ವರದಿಗಳು
100 ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಮಹೇಶ್ ವಿಕ್ರಮ್ ಹೆಗ್ಡೆಯವರ ವಿಕ್ರಮ ಫೌಂಡೇಶನ್ | Mahesh Vikram Hegde
ಈ ವರ್ಷ ವಿಕ್ರಮ ಫೌಂಡೇಶನ್(Vikram foundation ) 50 ಶಾಲೆಗಳ 100 ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಬೇಕು ಎಂಬ ಆಶಯದೊಂದಿಗೆ ಹುಟ್ಟಿಕೊಂಡಿದ್ದು ವಿಕ್ರಮ ಫೌಂಡೇಶನ್. ಬಡತನವಿದ್ದಾಗ ವಿದ್ಯಾಭ್ಯಾಸಕ್ಕೆ ಅದೆಷ್ಟು ಒದ್ದಾಡಬೇಕು ಅನ್ನೋದು ಅನುಭವಿಸಿದ್ದವರು ವಿಕ್ರಮ ಫೌಂಡೇಶನ್ ನ ಮಹೇಶ್ ವಿಕ್ರಮ ಹೆಗ್ಡೆ (mahesh vikram hegde). ಅಮ್ಮನ ಕಿವಿಯೋಲೆ ಅಡವಿಟ್ಟು ವಿದ್ಯಾಭ್ಯಾಸ ಮಾಡುತ್ತಿದ್ದ ಕಾಲವದು. ತಮಗೆ ಎದುರಾದ ಕಷ್ಟ ಮುಂದೆ ಯಾರಿಗೂ ಬರಬಾರದು ಎಂದು ಮನಸಲ್ಲಿಯೇ ಆಲೋಚಿಸಿದ್ದರು.
ಅಕ್ಷರ ಕಲಿಯಲು ಬಡತನ ಅಡ್ಡಿಯಾಗಬಾರದು ಎಂದು ಅಂದುಕೊಂಡಿದ್ದ ವಿಕ್ರಮ ಹೆಗ್ಡೆ ಬಡ ಮಕ್ಕಳಿಗಾಗಿಯೇ ವಿಕ್ರಮ ಫೌಂಡೇಶನ್ ಹುಟ್ಟುಹಾಕಿದರು. ಆರಂಭದಲ್ಲಿ ತಮ್ಮ ಫೌಂಡೇಶನ್ ಮೂಲಕ ಒಂದಷ್ಟು ಬಡವರಿಗೆ ಮನೆ ಕಟ್ಟಿಸಿಕೊಡುವ ಕಾರ್ಯದಲ್ಲಿ ನಿರತರಾಗಿದ್ದರು.
ಇದೀಗ ತಮ್ಮ ಕನಸಿನ್ನ ಸಾಕಾರಗೊಳಿಸಲು ಮುಂದಾಗಿದ್ದು, 100 ಬಡ ಮಕ್ಕಳನ್ನ ದತ್ತು ತೆಗೆದುಕೊಂಡು, ಅವರ ವಿದ್ಯಾಭ್ಯಾಸದ ಖರ್ಚು ಭರಿಸಿದ್ದಾರೆ.
ವರ್ಷಕ್ಕೆ ಒಂದು ಸಾವಿರ ಮಕ್ಕಳ ಜವಾಬ್ದಾರಿ ತೆಗೆದುಕೊಳ್ಳುವ ಆಶಯ ಹೊಂದಿರುವ ವಿಕ್ರಮ ಫೌಂಡೇಶನ್ ಆರಂಭಿಕವಾಗಿ ಈ ವರ್ಷ ನೂರು ಮಕ್ಕಳನ್ನು ದತ್ತು ಪಡೆದು ತನ್ನ ಕನಸಿನ ಮೊದಲ ಹೆಜ್ಜೆ ಇಟ್ಟಿದೆ. ಮುಂದಿನ ದಿನಗಳಲ್ಲಿ ‘ಸಾವಿರದ’ ಕನಸನ್ನು ನನಸು ಮಾಡುವತ್ತ ಸಾಗಲು ವಿಕ್ರಮ ಹೆಗ್ಡೆ ನಿಶ್ಚಯಿಸಿದ್ದಾರೆ.
ತಮ್ಮ ಜನ್ಮಭೂಮಿ ದಕ್ಷಿಣ ಕನ್ನಡದಿಂದ ಈ ಸತ್ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಶಾಲಾ ಮಂಡಳಿಯ ಅಭಿಪ್ರಾಯ ಸಂಗ್ರಹಿಸಿ ಅವರು ಹೇಳಿದ ಮಕ್ಕಳ ಮನೆಗೆ ಹೋಗಿ ಅವರ ಆರ್ಥಿಕ ಪರಿಸ್ಥಿತಿ ಅವಲೋಕಿಸಿ ಕಷ್ಟದಲ್ಲಿರೋ 100 ಕುಟುಂಬದ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.
ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.
ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.
ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.
ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.
ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.
ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.
ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.
ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.
ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
-
ಶಿಕ್ಷಣ24 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು24 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಅಪರಾಧ8 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್5 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಅಪರಾಧ24 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಮಂಗಳೂರು6 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಸ್ಥಳೀಯ5 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಸ್ಥಳೀಯ6 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















