ನಿಧನ ವಾರ್ತೆ
Praveen Nettar Murder : ಹತ್ಯೆ ಮಾಡಿ ಕೇರಳಕ್ಕೆ ಪರಾರಿಯಾಗಿದ್ದ ಹಂತಕರು ಅಲ್ಲಿ ಅಡಗಿದ್ದೆಲ್ಲಿ ಗೊತ್ತೇ? ಪ್ರತಿಷ್ಟಿತ ಚಾಕೊಲೇಟ್ ಕಂಪೆನಿಗೆ ಕೊಕ್ಕೊ ಸಪ್ಲೈ ಮಾಡುತ್ತಿದ್ದಾತ ಮಚ್ಚು ಬೀಸಿದ ಆರೋಪಿ
ಮಂಗಳೂರು :ಪ್ರವೀಣ್ ನೆಟ್ಟಾರ್ ಹತ್ಯೆಯಲ್ಲಿ (Praveen Nettar Murder) ನೇರ ಭಾಗಿಯಾದ (Prime Accused) ಮೂವರನ್ನು ಕೇರಳ – ಕರ್ನಾಟಕ ಗಡಿ ಭಾಗವದ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬಂಧಿಸಿರುವುದಾಗಿ ಪ್ರಕರಣದ ತನಿಖೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (adgp Alok kumar) ತಿಳಿಸಿದ್ದಾರೆ
ಮಂಗಳೂರಿನಲ್ಲಿ ಅ.11ರಂದು ಅವರು ಪತ್ರಿಕಾಗೋಷ್ಠಿ ನಡೆಸಿ ಪ್ರವೀಣ್ ಹತ್ಯೆಯ ವಿವರಗಳನ್ನು ಬಹಿರಂಗ ಪಡಿಸಿದರು. “ ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಆರೋಪದಡಿ ಬಂದಿತರಾಗಿರುವ ಮೂವರು ಸುಳ್ಯ ತಾಲೂಕಿನವರೇ ಆಗಿದ್ದಾರೆ. ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಸರಬರಾಜು ಕೆಲಸ ಮಾಡುವ ಸುಳ್ಯದ ನಿವಾಸಿ ಶಿಯಾಬ್(33), ಪುತ್ತೂರು ತಾಲೂಕು ಅಂಕತಡ್ಕದ ಚಿಕನ್ ಸಪ್ಲಯರ್ ರಿಯಾಜ್ ಅಂಕತ್ತಡ್ಕ(27), ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿರುವ ಬಶೀರ್ ಎಲಿಮಲೆ ಬಂಧಿತ ಆರೋಪಿಗಳು. ಎಂದು ಅವರು ತಿಳಿಸಿದರು.
ಮೊದಲೇ ಮಾಹಿತಿ ಇತ್ತು :
ಕೃತ್ಯ ಈ ಮೂವರೇ ಎಸಗಿದ್ದಾರೆ ಎಂಬ ಬಗ್ಗೆ ಮೊದಲೇ ಮಾಹಿತಿ ದೊರಕಿತ್ತು . ಆದರೇ ಆರೋಪಿಗಳು ಪದೇ ಪದೆ ತನ್ನ ಅಡಗುತಾಣ ಬದಲಾಯಿಸುತ್ತಿದ್ದುದರಿಂದ ಬಂಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹತ್ಯೆಯ 15 ದಿನಗಳ ಬಳಿಕ ಆರೋಪಿಗಳನ್ನು ಬಂಧಿಸಲು ಸಫಲರಾಗಿದ್ದೇವೆ . ಆರೋಪಿಗಳು ಕ್ರಿಮಿನಲ್ ಹಿನ್ನಲೆಯವರು ಆಗಿರಲಿಲ್ಲ. ಅವರ ಮೇಲೆ ಅಂತಹ ಹೇಳಿಕೊಳ್ಳುವಂತಹ ಮೇಜರ್ ಪ್ರಕರಣಗಳಿಲ್ಲ ಎಂದು ಎಡಿಜಿಪಿ ವಿವರಿಸಿದರು.
ಆರೋಪಿಗಳು ಕಪ್ಪು ಬಣ್ಣದ ಸ್ಪ್ಲೆಂಡರ್ ಬೈಕ್ ನಲ್ಲಿ ಬಂದು ಪ್ರವೀಣ್ ಹತ್ಯೆ ಮಾಡಿದ್ದಾರೆ. ಒಟ್ಟು ಆರು ವಾಹನಗಳನ್ನು ಈ ಕೃತ್ಯಕ್ಕೆ ಬಳಸಲಾಗಿದೆ. ಐದು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಮಾರುತಿ ಅಲ್ಟೋ ಕಾರು ಕೃತ್ಯಕ್ಕೆ ಬಳಿಸಿರುವುದು ಗೊತ್ತಾಗಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ಕಾರು ಹಾಗು ಕೃತ್ಯಕ್ಕೆ ಬಳಸಿದ ಉಪಕರಣಗಳನ್ನು ಎಲ್ಲಿ ಬಚ್ಚಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.

ಪಿ.ಎಪ್.ಐ ಎಸ್.ಡಿ.ಪಿ.ಐ ಲಿಂಕ್ ?
ಆರೋಪಿಗಳಿಗೆ ಪಿಎಫೈ,(PFI) ಎಸ್ಡಿಪಿಐ (SDPI) ಸಂಪರ್ಕ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುವುದು. ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ. ಎಂದರು. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿತನಾಗಿರುವ ಆರೋಪಿ ಶಫೀಕ್ ತಂದೆ ಇಬ್ರಾಹಿಂ ಮೂರು ತಿಂಗಳಿನಿಂದ ಪ್ರವೀಣ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಹೀಗಾಗಿ ಶಫೀಕ್ ಪ್ರವೀಣ ಅವರ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದ. ಈಗ ಬಂಧಿತರಾಗಿರುವ ಆರೋಪಿಗಳಿಗೆ ಪ್ರವೀಣ್ ಪರಿಚಯ ಇತ್ತೇ ಎನ್ನುವುದು ಮುಂದಿನ ತನಿಖೆಯಲ್ಲಿ ತಿಳಿದು ಬರಲಿದೆ ಎಂದರು.
ಮಸೀದಿಯಲ್ಲಿ ಆಶ್ರಯ
ಹತ್ಯೆ ಮಾಡಿದ ಬಳಿಕ ಆರೋಪಿಗಳು ಕಾಸರಗೋಡು (Kasaragod) ಜಿಲ್ಲೆಯ ಬೇಕಲ್ ಬಳಿಯ ಮಸೀದಿ (Moscue) ಯೊಂದರಲ್ಲಿ ಆಶ್ರಯ ಪಡೆದಿದ್ದರು . ಆ ಬಳಿಕ ಎಲ್ಲಿಗೆ ತೆರಳಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ತನಿಖೆಯ ಬಳಿಕ ಖಚಿತ ಮಾಹಿತಿ ತಿಳಿಸುತ್ತೇವೆ.ಆರೋಪಿಗಳಿಗೆ ಯಾರೆಲ್ಲಾ ಆಶ್ರಯ, ಸಹಕಾರ ನೀಡಿದ್ದಾರೆ ಎಂಬುದನ್ನೂ ಪತ್ತೆಹಚ್ಚಲಿದ್ದೇವೆ. ಪ್ರವೀಣ್ ರನ್ನು ಯಾಕೆ ಗುರಿಯಾಗಿಸಿದ್ದರು ಎಂಬ ಬಗ್ಗೆ ಮುಂದಿನ ತನಿಖೆಯಲ್ಲಿ ತಿಳಿದುಬರಬೇಕಿದೆ ಎಂದರು.
BJP WAR ROOM | ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ; ವಾರ್ ರೂಂ ಆರಂಭಿಸಿದ ಬಿಜೆಪಿ
ಆಸ್ತಿ ಮುಟ್ಟುಗೋಲು
ಆರೋಪಿಗಳು ತಲೆಮರೆಸಿಕೊಂಡಿರುವುದರಿಂದ ಆಸ್ತಿಯನ್ನು ಮುಟ್ಟುಗೋಲು ಹಾಕಲು ನಾವು ಯೋಚಿಸಿದ್ದೆವು, ಇನ್ನು ಮುಂದೆ ಯಾವುದೇ ಪ್ರಮುಖ ಪ್ರಕರಣಗಳಲ್ಲಿ ನಾವು ವಾರಂಟ್ ಹೊರಡಿಸಿ ಆರೋಪಿಗಳ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಯೋಜಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ತನಿಖೆಯ ಸಂಪೂರ್ಣ ವರದಿಯನ್ನು ಎನ್.ಐ ಎ (NIA) ಗೆ ನೀಡಲಿದ್ದೇವೆ ಮುಂದಕ್ಕೆ ಅವರು ತನಿಖೆ ಮುಂದುವರೆಸಲಿದ್ದಾರೆ. ಬಂಧಿತ ಮೂರು ಪ್ರಮುಖ ಆರೋಪಿಗಳ ವಿಚಾರಣೆಯ ಬಳಿಕ ಪ್ರಕರಣವನ್ನು ಎನ್.ಐ.ಎಗೆ ಹಸ್ತಾಂತರಿಸುತ್ತೇವೆ ಎಂದು ಅವರು ಹೇಳಿದರು.
ನಿಧನ ವಾರ್ತೆ
One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
-
ಮಂಗಳೂರು24 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ದಕ್ಷಿಣ ಕನ್ನಡ18 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ23 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು19 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















