Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಬಿಗ್ ನ್ಯೂಸ್12 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ10 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಸಿನೆಮಾ10 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ11 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ11 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಮಂಗಳೂರು5 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ನಿಧನ ವಾರ್ತೆ10 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ4 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















