Connect with us

ಕಾರ್ಯಕ್ರಮಗಳು

Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026

Published

on

Ad Widget

Ad Widget

Ad Widget

Ad Widget

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Ad Widget

Ad Widget <> Ad Widget

ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.

Ad Widget

Ad Widget

ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು

Ad Widget
Click to comment

Leave a Reply

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಸ್ಥಳೀಯ

Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

Ad Widget

Ad Widget <> Ad Widget

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್‌ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್‌. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

Ad Widget

Ad Widget

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು ದೀಪೋತ್ಸವದ ಸಂಭ್ರಮಕ್ಕೆ ಮುನ್ನುಡಿ: ಇಂದು ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಸಿದ್ಧತೆಗಳಿಗೆ ಇಂದು ಚಾಲನೆ ದೊರೆಯಲಿದೆ. ಡಿಸೆಂಬರ್ 8ರಂದು ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಚಪ್ಪರ ಮುಹೂರ್ತ ಇಂದು ಮಧ್ಯಾಹ್ನ 12.39ಕ್ಕೆ ನೆರವೇರಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಸಿದ್ಧತೆಗಳಿಗೆ ಇಂದು ಚಾಲನೆ ದೊರೆಯಲಿದೆ. ಡಿಸೆಂಬರ್ 8ರಂದು ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಚಪ್ಪರ ಮುಹೂರ್ತ ಇಂದು ಮಧ್ಯಾಹ್ನ 12.39ಕ್ಕೆ ನೆರವೇರಲಿದೆ.

Ad Widget

Ad Widget alt="Ad Widget"/>

Ad Widget

ಧಾರ್ಮಿಕತೆ, ಸಂಸ್ಕೃತಿ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶ ಸಾರುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದ ಚಪ್ಪರ ಮುಹೂರ್ತವು ಪುತ್ತೂರು ದೀಪೋತ್ಸವ ಸಮಿತಿ ಅಧ್ಯಕ್ಷ ಹಾಗೂ ಸಾಮಾಜಿಕ ಧುರೀಣ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿಗಳಾದ ಪಿ. ವಾಮನ್ ಪೈ, ಜಯಕುಮಾರ್ ನಾಯರ್, ಡಿ. ಶಿವಭಟ್ ಜ್ಯುವೆಲ್ಲರ್ಸ್‌ನ ಈಶ್ವರ ಮುರಳಿ ಹಾಗೂ ಮಣ್ಣಾಪು ಕೊರಗಜ್ಜ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ ಮಣ್ಣಾಪು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!