ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಸ್ಥಳೀಯ
Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕಡಬ: ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಐತ್ತೂರು ನಿವಾಸಿ ನೀಲಮ್ಮ (46) ನೀಡಿದ ದೂರಿನಂತೆ, ಅವರ ಪತಿ ಮೃತಪಟ್ಟಿದ್ದು, ಮಗಳೊಂದಿಗೆ ವಾಸವಾಗಿದ್ದಾರೆ. ನ.25ರಂದು ಮಧ್ಯಾಹ್ನ ಅವರು ಮನೆಯಲ್ಲಿದ್ದ ವೇಳೆ ದಿನಕರ ಯಾನೆ ವಿನೋದ, ಚೈತ್ರಾ ಹಾಗೂ ಇತರ ಆರು ಮಂದಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಜಾಗದ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನೀಲಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 144/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 118(1), 352, 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ದಿನಕರ (27) ಎಂಬವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐತ್ತೂರು ನಿವಾಸಿ ದಿನಕರ ಅವರು ತಮ್ಮ ತಾಯಿ ಜೀಜಿ ಅವರೊಂದಿಗೆ ವಾಸವಾಗಿದ್ದು, ತಂದೆಯ ಹೆಸರಿನಲ್ಲಿರುವ ಐತ್ತೂರು ಗ್ರಾಮದ ಜಮೀನಿನಿಂದ ನ.25ರಂದು ಬೆಳಗ್ಗೆ ತಾವು ಹಾಗೂ ಪತ್ನಿ ಚೈತ್ರಾ ಸ್ಕೂಟರ್ನಲ್ಲಿ ಅಡಿಕೆ ಸಾಗಿಸುತ್ತಿದ್ದ ವೇಳೆ, ಆಸ್ತಿ ವಿಚಾರದ ತಕರಾರಿನ ಹಿನ್ನೆಲೆಯಲ್ಲಿ ನೀಲಮ್ಮ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್ಗಳಲ್ಲಿ ನೇರವಾಗಿ ಸಪ್ಲಿಮೆಂಟ್ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್ಗಳ ಪ್ಯಾಕೆಟ್ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
-
ಸುಳ್ಯ19 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ22 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ23 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ19 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ24 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಬಿಗ್ ನ್ಯೂಸ್23 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
-
ಸ್ಥಳೀಯ17 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಅಂತರ ರಾಜ್ಯ23 hours agoWhatsApp-ವಾಟ್ಸಾಪ್ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!















