Connect with us

ಬಿಗ್ ನ್ಯೂಸ್

Bigg Boss Kannada OTT : ತುಳು ಚಿತ್ರರಂಗದ ಸೂಪರ್ ಸ್ಟಾರ್ ರೂಪೇಶ್ ಶೆಟ್ಟಿ 3 ನೇ ಸ್ಫರ್ಧಿಯಾಗಿ ಎಂಟ್ರಿ – ಇಲ್ಲಿದೆ ಅವರ ಪುಲ್ ಬಯೋಡೆಟಾ

Published

on

Ad Widget

Ad Widget

Ad Widget

Ad Widget

ಗಿರ್‌ ಗಿಟ್‌ ತುಳು ಚಿತ್ರದ ಮೂಲಕ ಖ್ಯಾತಿಯ ಉತ್ತುಂಗ ತಲುಪಿದ  ತುಳು ಚಿತ್ರ ರಂಗದ  ಸೂಪರ್ ಸ್ಟಾರ್ ರೂಪೇಶ್ ಶೆಟ್ಟಿ (Roopesh Shetty)   ಕನ್ನಡ ಕಿರುತೆರೆಯ ಬಹುದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Reality Show Big Boss)   ಎಂಟ್ರಿ ಕೊಟ್ಟಿದ್ದಾರೆ.  ಆಗಸ್ಟ್ 6 ಅಂದರೆ ಇಂದು ಸಂಜೆ 7 ರಿಂದ ‘ಬಿಗ್ ಬಾಸ್ ಕನ್ನಡ ಓಟಿಟಿ 1’ (Bigg Boss Kannada OTT) ಪ್ರೀಮಿಯರ್ ಸಂಚಿಕೆ ಪ್ರಸಾರವಾಗಲಿದೆ . ಕನ್ನಡದ ಖ್ಯಾತ ಕಿಚ್ಚ ಸುದೀಪ್‌ ( Actor Kiccha Sudeep) ಹೋಸ್ಟ್‌ ಮಾಡುವ ಈ ಕಾರ್ಯಕ್ರಮ ಇದೇ ಮೊದಲ ಬಾರಿಗೆ ಟಿವಿ ಚಾನೆಲ್‌ ಗಳ ಮೂಲಕ ಪ್ರಸಾರವಾಗದೇ ವೂಟ್‌ ಒಟಿಟಿ ಪ್ಲ್ಯಾಟ್‌ ಫಾರ್ಮ್‌ ನಲ್ಲಿ ಪ್ರಸಾರವಾಗಲಿದೆ. ಬಿಗ್​ ಬಾಸ್​ ಓಟಿಟಿ ಗೆ 3ನೇ ಸ್ಪರ್ಧಿಯಾಗಿ ಅದ್ಧೂರಿಯಾಗಿ  ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ರು. ಆರ್ಯವರ್ಧನ್​ ಗುರೂಜಿ ( Aryavardhan Guruji) ಮತ್ತು 2ನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ( Sonu Srinivasa Gowda) ಇವರಿಗಿಂತ ಮುಂಚೆ  ಎಂಟ್ರಿ ಕೊಟ್ಟಿದ್ದಾರೆ

Ad Widget

Ad Widget

Ad Widget

Ad Widget

. ಕೋಸ್ಟಲ್​ವುಡ್​ನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟನಾಗಿ ಮಿಂಚಿ ನಿರೂಪಕನಾಗಿ ಕೆಲಸ ಮಾಡಿರುವ ರೂಪೇಶ್ ಶೆಟ್ಟಿ (Roopesh Shetty) ಬಿಗ್ ಬಾಸ್ ಮನೆ ಪ್ರವೇಶಿಸಿರುವುದು ತುಳುನಾಡಿನಲ್ಲಿ ಶೋ ಬಗ್ಗೆ ಹೆಚ್ಚಿನ ಆಸಕ್ತಿ ಮೂಡುವಂತೆ ಮಾಡಿದೆ. ತುಳುವಿನಲ್ಲಿ ಸುದೀಪ್‌ ಜತೆ ಮಾತನಾಡುವ ಪ್ರೋಮೊ ಕೂಡ ಈಗಾಗಲೇ ಬಿಡುಗಡೆಯಾಗಿದೆ

Ad Widget

Ad Widget alt="Ad Widget"/>

Ad Widget

ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ. ಇವರು ಕನ್ನಡದಲ್ಲಿ ನಿಶಬ್ಧ 2, ಡೇಂಜರ್ ಜೋನ್, ಪಿಶಾಚಿ 2 ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಮೂಲತಃ ಕಾಸರಗೋಡಿನವರಾದ ರೂಪೇಶ್ ಮಂಗಳೂರಿನಲ್ಲಿರುವ ‘ನಮ್ಮ ಟಿವಿ‘ ಎಂಬ ಚಾನೆಲ್​ನಲ್ಲಿ ನಿರೂಪಕನಾಗಿ ಹೆಸರು ಮಾಡಿದ್ದಾರೆ.

Ad Widget

Ad Widget <> Ad Widget

ಇದರ ನಡುವೆಯೇ  ಚಿತ್ರರಂಗದ ಸೆಳೆತಕ್ಕೆ ಒಳಗಾದ ಅವರು ತುಳು ಚಿತ್ರರಂಗದಲ್ಲಿ ಅವಕಾಶ ಹುಡುಕಲು ಶುರು ಮಾಡಿದರು.   ದಿಬ್ಬಣ ಎಂಬ ತುಳು ಚಿತ್ರ ಅವರಿಗೆ ದೊಡ್ಡ ಮಟ್ಟದ ಬ್ರೆಕ್‌ ತ್ರೂ ಕೊಟ್ಟಿತ್ತು.  2015 ರಲ್ಲಿ ಡೇಂಜರ್ ಜ಼ೋನ್ ಎಂಬ ಕನ್ನಡ ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್‌ ವುಡ್‌ ಗೆ ಕಾಲಿಟ್ಟರುನಂತರ ಐಸ್ ಕ್ರೀಮ್, ಪಿಶಾಚಿ 2 , ನಿಶಬ್ಧ 2 ಮತ್ತು ಸ್ಮೈಲ್ ಪ್ಲೀಜ್ ಎಂಬ ಕನ್ನಡ ಚಲನಚಿತ್ರಗಳಲ್ಲೂ ಕಾಣಿಸಿಕೊಂಡರು.

2018 ರಲ್ಲಿ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿ ತುಳುವಿನಲ್ಲಿ ಬಿಡುಗಡೆ ಆದ ಅಮ್ಮೆರ್ ಪೊಲೀಸ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ನಂತರ 2019 ರಲ್ಲಿ ನಿರ್ದೇಶನಕ್ಕೂ ಇಳಿದು ನಟಿಸಿದ ಗಿರ್ಗಿಟ್ (ತುಳು ಸಿನಿಮಾ) ಸಿನಿಮಾ ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆದಿತ್ತು. ತುಳು ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಇದಾಯಿತು. ಇತ್ತೀಚೆಗಷ್ಟೆ ಕನ್ನಡದಲ್ಲೂ ಸುಮಂತ್ ಹಾಗೂ ಭಾವನಾ ಜೊತೆ ಗೋವಿಂದ ಗೋವಿಂದ ಎಂಬ ಚಿತ್ರದಲ್ಲಿ ನಟಿಸಿದ್ದರು.   ದೊಡ್ಮನೆ ಒಳಗೆ ರೂಪೇಶ್‌ ಶೆಟ್ಟಿ  ಹೇಗಿರಲಿದ್ದಾರೆ ಎಂದು ಕಾದು ನೋಡಬೇಕಿದೆ

Ad Widget

Ad Widget

ಇವರ ಬಳಿಕ ಪತ್ರಕರ್ತ ಸೋಮಣ್ಣ ಮಾಚಿಮಾಡ ನಟ ರಾಕೇಶ್ ಅಡಿಗ ಎಂಟ್ರಿ ಕೊಟ್ಟಿದ್ದಾರೆ. ಇನ್ನುಳಿದವರ ಮಾಹಿತಿ ಇನ್ನಷ್ಟೆ ರಿವಿಲ್ ಆಗಬೇಕಿದೆ

ಇನ್ನು ಇದೇ ಪ್ರಥಮ ಬಾರಿಗೆ ಕನ್ನಡದ ‘ಬಿಗ್ ಬಾಸ್’ ಓಟಿಟಿ ವೇದಿಕೆಯಲ್ಲಿ ಮಾತ್ರ ಪ್ರಸಾರವಾಗಲಿದೆ. ವೂಟ್‌ನಲ್ಲಿ 24/7 ಲೈವ್ ಆಗಿ ಬಿಗ್ ಬಾಸ್ ಕಾರ್ಯಕ್ರಮವನ್ನು ವೀಕ್ಷಕರು ವೀಕ್ಷಿಸಬಹುದಾಗಿದೆ. ಈ ಹಿಂದಿನ ಬಿಗ್ ಬಾಸ್ ಸೀಸನ್‌ಗಳಲ್ಲಿ ದಿನಪೂರ್ತಿ ನಡೆಯುವುದನ್ನು ಒಂದು ಅಥವಾ ಒಂದುವರೆ ಗಂಟೆಯಲ್ಲಿ ತೋರಿಸಲಾಗುತ್ತಿತ್ತು. ಆದರೀಗ, ‘ಬಿಗ್ ಬಾಸ್‘ ಕಾರ್ಯಕ್ರಮ 24/7 ಲೈವ್ ಆಗಿ ಪ್ರಸಾರವಾಗಲಿದೆ. ಈಗಾಗಲೇ ವೂಟ್​ ನಲ್ಲಿ ಕೇವಲ ಸ್ಪರ್ಧಿಗಳ ಪ್ರೋಮೋ ಬಿಡುಗಡೆ ಮಾಡಲಾಗುತ್ತಿದ್ದು, ಸಂಜೆ 7 ಗಂಟೆಯಿಂದ ಅದ್ಧೂರಿ ಓಪನಿಂಗ್​ ಸೆರೆಮನೆ ಪ್ರಸಾರವಾಗಲಿದೆ

Ad Widget
Click to comment

Leave a Reply

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಸ್ಥಳೀಯ

Bank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!

Published

on

Ad Widget

Ad Widget

Ad Widget

Ad Widget

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.

Ad Widget

Ad Widget

Ad Widget

Ad Widget

ಯಾದಗಿರಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣಗಳನ್ನು ಅಡವಿಟ್ಟು ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಹೊಸ ಸಂಕಷ್ಟ ತಂದೊಡ್ಡಿವೆ. ಚಿನ್ನದ ಬೆಲೆ ಕುಸಿತದಿಂದ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ಹಣ ಪಾವತಿಸುವಂತೆ ಬ್ಯಾಂಕ್‌ಗಳು ಸಾಲಗಾರರಿಗೆ ಸೂಚನೆ ನೀಡುತ್ತಿವೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸದಿದ್ದರೆ ಆರ್‌ಬಿಐ ನಿಯಮಗಳ ಪ್ರಕಾರ ಅಡವಿಟ್ಟ ಚಿನ್ನವನ್ನು ಹರಾಜು ಹಾಕಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡುತ್ತಿವೆ.

Ad Widget

Ad Widget alt="Ad Widget"/>

Ad Widget

ಕಳೆದ ಆರೇಳು ತಿಂಗಳ ಹಿಂದೆ 10 ಗ್ರಾಂ ಚಿನ್ನದ ಬೆಲೆ ₹1.75 ಲಕ್ಷದಿಂದ ₹1.85 ಲಕ್ಷದವರೆಗೆ ತಲುಪಿದ್ದ ಸಂದರ್ಭದಲ್ಲಿ ಅನೇಕರು ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಹೆಚ್ಚಿನ ಮೊತ್ತದ ಸಾಲ ಪಡೆದಿದ್ದರು. ಇದೀಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಅಂತಹ ಗ್ರಾಹಕರನ್ನು ಬ್ಯಾಂಕ್‌ಗಳು ಸಂಪರ್ಕಿಸಿ, ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಹಣ ಪಾವತಿಸುವಂತೆ ಸೂಚಿಸುತ್ತಿವೆ.

Ad Widget

Ad Widget <> Ad Widget

ಕಳೆದ ಮೂರು ತಿಂಗಳ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹30,000 ಇಳಿಕೆಯಾಗಿರುವುದು ಬ್ಯಾಂಕ್‌ಗಳ ಆತಂಕಕ್ಕೆ ಪ್ರಮುಖ ಕಾರಣವಾಗಿದೆ. ಚಿನ್ನದ ಮೌಲ್ಯ ಕುಸಿದಂತೆ ಸಾಲದ ಮೊತ್ತ ಮತ್ತು ಅಡವಿಟ್ಟ ಚಿನ್ನದ ಮೌಲ್ಯದ ನಡುವಿನ ಅನುಪಾತವಾದ ಲೋನ್ ಟು ವ್ಯಾಲ್ಯೂ (LTV) ನಿಗದಿತ ಮಿತಿಯನ್ನು ಮೀರಿರುವ ಸಾಧ್ಯತೆಯಿದೆ. ಹೀಗಾಗಿ ವಿಶೇಷವಾಗಿ ಖಾಸಗಿ ಬ್ಯಾಂಕ್‌ಗಳು ಗ್ರಾಹಕರಿಗೆ ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಅಥವಾ ಹೆಚ್ಚುವರಿ ಚಿನ್ನವನ್ನು ಅಡವಿಡುವಂತೆ ಸೂಚಿಸುತ್ತಿವೆ.

ಚಿನ್ನದ ಮೌಲ್ಯ ಕುಸಿತ; ಸಾಲಗಾರರಿಗೆ ಹೆಚ್ಚುವರಿ ಹೊರೆ

Ad Widget

Ad Widget

ಉದಾಹರಣೆಗೆ, ಚಿನ್ನದ ಬೆಲೆ 10 ಗ್ರಾಂಗೆ ₹1.85 ಲಕ್ಷ ಇದ್ದಾಗ ₹5 ಲಕ್ಷ ಮೌಲ್ಯದ ಚಿನ್ನಾಭರಣ ಅಡವಿಟ್ಟು ₹3.75 ಲಕ್ಷದಿಂದ ₹4 ಲಕ್ಷದವರೆಗೆ ಸಾಲ ಪಡೆದಿದ್ದರೆ, ಇದೀಗ ಚಿನ್ನದ ಬೆಲೆ ಕುಸಿದಿರುವುದರಿಂದ ಅಡವಿಟ್ಟ ಆಭರಣಗಳ ಮೌಲ್ಯವೂ ಕಡಿಮೆಯಾಗಿರುತ್ತದೆ. ಇದರಿಂದ ಸಾಲದ ಮೊತ್ತಕ್ಕೆ ಹೋಲಿಸಿದರೆ ಚಿನ್ನದ ಮೌಲ್ಯ ಕಡಿಮೆಯಾಗುವ ಪರಿಸ್ಥಿತಿ ಎದುರಾಗಬಹುದು.

ಇನ್ನೂ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂಬ ಆತಂಕವೂ ಸಾಲಗಾರರ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಬ್ಯಾಂಕ್‌ಗಳು ಗ್ರಾಹಕರಿಗೆ ತಕ್ಷಣ ಅಗತ್ಯ ಮಾರ್ಜಿನ್ ಮೊತ್ತವನ್ನು ಪಾವತಿಸಿ ಸಾಲದ ಖಾತೆಯನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸುತ್ತಿವೆ.

ಹಣ ಪಾವತಿಸದಿದ್ದರೆ ಒಡವೆ ಹರಾಜು?

ಈ ಕುರಿತು ಮಾತನಾಡಿರುವ ಖಾಸಗಿ ಬ್ಯಾಂಕ್‌ನ ಪ್ರಮುಖರೊಬ್ಬರು, ಚಿನ್ನದ ಬೆಲೆ ಕುಸಿತದಿಂದ ಬ್ಯಾಂಕ್‌ಗಳಿಗೆ ನಷ್ಟವಾಗಬಾರದು ಎಂಬ ಉದ್ದೇಶದಿಂದ ಗೋಲ್ಡ್ ಲೋನ್ ಪಡೆದ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಾಲದ ಖಾತೆಯನ್ನು ಸರಿಪಡಿಸಿಕೊಳ್ಳಲು ಹೆಚ್ಚುವರಿ ಮಾರ್ಜಿನ್ ಹಣ ಪಾವತಿಸುವಂತೆ ಗ್ರಾಹಕರಿಗೆ ತಿಳಿಸಲಾಗುತ್ತಿದೆ. ಗ್ರಾಹಕರು ನಿಗದಿತ ಸಮಯದಲ್ಲಿ ಸ್ಪಂದಿಸದಿದ್ದರೆ ಬ್ಯಾಂಕ್‌ಗಳು ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳು ಅಡವಿಟ್ಟ ಚಿನ್ನವನ್ನು ಹರಾಜು ಹಾಕುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಚಿನ್ನದ ಬೆಲೆ ಇಳಿಕೆ ಬಗ್ಗೆ ಮೋದಿ ಹೇಳಿಕೆ
ಇತ್ತೀಚೆಗೆ ಚಿನ್ನದ ಬೆಲೆ ಇಳಿಕೆಯ ಕುರಿತು ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚಿನ್ನ ಖರೀದಿಸದಂತೆ ತಾವು ನೀಡಿದ್ದ ಸಲಹೆಯಿಂದ ಜನರ ಹಣ ಉಳಿತಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಚೇಂಬರ್ ಆಫ್ ಟ್ರೇಡ್ ಆ್ಯಂಡ್ ಇಂಡಸ್ಟ್ರಿ ಕೂಡ ಪ್ರಧಾನಿಯವರ ಸಲಹೆಯಿಂದ ಲಕ್ಷಾಂತರ ರೂಪಾಯಿ ನಷ್ಟ ತಪ್ಪಿದೆ ಎಂದು ಪತ್ರ ಬರೆದು ಅಭಿನಂದಿಸಿತ್ತು.

ನ.23ರ ಸೋಮವಾರ ಯಾದಗಿರಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹1.31 ಲಕ್ಷ ಇತ್ತು ಎಂದು ವರದಿಯಾಗಿದೆ.

ಒಟ್ಟಿನಲ್ಲಿ, ಚಿನ್ನದ ಬೆಲೆ ಏರಿಕೆಯ ಸಂದರ್ಭದಲ್ಲಿ ಹೆಚ್ಚಿನ ಸಾಲ ಪಡೆದಿದ್ದ ಗ್ರಾಹಕರು ಇದೀಗ ಬೆಲೆ ಇಳಿಕೆಯ ಪರಿಣಾಮವಾಗಿ ಹೆಚ್ಚುವರಿ ಹಣ ಹೊಂದಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗಳ ಸೂಚನೆ ಪಾಲಿಸದಿದ್ದರೆ ತಮ್ಮ ಅಮೂಲ್ಯ ಆಭರಣಗಳನ್ನೇ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ.

Ad Widget
Continue Reading

ಮಂಗಳೂರು

Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!

Published

on

Ad Widget

Ad Widget

Ad Widget

Ad Widget

ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.

Ad Widget

Ad Widget alt="Ad Widget"/>

Ad Widget

ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್‌ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್‌ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.

ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್‌ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.

Ad Widget

Ad Widget

ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.

ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್‌ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.

ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್‌ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.

ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!