ಮಂಗಳೂರು
Raksha Bandhan Controversy : ಮಂಗಳೂರು : ಮಕ್ಕಳ ಕೈಯಿಂದ ರಕ್ಷಾಬಂಧನ ತೆಗೆಸಿ ಕಸದ ಬುಟ್ಟಿಗೆಸದರೆಂದು ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು – ಕೊನೆಗೆ ಪಾದ್ರಿ ಕೈಗೂ ಬಂತು ರಾಖಿ
ಮಂಗಳೂರು ( Mangalore ಅ 12: ದೇಶದಾದ್ಯಂತ ನಿನ್ನೆ ಸಂಭ್ರಮದಿಂದ ರಕ್ಷಾಬಂಧನ ( Raksha Bandhana) ಹಬ್ಬ ಆಚರಿಸಲಾಯಿತಾದರು, ಮಂಗಳೂರಿನ ಒಂದು ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳು ಕೈಗೆ ಕಟ್ಟಿದ್ದ ರಾಖಿಯನ್ನು ತೆಗೆಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ವಿರುದ್ದ ಸಿಡಿದೆದ್ದ ಮಕ್ಕಳ ಪೋಷಕರು ಶಾಲೆ ಮುಂದೆ ಪ್ರತಿಭಟನೆ (Protest) ನಡೆಸಿದ ಘಟನೆ ಮಂಗಳೂರಿನಲ್ಲಿ ಅ.12 ರಂದು ನಡೆದಿದೆ. ಕಾಟಿಪಳ್ಳದ ಖಾಸಗಿ ಶಾಲೆ ಮುಂಭಾಗ ಇಂದು ಬೆಳಿಗ್ಗೆ ಮಕ್ಕಳ ಪೋಷಕರು ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಅಧ್ಯಾಪಕರ ವಿರುದ್ದ ಘೋಷಣೆ (Slogans) ಕೂಗಿದ್ದರು. ಬಳಿಕ ಶಾಲೆಗೆ ಮುತ್ತಿಗೆ ಹಾಕಿದ ಘಟನೆಯೂ ನಡೆಯಿತು. ಪೊಲೀಸರ ಮಧ್ಯಪ್ರವೇಶದಿಂದ ತದ ನಂತರ ಪ್ರಕರಣ ಸುಖಾಂತ್ಯಗೊಂಡಿತ್ತು.
ಮಂಗಳೂರು ನಗರದ ಹೊರವಲಯದ ಕಾಟಿಪಳ್ಳದ ಇನ್ಫ್ಯಾಂಟ್ ಮೇರಿ ಆಂಗ್ಲ ಮಾಧ್ಯಮ ಫ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಕ್ಷಾಬಂಧನ ಹಬ್ಬದ ಹಿನ್ನೆಲೆಯಲ್ಲಿ ಅಲ್ಲಿನ ಕೆಲ ಮಕ್ಕಳು ಕೈಗೆ ರಾಖಿ ಕಟ್ಟಿಕೊಂಡು ಹೋಗಿದ್ದರು, ಶಾಲಾ ನಿಯಮದ ಪ್ರಕಾರ ರಕ್ಷಾ ಬಂಧನ ಧರಿಸುವಂತಿಲ್ಲ ಎಂದು ಶಿಕ್ಷಕರು ರಾಖಿಯನ್ನು ತೆಗೆಯುವಂತೆ ಸೂಚಿಸಿದ್ದರು ಎನ್ನಲಾಗಿದೆ. ಬಳಿಕ ಆ ರಾಖಿಯನ್ನು ಕಸದ ಬುಟ್ಟಿಗೆ ಎಸೆಯಲಾಗಿತ್ತು ಎಂಬ ಆರೋಪವು ಕೇಳಿ ಬಂದಿತ್ತು.
ಈ ವಿಚಾರ ಪೋಷಕರಿಗೆ ಗೊತ್ತಾಗುತ್ತಲೇ ತೀವ್ರ ಖಂಡನೆ ವ್ಯಕ್ತವಾಗಿದೆ. ಬಳಿಕ ಇಂದು ಬೆಳಿಗ್ಗೆ ಅವರು ಬಿಜೆಪಿ ಕಾರ್ಯಕರ್ತರ ಜತೆ ಶಾಲೆಗೆ ಆಗಮಿಸಿದ್ದಾರೆ. ಅಲ್ಲಿ ಪೋಷಕರು ಹಾಗೂ ಅಧ್ಯಾಪಕರ ಮಧ್ಯೆ ವಾಗ್ವಾದ ನಡೆದಿದೆ. ಈ ಹಿನ್ನೆಲೆ ಸುರತ್ಕಲ್ ಪೊಲೀಸರ ಮಧ್ಯಪ್ರವೇಶಿಸಿದ್ದಾರೆ. ಫ್ರೆಂಡ್ ಶಿಪ್ ಬ್ಯಾಂಡ್ ಅಂದುಕೊಂಡು ತೆಗೆಸಿದ್ದಾಗಿ ಶಿಕ್ಷಕರ ಸಮಜಾಯಿಷಿ ಕೊಟ್ಟಿದ್ದು, ರಕ್ಷಾ ಬಂಧನ ಯಾವುದೇ ಕಾರಣಕ್ಕೂ ತೆಗೆಸಲ್ಲ ಅಂತ ಶಾಲಾ ಮುಖ್ಯಶಿಕ್ಷಕ ವಿಷಾಧ ವ್ಯಕ್ತಪಡಿಸಿದ್ದಾರೆ. ಶಿಕ್ಷಕರೇ ಮತ್ತೆ ಮಕ್ಕಳ ಕೈಗೆ ರಕ್ಷೆ ಕಟ್ಟುವಂತೆ ಪೋಷಕರ ಪಟ್ಟು ಹಿಡಿದಿದ್ದಾರೆ.

ಕೊನೆಗೆ ಅಧ್ಯಾಪಕರು ಕ್ಷಮೆಯಾಚಿಸಿದ್ದಾರೆ. ಬಳಿಕ ಪೋಷಕರು ಶಾಲಾ ಆಡಳಿತ ಮುಖ್ಯಸ್ಥರ ಕೈಗೆ ರಾಖಿ ಕಟ್ಟಿದ್ದಾರೆ. ಸುರತ್ಕಲ್ ಪೊಲೀಸರ ಮಧ್ಯಪ್ರವೇಶದಿಂದ ರಕ್ಷಾಬಂಧನ ವಿವಾದವು ( Raksha Bhandan Controversy) ಸುಖಾಂತ್ಯವಾಗಿದೆ.

ಶಾಲಾ ಮುಖ್ಯಸ್ಥರು ಹೇಳಿದ್ದೆನು ?
ಕೆಲವರು ತಿಳಿಯದೆ ಬೇಜವಬ್ದಾರಿಯಿಂದ ವರ್ತಿಸಿ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಗ್ಗೆ ಪೋಷಕರನ್ನು ಹಾಗೂ ಶಾಲಾ ಸಿಬ್ಬಂದಿಗಳನ್ನು ಕರೆದು ಮೀಟಿಂಗ್ ಮಾಡಿದ್ದೇವೆ. ತಪ್ಪು ಮಾಡಿದವರು ಪಶ್ಚತಾಪ ಪಟ್ಟು ಕ್ಷಮೆ ಕೂಡ ಕೇಳಿದ್ದಾರೆ. ಹೀಗಾಗಿ ವಿಷಯ ಇಲ್ಲಿಗೆ ಮುಗಿದಿದೆ. ಪ್ರಕರಣ ಸುಖಾಂತ್ಯಗೊಂಡಿದೆ .ಈ ವಿಚಾರವನ್ನು ಇಲ್ಲಿಯೇ ಬಿಟ್ಟು ವಿವಾದಕ್ಕೆ ಅಂತ್ಯ ಹಾಡಬೇಕೆಂದು ಸಂಸ್ಥೆಯ ಮುಖ್ಯಸ್ಥರು ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು21 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು21 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ15 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















