ಸುಳ್ಯ
ಸುಳ್ಯ: ಕೆಲವು ಕುಟುಂಬಗಳಿಗೆ ಪರ್ಯಾಯ ಜಾಗದ ವ್ಯವಸ್ಥೆಗೆ ಮುಂದಾದ ಜಿಲ್ಲಾಧಿಕಾರಿ – ಕಾಲುಸಂಕ ಗುರುತಿಸಲು ಪಂಚಾಯತ್ ಗೆ 4 ದಿನದ ಗಡುವು | Sullia LandSlide
ಮಂಗಳೂರು: ಸುಳ್ಯ ತಾಲೂಕಿನ ಕೆಲವು ಮನೆಗಳಿಗೆ ಪರ್ಯಾಯ ಜಾಗದ ವ್ಯವಸ್ಥೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಂದಾಗಿದ್ದಾರೆ.
‘ಸುಳ್ಯ ಕಲ್ಮಕಾರಿನಲ್ಲಿ (Sullia) ಭೂಕುಸಿತದಿಂದ (LandSlide) ಅಪಾಯ ಎದುರಿಸುತ್ತಿರುವ ಎಂಟು ಕುಟುಂಬಗಳನ್ನು ಮುಂದಿನ ಮುಂಗಾರಿನ ಒಳಗೆ ಸ್ಥಳಾಂತರಿಸಲಾಗುವುದು. ಈ ಕುಟುಂಬಗಳಿಗೆ ಪರ್ಯಾಯ ಜಮೀನು ನೀಡಲಿದ್ದೇವೆ. ಜಮೀನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ(DC) ಡಾ.ರಾಜೇಂದ್ರ ಕೆ.ವಿ. ತಿಳಿಸಿದರು.
ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ ಡಿಸಿ, ‘ಬೆಳ್ತಂಗಡಿ ತಾಲ್ಲೂಕಿನ ಮಿತ್ತಬಾಗಿಲು ಗಣೇಶನಗರದಲ್ಲೂ ಕೆಲವು ಮನೆಗಳು ಭೂಕುಸಿತದ ಅಪಾಯವನ್ನೆದುರಿಸುತ್ತಿವೆ. ಈ ಕುಟುಂಬಗಳು ಮನೆ ಕಟ್ಟಿಕೊಳ್ಳುವುದಕ್ಕೆ ಪರ್ಯಾಯ ಜಮೀನು ನೀಡಲು ಜಾಗ ಗುರುತಿಸುವಂತೆ ಅಲ್ಲಿನ ಗ್ರಾಮ ಪಂಚಾಯಿತಿಗೆ ಸೂಚನೆ ನೀಡಿದ್ದೇವೆ’ ಎಂದರು.
‘ಸುಳ್ಯ ತಾಲ್ಲೂಕಿನ ಕೊಲ್ಲಮೊಗ್ರು ಹಾಗೂ ಕಲ್ಮಕಾರುವಿನಲ್ಲಿ ಇತ್ತೀಚೆಗೆ ನಡೆದ ಭೂಕುಸಿತದ ಬಗ್ಗೆ ಅಧ್ಯಯನ ನಡೆಸುವಂತೆ ಸುರತ್ಕಲ್ ಎನ್ಐಟಿಕೆ, ಕರ್ನಾಟಕ ಪ್ರಾಕೃತಿಕ ವಿಕೋಪ ನಿಗಾ ಕೇಂದ್ರ ಹಾಗೂ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಗಳ (ಜಿಎಸ್ಐ) ತಜ್ಞರನ್ನು ಕೋರಿದ್ದೇವೆ’ ಎಂದರು.
‘ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ಮತ್ತು ಗ್ರಾಮ ಲೆಕ್ಕಿಗರಿಗೆ ನಿರ್ದೇಶನ ನೀಡಿದ್ದೇನೆ. ಗುಡ್ಡವನ್ನು 3 ಅಡಿಗಳಿಗಿಂತ ಎತ್ತರ ಅಥವಾ 1 ಮೀಟರ್ಗಿಂತ ಹೆಚ್ಚು ಎತ್ತರಕ್ಕೆ ಕಡಿದು ನೆಲವನ್ನು ಸಮತಟ್ಟುಗೊಳಿಸುವುದಕ್ಕೆ ಕಂದಾಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದೂ ಸೂಚನೆ ನೀಡಿದ್ದೇನೆ’ ಎಂದು ಅವರು ತಿಳಿಸಿದರು.
‘1857ರಲ್ಲಿ ನಡೆದ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ 1837ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಕೆದಂಬಾಡಿ ರಾಮೇಗೌಡ ಅವರ ಕಂಚಿನ ಪ್ರತಿಮೆಯನ್ನು ಬಾವುಟ ಗುಡ್ಡೆಯ ಟ್ಯಾಗೋರ್ ಉದ್ಯಾನದಲ್ಲಿ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾಲುಸಂಕ ಗುರುತಿಸಲು ಸೂಚನೆ: ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಬಾಲಕಿಯೊಬ್ಬಳು ಮರದ ದಿಮ್ಮಿಯಿಂದ ನಿರ್ಮಿಸಿದ್ದ ಕಾಲುಸಂಕದಲ್ಲಿ ಸಾಗುವಾಗ ಆಯತಪ್ಪಿ ತೋಡಿಗೆ ಬಿದ್ದು ಕೊಚ್ಚಿ ಹೋದ ಘಟನೆಯ ಬೆನ್ನಲ್ಲೇ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮರದ ದಿಮ್ಮಿಯಿಂದ ನಿರ್ಮಿಸಿರುವ ಕಾಲುಸಂಕಗಳ ಮೂಲಕ ತೋಡು ದಾಟುವ ಪರಿಸ್ಥಿತಿ ಇದ್ದರೆ ಗುರುತಿಸಬೇಕು ಎಂದು ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ.
‘ಮರದ ದಿಮ್ಮಿಯಿಂದ ನಿರ್ಮಿಸಿರುವ ಕಾಲು ಸಂಕಗಳನ್ನು ಶಾಲೆಗೆ ಹೋಗುವ ಮಕ್ಕಳು ಬಳಸುತ್ತಿದ್ದರೆ, ಅವುಗಳನ್ನು ಆದ್ಯತೆ ಮೇರೆಗೆ ಗುರುತಿಸಿ ಆ.16ರ ಒಳಗೆ ವರದಿ ಸಲ್ಲಿಬೇಕು’ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
ಸುಳ್ಯ
Areca nut-ಅಡಿಕೆ ರೇಟ್ ಜಂಪ್ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ
ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.
ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.
ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.
ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.
ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.
ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.
-
ಶಿಕ್ಷಣ22 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು22 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್24 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಅಪರಾಧ6 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಕಾರ್ಯಕ್ರಮಗಳು23 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ22 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಸ್ಥಳೀಯ4 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಬಿಗ್ ನ್ಯೂಸ್5 hours agoHigh Court notice-ಜಾರಿಯಾಗದ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್















