Connect with us

ಸ್ಥಳೀಯ

Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget alt="Ad Widget"/>

Ad Widget

ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.

8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.

Ad Widget

Ad Widget

ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Ad Widget
Click to comment

Leave a Reply

ಅಪರಾಧ

Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ

Published

on

Ad Widget

Ad Widget

Ad Widget

Ad Widget

ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್‌ನಲ್ಲಿ ‘INDIA STORES FOR YOU’ ಎಂಬ ಆನ್‌ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್‌ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.

Ad Widget

Ad Widget <> Ad Widget

ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್‌ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.

ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.

Ad Widget

Ad Widget

ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.

ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಅಪರಾಧ

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.

Ad Widget

Ad Widget <> Ad Widget

ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.

‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

Ad Widget

Ad Widget

ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!