Connect with us

ಜೀವನಶೈಲಿ

Urvashi Rautela : ನೆಟ್ಟಗೆ ಬಾಲ್‌ ಜತೆ ಆಡು -ಒಂಟಿ ಹುಡುಗಿ ಅಂತ ಲಾಭ ಮಾಡೋ ಪ್ರಯತ್ನ ಬೇಡ : ಪಂತ್‌ ಗೆ ನಟಿಯ ಶಾಂಕಿಗ್‌ ಹೇಳಿಕೆ

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಭಾರತೀಯ ಸಿನಿಮಾ (Indian Movie) ರಂಗಕ್ಕೂ ಕ್ರಿಕೆಟಿಗ್ ನಿಕಟ ಸಂಬಂಧವಿದೆ. ಆದರೇ ಇಂತಹುದೇ ಒಂದು ಸಂಬಂಧ (Relationship) ಕೋಳಿ ಜಗಳವಾಗಿ ಬದಲಾಗಿದೆ. ಬಾಲಿವುಡ್ ನಟಿ ಊರ್ವಶಿ ರೌತೆಲಾ(urvashi rautela) ಮತ್ತು ಟೀಮ್ ಇಂಡಿಯಾದ (Team India) ಯುವ ವಿಕೆಟ್ ಕೀಪರ್‌ ಬ್ಯಾಟ್ಸ್ಮನ್ ರಿಷಭ್ ಪಂತ್ ( Rishab Pant) ನಡುವಿನ ಸೋಷಿಯಲ್ ಮೀಡಿಯಾ (Social Media) ವಾರ್ ಕಾಲೇಜ್ ಹೋಗುವ ಹುಡುಗ ಹುಡುಗಿಯರನ್ನು ನಾಚಿಸುವಂತಿದೆ. “ಅಕ್ಕಾ ನನ್ನನ್ನು ಬಿಟ್ಟು ಬಿಡುʼ ಎಂದು ಈ ಹಿಂದೆ ಪಂತ್ ಸೋಷಿಯಲ್ ಮೀಡಿಯಾದಲ್ಲಿ ಊರ್ವಶಿ ಕಾಲೆಳೆದಿದ್ದರು. ಅದಕ್ಕೆ ಈಗ ರಕ್ಷಾಬಂಧನ (Raksha Bandhan) ಹಬ್ಬದ ದಿನದಂದು ಸೇಡು ತೀರಿಸಿಕೊಂಡಿರುವ 28 ರ ಹರೆಯದ ರೌತೆಲ ರಕ್ಷಾ ಬಂಧನ್ ಮುಬಾರಕ್ ಚೋಟೂ ಭಯ್ಯಾ ಎಂದು ಕರೆಯುವ ಮೂಲಕ ಟಾಂಗ್ ನೀಡಿದ್ದಾಳೆ.

Ad Widget

Ad Widget

Ad Widget

Ad Widget

ಸಿನಿರಂಗದಲ್ಲಿ ಈಗ ತಾನೇ ಅಂಬೆಗಾಲಿಕ್ಕುತ್ತಿರುವ ರೌತೆಲ ಭಾರತೀಯ ಕ್ರಿಕೆಟ್ ರಂಗದ ಸೂಪರ್ ಸ್ಟಾರ್ ಗೆ ನೀಡಿದ ಉತ್ತರ ಭಾರೀ ಟ್ರೋಲ್ ಅಗಿದೆ. ಈ ನಟಿಯ ಟಾಂಗ್ ಗೆ ನೆಟ್ಟಿಗರು ನಾನಾ ರೀತಿಯ ಕಾಮೇಂಟ್ ಹಾಕುವ ಮೂಲಕ ಹುಟ್ಟಿಕೊಂಡಿರುವ ಬೆಂಕಿಗೆ ಇನ್ನಷ್ಟು ತುಪ್ಪ ಸುರಿಯುತ್ತಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯ ಪ್ಲ್ಯಾಟ್‌ ಫಾರ್ಮ್‌ (Social Media Platform) ಇವರಿಬ್ಬರ ಜಗಳಕ್ಕೆ ವೇದಿಕೆಯಾಗಿದೆ. ಏನಿದು ಹಾಟ್ ನಟಿ ಹಾಗೂ ಖ್ಯಾತ ಕ್ರಿಕೆಟರ್ ನಡುವಿನ ಜಗಳ ಅಂತೀರಾ … ಮುಂದೆ ಇದೆ ಪೂರ್ತಿ ವಿವರ
ರೂಪದರ್ಶಿಯು ಆಗಿರುವ ನಟಿ ಊರ್ವಶಿ, ತಮ್ಮ ಹಿಂದೆ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅಲೆಯುತ್ತಿದ್ದರು ಎಂದು ಈ ಹಿಂದೆ ಮಾಧ್ಯಮದ ಮುಂದೆ ಹೇಳಿ ಬಿಲ್ಡಪ್ ಕೊಟ್ಟಿದ್ದರು. ರಿಷಬ್ ತನಗೆ ಪದೆ ಪದೇ ಪೋನ್ ಮಾಡುವ ಮೂಲಕ ಇನ್ನಿಲ್ಲದಂತೆ ಕಾಡಡುತ್ತಿದ್ದಾರೆ ಎಂದು ಕೂಡ ಹೇಳಿಕೊಂಡಿದ್ದರು. ಇದಕ್ಕೆ ರಿಷಬ್ ಆಕೆ ಮುಟ್ಟಿ ನೋಡಿಕೊಳ್ಳುವಂತ ಉತ್ತರ ನೀಡಿದ್ದರು.

Ad Widget

Ad Widget alt="Ad Widget"/>

Ad Widget
ಇಷ್ಟಕ್ಕೂ ಈ ವಿವಾದ ಶುರುವಾದದ್ದು ಹೇಗೆ ಗೊತ್ತಾ ?

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿದ್ದರು.ಈ ಪಂದ್ಯಗಳನ್ನು ವೀಕ್ಷಿಸಲು ಊರ್ವಶಿ ರೌತೆಲಾ ಹಲವು ಬಾರಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದಾದ ಬಳಿಕ ಒಂದು ದಿನ ಈ ಬಗ್ಗೆ ಪಾಪಾರಾಜಿಗಳು ರೌತೆಲಾ ಕಾಲೆಳೆದಿದ್ದರು. ಈ ವೇಳೆ ಸಕತ್ ಬಿಲ್ಡಪ್ ತಕ್ಕೊಂಡ ನಟಿ ತನ್ನ ಹಾಗೂ ಪಂತ್ ನಡುವಿನ ಒಡನಾಟದ ಬಗ್ಗೆ ಹೇಳಿ ಕೊಂಡಿದ್ದರು.

Ad Widget

Ad Widget <> Ad Widget

” ನಾನು ವಾರಾಣಸಿಯಲ್ಲಿ ಶೂಟಿಂಗ್ನಲ್ಲಿ ಬಿಜಿಯಾಗಿದ್ದೆ. ಅಲ್ಲಿಂದ ದೆಹಲಿಗೆ ತೆರಳಬೇಕಿತ್ತು. ಇಡೀ ದಿನ ಶೂಟಿಂಗ್ ಮಾಡಿ ಸುಸ್ತಾಗಿತ್ತು. ಬಳಿಕ ನಾನು ಮರಳಿ ಹೊಟೇಲ್ಗೆ ಹೋಗಿದ್ದೆ. ಆಗ ರಾತ್ರಿ ವೇಳೆ ಹೊಟೇಲ್ನ ಲಾಬಿಗೆ ಬಂದ ರಿಷಬ್ ನನಗಾಗಿ ಕಾಯುತ್ತಿದ್ರು. ನನಗೆ ಸುಸ್ತಾಗಿದ್ದಕ್ಕೆ ನಾನು ಮಲಗಿಬಿಟ್ಟೆ. ಅವರಿಂದ ನನಗೆ 16-17 ಕ್ಕೂ ಹೆಚ್ಚು ಮಿಸ್ಡ್ ಕಾಲ್ಗಳು ಬಂದಿದ್ದವು. ಅವರನ್ನು ಕಾಯಿಸಿದ್ದಕ್ಕೆ ನನಗೂ ಬೇಸರವಾಯ್ತು. ಹಾಗಾಗಿ ಮುಂಬೈಗೆ ಬಂದಾಗ ಭೇಟಿಯಾಗುವ ಬಗ್ಗೆ ಹೇಳಿದ್ದೆ. ಅದರಂತೆ ಮುಂಬೈನಲ್ಲಿ ಭೇಟಿಯಾಗಿ ಮಾತನಾಡಿದೆವು ಎಂದು ಹೇಳಿದ್ದರು.

ಇದಕ್ಕೆ ಕೂಡಲೇ ಇನ್ಸ್ಟಾಗ್ರಾಮ್ ಮೂಲಕ ರಿಷಭ್ ಪ್ರತಿಕ್ರಿಯೆ ಬರೆದರಾದರೂ, ಅದರ ಬೆನ್ನಲ್ಲೇ ಡಿಲೀಟ್ ಕೂಡ ಮಾಡಿದ್ದರು. “ಸಂದರ್ಶನಗಳಲ್ಲಿ ಜನ ಸುಳ್ಳು ಹೇಳುವುದನ್ನು ನೋಡಿದರೆ ಬಹಳ ತಮಾಷೆ ಅನಿಸುತ್ತದೆ. ಕೇವಲ ಪುಕ್ಕಟೆ ಪ್ರಚಾರ ಮತ್ತು ಮಾಧ್ಯಮಗಳಲ್ಲಿನ ಹೆಡ್ಲೈನ್ ಗಾಗಿ ಹೀಗೆಲ್ಲಾ ಮಾಡ್ತಾರ ? ಹೆಸರು ಮತ್ತು ಕೀರ್ತಿಗಾಗಿ ಜನ ಏನೆಲ್ಲಾ ಮಾಡುತ್ತಾರೆಂದು ತಿಳಿದು ಬಹಳ ಬೇಸರವಾಗಿದೆ. ಅವರಿಗೆ ದೇವರು ಒಳ್ಳೆಯದ್ದನ್ನೇ ಮಾಡಲಿ. #ಮೇರಾ ಪೀಚಾ ಚೋಡೊ ಬೆಹೆನ್ (ನನ್ನನ್ನು ಬಿಟ್ಟು ಬಿಡಿ ಅಕ್ಕಾ) #ಜೂಟ್ ಕೀ ಭೀ ಲಿಮಿಟ್ ಹೋತಿ ಹೇ (ಸುಳ್ಳಿಗೂ ಒಂದು ಸೀಮೆಯಿದೆ),” ಎಂದು ರಿಷಭ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದು ಡಿಲಿಟ್ ಮಾಡಿದ್ದರು

Ad Widget

Ad Widget

ರಿಷಭ್ ಪಂತ್ ಅವರ ಈ ಪ್ರತಿಕ್ರಿಯೆ ಭಾರಿ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಹಲವರು ರೌತೆಲರನ್ನು ಗೋಲ್ಡ್ ಡಿಗ್ಗರ್ (ಹಣ ಮತ್ತು ಪ್ರಚಾರ ಸಲುವಾಗಿ ಈ ರೀತಿ ಮಾಡುತ್ತಿದ್ದಾರೆ) ಎಂದೆಲ್ಲಾ ಹೀಯಾಳಿಸಿದ್ದರು.ಇದಕ್ಕೆ ಇನ್ಸ್ಟಾಗ್ರಾಮ್ ಮೂಲಕವೇ ಉತ್ತರ ಬರೆದಿರುವ ಊರ್ವಶಿ, ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು ಅದರಲ್ಲಿ ಪರೋಕ್ಷವಾಗಿ ರಿಷಭ್ ಪಂತ್ ಕಾಲೆಳೆದಿದ್ದಾರೆ. ಸಣ್ಣ ತಮ್ಮ ಕೇವಲ ಬ್ಯಾಟ್ ಮತ್ತು ಬಾಲ್ ನಲ್ಲಿ ಆಡು (ಚೋಟೂ ಭಯ್ಯಾ ಶುಡ್ ಪ್ಲೇ ಬ್ಯಾಟ್-ಬಾಲ್) . ನಿನ್ನಂತಹ ಚಿಕ್ಕ ಹುಡುಗನೊಂದಿಗೆ ಪ್ರೀತಿ-ಪ್ರೇಮದಲ್ಲಿ ಬಿದ್ದು ಹಾಳಾಗಲು ನಾನೇನು ಮುನ್ನಿ ಅಲ್ಲ. ರಕ್ಷಾ ಬಂಧನ್ ಮುಬಾರಕ್ #ಆರ್ಪಿ ಚೋಟೂ ಭಯ್ಯಾ ಒಂಟಿ ಹುಡುಗಿ ಎಂದು ಲಾಭ ಎತ್ತುವ ಪ್ರಯತ್ನ ಮಾಡಬೇಡ ಎಂದು ರೌತೆಲಾ ತಮ್ಮ ಇಸ್ಟಾಗ್ರಾಮ್ ಸ್ಟೋರಿ ಮತ್ತು ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ.

ಊರ್ವಶಿ ಇಸ್ಟಾಗ್ರಾಮ್ ಸ್ಟೋರಿ ಮತ್ತು ಪೋಸ್ಟ್‌


ಇದಕ್ಕೆ ರಿಷಬ್ ಪಂತ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದು ನೆಟ್ಟಿಗರ ಸದ್ಯದ ಕುತೂಹಲ

Ad Widget
Click to comment

Leave a Reply

ಆರೋಗ್ಯ

Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

Published

on

Ad Widget

Ad Widget

Ad Widget

Ad Widget

ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.

Ad Widget

Ad Widget <> Ad Widget

ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.

Ad Widget

Ad Widget

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.

ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಲೇಖನಗಳು

Rahu-Ketu-18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ; 12 ರಾಶಿಗಳ ಭವಿಷ್ಯ ಹೇಗಿರಲಿದೆ?

Published

on

Ad Widget

Ad Widget

Ad Widget

Ad Widget

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.

Ad Widget

Ad Widget

Ad Widget

Ad Widget

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2026ರ ಡಿಸೆಂಬರ್ 5ರಂದು ರಾಹು ಮತ್ತು ಕೇತು ಗ್ರಹಗಳು ಸುಮಾರು 18 ತಿಂಗಳ ಬಳಿಕ ರಾಶಿ ಬದಲಾವಣೆ ಮಾಡಲಿವೆ. ಈ ಸಂಚಾರದ ವೇಳೆ ರಾಹು ಮಕರ ರಾಶಿಗೆ ಪ್ರವೇಶಿಸಿದರೆ, ಕೇತು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಗ್ರಹಗಳ ಸಂಚಾರವು ವೃತ್ತಿಜೀವನ, ಆರ್ಥಿಕ ಸ್ಥಿತಿ, ಕುಟುಂಬ, ಸಂಬಂಧಗಳು ಹಾಗೂ ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರಲಿದೆ ಎಂದು ವೈದಿಕ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ.

Ad Widget

Ad Widget alt="Ad Widget"/>

Ad Widget

ಈ ಸಂಚಾರವು 2028ರ ಜೂನ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ರಾಹುವನ್ನು ಮಹತ್ವಾಕಾಂಕ್ಷೆ, ಭೌತಿಕ ಆಸೆ ಮತ್ತು ಅನಿರೀಕ್ಷಿತ ಬೆಳವಣಿಗೆಗಳ ಸಂಕೇತವಾಗಿ ಪರಿಗಣಿಸಿದರೆ, ಕೇತುವನ್ನು ಆಧ್ಯಾತ್ಮಿಕತೆ, ವೈರಾಗ್ಯ ಮತ್ತು ಅಂತಃಪ್ರಜ್ಞೆಯ ಸಂಕೇತವೆಂದು ನಂಬಲಾಗಿದೆ. ಹಾಗಾದರೆ ಈ ಸಂಚಾರವು 12 ರಾಶಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ನೋಡೋಣ.

Ad Widget

Ad Widget <> Ad Widget

ಮೇಷ ರಾಶಿ
ಮೇಷ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಉದ್ಯೋಗ ಬದಲಾವಣೆ, ಬಡ್ತಿ ಹಾಗೂ ವ್ಯಾಪಾರ ವಿಸ್ತರಣೆಗೆ ಅನುಕೂಲಕರ ಸಮಯವಾಗಬಹುದು. ಕೆಲಸದ ಜವಾಬ್ದಾರಿ ಹೆಚ್ಚಾದರೂ ಅದಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯಿದೆ. ಮನೆ, ವಾಹನ ಮತ್ತು ಆಸ್ತಿ ಖರೀದಿಸುವ ಯೋಜನೆಗಳು ಕಾರ್ಯರೂಪಕ್ಕೆ ಬರಬಹುದು. ಹಳೆಯ ವಾಹನ ಬದಲಿಸಿ ಹೊಸ ವಾಹನ ಖರೀದಿಸುವ ಯೋಗವೂ ಇದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಬಹುದು. ಬಹುಕಾಲದಿಂದ ಮುಂದೂಡಿದ್ದ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುವ ನಿರೀಕ್ಷೆಯಿದೆ. ಅನಿರೀಕ್ಷಿತ ಆರ್ಥಿಕ ಲಾಭದ ಅವಕಾಶಗಳು ಎದುರಾಗಬಹುದು. ದೂರದ ಪ್ರಯಾಣ, ಧಾರ್ಮಿಕ ಕಾರ್ಯಗಳು ಹಾಗೂ ಹೊಸ ಅನುಭವಗಳಿಗೆ ಅವಕಾಶ ದೊರೆಯಬಹುದು.

Ad Widget

Ad Widget

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಜೀವನದಲ್ಲಿ ಕೆಲವು ಅನಿರೀಕ್ಷಿತ ಬದಲಾವಣೆಗಳು ಸಂಭವಿಸಬಹುದು. ವಿದೇಶಿ ಸಂಪರ್ಕಗಳು ಹೆಚ್ಚಾಗುವ ಜೊತೆಗೆ ಉದ್ಯೋಗ ಅಥವಾ ವ್ಯಾಪಾರದ ನಿಮಿತ್ತ ವಿದೇಶ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಆರ್ಥಿಕ ಲಾಭದ ಸಾಧ್ಯತೆಯೂ ಇದೆ. ಆದರೆ ಕೆಲವು ಕೆಲಸಗಳಲ್ಲಿ ವಿಳಂಬ ಮತ್ತು ಅಡೆತಡೆಗಳು ಎದುರಾಗಬಹುದು. ಕುಟುಂಬದ ವಿಚಾರದಲ್ಲಿ ಮಾತನಾಡುವಾಗ ಸಂಯಮ ಇರಲಿ. ಆರೋಗ್ಯದ ಕಡೆಗೂ ಗಮನ ನೀಡುವುದು ಅಗತ್ಯ.

ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಸಮಾಜದಲ್ಲಿ ಗೌರವ ಮತ್ತು ಸ್ಥಾನಮಾನ ಹೆಚ್ಚಾಗುವ ಸಾಧ್ಯತೆಯಿದೆ. ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬರಬಹುದು. ಹೊಸ ಸ್ನೇಹಿತರು ಮತ್ತು ಪರಿಚಯಗಳು ಬೆಳೆಯಲಿವೆ. ವಿದೇಶದಲ್ಲಿ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಅವಕಾಶಗಳು ದೊರೆಯಬಹುದು. ಆದರೆ ವೈವಾಹಿಕ ಜೀವನ ಮತ್ತು ವ್ಯಾಪಾರ ಪಾಲುದಾರಿಕೆಯಲ್ಲಿ ಪರಸ್ಪರ ನಂಬಿಕೆ ಹಾಗೂ ಉತ್ತಮ ಸಂವಹನಕ್ಕೆ ಆದ್ಯತೆ ನೀಡಬೇಕು.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕ್ರಮೇಣ ಕಡಿಮೆಯಾಗಬಹುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆಯಿದೆ. ವಿರೋಧಿಗಳು ಹಾಗೂ ಸ್ಪರ್ಧಿಗಳ ವಿರುದ್ಧ ಮೇಲುಗೈ ಸಾಧಿಸಬಹುದು. ಬಾಕಿ ಉಳಿದಿರುವ ಕಾನೂನು ವಿವಾದಗಳು ಮತ್ತು ಆಸ್ತಿ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ನಿರೀಕ್ಷಿಸಬಹುದು. ವಿದೇಶಿ ಉದ್ಯೋಗದ ಪ್ರಯತ್ನಗಳಿಗೂ ಉತ್ತಮ ಅವಕಾಶಗಳು ಸಿಗಬಹುದು.

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಉದ್ಯೋಗ, ಆರ್ಥಿಕ ಸ್ಥಿತಿ ಮತ್ತು ಕುಟುಂಬದ ವಿಚಾರಗಳಲ್ಲಿ ಶುಭ ಬೆಳವಣಿಗೆಗಳು ಕಂಡುಬರಬಹುದು. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳು ದೊರೆಯಬಹುದು. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಮಕ್ಕಳಿಂದ ಸಂತೋಷದ ಸುದ್ದಿ ಸಿಗಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಹಣಕಾಸು ಮತ್ತು ಆಸ್ತಿ ಸಂಬಂಧಿತ ವಿಚಾರಗಳು ಬಗೆಹರಿಯುವ ನಿರೀಕ್ಷೆಯಿದೆ.

ತುಲಾ ರಾಶಿ
ತುಲಾ ರಾಶಿಯವರಿಗೆ ಮನೆ, ವಾಹನ ಮತ್ತು ವೃತ್ತಿಜೀವನದಲ್ಲಿ ಬದಲಾವಣೆಗಳು ಸಂಭವಿಸಬಹುದು. ಸ್ವಂತ ಮನೆ ಖರೀದಿಸುವ ಅಥವಾ ಹೊಸ ಆಸ್ತಿ ಪಡೆಯುವ ಯೋಜನೆಗಳು ಈಡೇರಬಹುದು. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಮತ್ತು ಹೊಸ ಜವಾಬ್ದಾರಿಗಳು ದೊರೆಯಬಹುದು. ಆದರೆ ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕುಟುಂಬದ ಅಗತ್ಯಗಳಿಗಾಗಿ ಹೆಚ್ಚುವರಿ ಖರ್ಚು ಎದುರಾಗುವ ಸಾಧ್ಯತೆಯಿದೆ.

ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಪ್ರಗತಿ ಸಾಧಿಸುವ ಅವಕಾಶಗಳು ದೊರೆಯಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಬಹುದು. ವಿದೇಶಿ ಸಂಪರ್ಕಗಳಿಂದ ಲಾಭವಾಗುವ ಸಾಧ್ಯತೆಯಿದೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ನಿರೀಕ್ಷೆಯಿದೆ. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ದೊರೆಯಬಹುದು. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ಹೆಚ್ಚಾಗಲಿದ್ದು, ಶುಭಕಾರ್ಯಗಳು ನಡೆಯುವ ಸಾಧ್ಯತೆಯಿದೆ. ಮಾತಿನ ಮೇಲೆ ಹಿಡಿತವಿರಲಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಧೈರ್ಯ, ಆತ್ಮವಿಶ್ವಾಸ ಮತ್ತು ಕೆಲಸ ಮಾಡುವ ಉತ್ಸಾಹ ಹೆಚ್ಚಾಗಬಹುದು. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಹೊಸ ಪ್ರಯತ್ನಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳಬಹುದು. ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ವೃತ್ತಿಜೀವನದಲ್ಲಿ ಅನುಕೂಲವಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೂ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದೆ.

ಮಕರ ರಾಶಿ
ಮಕರ ರಾಶಿಯವರಿಗೆ ಈ ಸಂಚಾರದಲ್ಲಿ ಮಹತ್ವದ ಬದಲಾವಣೆಗಳು ಎದುರಾಗಬಹುದು. ಉದ್ಯೋಗ ಮತ್ತು ವೃತ್ತಿಜೀವನದ ಕಾರಣದಿಂದ ಸ್ಥಳಾಂತರಗೊಳ್ಳುವ ಸಂದರ್ಭ ಬರಬಹುದು. ಹೊಸ ಕೆಲಸ ಅಥವಾ ವೃತ್ತಿ ಆರಂಭಿಸುವ ಆಲೋಚನೆಗಳು ಮೂಡಬಹುದು. ಆರಂಭದಲ್ಲಿ ಕೆಲವು ಗೊಂದಲಗಳು ಎದುರಾದರೂ ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳಬಹುದು. ವ್ಯಾಪಾರ ಪಾಲುದಾರಿಕೆ ಮತ್ತು ವೈವಾಹಿಕ ಸಂಬಂಧಗಳಲ್ಲಿ ಎಚ್ಚರಿಕೆ ಹಾಗೂ ಪರಸ್ಪರ ತಿಳುವಳಿಕೆ ಅಗತ್ಯ.

ಕುಂಭ ರಾಶಿ
ಕುಂಭ ರಾಶಿಯವರಿಗೆ ಕಳೆದ ಒಂದೂವರೆ ವರ್ಷಗಳಿಂದ ಎದುರಾಗುತ್ತಿದ್ದ ಸಮಸ್ಯೆಗಳು ಕಡಿಮೆಯಾಗುವ ಸಾಧ್ಯತೆಯಿದೆ. ಜಮೀನು ಅಥವಾ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಯೋಜನೆಗಳು ಮುಂದುವರಿಯಬಹುದು. ವಾಹನ ಖರೀದಿಸುವ ಯೋಗವೂ ಇದೆ. ಮಕ್ಕಳಿಂದ ಸಂತೋಷದ ಸುದ್ದಿ ದೊರೆಯಬಹುದು. ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚಾಗುವ ನಿರೀಕ್ಷೆಯಿದೆ. ವಿದೇಶಿ ಉದ್ಯೋಗದ ಪ್ರಯತ್ನಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಬಹುದು.

ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಬೆಳವಣಿಗೆಗಳು ಕಂಡುಬರಬಹುದು. ಅನಿರೀಕ್ಷಿತ ಮೂಲಗಳಿಂದ ಹಣ ಲಭಿಸುವ ಸಾಧ್ಯತೆಯಿದೆ. ಆಸ್ತಿ-ಪಾಸ್ತಿ ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಫಲಿತಾಂಶ ದೊರೆಯಬಹುದು. ವ್ಯಾಪಾರಸ್ಥರಿಗೆ ಹೊಸ ಗ್ರಾಹಕರು ಮತ್ತು ಸಂಪರ್ಕಗಳಿಂದ ಲಾಭವಾಗಬಹುದು. ಮಕ್ಕಳ ಸಾಧನೆಯಿಂದ ಸಂತೋಷ ಸಿಗಬಹುದು. ವಿದೇಶದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಹೊಸ ಅವಕಾಶಗಳು ಎದುರಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!