Uncategorized
ಮುಖ್ಯಮಂತ್ರಿ ತವರೂರು, ಬಿಜೆಪಿ ಹಿರಿಯ ನಾಯಕ ದಿ.ಸಿಎಂ ಉದಾಸಿ ಕ್ಷೇತ್ರ ಹಾನಗಲ್ ನಲ್ಲಿ ಭರ್ಜರಿ ಗೆಲುವು ಕಂಡ ಕಾಂಗ್ರೇಸ್ – ಸಿಂದಗಿಯಲ್ಲಿ ಬಾರಿ ಅಂತರದಲ್ಲಿ ಗೆದ್ದ ಬಿಜೆಪಿ : ಎರಡೂ ಕ್ಷೇತ್ರದಲ್ಲೂ ಹೀನಾಯವಾಗಿ ಸೋತ ಜೆಡಿಎಸ್
ಹಾವೇರಿ: ಬಿಜೆಪಿಯ ಹಿರಿಯ ನಾಯಕ ಹಾನಗಲ್ ಶಾಸಕ ಸಿಎಂ ಉದಾಸಿ ಹಾಗೂ ಸಿಂದಗಿಯ ಜೆಡಿಎಸ್ ಶಾಸಕ ಮನಗೂಲಿ ಮಲ್ಲಪ್ಪ ಚನ್ನವೀರಪ್ಪ ನಿಧನ ನಂತರ ತೆರವಾದ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆ ಹಾನಗಲ್ ನ್ನು ಕಾಂಗ್ರೇಸ್ ಗೆದ್ದರೆ ಜೆಡಿಎಸ್ ಕ್ಷೇತ್ರವಾಗಿದ್ದ ಸಿಂದಗಿ ಬಿಜೆಪಿಯ ಪಾಲಾಗಿದೆ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಹೀನಾಯವಾಗಿ ಸೋತಿದೆ.
ಹಾನಗಲ್ ಪಲಿತಾಂಶ : ರಾಜ್ಯದ ಉಪಚುನಾವಣೆಯಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಜಯ ಗಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯ ಕ್ಷೇತ್ರವಾದ ಹಾನಗಲ್ ಬಿಜೆಪಿ ಮುಖಭಂಗ ಅನುಭವಿಸಿದೆ.
ಗೆಲುವು ಸಾಧಿಸುವ ಫೇವರೆಟ್ ಆಗಿದ್ದ ಬಿಜೆಪಿಗೆ ಹಾನಗಲ್ ಕ್ಷೇತ್ರದ ಮತದಾರರು ಶಾಕ್ ನೀಡಿದ್ದಾರೆ. ಕಡೆಯ ಕ್ಷಣದಲ್ಲಿ ಅಚ್ಚರಿಯೆಂಬಂತೆ ಟಿಕೆಟ್ ಪಡೆದಿದ್ದ ಶಿವರಾಜ್ ಸಜ್ಜನರ್ ಕಮಲ ಅರಳಿಸುವಲ್ಲಿ ವಿಫಲರಾಗಿದ್ದಾರೆ. ಸ್ವತಃ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಪುಟದ ಸಚಿವರು ಬಂದು ಪ್ರಚಾರ ಮಾಡಿದರೂ ಮತದಾರರು ಮಾನೆ ಕೈ ಹಿಡಿದಿದ್ದಾರೆ.

19 ಸುತ್ತಿನ ಮತ ಎಣಿಕೆಯ ಬಳಿಕ ಕಾಂಗ್ರೆಸ್ ನ ಶ್ರೀನಿವಾಸ ಮಾನೆ 87,113 ಮತಗಳನ್ನು ಪಡೆದರೆ, ಬಿಜೆಪಿಯ ಅಭ್ಯರ್ಥಿಶಿವರಾಜ ಸಜ್ಜನರ 79,515 ಮತಗಳನ್ನಷ್ಟೇ ಪಡೆದರು. ಜೆಡಿಎಸ್ ನ ನಿಯಾಜ್ ಶೇಖ್ ಪಾಲಿಗೆ ಕೇವಲ 921 ಮತಗಳಷ್ಟೇ ಲಭ್ಯವಾಯಿತು.
ಸಿಂದಗಿಯಂತೆ ಹಾನಗಲ್ ನಲ್ಲೂ ಜೆಡಿಎಸ್ ಠೇವಣಿ ಕಳೆದುಕೊಂಡಿತು.
ಸಿಂದಗಿ ಪಲಿತಾಂಶ: ಸಿಂದಗಿ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31088 ಮತಗಳ ಭಾರೀ ಅಂತರದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ.
ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಹೀನಾಯ ಸೋಲು ಅನುಭವಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಐದನೇ ಬಾರಿ ಕ್ಷೇತ್ರದಲ್ಲಿ ಸತತ ಸೋಲು ಅನುಭವಿಸಿದೆ.
ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪಕ್ಷ ನಾಯಕರು ಕ್ಷೇತ್ರದಲ್ಲಿ ಹತ್ತಾರು ದಿನ ಠಿಕಾಣಿ ಹೂಡಿದ್ದರೂ ಜೆಡಿಎಸ್ ಪಕ್ಷ ಕ್ಷೇತ್ರವನ್ನು ಕಳೆದು ಕೊಂಡಿದೆ. ಜೊತೆಗೆ ಅಭ್ಯರ್ಥಿ ನಾಜಿಯಾ ಅಂಗಡಿ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದೆ.
ಬಿಜೆಪಿಯ ರಮೇಶ ಭೂಸನೂರ 93380 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಅಶೋಕ ಮನಗೂಳಿ 62292 ಮತಗಳನ್ನು ಪಡೆದರು. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ ಅವರು ಕೇವಲ 4321 ಮತಗಳನ್ನಷ್ಟೇ ಪಡೆದರು.
Uncategorized
Vivekananda-ವಿವೇಕಾನಂದ ಕಾಲೇಜಿನಲ್ಲಿ ಪ್ರೇರಣಾ 2026ನ ಸಮಾರೋಪ ಸಮಾರಂಭ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ನೇತೃತ್ವದಲ್ಲಿ ನಡೆದ ಭವಿಷ್ ಮತ್ತು ಯಶಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರೇರಣಾ’ 2026 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ. ಎಸ್. ಮಾತನಾಡಿದರು.

ಪುತ್ತೂರು: ಅಧ್ಯಾಪಕ ವೃತ್ತಿ ಕೇವಲ ಒಂದು ವೃತ್ತಿಯಾಗದೆ, ಅದು ನಮ್ಮ ಪ್ರವೃತ್ತಿಯಾಗಬೇಕು. ಆಗ ಮಾತ್ರ ಆ ಕ್ಷೇತ್ರದಲ್ಲಿ ನಾವು ಬೆಳೆಯಲು ಸಾಧ್ಯ. ಶಿಕ್ಷಣ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಆಂತರಿಕ ಶಕ್ತಿಯನ್ನು ಹೊರಗಿಡುವ ಒಂದು ಕೌಶಲ್ಯವಾಗಿದೆ. ಶಿಕ್ಷಣದ ಮೂಲಕ ಸಮಾಜವನ್ನು ಬದಲಾಯಿಸಲು ಸಾಧ್ಯ. ಇದರ ಮೂಲಕ ಭಾರತೀಯ ಸಮಾಜ ಶ್ರೇಷ್ಠವಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ. ಎಸ್. ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇದರ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ನೇತೃತ್ವದಲ್ಲಿ ನಡೆದ ಭವಿಷ್ ಮತ್ತು ಯಶಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ‘ಪ್ರೇರಣಾ’ 2026 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ ಎಂ ಮಾತನಾಡಿ, ಶಿಕ್ಷಕ ವೃತ್ತಿ ಎಂಬುದು ತುಂಬಾ ಪಾವಿತ್ರ‍್ಯದ ವೃತ್ತಿಯಾಗಿದೆ. ಸಮಾಜದಲ್ಲಿ ಡಾಕ್ಟರ್, ಇಂಜಿನಿಯರ್‌ಗಳು ವೃತ್ತಿಯಲ್ಲಿ ಸಾಧನೆ ಗೈದವರೆಲ್ಲರ ಬದುಕನ್ನು ರೂಪಿಸಲು ಶಿಕ್ಷಕಪಾತ್ರ ಮಹತ್ತರ ಎಂದು ನುಡಿದರು.
ವೇದಿಕೆಯಲ್ಲಿ ಭವಿಷ್ ಘಟಕದ ಮಾರ್ಗದರ್ಶಕ ಗಣಪತಿ ಹೆಗಡೆ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹಾಗೂ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ ಭಟ್. ಎಸ್ ಉಪಸ್ಥಿತರಿದ್ದರು.
Uncategorized
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ

ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿಯಾಗಿದ್ದ ಶೋಭಿತ್, ಶನಿವಾರ ಸಂಜೆ ಸ್ನೇಹಿತರೊಂದಿಗೆ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ನೀರುಪಾಲಾಗಿದ್ದರು.
ಉಜಿರೆ ಎಸ್‌ಡಿಎಂ ಕಾಲೇಜಿನ ಒಂಬತ್ತು ಮಂದಿ ವಿದ್ಯಾರ್ಥಿಗಳು ಶನಿವಾರ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರಕ್ಕಿಳಿದಿದ್ದು, ಇಬ್ಬರೂ ಅಲೆಗಳ ಸೆಳೆತಕ್ಕೆ ಸಿಲುಕಿದ್ದರು. ಈಜು ತಿಳಿದಿದ್ದ ಆಕಾಶ್ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ, ಶೋಭಿತ್ ನಾಪತ್ತೆಯಾಗಿದ್ದರು.
ವಿದ್ಯಾರ್ಥಿಗಾಗಿ ಶನಿವಾರ ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಎಸ್‌ಡಿಆರ್‌ಎಫ್, ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಭಾನುವಾರ ಮಧ್ಯಾಹ್ನ ಉಳ್ಳಾಲ ವಲಯದ ನಾಡದೋಣಿ ಹಾಗೂ ಗಿಲ್ನೆಟ್ ಮೀನುಗಾರರ ಸಂಘದ ಪ್ರಮುಖರಾದ ಆಸಿಫ್ ಎಂ.ಬಿ., ನಿಝಾಮ್ ಕೋಟೆಪುರ, ನಝೀರ್ ಕೋಡಿ, ರಝಾಕ್ ಕೋಟೆಪುರ, ಮುಸ್ತಾಫ ಕೋಟೆಪುರ ಮತ್ತು ಇರ್ಫಾನ್ ಕೋಟೆಪುರ ಅವರು ನಾಡದೋಣಿಯಲ್ಲಿ ಶೋಧ ನಡೆಸಿದರು. ಈ ವೇಳೆ ಉಚ್ಚಿಲ ಪೆರಿಬೈಲ್ ಸಮೀಪ ಸಮುದ್ರದಲ್ಲಿ ತೇಲುತ್ತಿದ್ದ ಶೋಭಿತ್ ಅವರ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ನಾಡದೋಣಿಯ ಮೂಲಕ ಕೋಟೆಪುರ ಸಮುದ್ರ ತೀರಕ್ಕೆ ತರಲಾಗಿದ್ದು, ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶೋಭಿತ್ ತನ್ನ ಪೋಷಕರ ಏಕೈಕ ಪುತ್ರನಾಗಿದ್ದ ಎಂದು ತಿಳಿದುಬಂದಿದೆ.
Uncategorized
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್‌ಫುಲ್ |
ಅ. 23ರಂದು ಚಿತ್ರ ಬಿಡುಗಡೆ

ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಮುಂಬೈನಲ್ಲಿ ನಡೆದ ಮೊದಲ ಎರಡು ಪ್ರೀಮಿಯರ್ ಪ್ರದರ್ಶನಗಳಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂಬೈನ ಮುಲುಂದ್ ಮತ್ತು ಕಲ್ಯಾಣ್‌ನಲ್ಲಿ ಶನಿವಾರ ನಡೆದ ಪ್ರದರ್ಶನಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎರಡೂ ಕಡೆ ಚಿತ್ರ ಹೌಸ್‌ಫುಲ್ ಪ್ರದರ್ಶನ ಕಂಡಿದೆ ಎಂದು ಚಿತ್ರತಂಡ ತಿಳಿಸಿದೆ.
ನಾಗನ ಹಿನ್ನೆಲೆಯನ್ನು ಆಧರಿಸಿದ ಮೊದಲ ತುಳು ಚಿತ್ರ ಎಂಬ ವಿಶೇಷತೆಯೊಂದಿಗೆ ಗಮನ ಸೆಳೆದಿರುವ ‘ಬನ’, ತನ್ನ ಕಥೆ ಮತ್ತು ಕಲಾವಿದರ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಚಿತ್ರದ ಕಥಾಹಂದರ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದು, ಯುವ ಕಲಾವಿದರ ಅಭಿನಯದ ಜತೆಗೆ ಹಿರಿಯ ಕಲಾವಿದರೂ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ ಎಂಬ ಮೆಚ್ಚುಗೆಯ ಮಾತುಗಳು ಪ್ರದರ್ಶನದ ಬಳಿಕ ಕೇಳಿಬಂದಿವೆ.
ಚಿತ್ರದಲ್ಲಿ ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು, ಕಥೆಯ ನಿರೂಪಣೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಭಿನ್ನ ಕಥಾವಸ್ತು ಹಾಗೂ ಕಲಾವಿದರ ಸಹಜ ಅಭಿನಯ ಚಿತ್ರಕ್ಕೆ ಮೆರುಗು ನೀಡಿದೆ. ತುಳು ಚಿತ್ರರಂಗದಲ್ಲಿ ನಾಗನ ಹಿನ್ನೆಲೆಯನ್ನು ಆಧರಿಸಿದ ಕಥಾವಸ್ತುವಿನೊಂದಿಗೆ ಮೂಡಿಬಂದಿರುವ ‘ಬನ’, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಮುಂಬೈ ತುಳು ಪ್ರೇಕ್ಷಕರಿಂದ ದೊರೆತ ಪ್ರತಿಕ್ರಿಯೆ ಚಿತ್ರತಂಡದ ಉತ್ಸಾಹವನ್ನು ಹೆಚ್ಚಿಸಿದೆ.
ಮುಂಬೈನಲ್ಲಿ ಚಿತ್ರದ ಪ್ರೀಮಿಯರ್ ಪ್ರದರ್ಶನಗಳ ಆಯೋಜನೆಯನ್ನು ಬಾಬಪ್ರಸಾದ್ ಅರಸ ಮತ್ತು ನಾಗಕಿರಣ್ ಶೆಟ್ಟಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಶನಿವಾರ ನಡೆದ ಎರಡೂ ಪ್ರದರ್ಶನಗಳಿಗೆ ಪ್ರೇಕ್ಷಕರ ಉತ್ತಮ ಸ್ಪಂದನೆ ದೊರೆತಿದ್ದು, ಹೌಸ್‌ಫುಲ್ ಪ್ರದರ್ಶನ ಚಿತ್ರತಂಡಕ್ಕೆ ಸಂತಸ ತಂದಿದೆ.
ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ತುಳುವರು ತುಳು ಭಾಷೆ ಮತ್ತು ಚಿತ್ರರಂಗದ ಬೆಳವಣಿಗೆಗೆ ನಿರಂತರ ಬೆಂಬಲ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ‘ಬನ’ ಚಿತ್ರಕ್ಕೆ ಮುಂಬೈನಲ್ಲಿ ದೊರೆತಿರುವ ಪ್ರತಿಕ್ರಿಯೆ ಚಿತ್ರ ಬಿಡುಗಡೆಗೂ ಮುನ್ನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಅ. 23ರಂದು ಚಿತ್ರ ಬಿಡುಗಡೆ
‘ಬನ’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮುಂಬೈನ ಪ್ರೀಮಿಯರ್ ಪ್ರದರ್ಶನಗಳಲ್ಲಿ ದೊರೆತಿರುವ ಮೆಚ್ಚುಗೆ, ಚಿತ್ರದ ಅಧಿಕೃತ ಬಿಡುಗಡೆಗೆ ಮುನ್ನ ಸಕಾರಾತ್ಮಕ ವಾತಾವರಣ ನಿರ್ಮಿಸಿದೆ. ವಿಭಿನ್ನ ಕಥಾಹಂದರ ಮತ್ತು ಕಲಾವಿದರ ಅಭಿನಯದ ಮೂಲಕ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿರುವ ‘ಬನ’ ಚಿತ್ರಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿಯ ಪ್ರತಿಕ್ರಿಯೆ ದೊರೆಯಲಿದೆ ಎಂಬ ಕುತೂಹಲ ತುಳು ಚಿತ್ರಪ್ರೇಮಿಗಳಲ್ಲಿದೆ.
-
Uncategorized20 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized23 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized22 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized23 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
ಅಂತರ ರಾಜ್ಯ6 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized22 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್‌ಫುಲ್ |
-
ಬಿಗ್ ನ್ಯೂಸ್6 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಸ್ಥಳೀಯ7 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ


















