ದೆಹಲಿಯ ಪಂಡಿತ್ ರವಿಶಂಕರ್ ಶುಕ್ಲಾ ಲೇನ್‌ನಲ್ಲಿರುವ ಬಂಗಲೆಯನ್ನು ದಲೈ ಲಾಮಾ ಅವರ ವಾಸ್ತವ್ಯಕ್ಕಾಗಿ ಮಂಜೂರು ಮಾಡಲಾಗಿದೆ […]" /> ದೆಹಲಿಯ ಪಂಡಿತ್ ರವಿಶಂಕರ್ ಶುಕ್ಲಾ ಲೇನ್‌ನಲ್ಲಿರುವ ಬಂಗಲೆಯನ್ನು ದಲೈ ಲಾಮಾ ಅವರ ವಾಸ್ತವ್ಯಕ್ಕಾಗಿ ಮಂಜೂರು ಮಾಡಲಾಗಿದೆ […]"> Dalai Lama-ದೆಹಲಿಯಲ್ಲಿ ದಲೈಲಾಮಗೆ ಪ್ರತಿಷ್ಠಿತ ಪ್ರದೇಶದಲ್ಲಿ ಸರ್ಕಾರಿ ಬಂಗಲೆ ಮಂಜೂರು ಮಾಡಿದ ಕೇಂದ್ರ - Nikhara News | Kannada News Website
Connect with us

ಅಂತರ ರಾಜ್ಯ

Dalai Lama-ದೆಹಲಿಯಲ್ಲಿ ದಲೈಲಾಮಗೆ ಪ್ರತಿಷ್ಠಿತ ಪ್ರದೇಶದಲ್ಲಿ ಸರ್ಕಾರಿ ಬಂಗಲೆ ಮಂಜೂರು ಮಾಡಿದ ಕೇಂದ್ರ

Published

on

Ad Widget

Ad Widget

Ad Widget

Ad Widget

ಟಿಬೆಟ್‌ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ನವದೆಹಲಿ: ಟಿಬೆಟ್‌ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget alt="Ad Widget"/>

Ad Widget

ದೆಹಲಿಯ ಪಂಡಿತ್ ರವಿಶಂಕರ್ ಶುಕ್ಲಾ ಲೇನ್‌ನಲ್ಲಿರುವ ಬಂಗಲೆಯನ್ನು ದಲೈ ಲಾಮಾ ಅವರ ವಾಸ್ತವ್ಯಕ್ಕಾಗಿ ಮಂಜೂರು ಮಾಡಲಾಗಿದೆ ಎನ್ನಲಾಗಿದೆ. ಆದರೆ, ಈ ಕುರಿತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಈವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

Ad Widget

Ad Widget <> Ad Widget

ಸಾಮಾನ್ಯವಾಗಿ ಇಂತಹ ಸರ್ಕಾರಿ ವಸತಿ ಸೌಲಭ್ಯಗಳನ್ನು ಮೂರು ವರ್ಷಗಳ ಅವಧಿಗೆ ಮಂಜೂರು ಮಾಡಲಾಗುತ್ತದೆ. ಅಗತ್ಯತೆ ಮತ್ತು ಸಂದರ್ಭಗಳನ್ನು ಆಧರಿಸಿ ಈ ಅವಧಿಯನ್ನು ವಿಸ್ತರಿಸುವ ಅವಕಾಶವೂ ಇದೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ದಲೈ ಲಾಮಾ ಅವರ ಗಡೆನ್ ಫೋಡ್ರಂಗ್ ಟ್ರಸ್ಟ್ ಅವರ ಪ್ರಮುಖ ಬದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ.

Ad Widget

Ad Widget

ಮಾನವೀಯ ಮೌಲ್ಯಗಳ ಪ್ರಚಾರ, ವಿವಿಧ ಧರ್ಮಗಳ ನಡುವೆ ಸಾಮರಸ್ಯ ಬೆಳೆಸುವುದು, ಟಿಬೆಟಿಯನ್ ಸಂಸ್ಕೃತಿ ಮತ್ತು ಅಸ್ಮಿತೆಯ ಸಂರಕ್ಷಣೆ, ಪರಿಸರ ರಕ್ಷಣೆ ಹಾಗೂ ಪ್ರಾಚೀನ ಜ್ಞಾನ ಪರಂಪರೆಯ ಬಗ್ಗೆ ಆಳವಾದ ಅರಿವು ಮೂಡಿಸುವುದು ದಲೈ ಲಾಮಾ ಅವರ ಪ್ರಮುಖ ಉದ್ದೇಶಗಳಾಗಿವೆ ಎಂದು ಟ್ರಸ್ಟ್ ತಿಳಿಸಿದೆ.

Ad Widget
Click to comment

Leave a Reply

ಅಂತರ ರಾಜ್ಯ

RBI-ಡಿಜಿಟಲ್ ವಂಚನೆಗೆ ಆರ್‌ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!

Published

on

Ad Widget

Ad Widget

Ad Widget

Ad Widget

ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.

Ad Widget

Ad Widget

Ad Widget

Ad Widget

ಮುಂಬೈ: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.

Ad Widget

Ad Widget alt="Ad Widget"/>

Ad Widget

ಈ ಪ್ರಸ್ತಾವನೆಯ ಪ್ರಮುಖ ಅಂಶವೆಂದರೆ, ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ ನಡೆಯುವ ಎಲ್ಲಾ ಡೆಬಿಟ್ ವಹಿವಾಟುಗಳು ಹಾಗೂ ಹೊಸ ಪಾವತಿ ಆದೇಶಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಅನುಕೂಲವಾಗುವ ‘ಸ್ಟಾಪ್ ಸ್ವಿಚ್’ ವ್ಯವಸ್ಥೆ. ಇದರಿಂದ ಅನುಮಾನಾಸ್ಪದ ವಹಿವಾಟುಗಳು ಅಥವಾ ವಂಚನೆಯ ಪ್ರಯತ್ನಗಳು ಕಂಡುಬಂದಾಗ ಗ್ರಾಹಕರು ತಕ್ಷಣವೇ ಹಣ ವರ್ಗಾವಣೆಯನ್ನು ತಡೆಯಲು ಸಾಧ್ಯವಾಗಲಿದೆ.

Ad Widget

Ad Widget <> Ad Widget

ಇದಲ್ಲದೆ, ಹೊಸದಾಗಿ ತೆರೆಯುವ ಬ್ಯಾಂಕ್ ಖಾತೆಗಳಲ್ಲಿ ಡಿಜಿಟಲ್ ಪಾವತಿ ಸೌಲಭ್ಯಗಳು ಆರಂಭದಲ್ಲಿ ನಿಷ್ಕ್ರಿಯವಾಗಿರಲಿವೆ. ಗ್ರಾಹಕರ ಸ್ಪಷ್ಟ ಒಪ್ಪಿಗೆ ಪಡೆದ ಬಳಿಕವಷ್ಟೇ ಈ ಸೌಲಭ್ಯಗಳನ್ನು ಸಕ್ರಿಯಗೊಳಿಸುವ ವ್ಯವಸ್ಥೆಯನ್ನು ಆರ್‌ಬಿಐ ಪ್ರಸ್ತಾಪಿಸಿದೆ.

ಗ್ರಾಹಕರು ತಮ್ಮ ವೈಯಕ್ತಿಕ ವಹಿವಾಟುಗಳಿಗೆ ಮಿತಿಯನ್ನು ತಾವೇ ನಿಗದಿಪಡಿಸಿಕೊಳ್ಳುವ ಅವಕಾಶವನ್ನೂ ಕಲ್ಪಿಸಲು ಉದ್ದೇಶಿಸಲಾಗಿದೆ. ಜತೆಗೆ, ಹೆಚ್ಚಿನ ಮೊತ್ತದ ಹಣ ವರ್ಗಾವಣೆಗಳಿಗೆ 18 ವರ್ಷ ಮೇಲ್ಪಟ್ಟ ವಿಶ್ವಾಸಾರ್ಹ ವ್ಯಕ್ತಿಯೊಬ್ಬರನ್ನು ಅನುಮೋದಕರನ್ನಾಗಿ ನೋಂದಾಯಿಸಿಕೊಳ್ಳುವ ವ್ಯವಸ್ಥೆಯನ್ನೂ ಪ್ರಸ್ತಾಪಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯಡಿ, ಗ್ರಾಹಕರು ನಿಗದಿಪಡಿಸಿದ ಹೆಚ್ಚಿನ ಮೊತ್ತದ ವಹಿವಾಟಿಗೆ ವಿಶ್ವಾಸಾರ್ಹ ವ್ಯಕ್ತಿ ಒಂದು ಗಂಟೆಯೊಳಗೆ ಅನುಮೋದನೆ ನೀಡಿದರೆ ಮಾತ್ರ ಹಣ ವರ್ಗಾವಣೆ ಪೂರ್ಣಗೊಳ್ಳಲಿದೆ.

ಈ ಕರಡು ನಿಯಮಾವಳಿಗಳ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟ ವಲಯಗಳಿಂದ ಡಿಸೆಂಬರ್ 14ರವರೆಗೆ ಆರ್‌ಬಿಐ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಪ್ರಸ್ತಾವಿತ ಸುರಕ್ಷತಾ ಕ್ರಮಗಳು ಅಂತಿಮವಾಗಿ ಅನುಮೋದನೆ ಪಡೆದು ಜಾರಿಗೆ ಬಂದಲ್ಲಿ, 2027ರ ಜುಲೈ 1ರಿಂದ ಅನುಷ್ಠಾನಗೊಳ್ಳುವ ಸಾಧ್ಯತೆಯಿದೆ.

Ad Widget
Continue Reading

ಸಿನೆಮಾ

Aakasham Lo Ok Tara-ಬಾಕ್ಸ್ ಆಫೀಸ್‌ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’

Published

on

Ad Widget

Ad Widget

Ad Widget

Ad Widget

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.

Ad Widget

Ad Widget

Ad Widget

Ad Widget

ಹೈದರಾಬಾದ್: ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.

Ad Widget

Ad Widget alt="Ad Widget"/>

Ad Widget

ಸಿನಿಮಾದ ನೈಜ ಯಶಸ್ಸನ್ನು ನಿರ್ಧರಿಸುವಲ್ಲಿ ಸೋಮವಾರದ ಕಲೆಕ್ಷನ್ ಪ್ರಮುಖ ಪಾತ್ರ ವಹಿಸುತ್ತದೆ. ಈ ಪರೀಕ್ಷೆಯಲ್ಲೂ ‘ಆಕಾಶಮ್ ಲೋ ಒಕ ತಾರ’ ಯಶಸ್ವಿಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4 ಕೋಟಿ ರೂಪಾಯಿ ಗಳಿಸಿದೆ. ವಿಶೇಷವೆಂದರೆ, ಈ ಗಳಿಕೆ ಚಿತ್ರದ ಮೊದಲ ದಿನದ ಕಲೆಕ್ಷನ್‌ಗಿಂತ ಶೇ.10ರಷ್ಟು ಹೆಚ್ಚಾಗಿದೆ.

Ad Widget

Ad Widget <> Ad Widget

ಚಿತ್ರ ಬಿಡುಗಡೆಯಾಗಿ ನಾಲ್ಕು ದಿನಗಳಲ್ಲಿ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದೇ ವೇಗ ಮುಂದುವರಿದರೆ ಮೊದಲ ವಾರದ ಅಂತ್ಯಕ್ಕೆ 30 ಕೋಟಿ ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಮುಂದಿನ ವಾರವೂ ಉತ್ತಮ ಪ್ರದರ್ಶನ ಮುಂದುವರಿಸಿದರೆ ಚಿತ್ರ ಹಿಟ್ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಈ ಮೂಲಕ ತೆಲುಗು ಚಿತ್ರರಂಗದಲ್ಲಿ ದುಲ್ಕರ್ ಸಲ್ಮಾನ್ ಅವರ ಯಶಸ್ಸಿನ ಓಟ ಮುಂದುವರಿದಂತಾಗಲಿದೆ.

ಪವನ್ ಸಾಧಿನೇನಿ ನಿರ್ದೇಶನದ ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್‌ಗೆ ನಾಯಕಿಯಾಗಿ ಹೊಸ ಪ್ರತಿಭೆ ಸಾತ್ವಿಕಾ ವೀರವಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರುತಿ ಹಾಸನ್, ರುಹಾನಿ ಶರ್ಮಾ, ಸ್ವಾಸಿಕಾ, ಮುರಳಿ ಶರ್ಮಾ, ಗೌತಮ್ ವಾಸುದೇವ್ ಮೆನನ್, ಗೆಟಪ್ ಶ್ರೀನು ಹಾಗೂ ಪ್ರವೀಣ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Ad Widget

Ad Widget

ಜಿ.ವಿ. ಪ್ರಕಾಶ್ ಕುಮಾರ್ ಅವರ ಸಂಗೀತ, ಸುಜಿತ್ ಸಾರಂಗ್ ಅವರ ಛಾಯಾಗ್ರಹಣ ಹಾಗೂ ಪ್ರವೀಣ್ ಕೆ.ಎಲ್. ಅವರ ಸಂಕಲನ ಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದೆ. ಪ್ರೇಕ್ಷಕರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆ ಚಿತ್ರತಂಡದ ನಿರೀಕ್ಷೆಯನ್ನು ಹೆಚ್ಚಿಸಿದೆ.

Ad Widget
Continue Reading

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!