ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
ನಿಧನ ವಾರ್ತೆ
Accident-ಸುಳ್ಯ: ಕಾರು ರಿವರ್ಸ್ ತೆಗೆಯುವಾಗ ಅವಘಡ: ಮಗನ ಕಾರಿನಡಿಗೆ ಸಿಲುಕಿ ತಾಯಿ ಮೃತ್ಯು
ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಕಾರಿನಡಿಗೆ ಸಿಲುಕಿ ತಾಯಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಸುಳ್ಯದ ದುಗಲಡ್ಕದಲ್ಲಿ ಸಂಭವಿಸಿದೆ. ದುಗಲಡ್ಕದ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಕ್ಕಳಲ್ಲಿ ಒಬ್ಬರು ಹಿಂದಕ್ಕೆ ತೆಗೆಯುತ್ತಿದ್ದಾಗ, ಕಾರಿನ ಹಿಂದೆ ನಿಂತಿದ್ದ ತಾಯಿಯನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಸುಳ್ಯ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಕಾರಿನಡಿಗೆ ಸಿಲುಕಿ ತಾಯಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಸುಳ್ಯದ ದುಗಲಡ್ಕದಲ್ಲಿ ಸಂಭವಿಸಿದೆ.
ದುಗಲಡ್ಕದ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಕ್ಕಳಲ್ಲಿ ಒಬ್ಬರು ಹಿಂದಕ್ಕೆ ತೆಗೆಯುತ್ತಿದ್ದಾಗ, ಕಾರಿನ ಹಿಂದೆ ನಿಂತಿದ್ದ ತಾಯಿಯನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ತಾಯಿ ಕಮರು ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ
ಕಾಣಿಯೂರು : ಚಾರ್ವಕದ ಕೋಳಿ ಅಂಕದಲ್ಲಿ ಹಣದ ಪಣ; ಪೊಲೀಸರ ದಾಳಿಗೆ ಜೂಜಾಟಗಾರರ ಪಲಾಯನ!; ಓರ್ವನ ಬಂಧನ

ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಪ್ರಭಾರ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.
ಈ ವೇಳೆ ಜೂಜಾಟದಲ್ಲಿ ತೊಡಗಿದ್ದವರು ಪೊಲೀಸರನ್ನು ಕಂಡು ಓಡಿಹೋಗಿದ್ದು, ಚಾರ್ವಾಕ ನಿವಾಸಿ ಬಾಲಕೃಷ್ಣ (46) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆತನ ಬಳಿಯಿಂದ ಜೂಜಾಟದಲ್ಲಿ ಗಳಿಸಿದ್ದ ₹1,030 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಸ್ಥಳದಲ್ಲಿದ್ದ ಐದು ಕೋಳಿಗಳು ಹಾಗೂ ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿಯನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
-
ನಿಧನ ವಾರ್ತೆ8 hours agoPuttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
-
ಅಂತರ ರಾಜ್ಯ5 hours agoVande Bharat train-ವಂದೇಭಾರತ್ ಟ್ರೈನ್ ಗೆ ಸಂಬಂಧಿಕರನ್ನು ಬಿಡಲು ಹೋಗಿ ಅಟೋಮೆಟಿಕ್ ಡೋರ್ ನಲ್ಲಿ 12 ಮಂದಿ ಲಾಕ್..! 36 ಸಾವಿರ ದಂಡ..!
-
ಬಿಗ್ ನ್ಯೂಸ್9 hours agoProtest-ಮೇನಾಲ ಕೋಳಿ ತ್ಯಾಜ್ಯ ಘಟಕ ತೆರವಿಗೆ ಆಗ್ರಹ: ನ.17ರಂದು ಬೃಹತ್ ಪ್ರತಿಭಟನೆಗೆ ಕರೆ
-
ಸ್ಥಳೀಯ9 hours agoComplaint-ಪುಂಜಲಾಕಟ್ಟೆ ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ದ್ವೇಷ ಭಾಷಣ : ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಯುವ ಕಾಂಗ್ರೆಸ್ ನಿಂದ ದೂರು ದಾಖಲು
-
ಅಂತರ ರಾಜ್ಯ8 hours agoArrested-ಆರು ಪವನ್ ಚಿನ್ನಕ್ಕಾಗಿ ಮಹಿಳೆಯ ಕೊಲೆ: 30 ವರ್ಷಗಳ ಬಳಿಕ ಎಐ ತಂತ್ರಜ್ಞಾನ ಬಳಸಿ ಆರೋಪಿಯ ಬಂಧನ..!
-
ಅಂತರ ರಾಜ್ಯ7 hours agoRAC ticket system-ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್? RAC ಟಿಕೆಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ರೈಲ್ವೆ ಚಿಂತನೆ..!
-
ಮಂಗಳೂರು8 hours agoMangalore-ಮಂಗಳೂರು: ಟೇಕಾಫ್ ಸಂದರ್ಭ ಇಂಡಿಗೋ ವಿಮಾನದ ಇಂಜಿನ್ ನಲ್ಲಿ ದೋಷ : ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ – 236 ಮಂದಿ ಪ್ರಯಾಣಿಕರು ಪಾರು
-
ನಿಧನ ವಾರ್ತೆ3 hours agoCar crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು















