ಅಪರಾಧ
ಉಪ್ಪಿನಂಗಡಿ : ಕಳ್ಳತನದ ವೇಳೆ ಗಾಯ ಮಾಡಿಕೊಂಡು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿದ ಕಳ್ಳ
ಉಪ್ಪಿನಂಗಡಿ ( NIkhara News Uppinangady) : ಕಳ್ಳತನ ನಡೆಸಿದ ವ್ಯಕ್ತಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ವೇಳೆ ತಲೆಗೆ ಗಾಯ ಮಾಡಿಕೊಂಡು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿಕೊಂಡು ಹೋದ ಸ್ವಾರಸ್ಯಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಅ.12 ರಂದು ರಾತ್ರಿ ನಡೆದಿದೆ. ಮರುದಿನ ಆರೋಪಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಆತನನ್ನು ದಸ್ತಗಿರಿ ಮಾಡಿದ್ದಾರೆ.
ಕಳ್ಳತನ ಕೃತ್ಯವು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲೇರಿ ಪೇಟೆಯಲ್ಲಿ ನಡೆದಿದೆ. ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಮನೆ ನಿವಾಸಿ ಅಬ್ದುಲ್ ಖಾದರ್ ಅವರ ಮಗ ಅಶ್ರಫ್ (37). ಬಂಧಿತ ಆರೋಪಿ . ತಣ್ಣಿರುಪಂತ ಗ್ರಾ.ಪಂನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಹಾಗೇ ಇದ್ದಕೊಂಡೆ ಕಳ್ಳತನದ ಸ್ಕೆಚ್ ಹಾಕಿದ್ದ. ಪುತ್ತೂರು ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣವೊಂದರಲ್ಲು ಈತ ಆರೋಪಿ ಎಂದು ತಿಳಿದು ಬಂದಿದೆ.
ಆರೋಪಿಯು ಕಲ್ಲೇರಿ ಗ್ರಾ.ಪಂ. ಕಚೇರಿ ಪಕ್ಕದಲ್ಲಿರುವ ಮೂರ್ತೆದಾರರ ಬ್ಯಾಂಕ್ ನಲ್ಲಿ ಕಳವುಗೆಯ್ಯುವ ಉದ್ದೇಶದಿಂದ ಬಂದಿದ್ದ. ಆದರೇ, ಅದರ ಮುಂಭಾಗದ ಬಾಗಿಲು ಒಡೆಯಲು ಯತ್ನಿಸಿ ವಿಫಲನಾಗಿದ್ದಾನೆ. ಬ್ಯಾಂಕ್ ಪಕ್ಕ ಪಿಕಪ್ ವಾಹನವೊಂದು ನಿಲ್ಲಿಸಲಾಗಿತ್ತು. ಅದರಲ್ಲಿದ್ದ ರಾಡ್ ನು ಎಳೆಯಲು ಯತ್ನಿಸಿದ್ದಾನೆ. ಪಿಕಪ್ ಬಾಗಿಲು ತೆಗೆಯಲು ಅಸಾಧ್ಯವಾದಾಗ ಮುಂಭಾಗದ ಗಾಜು ಒಡೆದು ರಾಡು ತೆಗೆದಿದ್ದಾನೆ. ಈ ವೇಳೆ ಮನ ಬದಲಿಸಿದ ಆತ ಬ್ಯಾಂಕ್ನ ಬಾಗಿಲು ಒಡೆಯುವುದನ್ನು ಬಿಟ್ಟು ಪಕ್ಕದ ಹೊಟೇಲ್ಗೆ ನುಗ್ಗಿದ್ದಾನೆ. ಅದರ ಕ್ಯಾಶ್ ಕೌಂಟರ್ ನಲ್ಲಿದ್ದ ಐದು ಸಾವಿರ ರೂ.ಗೂ ಹೆಚ್ಚಿನ ನಗದು ಕಳ್ಳತನ ಮಾಡಿ ಜಾಗ ಖಾಲಿ ಮಾಡಿದ್ದಾನೆ.
ಹೆಡೆಯೆತ್ತಿದ್ದ ನಾಗರ ಹಾವಿನ ಬಾಯಿಂದ ಮಗು ಜಸ್ಟ್ ಮಿಸ್ – ತಾಯಿಯ ಸಮಯ ಪ್ರಜ್ಞೆ ಉಳಿಸಿತು ಮಗುವಿನ ಪ್ರಾಣ
ತಲೆಯ ಹಿಂಭಾಗಕ್ಕೆ ಗಾಯ
ಬಳಿಕ ಕಳ್ಳ ಪಕ್ಕದ ಕ್ಲಿನಿಕ್ನ ಹಿಂಭಾಗದ ಕಿಟಕಿಯ ರಾಡ್ ಮುರಿದು ಒಳನುಗ್ಗಿ ಅಲ್ಲಿಯೂ ಹಣಕ್ಕಾಗಿ ಹುಡುಕಾಡಿದ್ದಾನೆ. ಅಲ್ಲಿಯೂ ಅಂದಾಜು ಐದು ಸಾವಿರ ರೂಪಾಯಿ ಎಗರಿಸಿದ್ದಾನೆ. ಈ ವೇಳೆ ಅಲ್ಲಿ ಸಿಸಿಟಿವಿ ಅಳವಡಿಸಿರುವ ವಿಚಾರ ಅವನ ಗಮನಕ್ಕೆ ಬಂದಿದೆ. ಗುರುತು ಪತ್ತೆಯಾಗುವ ಭೀತಿಯಿಂದ ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾನೆ. ಸಿಸಿಟಿವಿಗೆ ಜೋಡಿಸಿದ ವೈರ್ ಕಟ್ ಮಾಡಿದ್ದಾನೆ. ಈ ವೇಳೆ ಆತನ ತಲೆಯ ಭಾಗಕ್ಕೆ ಹಿಂಭಾಗದ ಬಾಗಿಲು ಬಡಿದಿದೆ. ಅದರ ಹೊಡೆತಕ್ಕೆ ತೀವ್ರ ಗಾಯವುಂಟಾಗಿ ರಕ್ತ ಸೋರತೊಡಗಿದೆ. ಬಳಿಕ ರಸ್ತೆಯಲ್ಲಿ ಓಡಿಕೊಂಡು ಪರಾರಿಯಾಗಿದ್ದು, ಆತ . ಓಡಿ ಹೋದಲ್ಲೆಲ್ಲ ರಕ್ತದ ಕಲೆಗಳು ಕಾಣಿಸಿವೆ.
SSLC – PUC ವಿದ್ಯಾರ್ಥಿಗಳಿಗೆ ₹1,25,000 ವಿದ್ಯಾರ್ಥಿ ವೇತನ ಪಡೆಯುವ ಅವಕಾಶ – ಇಲ್ಲಿದೆ ಸಂಪೂರ್ಣ ಮಾಹಿತಿ
ಠಾಣೆಗೆ ದೂರು
ಮರು ದಿನ ಬೆಳಿಗ್ಗೆ ಸರಣಿ ಕಳ್ಳತನ ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಮೆಡಿಕಲ್ ಶಾಪ್ ಮಾಲಕ ಡಾ| ಸಂತೋಷ್, ಪಿಕಪ್ ವಾಹನದ ಚಾಲಕ ಯಶೋಧರ, ಮೂರ್ತೇದಾರರ ಬ್ಯಾಂಕ್ನ ವ್ಯವಸ್ಥಾಪಕರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು.
ಸುಲಭದಲ್ಲಿ ಸಿಕ್ಕಿ ಬಿದ್ದ ಕಳ್ಳ
ಮೆಡಿಕಲ್ನಲ್ಲಿದ್ದ ಸಿಸಿ ಕೆಮರಾದಲ್ಲಿ ಕಳ್ಳನ ಮುಖದ ಗುರುತು ಪತ್ತೆಯಾಗಿತ್ತು. ಆರೋಪಿ ಅಶ್ರಫ್ ಅಲ್ಲಿನವರಿಗೆ ಪರಿಚಿತ ಮುಖವಾಗಿದ್ದು ಹೀಗಾಗಿ ಕಳ್ಳನ ಗುರುತು ಸುಲಭದಲ್ಲಿ ಪತ್ತೆಯಾಗಿದೆ. ಗುರುವಾಯನಕೆರೆ ಸಮೀಪ ಈತನನ್ನು ಬಂಧಿಸಿದ್ದಾರೆ. ಕದ್ದ ಹಣದಿಂದ ಮೋಜು ಮಸ್ತಿ ನಡೆಸಿ ಚೀಲ ತುಂಬಾ ಹಣ್ಣು ಖರೀದಿಸಿ ಮನೆ ಕಡೆಗೆ ಹೋಗುತ್ತಿದ್ದಾಗ ದಾರಿ ಮಧ್ಯೆ ಪೊಲೀಸರು ಬಂಧಿಸಿದ್ದಾರೆ.
ಸ್ಕೆಚ್
ಬಂಧಿತ ಆರೋಪಿಯು ತಣ್ಣಿರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣ ಕಾರ್ಯದಲ್ಲಿ ಕೆಲಸ ನಿರ್ವಹಿಸುತ್ತ ಕಳವು ಕೃತ್ಯಕ್ಕೆ ಯೋಗ್ಯ ಸ್ಥಳವನ್ನು ಗುರುತಿಸುತ್ತಿದ್ದನೆಂದೂ ತನಿಖೆಯ ವೇಳೆ ತಿಳಿದು ಬಂದಿದೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.
ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.
ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.
ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಅಪರಾಧ21 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್18 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ18 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು19 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ14 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ19 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು20 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ19 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















