ಬಂಟ್ವಾಳ
ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ದೇವಸ್ಥಾನದಲ್ಲಿ ಬೀದಿ ನಾಯಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ‘777ಚಾರ್ಲಿ’ ನಿರ್ದೇಶಕ ಕಿರಣ್ ರಾಜ್ | 777 Charlie
ಬಂಟ್ವಾಳ: ರಕ್ಷಿತ್ ಶೆಟ್ಟಿ ನಟನೆಯ “777 ಚಾರ್ಲಿ”(777 Charlie) ಎನ್ನುವ ಸೂಪರ್ ಹಿಟ್ ಚಿತ್ರದ ಕಥೆ ಬರೆದು ನಿರ್ದೇಶಿಸಿದ ಚೊಚ್ಚಲ ಸಿನೆಮದ ನಿರ್ದೇಶಕ ಕಾಸರಗೋಡಿನ ಕಿರಣ್ ರಾಜ್(kiranraj) ದಕ್ಷಿಣಕನ್ನಡದ ಐತಿಹಾಸಿಕ ದೇವಸ್ಥಾನದ ಮುಂದಿದ್ದ ಬೀದಿ ನಾಯಿಯೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡು ತನ್ನ ಫೇಸ್ಬುಕ್ ಗೆ ಹಾಕಿದ್ದಾರೆ.
ನಾಯಿ ಹಾಗೂ ಧರ್ಮನ ಪಾತ್ರದ ಮೂಲಕ ಪ್ರೇಕ್ಷಕರನ್ನು ಚಿತ್ರದಲ್ಲಿ ತಲ್ಲಿನರಾಗಿಸಿದ ಕಿರಣ್ ರಾಜ್ ಐದು ಭಾಷೆಗಳಲ್ಲಿ ತೆರೆಕಾಣಿಸಿ ಸೂಪರ್ ಹಿಟ್ ಸಿನಿಮಾ ನೀಡಿದರು.
ಕಾಸರಗೋಡಿನ ಮಿತ್ತಮೂಲೆಯವರಾದ ಕಿರಣ್ ರಾಜ್ ಇಂದು ದಕ್ಷಿಣ ಕನ್ನಡದ ಐತಿಹಾಸಿಕ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನದ ಹೊರಗಿರುವ ನಾಯಿಯೊಂದಕ್ಕೆ ಬಿಸ್ಕೆಟ್ ಹಾಕಿ ಅದನ್ನು ತಬ್ಬಿ ಹಿಡಿದು ಪೊಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅದನ್ನು ತನ್ನ ಫೇಸ್ಬುಕಲ್ಲಿ ಹಾಕಿಕೊಂಡಿದ್ದಾರೆ. ಫೇಸ್ಬುಕಲ್ಲಿ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಬಂದಿದೆ.
ಜಗತ್ತಿನಾದ್ಯಂತ ಇರುವ ಸಿನೆಮಾ ಕ್ಷೇತ್ರದ ಪರಿಣತರು ಇವರ ಚಾರ್ಲಿ ಸಿನೆಮಾ ನೋಡಿ ಅಭಿನಂದಿಸಿದ್ದಾರೆ. ನಮ್ಮ ನಿರೀಕ್ಷೆಯನ್ನು ಮೀರಿ ಸದ್ದು ಮಾಡುತ್ತಿರುವ ಈ ಕನ್ನಡ ಸಿನೆಮಾ ಐದು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ಉತ್ತರ ಭಾರತ ಸೇರಿದಂತೆ ತಮಿಳರು ಮಲೆಯಾಳಿಗರೂ ಕನ್ನಡಿಗರೂ ತೆಲುಗರೂ ಈ ಕನ್ನಡದ ಹುಡುಗನ ಸಿನೆಮಾದ ಬಗ್ಗೆ ಭರವಸೆಯಿಂದ ಮಾತನಾಡುತ್ತಿದ್ದಾರೆ.
ಅಪರಾಧ
Bantwala-ಬಂಟ್ವಾಳ: ತಲವಾರು ತೋರಿಸಿ ₹8.35 ಲಕ್ಷ ದರೋಡೆ ಪ್ರಕರಣ: ಮೂವರು ಅಂದರ್, ₹2.01 ಲಕ್ಷ ವಶ
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಬಂಟ್ವಾಳ: ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಬಂಧಿತ ಆರೋಪಿಗಳು.
ಮಂಗಳೂರಿನ ಕಣ್ಣೂರಿನಲ್ಲಿರುವ ಸಿಮೆಂಟ್ ಮತ್ತು ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸುವ ಕೆಲಸ ನಿರ್ವಹಿಸುತ್ತಿದ್ದರು. ಅದರಂತೆ 2026ರ ಆಗಸ್ಟ್ 20ರಂದು ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಲು ಬೈಕ್‌ನಲ್ಲಿ ತೆರಳಿದ್ದರು.
ಹಲವು ಅಂಗಡಿಗಳಿಂದ ನಗದು ಸಂಗ್ರಹಿಸಿಕೊಂಡು ಬಂಟ್ವಾಳದ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ ಎಂಬಲ್ಲಿ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಮಯ್ಯದಿ ಅವರಿಗೆ ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಅವರ ಬಳಿಯಿದ್ದ ₹8,35,000 ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 115/2026ರ ಅಡಿಯಲ್ಲಿ ಬಿಎನ್‌ಎಸ್ ಕಲಂ 309(6) ಹಾಗೂ ಆರ್ಮ್ಸ್ ಆಕ್ಟ್ ಕಲಂ 25(1)(A)ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಎಂಬವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪ್ರಕರಣದ ವಿಚಾರಣೆಗಾಗಿ ನವೆಂಬರ್ 16ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಂದ ₹2,01,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಿತ್ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ಕೂಡ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.
ನಿಧನ ವಾರ್ತೆ
Melkar-ಮೆಲ್ಕಾರ್: ಸ್ವರಾಜ್ ಸ್ಟುಡಿಯೋ ಮಾಲೀಕರ ಪುತ್ರಿ ನಿಧನ
ಪಾಣೆಮಂಗಳೂರು-ಮೆಲ್ಕಾರ್‌ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬಂಟ್ವಾಳ: ಪಾಣೆಮಂಗಳೂರು-ಮೆಲ್ಕಾರ್‌ನ ಸ್ವರಾಜ್ ಸ್ಟುಡಿಯೋ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ನೇಹಾ ಅವರು ಪತಿ ಪ್ರತೀಕ್ ಅವರೊಂದಿಗೆ ಉದ್ಯೋಗ ನಿಮಿತ್ತ ಕುವೈತ್‌ನಲ್ಲಿ ನೆಲೆಸಿದ್ದರು. ಮೃತರು ಪತಿ, ತಂದೆ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕ್ರೈಂ
Mani-ಮಾಣಿ: ವ್ಯಕ್ತಿಯ ಮೇಲೆ ಜೀಪು ಹತ್ತಿಸಲು ಯತ್ನಿಸಿ ಕೊಲೆ ಬೆದರಿಕೆ; ಆರೋಪಿ ಜಗದೀಶ್ ಜೈನ್ ಬಂಧನ
ಮಾಣಿ ಜಂಕ್ಷನ್‌ನ ಮೈದಾನದ ಬಳಿ ನಿಂತಿದ್ದ ವ್ಯಕ್ತಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಗದೀಶ್ ಜೈನ್ ಎಂದು ಗುರುತಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ: ಮಾಣಿ ಜಂಕ್ಷನ್‌ನ ಮೈದಾನದ ಬಳಿ ನಿಂತಿದ್ದ ವ್ಯಕ್ತಿಗೆ ಬೊಲೆರೋ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿ, ಬಳಿಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಗದೀಶ್ ಜೈನ್ ಎಂದು ಗುರುತಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಘಟನೆಯ ವಿವರದಂತೆ, ಬಂಟ್ವಾಳ ಮಾಣಿ ನಿವಾಸಿ ವಿಕೇಶ್ ಕೆ. (32) ಅವರು ನ.9ರಂದು ಸಂಜೆ ಮಾಣಿ ಜಂಕ್ಷನ್‌ನ ಮೈದಾನದಲ್ಲಿರುವ ಪಟಾಕಿ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಅವರಿಗೆ ಪರಿಚಯವಿದ್ದ ಜಗದೀಶ್ ಜೈನ್ ಎಂಬಾತ ಬೊಲೆರೋ ಜೀಪನ್ನು ಅತಿವೇಗವಾಗಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಜೀಪು ತಮ್ಮತ್ತ ಬರುತ್ತಿರುವುದನ್ನು ಗಮನಿಸಿದ ವಿಕೇಶ್ ಅವರು ಬೊಲೆರೋ ವಾಹನದ ಬಾನೆಟ್ ಮೇಲೆ ಹಾರಿ, ಬಳಿಕ ಅಲ್ಲಿಯೇ ಇದ್ದ ಮಣ್ಣಿನ ಮೇಲೆ ಬಿದ್ದು ಅಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಅವರ ಎಡಕಾಲಿನ ಮೊಣಗಂಟಿಗೆ ಗಾಯವಾಗಿದೆ. ವಿಕೇಶ್ ಅವರ ಸಂಬಂಧಿಕ ತೀರ್ಥಪ್ರಸಾದ್ ಅವರಿಗೂ ಜೀಪಿನಿಂದ ಡಿಕ್ಕಿ ಹೊಡೆಯಲು ಆರೋಪಿ ಯತ್ನಿಸಿದ್ದು, ಅವರು ಕೂಡ ತಪ್ಪಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನಾ ಸ್ಥಳದಲ್ಲಿ ಜನರು ಸೇರುವುದನ್ನು ಕಂಡ ಆರೋಪಿ ಜಗದೀಶ್ ಜೈನ್, ವಿಕೇಶ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಮುಂದಕ್ಕೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ತೆರಳಿದ್ದಾನೆ ಎಂದು ಆರೋಪಿಸಲಾಗಿದೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















