Connect with us

Uncategorized

ಪುತ್ತೂರಿನಲ್ಲಿ ದೀಪಾವಳಿ ಪಟಾಕಿ ಧಮಾಕ – ಬ್ರ್ಯಾಂಡೆಡ್ ಸೈಕಲ್, ಸ್ಮಾರ್ಟ್ ವಾಚ್ ಗೆಲ್ಲುವ ಅವಕಾಶ | ದರ್ಬೆ, ಬೊಳುವಾರಿನಲ್ಲಿ ವಿಶೇಷ ರಿಯಾಯಿತಿಯಲ್ಲಿ ಸಿಝ್ಲರ್ ಪಟಾಕಿ ಮಾರಾಟ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನಲ್ಲಿ ದೀಪಾವಳಿಗೆ ಬಣ್ಣ ಬಣ್ಣದ ಪಟಾಕಿ ಖರೀದಿಸಿ ಬ್ರ್ಯಾಂಡೆಡ್ ಸೈಕಲ್ ಮತ್ತು ಸ್ಮಾರ್ಟ್ ವಾಚ್ ಗೆಲ್ಲಿ…

Ad Widget

Ad Widget

Ad Widget alt="Ad Widget"/>

Ad Widget

ಈ ದೀಪಾವಳಿಯನ್ನು ಪ್ರತಿ ಮನೆಮನೆಯಲ್ಲೂ ಸಂಭ್ರಮದಿಂದ ಸಂಭ್ರಮಿಸಲು ಪುತ್ತೂರಿನ ‘ಸಿಝ್ಲರ್’ ಪ್ರಸ್ತುತ ಪಡಿಸುತ್ತಿದೆ ಪ್ರತಿಷ್ಠಿತ ಕಂಪನಿಗಳ ‘ಪಟಾಕಿ’ಗಳ ಮಾರಾಟ ಮೇಳ ಹಾಗೂ ಗ್ರಾಹಕರಿಗೆ ‘ಬಂಪರ್ ಬಹುಮಾನ’ಗಳು.

Ad Widget

Ad Widget <> Ad Widget

ನವೆಂಬರ್ 2 ರಿಂದ 5 ರವರೆಗೆ ಹಾಗೂ 15 ರಂದು ದರ್ಬೆಯ ರಿಲಯನ್ಸ್ ಸ್ಮಾರ್ಟ್ ಸಮೀಪದ ಮಂಗಳಾ ಬಾರ್ & ರೆಸ್ಟೋರೆಂಟ್ ಮುಂಭಾಗ ಹಾಗೂ ಬೊಳ್ವಾರ್ ಪ್ರಗತಿ ಆಸ್ಪತ್ರೆಯ ಮುಂಭಾಗದಲ್ಲಿ ‘ಸಿಝ್ಲರ್’ ವತಿಯಿಂದ ಪಟಾಕಿ ಮಾರಾಟ ಮೇಳ ನಡೆಯಲಿದೆ.



Ad Widget

ಎಲ್ಲಾ ಪ್ರತಿಷ್ಠಿತ ಕಂಪೆನಿಗಳ ಪಟಾಕಿ ಗಿಫ್ಟ್ ಬಾಕ್ಸ್ ಗಳು, ಪಟಾಕಿ, ಮಕ್ಕಳ ಪಟಾಕಿ, ಸ್ಕೇ ಶಾಟ್ ಗಳು ಅತ್ಯಾಕರ್ಷಕ ದರದಲ್ಲಿ ಲಭ್ಯವಿದ್ದು.

Ad Widget

Ad Widget

ರೂ.499 ಕ್ಕಿಂತ ಮೇಲ್ಪಟ್ಟು ಖರೀದಿಸುವ ಗ್ರಾಹಕರು ಲಕ್ಕಿ ಡ್ರಾ ದ ಮೂಲಕ ಸೈಕಲ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಬಂಪರ್ ಬಹುಮಾನವಾಗಿ ಪಡೆಯಬಹುದಾಗಿದೆ ಎಂದು ‘ಸೀಝ್ಲರ್ ಸ್ಪರ್ಕ್ಲೈರ್ಸ್’ ನ ಆಯೋಜಕರು ತಿಳಿಸಿದ್ದಾರೆ.

Ad Widget
Click to comment

Leave a Reply

Uncategorized

ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

Published

on



Ad Widget

Ad Widget

Ad Widget

Ad Widget

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

Ad Widget

Ad Widget <> Ad Widget

ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.



Ad Widget

ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಫತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Ad Widget
Continue Reading

Uncategorized

Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ.

Ad Widget

Ad Widget

Ad Widget

Ad Widget

ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ ಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಮಗಾರಿಯ ಗುಣಮಟ್ಟವನ್ನು ಟ್ರೋಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಹರಿದಾಡುತ್ತಿವೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆ ಕುಸಿಯಲು ಕಾರಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಯುತ್ತಿದೆ.

Ad Widget

Ad Widget <> Ad Widget

ಇದೇ ವೇಳೆ ನ್ಯಾಯಾಲಯದ ಕ್ಯಾಂಟೀನ್‌ನ ಗೋಡೆಯಲ್ಲೂ ಬಿರುಕುಗಳು ಕಾಣಿಸಿಕೊಂಡಿವೆ ಎಂಬ ಆರೋಪ ಕೇಳಿಬಂದಿದೆ. ಹೊಸದಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈ ಘಟನೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.



Ad Widget

Continue Reading

Uncategorized

Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ

Published

on



Ad Widget

Ad Widget

Ad Widget

Ad Widget

ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಗರ್ಭಿಣಿಯ ವೇಷದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶೋಭಾ ನಾದಿನಿ ಗರ್ಭಿಣಿಯ ಸಂಬಂಧಿಯಂತೆ ಹಾಗೂ ಡಿಎಚ್‌ಒ ಡಾ. ಸುವರ್ಣ ಕುಲಕರ್ಣಿ ಗರ್ಭಿಣಿಯ ತಾಯಿಯ ವೇಷದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ad Widget

Ad Widget <> Ad Widget

ಮಹಾರಾಷ್ಟ್ರದಲ್ಲಿ ಲಿಂಗ ಪತ್ತೆ, ಕರ್ನಾಟಕದಲ್ಲಿ ಹತ್ಯೆ ಆರೋಪ
ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಭ್ರೂಣದ ಲಿಂಗ ಪತ್ತೆ ಮಾಡಿ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಜಾಲದ ಕುರಿತು ತನಿಖೆ ನಡೆಸಿದಾಗ ಮಹಾಲಿಂಗಪುರದಲ್ಲಿ ಈ ಹಿಂದೆ ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕವಿತಾ ಬಾಡನವರ ಅವರ ಹೆಸರು ಕೂಡ ಕೇಳಿಬಂದಿತ್ತು.



Ad Widget

ಈ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಗಳ ತಂಡ ಗರ್ಭಿಣಿಯರಂತೆ ವೇಷ ಧರಿಸಿ ಕಾರ್ಯಾಚರಣೆಗೆ ಇಳಿದಿತ್ತು.

Ad Widget

Ad Widget

ರಹಸ್ಯ ಕಾರ್ಯಾಚರಣೆ ನಡೆದದ್ದು ಹೇಗೆ?
ಅ.5ರ ರಾತ್ರಿ ಜಾಡರ ಬಬಲಾದ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು, ಭ್ರೂಣದ ಲಿಂಗ ಪತ್ತೆಗಾಗಿ ಮಧ್ಯವರ್ತಿ ನಿಖಿಲ್‌ ತೇಲಿ ಅವರನ್ನು ಸಂಪರ್ಕಿಸಿದರು. ಆತ ಅಧಿಕಾರಿಗಳನ್ನು ತೋಟದ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಬಳಿಕ ನಿಖಿಲ್‌ನ ತಾಯಿ ದಾನಕ್ಕ ತೇಲಿ ಅವರು ಸ್ಕ್ಯಾನಿಂಗ್ ಯಂತ್ರವು ಕರ್ಜಗಿ ಗ್ರಾಮದ ಕವಿತಾ ಗೋಡೆಕರ ಅವರ ಮನೆಯಲ್ಲಿದೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಕವಿತಾ ಅವರ ಮನೆಗೆ ತೆರಳಿದಾಗ ಸ್ಕ್ಯಾನಿಂಗ್‌ಗೆ ಯಂತ್ರ ಸಿದ್ಧಪಡಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಹಾಗೂ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.

ಈ ಜಾಲದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ಅವರನ್ನು ಬಂಧಿಸಲು ಅಧಿಕಾರಿಗಳು ಮುಂದಾದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ ಹಾಗೂ ಆರೋಗ್ಯ ಇಲಾಖೆಯ ಮನು ಕೂಡ ಭಾಗವಹಿಸಿದ್ದರು.

ಇಬ್ಬರ ಬಂಧನ; ಸ್ಕ್ಯಾನಿಂಗ್ ಯಂತ್ರ ಜಪ್ತಿ
ಭ್ರೂಣ ಲಿಂಗ ಪತ್ತೆ ಆರೋಪದಡಿ ನಿಖಿಲ್ ತೇಲಿ, ದಾನಕ್ಕ ತೇಲಿ, ಕವಿತಾ ಗೋಡೆಕರ ಹಾಗೂ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ವಿರುದ್ಧ ಮಹಾರಾಷ್ಟ್ರದ ಉಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ಪೈಕಿ ನಿಖಿಲ್ ತೇಲಿ ಹಾಗೂ ದಾನಕ್ಕ ತೇಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯ್ ವಾಘ್ಮೋಡೆ ಪರಾರಿಯಾಗಿದ್ದಾನೆ. ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ವಶಪಡಿಸಿಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಹಿಂದಿನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆರೋಪ
ಮಹಾಲಿಂಗಪುರದಲ್ಲಿ 2020 ಹಾಗೂ 2024ರಲ್ಲಿ ಕವಿತಾ ಬಾಡನವರ ವಿರುದ್ಧ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಆರೋಪ ಕೇಳಿಬಂದಿತ್ತು. ಈ ಪೈಕಿ ಗರ್ಭಪಾತದ ವೇಳೆ ಮಹಾರಾಷ್ಟ್ರ ಮೂಲದ ಗರ್ಭಿಣಿಯೊಬ್ಬರು ಮೃತಪಟ್ಟ ಪ್ರಕರಣದಲ್ಲೂ ಕವಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರ ವಿರುದ್ಧ ಮತ್ತೆ ಇದೇ ರೀತಿಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.

ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಆರೋಗ್ಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕವಿತಾ ಅವರಿಗೆ ಪೊಲೀಸರು ನೋಟಿಸ್‌ ಕೂಡ ಜಾರಿ ಮಾಡಿದ್ದರು.

ಮಹಿಳಾ ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ವಿಜಯಪುರ ಹಾಗೂ ಸಾಂಗ್ಲಿ ಪೊಲೀಸರಿಗೆ ಕಾರ್ಯಾಚರಣೆಯ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading