Connect with us

Uncategorized

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಬೈಕ್’ಗೆ ಕೇರಳ ನೋಂದಣಿ ಸ್ಟಿಕರ್ ಅಂಟಿಸಿ ಸ್ಥಳೀಯರಿಂದಲೇ ಹತ್ಯೆ ? ಪ್ರಕರಣಕ್ಕೆ ಮೆಗಾ ಟ್ವಿಸ್ಟ್‌ ನೀಡಿದ ಗೃಹ ಸಚಿವರ ಹೇಳಿಕೆ- ಅವರು ಹೇಳಿದ್ದೆನು ?

Published

on

Ad Widget

Ad Widget

Ad Widget

Ad Widget

ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ( Praveen Nettar Murder) ಪ್ರಕರಣವು ಪ್ರತಿ ದಿನ ಹೊಸತೊಂದು ತಿರುವು ಪಡೆಯುತ್ತಿದೆ. ಕೇರಳದಿಂದ (Kerala) ಬೈಕ್ ನಲ್ಲಿ ಆಗಮಿಸಿದ ಹಂತಕರು ಪ್ರವೀಣ್ ಅವರ ಹತ್ಯೆ ನಡೆಸಿ ಬಳಿಕ ಕೇರಳಕ್ಕೆ ಪರಾರಿಯಾಗಿದ್ದಾರೆ ಎಂದು ದಟ್ಟ ಅನುಮಾನ ಆರಂಭದ ದಿನಗಳಿಂದಲೇ ವ್ಯಕ್ತವಾಗಿತ್ತು. ಆದರೇ ಅದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯವನ್ನು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra) ಖಾಸಗಿ ವಾಹಿನಿಯ ಸಂದರ್ಶನದಲ್ಲಿ ನಿನ್ನೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಅಲ್ಲದೇ ಈ ಪ್ರಕರಣದ ದೂರುದಾ,ರ ಪ್ರವೀಣ್ ಅವರ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ನಲ್ಲಿ ಕೆಲಸಕ್ಕಿದ್ದ ಹಾಗೂ ಹಂತಕರು ಹತ್ಯಾರುಗಳನ್ನು ಹಿಡಿದು ಬೈಕಿನಲ್ಲಿ ಪರಾರಿಯಾಗುತ್ತಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿ ಮಧು ಕುಮಾರ್ ರಾಯನ್ ಅವರು ಕೃತ್ಯಕ್ಕೆ ಬಳಸಿದ ಬೈಕ್ ಕೆಎಲ್ ನೋಂದಣಿ ( KL Registration Vehicle)ಯದಾಗಿತ್ತು ಎಂದು ಹೇಳಿರುವುದಾಗಿ ಹಲವು ಮಾಧ್ಯಮಗಳು ಈ ಹಿಂದೆ ವರದಿ ಪ್ರಕಟಿಸಿದ್ದವು. ಹಾಗಾಗಿಯೂ ಈ ಪ್ರಕರಣದ FIR ನಲ್ಲಿ ಈ ಅಂಶ ಉಲ್ಲೇಖವಾಗಿಲ್ಲ.

Ad Widget

Ad Widget alt="Ad Widget"/>

Ad Widget

ಪ್ರಕರಣಕ್ಕೆ ಕೇರಳ ಸಂಪರ್ಕದ ಅನುಮಾನದ ಹಿನ್ನಲೆಯಲ್ಲಿ ಈ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ಒಂದು ತಂಡ ಕೇರಳಕ್ಕೂ ತೆರಳಿತ್ತು. ಇದನ್ನು ಸ್ವತ: ಗೃಹ ಸಚಿವ ಅರಗ ಜ್ಞಾನೇಂದ್ರರವರೇ ಬೆಂಗಳೂರಿನಲ್ಲಿ ಖಚಿತಪಡಿಸಿದ್ದರು. ಅಲ್ಲದೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ( Central Minister Shobha karandlaje) ಸಹಿತ ರಾಜ್ಯ ಸರಕಾರದ ( State Government) ಹಲವು ಸಚಿವರು, ಶಾಸಕರು ಇದರಲ್ಲಿ ಕೇರಳದ ಆರೋಪಿಗಳು ಭಾಗಿಯಾಗಿರುವುದಾಗಿ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೇ,ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳಕ್ಕೆ ( National Investigation Agency) ಕೊಡಬೇಕೆಂದು ಕೂಡ ಒತ್ತಾಯಿಸಿದ್ದರು.ಇದಾದ ಬಳಿಕ ಪ್ರಕರಣವನ್ನು ಎನ್ಐಎ ( NIA) ಕೊಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( chief Minister Basavaraja Bommayi) ಘೋಷಿಸಿದರು.

Ad Widget

Ad Widget <> Ad Widget

ಅಂತರಾಜ್ಯ ಲಿಂಕ್‌ ಪ್ರಕರಣ NIA ಗೆ ಹಸ್ತಾಂತರಿಸಲು ಪ್ರಮುಖ ಕಾರಣ

ಇತ್ತೀಚೆಗೆ ಕೇರಳದ ತಲೆಶ್ಯೆರಿಯಲ್ಲಿ ಅಲ್ಲಿನ ಉಗ್ರ ನಿಗ್ರಹ ದಳದ ( ATS) ಪೊಲೀಸರು ಬಂಧಿಸಿದ ಆರೋಪಿ ಅಬೀದ್ ನನ್ನು ಪ್ರವೀಣ್ ಹತ್ಯೆ ಪ್ರಕರಣದ ಆರೋಪಿ ಎಂದು ಶೋಭಾ ಕರಂದ್ಲಾಜೆಯವರು ಬೆಳ್ಳಾರೆಯ ಪ್ರವೀಣ್ ಮನೆಗೆ ಭೇಟಿ ನೀಡಿದ ವೇಳೆ ತಿಳಿಸಿದ್ದರು. ಅದಾದ ಕೆಲ ದಿನಗಳ ಬಳಿಕ ಪ್ರವೀಣ್ ಹತ್ಯೆ ಪ್ರಕರಣಕ್ಕೂ, ಬಂಧಿತ ತಲೆಶ್ಯೇರಿ ನಿವಾಸಿಗೂ ಯಾವುದೇ ಸಂಬಂಧವಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಯವರು ಸ್ಪಷ್ಡಪಡಿಸಿದರು.
ಅ.3 ರಂದು ಈ ಪ್ರಕರಣದ ತನಿಖೆಯನ್ನು ಎನ್ ಐ ಎಗೆ ಕೇಂದ್ರ ಸರಕಾರದ ಗೃಹ ಇಲಾಖೆ ಅಧಿಕೃತವಾಗಿ ಹಸ್ತಾಂತರಿ ಆದೇಶಿಸಿತ್ತು. ಪ್ರವೀಣ್ ಹತ್ಯೆಗೆ ಅಂತರಾಜ್ಯ ಸಂಪರ್ಕ ಇರುವುದು ಈ ಪ್ರಕರಣವನ್ನು ಎನ್ʼಐಎಗೆ ಹಸ್ತಾಂತರಿಸಲು ಇರುವ ಪ್ರಮುಖ ಕಾರಣಗಳಲ್ಲೊಂದು ಎಂದು ಗೃಹ ಸಚಿವಲಾಯವು ರಾಷ್ಟ್ರೀಯ ತನಿಖಾದಳದ ಮಹಾನಿರ್ದೇಶಕರಿಗೆ ಬರೆದಿರುವ ಆದೇಶ ಪತ್ರದಲ್ಲಿ ಉಲ್ಲೇಖಿಸಿರುವುದು ಗಮನಾರ್ಹ.

Ad Widget

Ad Widget

ನಿಮಗೆ ಗೊತ್ತಿರಲ್ಲಿ , ಹತ್ಯೆ ಮಾಡಿದವರು ಸ್ಥಳೀಯರು ಕೇರಳದವರಲ್ಲ

ಇಷ್ಟೆಲ್ಲಾ ಆದ ಬಳಿಕ ಗೃಹ ಸಚಿವ ಅರಗ ಜ್ಞಾನೇಂದ್ರರವರು ಪ್ರವೀಣ್ ಹತ್ಯೆಯನ್ನು ಮಾಡಿರುವುದು ಸ್ಥಳೀಯರೇ ಹೊರತು ಕೇರಳದವರು ಮಾಡಿಲ್ಲ ಎಂಬ ಸ್ಫೋಟಕ ಹೇಳಿಕೆ ನೀಡಿ ಎಲ್ಲರನ್ನು ಚಕಿತಗೊಳಿಸಿದ್ದಾರೆ . ಗೃಹ ಸಚಿವರಾಗಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕನ್ನಡದ ಪ್ರತಿಷ್ಟಿತ ಟಿವಿ ವಾಹಿನಿ ಟಿ ವಿ 9 ಗೆ ಅವರು ನೀಡಿದ ಸಂದರ್ಶನ ನಿನ್ನೆ ಸಂಜೆ ಪ್ರಸಾರವಾಗಿತ್ತು .ಅದರಲ್ಲಿ ಸಂದರ್ಶಕರು “ಕೇರಳದಿಂದ ಮೂರು ಜನ ಬೈಕ್ ನಲ್ಲಿ ಬಂದವರು ಪ್ರವೀನ್ ಅವರ ಕೊಲೆ ಮಾಡಿ ಮತ್ತೆ ವಾಪಸ್ಸು ಹೋಗಿದ್ದಾರೆ ಅಂತಾ ಹೇಳುತ್ತೀರಿ , ಒಂದು ವೇಳೆ ಸರಿಯಾಗಿ ನಾಕ ಬಂದಿ ಮಾಡುತ್ತಿದ್ದರೇ ಅಥಾವ ಸೂಕ್ತ ಬಿಗಿ ಬಂದೋಬಸ್ತು ಮಾಡುತ್ತಿದರೇ ಮೂವರು ಕೇರಳದಿಂದ ಮಾರಕಾಯುದ್ದ ಹಿಡಿದು ಗಡಿ ದಾಟಿ ಬರಲು ಹಾಗೂ ಕೃತ್ಯ ಎಸಗಿ ವಾಪಸ್ಸು ಹೋಗಲು ಹೇಗೆ ಸಾಧ್ಯವಾಗುತಿತ್ತು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಅರಗ ಜ್ಞಾನೇಂದ್ರರವರು “ ನಿಮಗೆ ಗೊತ್ತಿರಲಿ ಹತ್ಯೆ ಮಾಡಿದವರು ಸ್ಥಳೀಯರು ಕೇರಳದವರಲ್ಲ ಎಂದಿದ್ದಾರೆ.

ಸ್ಥಳೀಯರೇ ಬೈಕ್ ಗೆ ಕೇರಳ ನೋಂದಣಿ ಸ್ಟಿಕರ್ ಅಂಟಿಸಿ ಹತ್ಯೆ ಮಾಡಿದರೇ ?

ಅರಗ ಜ್ಞಾನೇಂದ್ರರವರ ಈ ಸ್ಫೋಟಕ ಹೇಳಿಕೆಯ ಬಳಿಕ ಮತ್ತೆ ಹಳೇ ಥಿಯರಿ ಮುನ್ನಲೆಗೆ ಬಂದಿದೆ. ಹತ್ಯೆಯಾದ ಸಂದರ್ಭದಲ್ಲೂ ಕೂಡ ಬೈಕ್ ನ ನಂಬರ್ ಪ್ಲೇಟ್ ಬದಲಾಯಿಸಿ ಅದಕ್ಕೆ ಕೇರಳ ನೋಂದಣಿಯ ರ್ಯಾಂಡಮ್ ನಂಬರ್ ಅಂಟಿಸಿ ಕೃತ್ಯ ಎಸಗಿ ತನಿಖೆಯ ಹಾದಿ ತಪ್ಪಿಸಿರಬಹುದು ಎಂಬ ಅನುಮಾನ ಸ್ಥಳೀಯವಾಗಿ ಕೆಲವರಲ್ಲಿ ಮೂಡಿತ್ತು . ಆದರೇ ಮಂತ್ರಿ ಮಾಗಧರ ಕೇರಳ ಥಿಯರಿ ಬಳಿಕ ಈ ಅನುಮಾನಗಳು ಧ್ವನಿ ಕಳಕೊಂಡಿದ್ದವು. ಇದೀಗ ಜ್ಞಾನೇಂದ್ರರವರ ಹೇಳಿಕೆಯ ಬಳಿಕ ಈ ಅನುಮಾನ ಬಹುತೇಕರಲ್ಲಿ ಮೂಡಿದೆ

ಒಂದು ವೇಳೆ ಈ ಕೃತ್ಯವನ್ನು ಸ್ಥಳೀಯ ನಿವಾಸಿಗಳೇ ಮಾಡಿದ್ದರೆ, ಆಗ ಈ ಪ್ರಕರಣವನ್ನು ಎನ್ ಐಎಗೆ ಕೊಡುವ ಜರೂರತ್ತು ಏನಿತ್ತು? ಎನ್ನುವ ಅಭಿಪ್ರಾಯವು ಕೇಳಿ ಬರುತ್ತಿದೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ, ಬೆಳ್ಳಾರೆ ಅಸುಪಾಸಿನವರೇ ಮಾಡಿದ ಕೊಲೆ ಕೃತ್ಯವನ್ನು ಬೇಧಿಸಲು, ಆರೋಪಿಗಳನ್ನು ಬಂಧಿಸಲು ರಾಷ್ಟ್ರೀಯ ತನಿಖಾದಳದ ಅಗತ್ಯವಾದರೂ ಎನೂ ? ಹಾಗಾದರೇ ಕರ್ನಾಟಕ ಹಾಗೂ ಜಿಲ್ಲೆಯ ಪೊಲೀಸರು ಅಷ್ಟು ಅಸಮರ್ಥರೇ? ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಸಿಯುದಿಲ್ಲವೇ? ಎನ್ನುವ ಪ್ರಶ್ನೆಗಳು ಸಾರ್ವಜನಿಕರ ಮನದಲ್ಲಿ ಮೂಡಿದೆ.

ಬೈಕ್ , ಬೈಕ್ ನಂಬರ್ ಪತ್ತೆಯಾಗಿಲ್ಲ :

ಮೊದಲ ದಿನದಿಂದಲೂ ಈ ಪ್ರಕರಣವನ್ನು ಕೇವಲ ಒಂದು ಕೊಲೆ ಪ್ರಕರಣದ ದೃಷಿಕೋನದಿಂದ ನೋಡದೇ ಹೈ ಪ್ರೊಪೈಲ್ ಕೇಸನ್ನಾಗಿ ದೊಡ್ಡ ಅಧಿಕಾರಿಗಳ ಮೂಲಕ ನಿಭಾಯಿಸಿ, ರಾಜ್ಯ ಸರಕಾರ ಹಾಗೂ ಜನಪ್ರತಿನಿಧಿಗಳು ಪತ್ರಿಕೆಗಳ ಹೆಡ್ ಲೈನ್ ಮ್ಯಾನೇಜ್ಮೆಂಟ್ ಮಾಡಿ ರಾಜಕೀಯ ಲಾಭ ಪಡೆಯಲು ಹೋಗಿ ಪ್ರಕರಣದ ತನಿಖೆಯ ದಿಕ್ಕು ತಪ್ಪಿದ್ದೆಯೇ ? ಎನ್ನುವ ಪ್ರಶ್ನೆಗಳು ಜನಮಾನಸದಲ್ಲಿ ಮೂಡುವಂತಾಗಿದೆ. ವಿಶೇಷ ಎಂದರೇ ಈವರೆಗೆ ಕೃತ್ಯ ಎಸಗಿದ ಬೈಕ್ ಆಗಲಿ, ಬೈಕ್ ನಂಬರ್ ಆಗಲಿ, ಅಥಾವ ಅದು ಯಾರ ಒಡೆತನದ ಬೈಕ್ ಎನ್ನುವುದಾಗಲಿ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳುತ್ತಿವೆ.

ರೈನ್ ಕೋಟ್ ತರಲು ಹೋಗಿದ್ದಾಗ ಹತ್ಯೆ :

ನಾನು ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ನಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದು, ಅದರ ಮಾಲೀಕ ಪ್ರವೀಣ್ ನೆಟ್ಟರು ರವರು ಜು 26 ರಂದು ರಾತ್ರಿ ವ್ಯಾಪಾರ ಮುಗಿಸಿ 8.30 ಗಂಟೆಗೆ ಅಂಗಡಿ ಬಾಗಿಲು ಹಾಕಿ ತನ್ನ ಮನೆಯ ಕಡೆಗೆ ಹೋಗಲು ಸ್ಕೂಟರ್ ನಲ್ಲಿ ಕುಳಿತಿದ್ದರು. ಈ ವೇಳೆ ನಾನು ಅಂಗಡಿಯ ಒಳಗೆ ರೈನ್ ಕೋರ್ಟ್ ತರಲೆಂದು ಹೋಗಿದ್ದು, ಈ ಸಮಯ ಅಂಗಡಿಯ ಹೊರಗೆ ಜೋರಾಗಿ ಬೊಬ್ಬೆ ಕೇಳಿಸಿದೆ. ಹೊರಗಡೆ ಬಂದು ನೋಡುವಷ್ಟರಲ್ಲಿ ಪ್ರವೀಣ್ ನೆಟ್ಟಾರು ರವರು ಸ್ಕೂಟರ್ ನಿಂತಿದ್ದ ಸ್ಥಳದಿಂದ ಸುಮಾರು 50 ಅಡಿ ದೂರದಲ್ಲಿ ಕವಚಿ ಬಿದ್ದಿದ್ದರು. ಆಗ ಅಲ್ಲಿಂದ ಮೂರು ಜನ ಅಪರಿಚಿತ ವ್ಯಕ್ತಿಗಳು ಕೈಯಲ್ಲಿ ಹತ್ಯಾರುಗಳನ್ನು ಹಿಡಿದುಕೊಂಡು ಮೋಟಾರು ಸೈಕಲ್ಲಿನಲ್ಲಿ ಪುತ್ತೂರು ಕಡೆಗೆ ಪರಾರಿಯಾದರು ಎಂದು ಮಧು ಕುಮಾರ್ ರವವರು ನೀಡಿದ ದೂರಿನಲ್ಲಿ ವಿವರಿಸಿದ್ದರು

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!