರಣ ಬದುಕುಳಿದಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಲಲಿತಾ ಅವರ ಮನೆಯಲ್ಲಿ ಲಲಿತಾ ಹಾಗೂ ಅವರ ಪುತ್ರ ಹೇಮಂತ್‌ ವಾಸಿಸುತ್ತಿದ್ದರು.  ಸೋಮವಾರ ರಾತ್ರಿ ನೆರೆ ನೀರು  ನದಿಯಲ್ಲಿ ಉಕ್ಕಿ ತಮ್ಮ ಮನೆಯ ವಠಾರ ಪ್ರವೇಶಿಸಿದಾಗ ಲಲಿತಾರವರು ಬೇರೆ ದಾರಿ ಕಾಣದೆ ಬೇರೆ ಮನೆಗೆ ಸ್ಥಳಾಂತರಗೊಂಡರು. ಅವರ ಮಗ ಹೇಮಂತ್‌ ಸುಬ್ರಹ್ಮಣ್ಯಕ್ಕೆ ಹೋಗಿದ್ದವರು ಮನೆಗೆ ಮರಳುತ್ತಿದ್ದಾಗ ಹರಿಹರ ಪೇಟೆಯೆ ಮುಳುಗಿ ಹೋಗಿತ್ತು.  ಹೀಗಾಗಿ ಅನಿವಾರ್ಯವಾಗಿ ಅವರು ತಮ್ಮ ಪರಿಚಿತರ ಮನೆಯಲ್ಲಿ ಉಳಿದುಕೊಂಡರು.

Ad Widget

Ad Widget <> Ad Widget

ವರಮಹಾಲಕ್ಷ್ಮಿ ವ್ರತ : ಆಚರಣೆಯ ಪೌರಣಿಕ ಹಿನ್ನಲೆ – ಪೂಜೆಗೆ ಪ್ರಾಶಸ್ತ್ಯ ಸಮಯ – ಪೂಜೆಯ ವಿಧಾನ – ಪಠಿಸಬೇಕಾದ ಸ್ತೋತ್ರಗಳು | ಇಲ್ಲಿದೆ ಸಂಪೂರ್ಣ ವಿವರ



Ad Widget

ಮರು ದಿನ ಹೇಮಂತ್‌ ಹಾಗೂ ಲಲಿತಾರವರ ತಮ್ಮ ಮನೆ ಇದ್ದ ಜಾಗಕ್ಕೆ ಬಂದು ನೋಡಿದಾಗ, ಮನೆ ಸಂಪೂರ್ಣ ನಾಶವಾಗಿತ್ತು. ಸಾಕಿದ ಜಾನುವಾರುಗಳು ಉಸಿರು ಚೆಲ್ಲಿ ಬಿದ್ದಿದ್ದವು. ಪ್ರೀತಿಯಿಂದ ಸಾಕಿದ ನಾಯಿಗಳು ಕಣ್ಮರೆಯಾಗಿದ್ದವು. ಬದುಕೇ ಕೊಚ್ಚಿ ಹೋದ ಮೇಲೆ ನಾಯಿ ಮರಿಗಳ ಬಗ್ಗೆ ಚಿಂತಿಸಿ ಮಾಡುವುದೇನು , ಅದರ ಆಶೆಯನ್ನೆ ಬಿಟ್ಟು ಕುಟುಂಬಸ್ಥರು ಸುಮ್ಮನಾದರು.

Ad Widget

Ad Widget

ವಾಮಂಜೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ್ದ ಉಪ್ಪಿನಂಗಡಿ ಪೆರಿಯಡ್ಕದ ಪ್ರವೀಣನಿಗೆ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆ ಬಿಡುಗಡೆಗೆ ಆದೇಶ – ಸಂತ್ರಸ್ತ ಕುಟುಂಬದ ಆಕ್ಷೇಪ

 ಆದರೇ ನೀರಿನಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ರಾಜು ಮತ್ತು ರಾಣಿ ಪಮೋರಿಯನ್‌ ನಾಯಿ ಮರಿಗಳು  ಸುಮಾರು 2.5 ಕಿ. ಮೀ ದೂರದ ಚಾಂತಳ ಎಂಬಲ್ಲಿ ಜೀವಂತ ಪತ್ತೆಯಾದವು. ಇದನ್ನು ನೋಡಿ ಮನೆ ಮಂದಿಯ ಖುಷಿಗೆ ಪಾರವೇ ಇರಲಿಲ್ಲ. ಮನೆ ಮಠ ಕಳೆದುಕೊಂಡ ನೋವಿನಲ್ಲೂ ಮನೆ ಮಗ ಹೇಮಂತ್‌ ಆ ಪುಟ್ಟ ನಾಯಿ ಮರಿಗಳನ್ನು ತಬ್ಬಿ ಹಿಡಿದಿರುವ ಪೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಧರ್ಮಸ್ಥಳ : ನೇಣು ಬಿಗಿದು ಆತ್ಮಹತ್ಯೆ  ಮಾಡಿಕೊಂಡ ಪುಟ್ಟ ಮಗುವಿನ ತಾಯಿ

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading