ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್ಗಳಲ್ಲಿ ನೇರವಾಗಿ ಸಪ್ಲಿಮೆಂಟ್ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್ಗಳ ಪ್ಯಾಕೆಟ್ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
-
ಸುಳ್ಯ22 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಸ್ಥಳೀಯ22 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ20 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಮಂಗಳೂರು19 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ನಿಧನ ವಾರ್ತೆ3 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಂತರ ರಾಜ್ಯ3 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ3 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಪರಾಧ3 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!















