ಬಿಗ್ ನ್ಯೂಸ್
High Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಇದುವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಧನಕೀರ್ತಿ ಅರಿಗ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್. ವಿನಯ್ ವಾದ ಮಂಡಿಸಿ, ಪ್ರಕರಣದ 10ನೇ ಪ್ರತಿವಾದಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣದ 1ರಿಂದ 9ನೇ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.
ಅಂತರ ರಾಜ್ಯ
WhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ
ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಹೊಸದಿಲ್ಲಿ: ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಕಂಪ್ಯೂಟರ್‌ಗಳಲ್ಲಿ WhatsApp Web ಬಳಸುವಾಗ ಎಚ್ಚರಿಕೆ ವಹಿಸುವಂತೆ ಕೇಂದ್ರ ಸರಕಾರದ ಸೈಬರ್ ಅಪರಾಧ ನಿಗ್ರಹ ಘಟಕವಾದ ಇಂಡಿಯನ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್ (I4C) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಈ ಕುರಿತು ಹೊಸ ಸಲಹಾಸೂಚಿ ಬಿಡುಗಡೆ ಮಾಡಿರುವ ನ್ಯಾಷನಲ್ ಸೈಬರ್ ಕ್ರೈಂ ಕೋಆರ್ಡಿನೇಷನ್ ಸೆಂಟರ್‌ನ ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್, ಕಂಪ್ಯೂಟರ್‌ನಲ್ಲಿ WhatsApp Web ಲಾಗಿನ್ ಆಗಿಯೇ ಉಳಿದಿದ್ದರೆ ಅನಧಿಕೃತ ವ್ಯಕ್ತಿಗಳು ಬಳಕೆದಾರರ ಖಾಸಗಿ ಸಂದೇಶಗಳು, ಸಂಪರ್ಕ ಸಂಖ್ಯೆಗಳು ಹಾಗೂ ಗ್ರೂಪ್ ಚಾಟ್‌ಗಳನ್ನು ವೀಕ್ಷಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಷ್ಟೇ ಅಲ್ಲದೆ, ಬಳಕೆದಾರರ ಖಾತೆಯನ್ನು ದುರುಪಯೋಗಪಡಿಸಿಕೊಂಡು ಅವರ ಹೆಸರಿನಲ್ಲಿ ಇತರರಿಗೆ ಸಂದೇಶಗಳನ್ನು ಕಳುಹಿಸುವ ಮೂಲಕ ವಂಚನೆ ಹಾಗೂ ವಿವಿಧ ಸೈಬರ್ ಹಗರಣಗಳನ್ನು ನಡೆಸುವ ಅಪಾಯವೂ ಇದೆ ಎಂದು ಎಚ್ಚರಿಸಿದೆ.
ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗಲೇಬೇಕು!
ಬಹುತೇಕ ಬಳಕೆದಾರರು WhatsApp Web ಬಳಸಿದ ಬಳಿಕ ಬ್ರೌಸರ್ ವಿಂಡೋ ಅಥವಾ ಟ್ಯಾಬ್ ಮುಚ್ಚುವುದರಿಂದ ಖಾತೆ ಲಾಗೌಟ್ ಆಗುತ್ತದೆ ಎಂದು ಭಾವಿಸುತ್ತಾರೆ. ಆದರೆ, ಕೇವಲ ಟ್ಯಾಬ್ ಮುಚ್ಚುವುದರಿಂದ ಲಾಗಿನ್ ಅವಧಿ ಅಂತ್ಯಗೊಳ್ಳುವುದಿಲ್ಲ. ಹೀಗಾಗಿ ಪ್ರತಿ ಬಾರಿ ಬಳಕೆ ಮುಗಿದ ತಕ್ಷಣ ಖಾತೆಯಿಂದ ಲಾಗೌಟ್ ಆಗುವುದು ಕಡ್ಡಾಯ ಎಂದು ಸಲಹೆ ನೀಡಿದೆ.
ಇತರರೂ ಬಳಸಬಹುದಾದ ಕಚೇರಿ ಕಂಪ್ಯೂಟರ್‌ಗಳು, ಹಂಚಿಕೆಯ ಕಂಪ್ಯೂಟರ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ಸಾಧನಗಳಲ್ಲಿ WhatsApp Web ಬಳಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಇಂತಹ ಕಂಪ್ಯೂಟರ್‌ಗಳಲ್ಲಿ ಸರಕಾರಿ, ಸಾಂಸ್ಥಿಕ, ಹಣಕಾಸು, ಗೌಪ್ಯ ಅಥವಾ ಇತರ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂದು ಸೂಚಿಸಿದೆ.
ಸೈಬರ್ ಕೆಫೆಗಳು, ಹೋಟೆಲ್‌ಗಳ ವ್ಯವಹಾರ ಕೇಂದ್ರಗಳು, ಸಾರ್ವಜನಿಕ ಸ್ಥಳಗಳು ಹಾಗೂ ಬಾಡಿಗೆಗೆ ಪಡೆದ ಕಂಪ್ಯೂಟರ್‌ಗಳಂತಹ ವಿಶ್ವಾಸಾರ್ಹವಲ್ಲದ ಸಾಧನಗಳಲ್ಲಿ WhatsApp Webಗೆ ಲಾಗಿನ್ ಆಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು. ಅನಿವಾರ್ಯವಾಗಿ ಬಳಸಬೇಕಾದರೆ ಇನ್‌ಕಾಗ್ನಿಟೊ ಅಥವಾ ಪ್ರೈವೇಟ್ ಬ್ರೌಸಿಂಗ್ ಮೋಡ್ ಬಳಸುವಂತೆ ಶಿಫಾರಸು ಮಾಡಿದೆ.
ಈ ಲಕ್ಷಣಗಳು ಕಂಡುಬಂದರೆ ಎಚ್ಚರ!
ತಮ್ಮ ಖಾತೆಯಿಂದ ತಮಗೆ ತಿಳಿಯದೆಯೇ ಸಂದೇಶಗಳು ರವಾನೆಯಾಗುವುದು, ಸಂಪರ್ಕದಲ್ಲಿರುವವರಿಂದ ಅಸಹಜ ಪ್ರತಿಕ್ರಿಯೆಗಳು ಬರುವುದು ಅಥವಾ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಎಚ್ಚರಿಕೆ ವಹಿಸಬೇಕು. ಇವು ಖಾತೆಗೆ ಅನಧಿಕೃತ ಪ್ರವೇಶವಾಗಿರುವ ಸೂಚನೆಗಳಾಗಿರಬಹುದು ಎಂದು ತಿಳಿಸಿದೆ.
ಇದರೊಂದಿಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ಬ್ರೌಸರ್‌ಗಳು ಹಾಗೂ ಭದ್ರತಾ ಸಾಫ್ಟ್‌ವೇರ್‌ಗಳನ್ನು ಕಾಲಕಾಲಕ್ಕೆ ಅಪ್‌ಡೇಟ್ ಮಾಡಬೇಕು. ಅನುಮಾನಾಸ್ಪದ ಡೌನ್‌ಲೋಡ್‌ಗಳು, ಅಪರಿಚಿತ ಫೈಲ್‌ಗಳು ಹಾಗೂ ಕ್ರ್ಯಾಕ್ ಮಾಡಿದ ಸಾಫ್ಟ್‌ವೇರ್‌ಗಳನ್ನು ಬಳಸಬಾರದು ಎಂದು ಸಲಹೆ ನೀಡಿದೆ.
ಒಟ್ಟಿನಲ್ಲಿ, WhatsApp Web ಬಳಕೆ ಮುಗಿದ ಬಳಿಕ ಕಡ್ಡಾಯವಾಗಿ ಲಾಗೌಟ್ ಆಗುವುದು, ಅಪರಿಚಿತ ಹಾಗೂ ವಿಶ್ವಾಸಾರ್ಹವಲ್ಲದ ಕಂಪ್ಯೂಟರ್‌ಗಳಲ್ಲಿ ಲಾಗಿನ್ ಆಗುವುದನ್ನು ತಪ್ಪಿಸುವುದು ಮತ್ತು ಖಾತೆಯಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ನಿಗಾ ಇಡುವ ಮೂಲಕ ಖಾತೆ ದುರುಪಯೋಗ ಹಾಗೂ ಹಣಕಾಸು ವಂಚನೆಗಳ ಅಪಾಯವನ್ನು ಕಡಿಮೆ ಮಾಡಬಹುದು ಎಂದು I4C ತಿಳಿಸಿದೆ.
ಮಂಗಳೂರು
Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು: ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ; ಪೇಟೆಯಲ್ಲಿ ಆಮಂತ್ರಣ ವಿತರಣೆ
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನ.23ರಂದು ಸಂಜೆ ಪುತ್ತೂರು ಪೇಟೆಯಲ್ಲಿ ನಡೆಯಿತು.
ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನ.23ರಂದು ಸಂಜೆ ಪುತ್ತೂರು ಪೇಟೆಯಲ್ಲಿ ನಡೆಯಿತು.
ದರ್ಬೆಯಿಂದ ಬೊಳುವಾರು ತನಕ ಕಾಲ್ನಡಿಗೆಯ ಮೆರವಣಿಗೆಯಲ್ಲಿ ತೆರಳಿ ಸ್ಥಳೀಯ ಉದ್ಯಮ ಸಂಸ್ಥೆಗಳು ಹಾಗೂ ವರ್ತಕರಿಗೆ ಆಮಂತ್ರಣ ಪತ್ರಿಕೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಪಂಚಮುಖಿ ಆಂಜನೇಯ ಯಾಗ ಸಮಿತಿಯ ಸಹಸಂಚಾಲಕ ಮುಳಿಯ ಕೇಶವಪ್ರಸಾದ್ ಹಾಗೂ ಗೌರವ ಸಲಹೆಗಾರ ಸಂಜೀವ ನಾಯಕ್ ಕಲ್ಲೇಗ ಅವರು ದರ್ಬೆ ವೃತ್ತದಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಆಮಂತ್ರಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮೆರವಣಿಗೆಯಲ್ಲಿ ತೆರಳಿ ವಿವಿಧ ಉದ್ಯಮ ಸಂಸ್ಥೆಗಳು ಹಾಗೂ ವ್ಯಾಪಾರಸ್ಥರಿಗೆ ಆಮಂತ್ರಣ ಪತ್ರಿಕೆ ನೀಡಿ, ಪಂಚಮುಖಿ ಆಂಜನೇಯ ಹವನದಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಪಂಚಮುಖಿ ಆಂಜನೇಯ ಹವನ ಸಮಿತಿ ಉಪಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಪ್ರಧಾನ ಕಾರ್ಯದರ್ಶಿಗಳಾದ ಮುರಳಿಕೃಷ್ಣ ಹಸಂತಡ್ಕ ಹಾಗೂ ಪುನೀತ್ ಅತ್ತಾವರ, ಕಾರ್ಯದರ್ಶಿ ಜನಾರ್ದನ ಬೆಟ್ಟ, ಸಹಸಂಚಾಲಕ ಶ್ರೀಧರ್ ತೆಂಕಿಲ, ಸಹ ಕೋಶಾಧಿಕಾರಿ ಸೇಸಪ್ಪ ಬೆಳ್ಳಿಪ್ಪಾಡಿ, ಸ್ವಾಗತ ಸಮಿತಿ ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಹೊರೆಕಾಣಿಕೆ ಸಮಿತಿ ಸಂಚಾಲಕ ಅಜಿತ್ ರೈ ಹೊಸಮನೆ, ಮನೀಶ್ ಬಿರ್ವ, ಕಲಶ ತೀರ್ಥ ಸಮಿತಿ ಸಂಚಾಲಕ ಜಯಂತ್ ಶೆಟ್ಟಿ ಕಂಬಳತ್ತಡ್ಡ, ಸಹಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ಯಾಗ ಸಂಕಲ್ಪ ಸಮಿತಿ ಸಂಚಾಲಕ ದಾಮೋದರ ಪಾಟಾಳಿ, ಸಹಸಂಚಾಲಕ ಸುನೀಲ್ ದಡ್ಡು, ಮಹಿಳಾ ಸಮಿತಿಯ ಗೌರಿ ಬನ್ನೂರು ಹಾಗೂ ಜಯಂತಿ ನಾಯಕ್, ಸ್ವಯಂಸೇವಕ ಸಮಿತಿ ಸಂಚಾಲಕ ಜಗದೀಶ್ ನೀರ್ಪಾಜೆ ಸೇರಿದಂತೆ ಚೇತನ್ ಬೊಳುವಾರು, ದಯಾನಂದ ಕೆಮ್ಮಾಯಿ, ಸತೀಶ್ ಬಿ.ಎಸ್., ರಾಮಪ್ರಸಾದ್ ಮಯ್ಯ, ಹರೀಶ್ ದೋಳ್ಪಾಡಿ, ಮಾಧವ ಪಟ್ಲ, ಕಾರ್ಯಕಾರಿಣಿ ಸಮಿತಿಯ ಭಾಮಿ ಜಗದೀಶ್ ಶೆಣೈ, ರಾಜೇಶ್ ಬನ್ನೂರು, ದಿನೇಶ್ ಪಂಜಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
ಶಿಕ್ಷಣ17 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು18 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್24 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್19 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು19 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ18 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ17 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಅಪರಾಧ1 hour agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ















