ಬಿಗ್ ನ್ಯೂಸ್
ಕಾಮನ್ವೆಲ್ತ್ ಗೇಮ್ಸ್ 2022 : 8ನೇ ದಿನ ವಿಜ್ರಂಭಿಸಿದ ಭಾರತದ ಕುಸ್ತಿ ಪಟುಗಳು – ಪದಕ ಪಟ್ಟಿಯಲ್ಲಿ 5 ನೇ ಸ್ಥಾನಕ್ಕೆ ಜಿಗಿತ | 10 ಕಿ.ಮೀ ನಡಿಗೆಯಲ್ಲಿ ಇತಿಹಾಸ ಸೃಷ್ಟಿಸಿದ ಪ್ರಿಯಾಂಕಾ ಗೋಸ್ವಾಮಿ

ಕಾಮನ್ವೆಲ್ತ್ ಗೇಮ್ಸ್ 2022 (Commonwealth Games 2022)ರ 8 ನೇ ದಿನದಂದ ಭಾರತ ಕುಸ್ತಿ ಪಟುಗಳು ಮೈದಾನದಲ್ಲಿ ವಿಜ್ರಂಭಿಸಿದ್ದು 6 ಪದಕಗಳನ್ನು ಗೆದ್ದು ಕೊಟ್ಟಿದ್ದಾರೆ ಕುಸ್ತಿಪಟುಗಳು 3 ಚಿನ್ನ, ಒಂದು ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಭಾರತದ ಖಾತೆಗೆ ಹಾಕಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಅಥ್ಲೇಟಿಕ್ಸ್ ವೀಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಪ್ರಿಯಾಂಕಾ ಗೋಸ್ವಾಮಿ ಪಾತ್ರರಾದರು
65 ಕೆಜಿ ವಿಭಾಗದ ಪುರುಷರ ಕುಸ್ತಿ ಪಂದ್ಯದಲ್ಲಿ ಬಜರಂಗ್ ಪುನಿಯಾ ಚಿನ್ನ ಗೆದ್ದಿದ್ದಾರೆ. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಇದು ಇವರಿಗೆ ಸತತ ಎರಡನೇ ಚಿನ್ನ. ಇನ್ನೊಂದೆಡೆ ಮಹಿಳೆಯರ 62 ಕೆಜಿ ವಿಭಾಗದಲ್ಲಿ ಗೆದ್ದ ಸಾಕ್ಷಿ ಮಲಿಕ್, ದೇಶಕ್ಕೆ ಕುಸ್ತಿಯಲ್ಲಿ ಎರಡನೇ ಚಿನ್ನವನ್ನು ಭದ್ರಪಡಿಸಿದರು. ನಂತರ ಪುರುಷರ 86 ಕೆಜಿ ವಿಭಾಗದಲ್ಲಿ, ಪಾಕಿಸ್ತಾನದ ಹಾಲಿ ಚಿನ್ನದ ಪದಕ ವಿಜೇತ ಮುಹಮ್ಮದ್ ಇನಾಮ್ ಅವರನ್ನು ಸೋಲಿಸುವ ಮೂಲಕ ದೀಪಕ್ ಪೂನಿಯಾ ಭಾರತಕ್ಕೆ ಒಂದೇ ದಿನದಲ್ಲಿ ಮೂರನೇ ಚಿನ್ನ ಗೆದ್ದು ಕೊಟ್ಟರು.
ಈ ನಡುವೆ ಮಹಿಳೆಯರ 57 ಕೆಜಿ ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ ಅಂಶು ಮಲಿಕ್, ಬೆಳ್ಳಿಗೆ ತೃಪ್ತಿಪಟ್ಟರು. ಮತ್ತೊಂದೆಡೆ 68 ಕೆಜಿ ವಿಭಾಗದಲ್ಲಿ ದಿವ್ಯಾ ಕಕ್ರಾನ್ ಮತ್ತು 125 ಕೆಜಿ ವಿಭಾಗದಲ್ಲಿ ಮೋಹಿತ್ ಗ್ರೆವಾಲ್ ಕಂಚು ಗೆದ್ದಿದ್ದಾರೆ. ಈ ಮೂಲಕ ಕುಸ್ತಿಯಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ ಆರಕ್ಕೆ ಏರಿದೆ. ಈ ಕ್ರೀಡಾಕೂಟದ ಆರಂಭದಲ್ಲಿ ಭಾರತದ ವೇಟ್‌ಲಿಫ್ಟರ್‌ಗಳು ಇದೇ ರೀತಿ ಮೇಲಿಂದ ಮೇಲೆ ಪದಕಗಳಿಗೆ ಮುತ್ತಿಟ್ಟಿದ್ದರು.
ಓಟದ ನಡಿಗೆ

ಭಾರತದ ಅಥ್ಲೀಟ್ ಪ್ರಿಯಾಂಕಾ ಗೋಸ್ವಾಮಿ ಮಹಿಳೆಯರ 10 ಸಾವಿರ ಮೀಟರ್ ಓಟದ ನಡಿಗೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರಿಯಾಂಕಾ 43:38.82 ರಲ್ಲಿ ಓಟವನ್ನು ಪೂರ್ಣಗೊಳಿಸಿದರು. ಈ ಗೆಲುವಿನೊಂದಿಗೆ ಅವರು ಇತಿಹಾಸ ಸೃಷ್ಟಿಸಿದ್ದು, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಇತಿಹಾಸದಲ್ಲಿ ರೇಸ್-ವಾಕಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
5 ನೇ ಸ್ಥಾನಕ್ಕೆ ಜಿಗಿತ
ಇದರ ಆಧಾರದ ಮೇಲೆ ಭಾರತ ಪದಕ ಪಟ್ಟಿಯಲ್ಲಿಯೂ ದೊಡ್ಡ ಜಿಗಿತವನ್ನು ಮಾಡಿದೆ. ಭಾರತ ಈಗ ಒಟ್ಟು 27 ಪದಕಗಳೊಂದಿಗೆ 7ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಏರಿದೆ. ಭಾರತ ಇದುವರೆಗೆ 9 ಚಿನ್ನ, 9 ಬೆಳ್ಳಿ ಮತ್ತು 9 ಕಂಚಿನ ಪದಕಗಳನ್ನು ಹೊಂದಿದೆ.

ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ
ಆಸ್ಟ್ರೇಲಿಯಾ 50 ಚಿನ್ನ, 44 ಬೆಳ್ಳಿ ಮತ್ತು 46 ಕಂಚು ಸೇರಿದಂತೆ 140 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಾದ ಬಳಿಕ ಇಂಗ್ಲೆಂಡ್ 47 ಚಿನ್ನ, 46 ಬೆಳ್ಳಿ, 38 ಕಂಚು ಸೇರಿದಂತೆ ಒಟ್ಟು 131 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಕೆನಡಾ 87 ಪದಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ನ್ಯೂಜಿಲೆಂಡ್ 41 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಭಾರತದ ನಂತರ ಸ್ಕಾಟ್ಲೆಂಡ್, ದಕ್ಷಿಣ ಆಫ್ರಿಕಾ, ನೈಜೀರಿಯಾ, ವೇಲ್ಸ್ ಮತ್ತು ಮಲೇಷ್ಯಾ ತಂಡಗಳು ಅಗ್ರ 10ರಲ್ಲಿ ಸ್ಥಾನ ಪಡೆದಿವೆ. ಸ್ಕಾಟ್ಲೆಂಡ್ 7 ಚಿನ್ನ ಸೇರಿದಂತೆ ಒಟ್ಟು 35 ಪದಕಗಳನ್ನು ಹೊಂದಿದೆ, ದಕ್ಷಿಣ ಆಫ್ರಿಕಾ 7 ಚಿನ್ನ ಸೇರಿದಂತೆ 22, ನೈಜೀರಿಯಾ 7 ಚಿನ್ನ ಸೇರಿದಂತೆ 16, ವೇಲ್ಸ್ ಹೊಂದಿದೆ. 4 ಚಿನ್ನ ಸೇರಿದಂತೆ 19 ಮತ್ತು ಮಲೇಷ್ಯಾ 4 ಚಿನ್ನ ಸೇರಿದಂತೆ 11 ಪದಕಗಳನ್ನು ಹೊಂದಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ19 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು18 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು15 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ19 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ19 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ19 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ19 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ20 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















