ರಾಜಕೀಯ
Puttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು ಪುತ್ತೂರಿಗೆ ಭೇಟಿ ನೀಡಲಿದ್ದು, ರಾಜಕೀಯ ವಲಯದಲ್ಲಿ ಈ ಭೇಟಿಯು ಕುತೂಹಲ ಮೂಡಿಸಿದೆ.
ಪುತ್ತೂರಿನ ಬಂಟರ ಭವನದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರ ವಿವಾಹ ಆರತಕ್ಷತೆ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇದಲ್ಲದೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ಶಾಸಕರು ಕೂಡ ಈ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೂಲತಃ ಕಡಬ ತಾಲೂಕಿನ ಸವಣೂರು ಸಮೀಪದ ಕೆಡೆಂಜಿ ಬಳಿಯ ಅರಲ್ತೆಡಿ ನಿವಾಸಿಯಾಗಿರುವ ಪ್ರಶಾಂತ್ ಅವರು ಪ್ರಸ್ತುತ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನಾಯಕರ ಈ ಭೇಟಿ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿನ ವಿವಾಹ ಸಮಾರಂಭಕ್ಕೆ ಆಗಮಿಸಿ, ಕಾರ್ಯಕ್ರಮ ಮುಗಿದ ಬಳಿಕ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಪುತ್ತೂರು ಬಿಜೆಪಿಯ ಪುನಶ್ಚೇತನಕ್ಕೆ ಸಿಗಲಿದೆಯೇ ಹೊಸ ದಿಕ್ಸೂಚಿ?
ಇನ್ನೊಂದೆಡೆ, ಕಳೆದ ಮೂರು ವರ್ಷಗಳಿಂದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ರಾಜಕೀಯ ಸಂಘರ್ಷಗಳಿಂದಾಗಿ ಸಂಘಟನಾತ್ಮಕವಾಗಿ ಸವಾಲುಗಳನ್ನು ಎದುರಿಸುತ್ತಿರುವ ಪುತ್ತೂರು ಬಿಜೆಪಿಗೆ ಈ ನಾಯಕರ ಭೇಟಿ ಹೊಸ ಚೈತನ್ಯ ನೀಡುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ನಾಳಿನ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ. ಸ್ಥಳೀಯ ಮಟ್ಟದಲ್ಲಿ ಮುಖಂಡರ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ನಾಯಕರು ಮಧ್ಯಪ್ರವೇಶಿಸಬಹುದೇ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ನಾಯಕರು ಖಾಸಗಿ ಕಾರ್ಯಕ್ರಮಕ್ಕೆ ಮಾತ್ರ ಆಗಮಿಸುತ್ತಿದ್ದರೂ, ಪುತ್ತೂರು ಬಿಜೆಪಿಯ ಇಂದಿನ ಸ್ಥಿತಿಗತಿ ಮತ್ತು ಸಂಘಟನೆಯ ಭವಿಷ್ಯದ ಕುರಿತು ಯಾವುದೇ ಅನೌಪಚಾರಿಕ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ, ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರ ಈ ಭೇಟಿಯು ಕೇವಲ ವಿವಾಹ ಸಮಾರಂಭಕ್ಕೆ ಸೀಮಿತವಾಗುತ್ತದೆಯೇ ಅಥವಾ ಅಥವಾ ಪುತ್ತೂರಿನ ಸ್ಥಳೀಯ ರಾಜಕೀಯಕ್ಕೆ ಯಾವುದಾದರೂ ಹೊಸ ಸಂದೇಶ ನೀಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
ಅಂತರ ರಾಜ್ಯ
Election Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಹಿಂದೂ ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನವದೀಪ್ ರಿನ್ವಾ, ಚುನಾವಣಾ ಆಯೋಗವು ಮತದಾರರ ಧರ್ಮ ಅಥವಾ ಜಾತಿಯ ಆಧಾರದಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಬಳಿಕ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬಂದಿವೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ರಾಜ್ಯದ ಪಂಚಾಯತ್ ಚುನಾವಣೆಯ ಮತದಾರರ ಪಟ್ಟಿಯಲ್ಲಿದ್ದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ಕಾಣೆಯಾಗಿವೆ ಎಂದು ಅವರು ಆರೋಪಿಸಿದ್ದರು. ಈ ವ್ಯತ್ಯಾಸಗಳ ಕುರಿತು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ ಎಂದೂ ತಿಳಿಸಿದ್ದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ, ಚುನಾವಣಾ ಇಲಾಖೆಯು ಮತದಾರರ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸಂಗ್ರಹಿಸುವುದಿಲ್ಲ. ಹೀಗಾಗಿ ಧರ್ಮ ಅಥವಾ ಜಾತಿಯ ಆಧಾರದ ಮೇಲೆ ಅಧಿಕೃತ ವಿಶ್ಲೇಷಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರ ದತ್ತಾಂಶದಲ್ಲಿ ಹೆಸರು, ತಂದೆ ಅಥವಾ ಸಂಗಾತಿಯ ಹೆಸರು, ವಯಸ್ಸು, ಮನೆ ಸಂಖ್ಯೆ ಹಾಗೂ ಲಿಂಗದಂತಹ ವಿವರಗಳು ಮಾತ್ರ ದಾಖಲಾಗಿರುತ್ತವೆ. ಧರ್ಮ ಮತ್ತು ಜಾತಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗದ ಡೇಟಾಬೇಸ್ನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಅವರು ವಿವರಿಸಿದರು.
ಮತದಾರರ ಪಟ್ಟಿಗಳು ಸಾರ್ವಜನಿಕ ದಾಖಲೆಗಳಾಗಿರುವುದರಿಂದ ಮಾಧ್ಯಮ ಸಂಸ್ಥೆಗಳು ಹಾಗೂ ಸ್ವತಂತ್ರ ವಿಶ್ಲೇಷಕರು ಮತದಾರರ ಹೆಸರುಗಳು ಮತ್ತು ಲಭ್ಯವಿರುವ ಇತರ ಮಾಹಿತಿಗಳ ಆಧಾರದಲ್ಲಿ ತಮ್ಮದೇ ಆದ ವಿಶ್ಲೇಷಣೆ ನಡೆಸಬಹುದು. ಆದರೆ ಅಂತಹ ವಿಶ್ಲೇಷಣೆಗಳನ್ನು ಚುನಾವಣಾ ಇಲಾಖೆಯ ಅಧಿಕೃತ ದತ್ತಾಂಶ ಅಥವಾ ಸಂಶೋಧನೆ ಎಂದು ಪರಿಗಣಿಸಬಾರದು ಎಂದು ರಿನ್ವಾ ಸ್ಪಷ್ಟಪಡಿಸಿದರು.
ಯುಪಿಯಲ್ಲಿ 13.58 ಕೋಟಿ ಮತದಾರರು
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 13.58 ಕೋಟಿ ಮತದಾರರಿದ್ದು, ಅವರಲ್ಲಿ 6.20 ಕೋಟಿ ಮಹಿಳಾ ಮತದಾರರು ಸೇರಿದ್ದಾರೆ ಎಂದು ನವದೀಪ್ ರಿನ್ವಾ ಮಾಹಿತಿ ನೀಡಿದರು.
ಏಪ್ರಿಲ್ನಲ್ಲಿ ಘೋಷಿಸಲಾಗಿದ್ದ ಎಸ್ಐಆರ್ ಪ್ರಕ್ರಿಯೆಯ ನಂತರ ನಡೆದ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್ಎಸ್ಆರ್) ಅವಧಿಯಲ್ಲಿ 18 ಲಕ್ಷಕ್ಕೂ ಅಧಿಕ ಮತದಾರರ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಪ್ರದೇಶದ ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 4ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳು ಮತ್ತು ಪರಿಷ್ಕರಣೆ ಪ್ರಕ್ರಿಯೆ ಇದೀಗ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ರಾಜಕೀಯ
Harish Rai Jarattaru-ಮಠಂದೂರು ಅರಿಯಡ್ಕಕ್ಕೆ 14.80 ಕೋ ರೂ ಅನುದಾನ ತಂದಿದ್ದು, ಈಗಿನ ಶಾಸಕರ ಅಭಿವೃದ್ದಿ ಪ್ಲೆಕ್ಸ್ ರೀಲ್ಸ್ ಗೆ ಸೀಮಿತ: ಹರೀಶ್ ರೈ ಜಾರತ್ತಾರು
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಅರಿಯಡ್ಕ ಮತ್ತು ಮಾಡೂರು ಶಕ್ತಿ ಕೇಂದ್ರಗಳ ನೇತೃತ್ವದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನ.12ರಂದು ಅರಿಯಡ್ಕ ಗ್ರಾಮ ಪಂಚಾಯತ್ ಬಳಿ ನಡೆಯಿತು.
ಕಾವು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಅರಿಯಡ್ಕ ಮತ್ತು ಮಾಡೂರು ಶಕ್ತಿ ಕೇಂದ್ರಗಳ ನೇತೃತ್ವದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನ.12ರಂದು ಅರಿಯಡ್ಕ ಗ್ರಾಮ ಪಂಚಾಯತ್ ಬಳಿ ನಡೆಯಿತು.
ಗೃಹಲಕ್ಷ್ಮಿ ಯೋಜನೆ ದೌರ್ಭಾಗ್ಯ ಲಕ್ಷ್ಮಿ ಯೋಜನೆಯಾಗಿದೆ: ಸಂಜೀವ ಮಠಂದೂರು
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು, ರಾಜ್ಯ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಬೆಲೆ ಏರಿಕೆಯ ಬಾಂಬ್ ಹಾಕುತ್ತಿದೆ ಎಂದು ಆರೋಪಿಸಿದರು. ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಗೊಳಿಸಿದ ಸರ್ಕಾರ, ಪುರುಷರ ಬಸ್ ಪ್ರಯಾಣದ ದರವನ್ನು ದುಪ್ಪಟ್ಟುಗೊಳಿಸುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದೆ ಎಂದರು.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ವಾಲ್ಮೀಕಿ ನಿಗಮದ ಹಣ ದುರುಪಯೋಗದ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಹಣದಲ್ಲೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಇದೀಗ ‘ದೌರ್ಭಾಗ್ಯ ಲಕ್ಷ್ಮಿ’ ಯೋಜನೆಯಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಶೂನ್ಯ: ದಯಾನಂದ ಶೆಟ್ಟಿ ಉಜಿರೆಮಾರು
ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮಾತನಾಡಿ, ಸ್ಥಳೀಯ ಆಡಳಿತ ಸಂಸ್ಥೆಗಳ ಚುನಾವಣೆ ಎದುರಿಸುವ ಶಕ್ತಿಯೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆಯಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂಬರುವ ಚುನಾವಣೆಗಳಲ್ಲಿ ಮತದಾರರು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಮಠಂದೂರು ಅವಧಿಯಲ್ಲಿ ₹14.80 ಕೋಟಿ ಅನುದಾನ, ಈಗಿನ ಅಭಿವೃದ್ಧಿ ಪ್ಲೆಕ್ಸ್ ಮತ್ತು ರೀಲ್ಸ್ಗೆ ಸೀಮಿತ: ಹರೀಶ್ ರೈ ಜಾರತ್ತಾರು
ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹರೀಶ್ ರೈ ಜಾರತ್ತಾರು ಮಾತನಾಡಿ, ಸಂಜೀವ ಮಠಂದೂರು ಶಾಸಕರಾಗಿದ್ದ ಅವಧಿಯಲ್ಲಿ ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ₹14.80 ಕೋಟಿ ಅನುದಾನ ಒದಗಿಸಲಾಗಿತ್ತು. ಇದರೊಂದಿಗೆ ಜಲಜೀವನ್ ಮಿಷನ್ ಯೋಜನೆಯಡಿ ₹3 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ತಿಳಿಸಿದರು.
ಆದರೆ, ಈಗಿನ ಶಾಸಕರ ಅಭಿವೃದ್ಧಿ ಕಾರ್ಯಗಳು ಕೇವಲ ಪ್ಲೆಕ್ಸ್ ಹಾಗೂ ರೀಲ್ಸ್ಗಳಿಗೆ ಸೀಮಿತವಾಗಿವೆ ಎಂದು ಆರೋಪಿಸಿದರು.
ಕೌಡಿಚ್ಚಾರು ಸೇತುವೆಯಿಂದ ಅರಿಯಡ್ಕ ಗ್ರಾಮ ಪಂಚಾಯತ್ವರೆಗೆ ಪಾದಯಾತ್ರೆ
ಪ್ರತಿಭಟನಾ ಸಭೆಗೂ ಮುನ್ನ ಕೌಡಿಚ್ಚಾರು ಸೇತುವೆ ಬಳಿಯಿಂದ ಅರಿಯಡ್ಕ ಗ್ರಾಮ ಪಂಚಾಯತ್ವರೆಗೆ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಚ್ಚುತ ಮೂಡೆತ್ತಾಯ ಅವರು ಅರಿಯಡ್ಕ ಶಕ್ತಿ ಕೇಂದ್ರದ ಸಂಚಾಲಕ ಯುವರಾಜ ಪೂಂಜಾ ಹಾಗೂ ಮಾಡೂರು ಶಕ್ತಿ ಕೇಂದ್ರದ ಸಂಚಾಲಕ ನಾರಾಯಣ ಆಚಾರ್ಯ ಮಳಿ ಅವರಿಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆಯ ಬಳಿಕ ಅರಿಯಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್. ಗೌರಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ, ಕಾರ್ಯದರ್ಶಿ ಸೌಮ್ಯ ಬಾಲಸುಬ್ರಮಣ್ಯ ಮುಂಡಕೊಚ್ಚಿ, ನಗರ ಮಂಡಲ ಕಾರ್ಯದರ್ಶಿ ಶಶಿಧರ್ ನಾಯಕ್, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಚ್ಚುತ ಮೂಡೆತ್ತಾಯ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಹಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ನೆಟ್ಟಣಿಗೆ ಮುಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ತಾಲೂಕು ಮಹಿಳಾ ಮೋರ್ಚಾ ಕಾರ್ಯದರ್ಶಿ ಚಿತ್ರಾ ಪ್ರಸಾದ್ ರೈ ಆಂಕೊತ್ತಿಮಾರು, ಮಾಡೂರು ಶಕ್ತಿ ಕೇಂದ್ರದ ಸಂಚಾಲಕ ನಾರಾಯಣ ಆಚಾರ್ಯ ಮಳಿ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್ ಕುತ್ಯಾಡಿ ಸ್ವಾಗತಿಸಿದರು. ಶ್ರೀಕಾಂತ್ ಕಾವು ವಂದಿಸಿದರು. ಅರಿಯಡ್ಕ ಶಕ್ತಿ ಕೇಂದ್ರದ ಸಂಚಾಲಕ ಯುವರಾಜ ಪೂಂಜಾ ಕಾರ್ಯಕ್ರಮ ನಿರೂಪಿಸಿದರು.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















