ಸ್ಥಳೀಯ
Dharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು.

ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಎ. ಜೀವಂಧರ ಕುಮಾರ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಡಾ. ಪ್ರಭಾಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ, ಸುದರ್ಶನ ಜೈನ್ ಬಂಟ್ವಾಳ, ನೋಟರಿ ಶ್ವೇತಾ ಜೈನ್, ಉದ್ಯಮಿ ಪ್ರಭಾತ್ ಮೂಡುಬಿದಿರೆ, ಮಾಳ ಹರ್ಷೇಂದ್ರ ಜೈನ್, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತಾಧಿಕಾರಿ ಬಿ.ಪಿ. ಸಂಪತ್ ಕುಮಾರ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಸೇರಿದಂತೆ ಹಲವರು ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಶುಭಾಶಯಗಳನ್ನು ಅರ್ಪಿಸಿದರು.

ಕಲಾಂ ಬಳಸಿದ ಟಾಟಾ ನ್ಯಾನೋ ಕಾರು, ಪೆನ್ನು ಕೊಡುಗೆ
ರಾಮೇಶ್ವರಂನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಬಳಸಿದ್ದ ಟಾಟಾ ನ್ಯಾನೋ ಕಾರು, ಅದರ ದಾಖಲೆ ಪತ್ರಗಳು ಹಾಗೂ ಪೆನ್ನನ್ನು ಧರ್ಮಸ್ಥಳದ ಮಂಜೂಷಾ ವಾಹನಗಳ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕೆ ಇಡಲು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.

ಡಾ. ಅಬ್ದುಲ್ ಕಲಾಂ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಿಸಿದ ಹೆಗ್ಗಡೆಯವರು, ಅವರ ಸರಳ ವ್ಯಕ್ತಿತ್ವ, ಸರ್ವಧರ್ಮ ಸಮನ್ವಯದ ನಿಲುವು, ದೇವರ ಮೇಲಿನ ದೃಢಭಕ್ತಿ ಮತ್ತು ವಿಶ್ವಾಸವನ್ನು ನೆನಪಿಸಿಕೊಂಡರು. ಮಕ್ಕಳೊಂದಿಗೆ ಮಗುವಿನಂತೆ ಮುಕ್ತವಾಗಿ ಬೆರೆಯುತ್ತಿದ್ದ ಅವರ ಗುಣ ಹಾಗೂ ಸರಳತೆ ಅವಿಸ್ಮರಣೀಯ ಎಂದು ಹೇಳಿದರು. ಕಲಾಂ ಅವರ ಸ್ಮರಣಾರ್ಥ ಅಮೂಲ್ಯ ವಸ್ತುಗಳಾದ ಕಾರು ಮತ್ತು ಪೆನ್ನನ್ನು ಕೊಡುಗೆಯಾಗಿ ನೀಡಿದ ಪ್ರತಿಷ್ಠಾನದವರಿಗೆ ಕೃತಜ್ಞತೆ ಸಲ್ಲಿಸಿದರು.
ಡಾ. ಎ.ಪಿ.ಜೆ.ಎಂ. ನಝೀಮಾ ಮರೈಕಾಯಲ್, ಪ್ರತಿಷ್ಠಾನದ ಕಾರ್ಯದರ್ಶಿ ಎ.ಪಿ.ಜೆ.ಎಂ. ಜೈನೀಲಾಭಿ ಡೀಮ್ ಹಾಗೂ ಸಹ ಸಂಸ್ಥಾಪಕ ಎ.ಪಿ.ಜೆ.ಎಂ. ಶೇಖ್ ಸಲೀಂ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಸ್ವಾಗತಿಸಿದರು.
ವೀರವನಿತೆಯರ ಸಚಿತ್ರ ಅಂಚೆಚೀಟಿ ಬಿಡುಗಡೆ
ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಸವಿ ನೆನಪಿಗಾಗಿ ವಂದೇ ಭಾರತಂ ಪರಿಕಲ್ಪನೆಯಡಿ ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ, ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಸಹಯೋಗದೊಂದಿಗೆ ವೀರವನಿತೆಯರ ಸಂಕ್ಷಿಪ್ತ ಮಾಹಿತಿಯನ್ನು ಒಳಗೊಂಡ ಸಚಿತ್ರ ಅಂಚೆಚೀಟಿಗಳನ್ನು ಬೀಡಿನಲ್ಲಿ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.

ದಾನಚಿಂತಾಮಣಿ ಅತ್ತಿಮಬ್ಬೆ, ರಣಭೈರವಿ, ಅಕ್ಕಾದೇವಿ, ಕಾಳಲಾ ದೇವಿ, ಕಂತಿ, ಚೌಟರ ರಾಣಿ ಅಬ್ಬಕ್ಕ ದೇವಿ, ನಾಟ್ಯರಾಣಿ ಶಾಂತಲಾದೇವಿ ಹಾಗೂ ಚಂದನಬಾಲೆಯ ಕುರಿತ ಸಚಿತ್ರ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಯಿತು.
ವಂದೇ ಮಾತರಂ ಗೀತೆಯ 150ನೇ ವರ್ಷದ ಸ್ಮರಣಾರ್ಥ ಹಾಗೂ 2026ರ ಜಿನಸಮ್ಮಿಲನ ನಡೆಯುವ ಸಮ್ಮೇದ ಶಿಖರ್ಜಿಗೆ ಸಂಬಂಧಿಸಿದ ವಿಷಯಗಳನ್ನೊಳಗೊಂಡ ಅಂಚೆಪತ್ರಗಳೂ ಸೇರಿದಂತೆ ಒಟ್ಟು ಹತ್ತು ಅಂಚೆಪತ್ರಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಚಿತ್ರ ಅಂಚೆಚೀಟಿಗಳನ್ನು ಬಿಡುಗಡೆಗೊಳಿಸಿ, ಈ ಕಾರ್ಯದಲ್ಲಿ ಕೈಜೋಡಿಸಿದ ಅಂಚೆ ಇಲಾಖೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.
ಅಂಚೆ ಇಲಾಖೆಯ ನಿರ್ದೇಶಕ ಶ್ರೀಹರ್ಷ ಎನ್. ಹಾಗೂ ಪುತ್ತೂರು ಅಂಚೆ ವಿಭಾಗದ ಅಧೀಕ್ಷಕ ರವೀಂದ್ರ ನಾಯ್ಕ ಉಪಸ್ಥಿತರಿದ್ದರು. ಹುಬ್ಬಳ್ಳಿಯ ಮಹಾವೀರ ಕುಂದೂರ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಆಡಳಿತ ನಿರ್ದೇಶಕ ಬಿ.ಪಿ. ಸಂಪತ್ ಕುಮಾರ್ ಸಹಕರಿಸಿದರು.
ವಿಶೇಷಚೇತನರ ಸೇವೆಗೆ 10 ಆಸನಗಳ ಬಗ್ಗಿ ಕಾರು ಕೊಡುಗೆ
ಉದ್ಯಮಿ ಬಸವರಾಜ್ ಆರ್. ಅವರು ಹತ್ತು ಆಸನಗಳ ಇಲೆಕ್ಟ್ರಿಕ್ ಬಗ್ಗಿ ಕಾರನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಿದರು. ಈ ವಾಹನವನ್ನು ವಿಶೇಷಚೇತನರು ವಸತಿಗೃಹಕ್ಕೆ ತೆರಳಲು ಉಚಿತ ಸೇವೆಗಾಗಿ ಬಳಸಲಾಗುವುದು ಎಂದು ಡಾ. ಹೆಗ್ಗಡೆಯವರು ತಿಳಿಸಿದರು.
ರಾಷ್ಟ್ರಪತಿ, ಪ್ರಧಾನಿಯಿಂದ ಶುಭಾಶಯ
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯೇಕ ಶುಭಾಶಯ ಪತ್ರಗಳ ಮೂಲಕ ಹೆಗ್ಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಶಿಕ್ಷಣ
Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.
2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.
ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಅಪರಾಧ
Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ಸುಳ್ಯ20 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ23 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ23 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ
-
ಸ್ಥಳೀಯ20 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಬಿಗ್ ನ್ಯೂಸ್23 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
-
ಅಂತರ ರಾಜ್ಯ23 hours agoWhatsApp-ವಾಟ್ಸಾಪ್ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!
-
ಸ್ಥಳೀಯ18 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಅಪರಾಧ23 hours agoGym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ















