Connect with us

ಬಿಗ್ ನ್ಯೂಸ್

Big Breaking :ಬಿಹಾರದಲ್ಲಿ ಜೆಡಿಯು – ಬಿಜೆಪಿ ಸರಕಾರ ಪತನದಂಚಿಗೆ | ಕಾಂಗ್ರೇಸ್‌, ಆರ್‌.ಜೆ.ಡಿ ಜತೆ ನಿತೀಶ್‌ ಮಾತುಕತೆ |  ಆರ್‌ʼಸಿಪಿ ಸಿಂಗ್‌ ಮೂಲಕ ಮಹಾರಾಷ್ಟ್ರ ಮಾದರಿ ಸರಕಾರ ರಚಿಸಲು ಶಾ ತಂತ್ರ | ಮೈತ್ರಿ ಮುರಿದು ಬೀಳಲು ಕಾರಣವೇನು ಗೊತ್ತೇ?

Published

on



Ad Widget

Ad Widget

Ad Widget

Ad Widget

ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ( Bihara Chief Minister Nitish kumar) ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದು ಕೊಳ್ಳುವ ಎಲ್ಲ ಸಾಧ್ಯತೆಗಳು ಗೋಚರಿಸುತ್ತಿದೆ. ಮಂಗಳವಾರ ಜೆಡಿಯು ಪಕ್ಷದ ಸಭೆಯನ್ನು ಅದರ ಸರ್ವೊಚ್ಚ ನಾಯಕ ನಿತೀಶ್ ಕುಮಾರ್ ಅವರು ಕರೆದಿದ್ದು ಅದರಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಗಂಟೆಗಳ ಹಿಂದೇಯಷ್ಟೆ ಅವರು ಕಾಂಗ್ರೇಸ್ ಮುಖಂಡೆ ಸೋನಿಯಾ ಗಾಂಧಿ ( Congress Chief Soniya Gandhi ) ಜತೆ ಮಾತುಕತೆ ಕೂಡ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಜೆಡಿಯು ಸಭೆ ಬೆನ್ನಲ್ಲೇ ಕಾಂಗ್ರೆಸ್, ಅರ್‌ ಜೆಡಿ ( RJD) ಕೂಡ ಪ್ರತ್ಯೇಕವಾಗಿ ಪಕ್ಷದ ಸಭೆ ಕರೆದಿವೆ. ಈ ವಾರದಲ್ಲೇ ಬಿಹಾರದಲ್ಲಿ ಎನ್ ಡಿಎ ಸರ್ಕಾರ ( NDA Government ) ಅಂತ್ಯವಾಗಲಿದೆ ಎಂದು ರಾಜಕೀಯ ತಜ್ಞರು ಲೆಕ್ಕಾಚಾರ ಹಾಕಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget

ಬಿಜೆಪಿ ಜೆಡಿಯು ಭಿನ್ನಮತಕ್ಕೆ ಕಾರಣವೇನು ?

Ad Widget

Ad Widget <> Ad Widget

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಮತ್ತು ಜೆಡಿಯು ಮಧ್ಯೆ ಮದ್ಯ ನಿಷೇಧ, ಅಗ್ನಿಪಥ್ ಯೋಜನೆ ಮತ್ತು ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ತಲೆದೋರಿದೆ. ಮಾಜಿ ಸಚಿವ ಮತ್ತು ಜೆಡಿಯು ನಾಯಕ ಆರ್ ಸಿಪಿ ಸಿಂಗ್ ( ರಾಮಚಂದ್ರ ಪ್ರಸಾದ್ ಸಿಂಗ್) ರಾಜೀನಾಮೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದೆ. ಜೆಡಿಯು ಪಕ್ಷವನ್ನು ಸರ್ವನಾಶಗೊಳಿಸಲು ಬಿಜೆಪಿ ಆರ್ ಸಿಪಿ ಸಿಂಗ್ ಅವರನ್ನು ಬಳಸಿಕೊಳ್ಳಲು ಯೋಜಿಸುತ್ತಿದೆ ಎಂದು ಜೆಡಿಯು ಆರೋಪಿಸಿದೆ.



Ad Widget

ಮಾಜಿ ಕೇಂದ್ರ ಸಚಿವ ಮತ್ತು ಜೆಡಿಯು ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಅರ್ ಸಿಪಿ ಸಿಂಗ್ ಅವರು ಜೆಡಿಯು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್ʼ ಸಿಪಿ ಸಿಂಗ್ ಅವರು ಒಂದು ಕಾಲದಲ್ಲಿ ನಿತೀಶ್ ಕುಮಾರ್ ಅವರ ಅತ್ಯಂತ ಸಮೀಪದ ವ್ಯಕ್ತಿಯಾಗಿದ್ದರು . ಜೆಡಿಯು ಪಕ್ಷದ ನಿತೀಶ್ ಬಳಿಕದ ಅತೀ ದೊಡ್ಡ ನಾಯಕ ಎಂದೇ ಬಿಂಬಿತರಾಗಿದ್ದರು . ಆದರೇ ಇತ್ತೀಚೆಗೆ ಅವರ ಮತ್ತು ನಿತೀಶ್ ಮಧ್ಯೆ ಭಿನ್ನಾಭಿಪ್ರಾಯ ಭುಗೀಳೆದ್ದಿತ್ತು.

Ad Widget

Ad Widget

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಚರ್ಚಿಸಿದ ನಳಿನ್ ಕುಮಾರ್ ಕಟೀಲ್

ರಾಜ್ಯಸಭಾ ಸದಸ್ಯರಾಗಿದ್ದ ಅರ್ ಪಿ ಸಿಂಗ್ ಅವರ ಕಾಲಾವಧಿ ಕಳೆದ ತಿಂಗಳು ಅಂತ್ಯವಾಗಿತ್ತು ಆದರೇ ಅವರಿಗೆ ಮತ್ತೆ ರಾಜ್ಯಸಭೆಗೆ ಸ್ಫರ್ಧಿಸಲು ಜೆಡಿಯು ಅವಕಾಶ ನಿರಕಾರಿಸಿತ್ತು. ವರ್ಷದ ಹಿಂದೆ ಅವರು ಕೆಂದ್ರ ಸಚಿವ ಸಂಪುಟ ಸೇರಿದ್ದರು . ನಿತೀಶ್ ಅವರನ್ನು ಸಂಪರ್ಕಿಸದೆ ಅರ್ ಪಿ ಸಿಂಗ್ ಅವರು ಕೇಂದ್ರ ಸಚಿವ ಸಂಪುಟ ಸೇರಿದ್ದರು ಎಂದು ಅಂದು ವರದಿಯಾಗಿತ್ತು. ಇದು ನಿತೀಶ್ ಕೆಂಗಣ್ಣಿಗೆ ಗುರಿಯಾಗಿತ್ತು. ಹೀಗಾಗಿಯೇ ಅವರಿಗೆ ರಾಜ್ಯಸಭಾ ಟಿಕೆಟ್ ನಿರಕಾರಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

ಶನಿವಾರ ಪಕ್ಷ ತೊರೆದಿರುವ ಅರ್ ಪಿ ಸಿಂಗ್ ಬಿಜೆಪಿಗೆ ಸೇರುವುದು ತಮಗಿರುವ ಆಯ್ಕೆಗಳಲ್ಲಿ ಒಂದು ಎಂದು ಹೇಳಿದ್ದರು. ಆರ್ ಸಿಪಿಯ ರಾಜೀನಾಮೆ ಜೆಡಿಯು ಹಾಗೂ ಬಿಜೆಪಿ ಮೈತ್ರಿ ಸರಕಾರದ ಶವ ಪೆಟ್ಟಿಗೆಗೆ ಹೊಡೆದ ಕೊನೆಯ ಮೊಳೆ ಎಂದೇ ರಾಜಕೀಯ ಪಂಡಿತರು ವಿಶ್ಲೇಸಿಸುತ್ತಾರೆ. ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಶಾ ( Home minister Amith Sha) ಅವರು ಅರ್ ಪಿ ಸಿಂಗ್ ಅವರನ್ನು ಜೆಡಿಯು ಒಡೆಯಲು ಅಸ್ತ್ರವಾಗಿ ಬಳಸುತ್ತಿದ್ದಾರೆ.

ವಿಟ್ಲ: ಜೀಪು – ಆಕ್ಟೀವಾ ಮಧ್ಯೆ ಅಪಘಾತ | ಸವಾರ ಮೃತ್ಯು  

ಮಹರಾಷ್ಟ್ರದಲ್ಲಿ ಶಿವಸೇನೆಯನ್ನು ಒಡೆಯಲು ಏಕನಾಥ ಶಿಂಧೆಯವರನ್ನು ಬಳಸಿದಂತೆ , ಜೆಡಿಯು ಒಡೆಯಲು ಅರ್ ಪಿ ಸಿಂಗ್ ಅವರನ್ನು ಬಳಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ . ಜೆಡಿಯುನ 28ಕ್ಕೂ ಹೆಚ್ಚು ಮಂದಿ ಶಾಸಕರನ್ನು ಎಳೆಯಲು ಅರ್ ಪಿ ಸಿಂಗ್ ಸಫಲರಾದರೇ ಆಗ ಜೆಡಿಯು ಇಬ್ಬಾಗವಾಗುತ್ತದೆ. ಆಗ ಆರ್ ಪಿ ಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡಿ ಅಲ್ಲಿ ತನ್ನ ಮಾತು ಕೇಳುವ ಮುಖ್ಯಮಂತ್ರಿಯನ್ನು ಸ್ಥಾಪಿಸುವುದು ಶಾ ಉದ್ಧೇಶ ಎನ್ನಲಾಗುತ್ತಿದೆ

ಬೆಂಗಳೂರು : ಪ್ರತ್ಯೇಕ ಕೊಠಡಿಯಲ್ಲಿ  ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ  ತಾಯಿ ಹಾಗೂ 10 ವರ್ಷದ ಮಗಳು | ಸಾವಿನ ಸುತ್ತ ಹಲವು ಅನುಮಾನ – 10 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ  

ಆದರೇ ರಾಜಕೀಯ ಪಗಡೆಯಾಟದಲ್ಲಿ ನಿಷ್ಣಾತರಾಗಿರುವ ನಿತೀಶ್ ಕುಮಾರ್ ಇದಕ್ಕೆ ಹೇಗೆ ಇದಿರೇಟು ನೀಡುತ್ತಾರೆ ಎನ್ನುವುದು ಸದ್ಯದ ಕುತೂಹಲ. 2016ರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಆರ್ ಜೆಡಿ, ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದರು. ಆದರೆ, ಜುಲೈ 26, 2017 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್ ಮೈತ್ರಿಯಿಂದ ಹೊರಬಂದರು.

ಬಿಜೆಪಿ ಜೊತೆಗಿನ ಮೈತ್ರಿಯೂ ಅಂತ್ಯ?

ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದರು. 2021ರ ಚುನಾವಣೆಯಲ್ಲಿ, ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗೆ ಚುನಾವಣೆ ಎದುರಿಸಿತು, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿ (ಯು) ಕೇವಲ 43 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು, ಆದರೂ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿತು. ಈಗ ಬಿಜೆಪಿಯೊಂದಿಗಿನ ಮೈತ್ರಿಗೂ ಅಂತ್ಯ ಹಾಡಲಿದೆ ಎನ್ನಲಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್

Published

on



Ad Widget

Ad Widget

Ad Widget

Ad Widget

ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.

Ad Widget

Ad Widget <> Ad Widget

ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.



Ad Widget

“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.

Ad Widget

Ad Widget

ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.

ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.

Ad Widget
Continue Reading

ರಾಜ್ಯ

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.



Ad Widget

ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

Ad Widget

Ad Widget

ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading