ಉದ್ಯೋಗ
SSLC – PUC ವಿದ್ಯಾರ್ಥಿಗಳಿಗೆ ₹1,25,000 ವಿದ್ಯಾರ್ಥಿ ವೇತನ ಪಡೆಯುವ ಅವಕಾಶ – ಇಲ್ಲಿದೆ ಸಂಪೂರ್ಣ ಮಾಹಿತಿ
9ನೇ ತರಗತಿಯಿಂದ 12ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹1,25,000 ವಿದ್ಯಾರ್ಥಿ ವೇತನವನ್ನು PM ಯಂಗ್ ಅಚೀವರ್ಸ್ ಸ್ಕಾಲರ್ಶಿಪ್ ಅವಾರ್ಡ್ ಯೋಜನೆಯಡಿ ಕೇಂದ್ರ ಸರಕಾರ ನೀಡುತ್ತಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಮಹತ್ವಕಾಂಕ್ಷಿ ಯೋಜನೆಯನ್ನು ಜಾರಿ ಗೊಳಿಸಿದೆ.ಇಲಾಖೆಯು ವೈಬ್ರೆಂಟ್ ಇಂಡಿಯಾ (Vibrant India) ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು ಅದರಲ್ಲಿ ಅಂಬ್ರೆಲಾ ಯೋಜನೆಯನ್ನು ಜಾರಿಗೊಳಿಸುತ್ತಿದೆ.
PM ಯಂಗ್ ಅಚೀವರ್ಸ್ ಸ್ಕಾಲರ್ಶಿಪ್ ಅವಾರ್ಡ್ ( PM Young Achievers Scholarship Award Scheme) ಎಂಬ ಈ ಯೋಜನೆಯಡಿ (PM -YASASVI) ವಿದ್ಯಾರ್ಥಿವೇತನ ಪಡೆಯಲು YASASVI ಲಿಖಿತ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗುತ್ತದೆ. ಈ ವಿದ್ಯಾರ್ಥಿ ವೇತನ ಪಡೆಯ ಬಯಸುವ ವಿದ್ಯಾರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ನಡೆಸಲಿರುವ “YASASVI ENTRANCE TEST (ಇನ್ನೂ)” ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯಬೇಕಾಗುತ್ತದೆ. ಇದಕ್ಕಾಗಿ ರಾಜ್ಯವಾರು ಸ್ಲಾಟ್ಗಳನ್ನು ಹಂಚಿಕೆ ಮಾಡಲಾಗಿದೆ ಮತ್ತು 2022-23 ನೇ ಸಾಲಿನ ಫಲಾನುಭವಿಗಳನ್ನು 15,000 ಗುರಿ ಇರಿಸಲಾಗಿದೆ.
ಈಗಾಗಲೇ ಜುಲೈ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಆಗಸ್ಟ್ 26ರ ರಾತ್ರಿ 11:50 ರವರೆಗೆ ಕಾಲಾವಕಾಶವಿದೆ.ಈ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವರ್ಗ (EBC) ಮತ್ತು ಡಿ-ನೋಟಿಫೈಡ್, ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟುಗಳು (DNT/SNT) ಹಾಗೂ ಇತರೆ ಹಿಂದುಳಿದ ವರ್ಗ (OBC)ಗಳ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಬಹುದು. ಯೋಜನೆ ಪಡೆಯಲು ಆಸಕ್ತಿ ಹೊಂದಿರುವವರು ಅಧಿಕೃತ ವೆಬ್ಸೈಟ್ – yet.nta.ac.in ನಲ್ಲಿ ಅರ್ಜಿ ನಮೂನೆಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಮಾನದಂಡಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ (AID), ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ, ಆದಾಯ ಪ್ರಮಾಣಪತ್ರ ಮತ್ತು ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು. ಹುಡುಗರು ಮತ್ತು ಹುಡುಗಿಯರು ಇಬ್ಬರೂ ಅರ್ಜಿ ಸಲ್ಲಿಸಲು ಅರ್ಹರಾಗಿತ್ತಾರೆ. ಅರ್ಜಿದಾರರು ಭಾರತೀಯ ಪ್ರಜೆಗಳಾಗಿರಬೇಕು. OBC ಅಥವಾ EBC ಅಥವಾ DNT ವರ್ಗಕ್ಕೆ ಸೇರಿದವರಾಗಿರಬೇಕು.
2021-22 ರಲ್ಲಿ 8 ನೇ ತರಗತಿ ಅಥವಾ 10 ನೇ ತರಗತಿಗಳಲ್ಲಿ ಉತ್ತೀರ್ಣರಾಗಿರಬೇಕು. 9 ನೇ ತರಗತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 01-04-2006 ರಿಂದ 31-03-2010 ಮಧ್ಯೆ ಜನಿಸಿರಬೇಕು. 11 ನೇ ತರಗತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 01-04-2004 ರಿಂದ 31-03-2008 ಮಧ್ಯೆ ಜನಿಸಿರಬೇಕು. ಎಲ್ಲಾ ಮೂಲಗಳಿಂದ ಪೋಷಕರು/ಪೋಷಕರ ವಾರ್ಷಿಕ ಆದಾಯ 2.5 ಲಕ್ಷ ರೂ.ಗಿಂತ ಹೆಚ್ಚಿರಬಾರದು.
ಈ ಯೋಜನೆಯು ಒಬಿಸಿ/ಇಬಿಸಿ/ಡಿಎನ್ಟಿ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರವು ಶಾರ್ಟ್ಲಿಸ್ಟ್ ಮಾಡಿದ ಉನ್ನತ ಪ್ರತಿಷ್ಠಿತ ಶಾಲೆಯಲ್ಲಿ IX ರಿಂದ XII ನೇ ತರಗತಿಯವರೆಗೆ ಅಧ್ಯಯನ ಮಾಡಲು ಅವಕಾಶವಿದೆ.ಶಾಲೆಗೆ ಅಗತ್ಯವಿರುವಂತೆ ಬೋಧನಾ ಶುಲ್ಕ ಇತ್ಯಾದಿಗಳಿಗೆ ಅನುದಾನವನ್ನು ಒದಗಿಸಲಾಗುವುದು. 9 ಮತ್ತು 10 ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 75,000/- ಮತ್ತು ರೂ. 11 ಮತ್ತು 12 ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 1,25,000/ ನಿಗದಿಪಡಿಸಲಾಗಿದೆ.
ಲಿಖಿತ ಪರೀಕ್ಷೆಯ ನಿಯಮಗಳು
ಅರ್ಜಿ ನಮೂನೆಯನ್ನು ಯಶಸ್ವಿಯಾಗಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಕಾರ್ಡ್ ನೀಡಲಾಗುತ್ತದೆ. PM YASASVI ಯೋಜನೆಯ ಪ್ರವೇಶ ಕಾರ್ಡ್ 5ನೇ ಸೆಪ್ಟೆಂಬರ್ 2022 ರಿಂದ ಲಭ್ಯವಿರುತ್ತದೆ. ಸೆಪ್ಟೆಂಬರ್ 11 ರಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ವಿಧಾನದಲ್ಲಿ YASASVI ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು MCQ ಸ್ವರೂಪದಲ್ಲಿರುತ್ತದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಸಾಮಾನ್ಯ ವಿಜ್ಞಾನ – ಈನಾಲ್ಕು ವಿಷಯಗಳ ಮೇಲೆ 3 ಗಂಟೆಗಳ ಕಾಲ ಕಂಪ್ಯೂಟರ್ ಆಧರಿತ ಪರೀಕ್ಷೆ ನಡೆಸಲಾಗುತ್ತದೆ. ಒಟ್ಟು 400 ಅಂಕಗಳನ್ನ ಹೊಂದಿದ್ದು, ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ. ಪ್ರವೇಶ ಪರೀಕ್ಷೆ ಬರೆಯಲು 8 ನೇ ತರಗತಿಯ NCERT ಪಠ್ಯಕ್ರಮ ಹಾಗೂ 10 ನೇ ತರಗತಿಯ ಪಠ್ಯಕ್ರಮವನ್ನು ಅಧ್ಯಯನ ಮಾಡಬೇಕಾಗುತ್ತದೆ.
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ಸ್ಥಳೀಯ5 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್4 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ6 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ6 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ















