ಜೀವನಶೈಲಿ
ಮನೆಯಿಂದ ಇಲಿಯನ್ನು ಓಡಿಸುವ ಸುಲಭ ಟ್ರಿಕ್ಸ್ ಇಲ್ಲಿದೆ
ಮನೆಯೊಳಗಡೆ ಅಪ್ಪಿ ತಪ್ಪಿ ಒಂದು ಇಲಿ (Mouse) ಬಂದು ಸೇರಿಕೊಂಡರೆ ಸಾಕು ಬಳಿಕ ಅಲ್ಲಿ ಅದರ ಸಂತತಿ ವೃದ್ದಿಯಾಗುತ್ತ ಹೋಗುತ್ತದೆ. ಇದು ಮನೆಯಲ್ಲಿರುವ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ದುಬಾರಿ ಬೆಲೆಯ ಬಟ್ಟೆ ಮತ್ತು ಇನ್ನಿತರ ವಸ್ತುಗಳನ್ನು ಕ್ಷಣ ಮಾತ್ರದಲ್ಲಿ ಹಾಳು ಗೆಡವುತ್ತದೆ. ಅಷ್ಟು ಮಾತ್ರವಲ್ಲದೇ ಇಲಿಗಳು ಸುಮಾರು 20 ರೀತಿಯ ಕಾಯಿಲೆ ( diseases) ಗಳಿಗೂ ಕಾರಣವಾಗುತ್ತದೆ. ಹಾಗಾಗಿ ಆರೋಗ್ಯದ (Health) ದೃಷ್ಟಿಯಿಂದಲೂ ಮನೆಯಿಂದ ಇಲಿಗಳನ್ನು ಓಡಿಸುವುದು ಅತ್ಯವಶಕ. ಇಲಿಗಳನ್ನು (Rat) ಓಡಿಸುವ ಅತ್ಯಂತ ಸುಲಭ ಉಪಾಯ ಮನೆಯಲ್ಲಿ ಬೆಕ್ಕು ಸಾಕುವುದು. ಆದರೇ ಕೆಲವರಿಗೆ ಬೆಕ್ಕು ಕೂಡ ಅಲರ್ಜಿ ಅದರ ಮಲ ಮೂತ್ರ ವಾಕರಿಕೆ ಹುಟ್ಟಿಸುತ್ತದೆ. ಹಾಗಾಗಿ ಮನೆಯಿಂದ ಇಲಿಗಳನ್ನು ಓಡಿಸುವ ಸುಲಭ ಉಪಾಯ ಏನಾದರು ಇದೀಯಾ ಅನ್ನುವುದು ಹಲವರ ಪ್ರಶ್ನೆ. ಅದಕ್ಕೆ ಉಪಯುಕ್ತ ಟಿಪ್ಸ್ ಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ಆದರೇ ಇಲಿ ಬಂದ ಮೇಲೆ ಓಡಿಸುವುದಕ್ಕಿಂತ ಹಾಗೂ ಇಲಿ ಮನೆಯಲ್ಲಿ ಇರುವಾಗ ಏನೆಲ್ಲಾ ಮುಂಜಾಗರೂಕತ (Precautionary) ಕ್ರಮಗಳನ್ನು ಕೈಗೊಳ್ಳಬೇಕು ಎಂಬುವುದನ್ನು ಮೊದಲು ಚರ್ಚಿಸೋಣ. ಅಂತಹ ಕೆಲವು ಟಿಪ್ಸ್ʼಗಳನ್ನು ಈ ಕೆಳಗೆ ನೀಡಲಾಗಿದೆ
ಮನೆಯಲ್ಲಿರುವ ತ್ಯಾಜ್ಯವನ್ನು ಪ್ರತಿದಿನ ವಿಲೇವಾರಿ ಮಾಡಿ.
ತಯಾರಿಸಿದ ಆಹಾರ ಹಾಗೂ ದಾಸ್ತಾನಿರಿಸುವ ವಸ್ತುಗಳನ್ನು ತಪ್ಪದೆ ಮುಚ್ಚಿಡಿ.
ಅಹಾರ ಸಿದ್ದಪಡಿಸಿದ ಬಳಿಕ ಕಿಚನ್ ಒಳಗೊಂಡಂತೆ ಕೊಳಕು ಇರುವ ಸ್ಥಳಗಳು ಮತ್ತು ವಸ್ತುಗಳನ್ನು ಸ್ವಚ್ಛಗೊಳಿಸಿ.
ಮುಚ್ಚಳದಿಂದ ಮುಚ್ಚಬಹುದಾದ ಕಸದ ತೊಟ್ಟಿಗಳನ್ನು ಖರೀದಿಸಿ.
ನಿಮ್ಮ ಮನೆಯ ಚರಂಡಿಗಳನ್ನು ಅಗಾಗ ಪರೀಕ್ಷಿಸಿ. ಅದರಲ್ಲಿ ಇಲಿ ಅಥಾವ ಇನ್ಯಾವುದೇ ಪ್ರಾಣಿ ಅಥಾವ ಸಸ್ತನಿ ಪ್ರವೇಶಿಸದಂತೆ ತಡೆಯಿರಿ
ಮನೆ ಹಾಗೂ ಸುತ್ತಮುತಲ್ಲಿನ ಪ್ರದೇಶಗಳನ್ನು ಸ್ವಚ್ಚವಾಗಿಡಿ. ಕ್ಲೋರಿನ್ ಬಳಸಿ ಸ್ವಚ್ಚ ಮಾಡಿ
ನಿಮ್ಮ ಮನೆಯಲ್ಲಿ ದೀರ್ಘಕಾಲ ಬಳಸದ ಎಲ್ಲಾ ರೀತಿಯ ಪೆಟ್ಟಿಗೆಗಳು ಮತ್ತು ವಸ್ತುಗಳನ್ನು ಎಸೆಯಿರಿ,. ಏಕೆಂದರೆ ಇಲಿಗಳು ಸುಲಭವಾಗಿ ಅಲ್ಲಿ ಆಶ್ರಯವನ್ನು ಕಂಡುಕೊಳ್ಳುತ್ತವೆ.
ನಿಮ್ಮ ಮನೆಯ ಪ್ರದೇಶಗಳನ್ನು ನೀವು ಸ್ವಚ್ಛಗೊಳಿಸುವಾಗ, ಮುಖವಾಡ ಮತ್ತು ಕೈಗವಸುಗಳನ್ನು ಧರಿಸುವುದು ಉತ್ತಮ, ಏಕೆಂದರೆ ಇಲಿಗಳ ಮಲ ಇದ್ದರೆ ನೀವೇ ಕಲುಷಿತರಾಗಬಹುದು .

ಇಲಿಗಳನ್ನು ಮನೆಯಿಂದ ಓಡಿಸಲು ಮನೆ ಮದ್ದು
ಈರುಳ್ಳಿಯ ವಾಸನೆ ಇಲಿಗಳಿಗೆ ಆಗಿ ಬರುವುದಿಲ್ಲ. ಅದು ಅವುಗಳಿಗೆ ವಿಷಕಾರಿಯಾಗಿದೆ. ಇಲಿಗಳು ಓಡಾಡುವ ಜಾಗದಲ್ಲಿ ಈರುಳ್ಳಿಯನ್ನು ಸುಲಿದು ಇಡಬಹುದು. ಅದಾಗ್ಯೂ ಪ್ರತಿದಿನ ಈರುಳ್ಳಿಯನ್ನು ಬದಲಾಯಿಸುತ್ತಿರಬೇಕು.
ಇಲಿಗಳನ್ನು ಕೊಲ್ಲಲು ಬೆಳ್ಳುಳ್ಳಿ ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿಯನ್ನು ಸಣ್ಣದಾಗಿ ಕೊಚ್ಚಿದ ನೀರಿನಲ್ಲಿ ಮಿಶ್ರಣ ಮಾಡಿ. ಅಥವಾ ಬೆಳ್ಳುಳ್ಳಿಯ ಮೊಗ್ಗುಗಳನ್ನು ಅವುಗಳು ಬರುವ ಜಾಗದಲ್ಲಿ ಇಡಬಹುದು
ಇಲಿಗಳು ಮತ್ತು ಕೀಟಗಳನ್ನು ನಿವಾರಿಸಲು ಕೆಂಪು ಮೆಣಸಿನಕಾಯಿ ಅನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತದೆ. ಇಲಿಗಳು ಎಲ್ಲಿಂದ ಬರುತ್ತವೆ ಮತ್ತು ಅವುಗಳ ಅಡಗುದಾಣ ಎಲ್ಲಿದೆಯೋ ಅಲ್ಲಿಗೆ ಕೆಂಪು ಮೆಣಸಿನಕಾಯಿಯ ಪುಡಿಯನ್ನು ಸಿಂಪಡಿಸಿ.
.ಇಲಿಗಳನ್ನು ಓಡಿಸಲು ಲವಂಗ ಅಥವಾ ಲವಂಗದ ಎಣ್ಣೆಯನ್ನು ಸಹ ಬಳಸಬಹುದು. ಲವಂಗದ ಮೊಗ್ಗುಗಳನ್ನು ಮಸ್ಲಿನ್ ಬಟ್ಟೆಯಲ್ಲಿ ಸುತ್ತಿ ಅಲ್ಲಿ ಇಲ್ಲಿ ಇಟ್ಟುಕೊಳ್ಳಿ. ಲವಂಗದ ಎಣ್ಣೆಯನ್ನು ಸಹ ಅದೇ ರೀತಿಯಲ್ಲಿ ಬಳಸಬಹುದು.
ಪುದೀನಾ ವಾಸನೆಯನ್ನು ಇಲಿಗಳು ಸಹಿಸುವುದಿಲ್ಲ. ಹೀಗಾಗಿ ಹತ್ತಿಯಲ್ಲಿ ಪುದೀನಾ ಹಾಕಿ ಇಲಿಗಳು ಓಡಾಡುವ ಜಾಗದಲ್ಲಿ ಇಟ್ಟು ಬಿಡಿ. ಕೂಡಲೇ ಇಲಿಗಳು ಜಾಗ ಖಾಲಿ ಮಾಡುತ್ತವೆ.
ಇನ್ನು ನೈಸರ್ಗಿಕ ವಿಧಾನದಲ್ಲಿ ಇಲ್ಲಿಯನ್ನು ಕೊಲ್ಲುವುದು ಹೇಗೆ ?
ಒಂದು ಬಟ್ಟಲಿಗೆ ಒಂದು ಟೇಬಲ್ ಸ್ಪೂನ್ ಬೇಕಿಂಗ್ ಸೋಡಾ, ಒಂದು ಟೇಬಲ್ ಸ್ಪೂನ್ ಗೋಧಿ ಹಿಟ್ಟು ಅಥವಾ ಮೈದಾ ಹಿಟ್ಟು, ಒಂದು ಟೇಬಲ್ ಸ್ಪೂನ್ ಸಕ್ಕರೆ ಈ ಮೂರನ್ನು ಕೂಡ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು. ಈ ಒಂದು ಮಿಶ್ರಣವನ್ನು ಇಲಿಗಳು ಬರುವಂತಹ ಜಾಗದಲ್ಲಿ ಇಡಬೇಕು ಈ ಪದಾರ್ಥಗಳನ್ನು ಇಲಿಗಳು ಸೇವಿಸಿದರೆ ಇಲಿಗಳ ದೇಹಕ್ಕೆ ವಿಷ ಹೋದಂತೆ ಆಗುತ್ತದೆ ಆಗ ಇಲಿಗಳು ಸಾವನ್ನಪ್ಪುತ್ತದೆ. ಅಷ್ಟೇ ಅಲ್ಲದೆ ಒಂದು ಬಾರಿ ಇಲಿಗಳು ಈ ಮಿಶ್ರಣವನ್ನು ಸೇವಿಸಿ ಇದರ ರುಚಿಯನ್ನು ಕಂಡು ಕೊಂಡರೆ ಇನ್ನೆಂದು ಕೂಡ ನಿಮ್ಮ ಮನೆಯ ಬಳಿ ಇಲಿಗಳು ಸುಳಿಯುವುದಿಲ್ಲ. ಹಾಗಾಗಿ ಇದೊಂದು ನೈಸರ್ಗಿಕ ವಿಧಾನ ಅಂತಾನೆ ಹೇಳಬಹುದು ಇದರಿಂದ ಮನೆಯಲ್ಲಿ ಇರುವಂತಹ ಸದಸ್ಯರಿಗೆ ಯಾವುದೇ ರೀತಿಯಾದಂತಹ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಲೇಖನಗಳು
Mercury-ಬುಧನ ನಕ್ಷತ್ರ ಬದಲಾವಣೆ: ಈ 5 ರಾಶಿಯವರಿಗೆ ಇಂದಿನಿಂದ ‘ರಾಜಯೋಗ’, ಅದೃಷ್ಟದ ಬಾಗಿಲು ಓಪನ್..!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಈ ನಕ್ಷತ್ರ ಬದಲಾವಣೆಯು ಮುಂದಿನ 13 ದಿನಗಳ ಕಾಲ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, 5 ರಾಶಿಯವರಿಗೆ ಮಾತ್ರ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಉದ್ಯೋಗ, ವ್ಯವಹಾರ ಮತ್ತು ಆರ್ಥಿಕವಾಗಿ ಲಾಭ ಪಡೆಯಲಿರುವ ಆ ಅದೃಷ್ಟದ ರಾಶಿಗಳು ಇಲ್ಲಿವೆ:
ವೃಷಭ ರಾಶಿ
ವೃಷಭ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ಹೊಸ ಅವಕಾಶಗಳ ಬಾಗಿಲು ತೆರೆಯಬಹುದು. ವೃತ್ತಿಜೀವನದಲ್ಲಿ ಬಹುದಿನಗಳಿಂದ ಎದುರು ನೋಡುತ್ತಿದ್ದ ಅವಕಾಶಗಳು ಸಿಗುವ ಸಾಧ್ಯತೆಯಿದೆ. ಕೆಲಸದಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ದೊರೆಯುವುದರಿಂದ ನಿಮ್ಮ ಯೋಜನೆಗಳನ್ನು ಯಶಸ್ವಿಯಾಗಿ ಮುಂದಕ್ಕೆ ಕೊಂಡೊಯ್ಯಬಹುದು. ಇದರಿಂದ ವೃತ್ತಿಯಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗಬಹುದು. ಉದ್ಯೋಗದ ಜೊತೆಗೆ ಕುಟುಂಬದ ವಿಚಾರದಲ್ಲೂ ಈ ಅವಧಿ ಖುಷಿ ನೀಡಬಹುದು. ಕುಟುಂಬದವರೊಂದಿಗೆ ಪ್ರವಾಸ ಅಥವಾ ಮಕ್ಕಳೊಂದಿಗೆ ವಿಶೇಷ ಸಮಯ ಕಳೆಯುವ ಅವಕಾಶ ಸಿಗಬಹುದು. ಒಟ್ಟಿನಲ್ಲಿ, ಕೆಲಸದಲ್ಲಿ ಪ್ರಗತಿ ಮತ್ತು ಕುಟುಂಬದಲ್ಲಿ ಸಂತೋಷ ಎರಡೂ ಒಟ್ಟಿಗೆ ಸಿಗುವ ಆಹ್ಲಾದಕರ ದಿನಗಳು ನಿಮ್ಮದಾಗಬಹುದು.
ಮಿಥುನ ರಾಶಿ
ಬುಧನ ಬದಲಾವಣೆ ಮಿಥುನ ರಾಶಿಯವರಿಗೆ ಹಣದ ವಿಚಾರದಲ್ಲಿ ಹೊಸ ದಾರಿ ತೋರಿಸಬಹುದು. ವ್ಯಾಪಾರದಲ್ಲಿ ತೊಡಗಿರುವವರಿಗೆ ಹೊಸ ಯೋಜನೆಗಳು ಮತ್ತು ಪ್ರಮುಖ ಒಪ್ಪಂದಗಳನ್ನು ಅಂತಿಮಗೊಳಿಸುವ ಅವಕಾಶ ಸಿಗಬಹುದು. ಈಗ ಮಾಡಿಕೊಳ್ಳುವ ಕೆಲವು ವ್ಯವಹಾರ ಸಂಪರ್ಕಗಳು ಮುಂದಿನ ದಿನಗಳಲ್ಲಿ ದೊಡ್ಡ ಲಾಭ ತಂದುಕೊಡುವ ಸಾಧ್ಯತೆಯಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವ ಸಮಯ ಇದಾಗಿದ್ದು, ಆದಾಯ ಗಳಿಸಲು ಹೊಸ ಮಾರ್ಗಗಳು ತೆರೆದುಕೊಳ್ಳಬಹುದು. ಹಣಕಾಸಿನ ಪರಿಸ್ಥಿತಿಯಲ್ಲೂ ಸುಧಾರಣೆ ಕಂಡುಬರಬಹುದು. ವ್ಯವಹಾರ ವಿಸ್ತರಣೆ ಜೊತೆಗೆ ಆದಾಯ ಹೆಚ್ಚಿಸಿಕೊಳ್ಳುವ ಅವಕಾಶವೂ ಒಟ್ಟಿಗೆ ಒಲಿದುಬರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದಿನಿಂದಲೇ ಶುಭ ಸುದ್ದಿಗಳ ನಿರೀಕ್ಷೆ. ಸೂರ್ಯನ ಅಧಿಪತ್ಯದ ಸಿಂಹ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ವಿಶೇಷವಾಗಿರಬಹುದು. ವಿಶೇಷವಾಗಿ ಸೆಪ್ಟೆಂಬರ್ 13ರವರೆಗಿನ ಅವಧಿ ಹಲವು ವಿಚಾರಗಳಲ್ಲಿ ಅನುಕೂಲಕರವಾಗಿರಬಹುದು. ನೀವು ಅಂದುಕೊಂಡ ಕೆಲಸಗಳು ನಿರೀಕ್ಷೆಯಂತೆ ನಡೆಯುವ ಸಾಧ್ಯತೆಯಿದ್ದು, ಮನಸ್ಸಿನಲ್ಲೂ ಹೊಸ ಉತ್ಸಾಹ ಮೂಡಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದ್ದು, ಕುಟುಂಬದವರಿಂದ ಉತ್ತಮ ಬೆಂಬಲ ಸಿಗಬಹುದು. ಹಣಕಾಸಿನ ವಿಚಾರಗಳಲ್ಲೂ ಸ್ಥಿರತೆ ಹೆಚ್ಚಾಗುವ ಸಾಧ್ಯತೆಯಿದೆ. ಹಣದ ಚಿಂತೆ ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ, ಕೆಲಸದಲ್ಲಿ ಸ್ಪಷ್ಟತೆ ಸಿಗುವ ದಿನಗಳು ಆರಂಭವಾಗಬಹುದು.
ವೃಶ್ಚಿಕ ರಾಶಿ
ಮುಂದಿನ ದಿನಗಳು ವೃಶ್ಚಿಕ ರಾಶಿಯವರಿಗೆ ಹೊಸ ಅನುಭವಗಳ ಜೊತೆಗೆ ನೆಮ್ಮದಿಯನ್ನೂ ತರಬಹುದು. ಇಂದಿನಿಂದ ಸೆ.13ರವರೆಗಿನ ಅವಧಿ ನಿಮಗೆ ವಿಶೇಷವಾಗಿರಬಹುದು. ಹೊಸ ವಿಷಯಗಳನ್ನು ಕಲಿಯಲು ಮತ್ತು ನಿಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಉತ್ತಮ ಅವಕಾಶಗಳು ಸಿಗಬಹುದು. ಕುಟುಂಬದವರೊಂದಿಗೆ ಪ್ರವಾಸಕ್ಕೆ ಯೋಜನೆ ರೂಪಿಸುವ ಸಾಧ್ಯತೆಯಿದ್ದು, ಬಹುದಿನಗಳಿಂದ ಬಯಸುತ್ತಿದ್ದವರೊಂದಿಗೆ ಗುಣಮಟ್ಟದ ಸಮಯ ಕಳೆಯಬಹುದು. ಇದೇ ಸಮಯದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಾಗಬಹುದು. ಕುಟುಂಬದ ಸಂತೋಷ, ಹೊಸ ಕಲಿಕೆ ಮತ್ತು ಮನಸ್ಸಿನ ನೆಮ್ಮದಿ-ಮೂರೂ ಒಂದೇ ಸಮಯದಲ್ಲಿ ಸಿಗುವ ಸಾಧ್ಯತೆಯಿದೆ.
ಧನು ರಾಶಿ
ಬುಧನ ನಕ್ಷತ್ರ ಬದಲಾವಣೆ ಧನು ರಾಶಿಯವರಿಗೆ ಪ್ರಗತಿಯ ಹೊಸ ಬಾಗಿಲು ತೆರೆಯಬಹುದು. ಉದ್ಯೋಗದಲ್ಲಿರುವವರಿಗೆ ತಮ್ಮ ಕ್ಷೇತ್ರದಲ್ಲಿ ಮುನ್ನಡೆಯಲು ಉತ್ತಮ ಅವಕಾಶಗಳು ದೊರೆಯಬಹುದು. ವ್ಯವಹಾರಸ್ಥರಿಗೂ ಹೊಸ ಅವಕಾಶಗಳು ಸಿಗುವ ಸಾಧ್ಯತೆಯಿದ್ದು, ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಶಸ್ಸು ಕಾಣಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ಸಾಧ್ಯತೆಯಿದ್ದು, ಆರ್ಥಿಕ ಲಾಭವೂ ದೊರೆಯಬಹುದು. ಯಶಸ್ಸಿನ ಅನುಭವದಿಂದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ. ಕೆಲಸದಲ್ಲಿ ಯಶಸ್ಸು, ಹಣದಲ್ಲಿ ಲಾಭ ಮತ್ತು ಆತ್ಮವಿಶ್ವಾಸದ ಹೆಚ್ಚಳ-ಧನು ರಾಶಿಯವರಿಗೆ ಶುಭ ದಿನಗಳು ಆರಂಭವಾಗಬಹುದು.
-
ಮಂಗಳೂರು8 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ13 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು15 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ13 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ7 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ರಾಜಕೀಯ14 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಉದ್ಯೋಗ9 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
Uncategorized6 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ


















