ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಗಳ ಪ್ರದರ್ಶನ ಓಪನ್ ಡೇ-2026 ಇಂದು ನಡೆಯಲಿದೆ.
ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಕಾಲೇಜಿನ ಆವರಣದಲ್ಲಿ ನಡೆಯುವ ಈ ಪ್ರದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಯಾರಿಸಿದ ನವೀನ ವಿನ್ಯಾಸದ
ವಿವಿಧ ಪ್ರಾಜೆಕ್ಟ್ಗಳು ಪ್ರದರ್ಶಿಸಲ್ಪಡುತ್ತವೆ.
ಕಂಪ್ಯೂಟರ್ ಸೈನ್ಸ್, ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಗಳ ಹೊಸ ಹೊಸ ಯೋಜನೆಗಳ ಮಾದರಿಗಳನ್ನು ಪ್ರದರ್ಶನಕ್ಕೆ ಸಿದ್ದಗೊಳಿಸಲಾಗಿದೆ.
ಆಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲ ಡಾ. ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.
ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಶಿಕ್ಷಣ
Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ
ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.
ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್ಆರ್ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ24 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ1 hour agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















