ಮೈಸೂರು
Tippu Canon Found |ಕೇರಳದ ತಳಿಪರಂಬ್ ಚಿರವಾಕ್ ನಲ್ಲಿ ಫಿರಂಗಿ ಪತ್ತೆ – ಟಿಪ್ಪು ಸೇನೆ ಪಡೆಯದ್ದು ಎಂಬ ಅನುಮಾನ
ಕಣ್ಣೂರು: ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ್ ಚಿರವಾಕ್ ಸಮೀಪ ಮೈಸೂರಿನ ರಾಜ ಟಿಪ್ಪು ಸುಲ್ತಾನ್ ( Tippu Sulthan) ನ ಸೇನೆಗೆ ಸೇರಿದ್ದು ಎನ್ನಲಾದ ಪಡೆಯದ್ದು ಫಿರಂಗಿಯೊಂದು ( Canon) ಪತ್ತೆಯಾಗಿದೆ.
ಖಾಸಗಿ ವ್ಯಕ್ತಿಯೊಬ್ಬರು ತನ್ನ ಮನೆಯ ಹಿತ್ತಿಲಿನ ಮರಗಳನ್ನು ಕಡಿದು, ಗಿಡ ಗಂಟಿಗಳನ್ನು ತೆರವುಗೊಳಿಸುವ ವೇಳೆ ಫಿರಂಗಿಯ ದೊಡ್ಡ ಕಬ್ಬಿಣದ ಕೊಳವೆ ಕಂಡು ಬಂದಿದೆ. ಭೂಮಿಯಲ್ಲಿ ಹೂತು ಹೋದ ಸ್ಥಿತಿಯಲ್ಲಿ ಫಿರಂಗಿ ಕಾಣಿಸಿದ್ದು ,ಇದರ ಉಳಿದ ಭಾಗ ಭೂಮಿಯ ಒಳಗಿದೆಯೇ ಎನ್ನುವುದನ್ನು ಪರಿಶೀಲಿಸಲು ಉತ್ಖನನದ ಅಗತ್ಯವಿದೆ.
ಟಿಪ್ಪು ಸುಲ್ತಾನ್ ಪಡೆ ( Tippu Army) ಕಾದಾಟ ನಡೆಸಿದ ಕುಪ್ಪಂ ನದಿ ತೀರದ ಮೇಲಿನ ಪ್ರದೇಶದಲ್ಲಿ ಟಿಪ್ಪುವಿನ ಕೋಟೆಯ ಅವಶೇಷಗಳು ( Remant) ಪತ್ತೆಯಾಗಿತ್ತು. ಈ ಪ್ರದೇಶವನ್ನು ಇಂದಿಗೂ ಕೋಟ್ಟಕುನ್ನ್ ಎಂದು ಕರೆಯಲಾಗುತ್ತಿದೆ.
ಫಿರಂಗಿ ಪತ್ತೆಯಾದ ಮನೆಯ ಹಿತ್ತಿಲಿನಲ್ಲಿ ದೊಡ್ಡ ತೇಗ ಸಹಿತ ಇತರ ಮರಗಳು ಮತ್ತು ಗಿಡ ಗಂಟಿಗಳು ಇದ್ದ ಕಾರಣ ಈ ವರೆಗೆ ಫಿರಂಗಿ ಯಾರ ಗಮನಕ್ಕೂ ಬಂದಿರಲಿಲ್ಲ. ಇಲ್ಲಿ ಇನ್ನೂ ಹೆಚ್ಚಿನ ಪ್ರಾಚ್ಯ ವಸ್ತುಗಳು ಇವೆಯೇ ಎಂಬುದು ಪತ್ತೆಯಾಗಬೇಕಿದೆ.
ಟಿಪ್ಪುವಿನ ಸೈನ್ಯ ಫಿರಂಗಿಯನ್ನು ಇಲ್ಲಿ ಸ್ಥಾಪಿಸಿರಬಹುದೇ ಅಥವಾ ತ್ಯಜಿಸಿ ಹೋಗಿರಬಹುದೆ ಎಂಬುದು ಸ್ಪಷ್ಟವಾಗಿಲ್ಲ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಮಾಹಿತಿ ನೀಡಿ ಉತ್ಖನನ ನಡೆಸಿದರೆ ಇತರ ಅವಶೇಷಗಳು, ನಿಖರ ಮಾಹಿತಿ ಲಭಿಸಲಿದೆ. .
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
Uncategorized23 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
Uncategorized23 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized10 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ11 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ5 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ದಕ್ಷಿಣ ಕನ್ನಡ12 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ11 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್10 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು


















