ಅಪರಾಧ
ತೃಪ್ತಿ ಪಡಿಸದ ಪತ್ನಿಯನ್ನು ಕರಾವಳಿಗೆ ಟೂರು ಕರೆದೊಯ್ದು ಹತ್ಯೆ – ಚಾಣಕ್ಷ್ಯ ಪ್ಲ್ಯಾನ್ ಮಾಡಿದರೂ ಸಿಕ್ಕಿ ಹಾಕಿಕೊಂಡದ್ದು ಹೇಗೆ ? ಕೊಂದದ್ದು ಎಲ್ಲಿ?
ಪ್ರೀತಿಸಿ ಮದುವೆಯಾದ ಬಳಿಕ ದಾಂಪತ್ಯ ದಲ್ಲಿ ವೈಮನಸ್ಸು ಮೂಡಿ ಪತಿಯು ಪತ್ನಿಯನ್ನು ಸಿನಿಮೀಯ ಮಾದರಿಯಲ್ಲಿ ಹತ್ಯೆ ಮಾಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ. ಈ ಪ್ರಕರಣವನ್ನು ಅತ್ಯಂತ ಜಾಣ್ಮೆಯಿಂದ ತನಿಖೆ ನಡೆಸಿದ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂಲತ: ಬಿಹಾರ ಸೀತಾಮರ್ಹಿ ನಿವಾಸಿ ಪ್ರಸ್ತುತ ಮಡಿವಾಳದ ಮಾರುತಿ ಲೇಔಟ್ ನಲ್ಲಿ ವಾಸಿಸುತ್ತಿರುವ ಪೃಥ್ವಿರಾಜ್ (28) ಬಂಧಿತ ಆರೋಪಿ. ಇವರ ಪತ್ನಿ ಜ್ಯೋತಿ ಕುಮಾರಿ ಕೊಲೆಯಾದವರು. ಇವರು ಕೂಡ ಬಿಹಾರದವರೇ ಆಗಿದ್ದು ಸೀತಾಮರ್ಹಿ ಗ್ರಾಮದ ಪಕ್ಕದ ಗ್ರಾಮದವರು. ಬಿಎ ಪದವಿಧರೆ.
ಪೃಥ್ವಿರಾಜ್ ಬೆಂಗಳೂರಿನಲ್ಲಿ ಇಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟದ ಅಂಗಡಿ ಇಟ್ಟುಕೊಂಡಿದ್ದ. ಒಂಬತ್ತು ತಿಂಗಳ ಹಿಂದೆ ದಂಪತಿಗೆ ವಿವಾಹವಾಗಿತ್ತು.
ಪರಸ್ಪರ ಪ್ರೀತಿಸಿ ಹಿರಿಯರ ಒಪ್ಪಿಗೆ ಪಡೆದು ಇವರು ಮದುವೆ ಆಗಿದ್ದರು. ಬೆಂಗಳೂರಿಗೆ
ನೆಲೆಸಿದ ಮೇಲೆ ಜ್ಯೋತಿ ಯುಪಿಎಸ್ಸಿ ಪರೀಕ್ಷೆ ಬರೆದರಾದರು ಫೇಲ್ ಆಗಿದ್ದರು.
ನಾಪತ್ತೆ ಪ್ರಕರಣ:
ಪೃಥ್ವಿರಾಜ್ ಆಗಸ್ಟ್ 5 ರಂದು ಮಡಿವಾಳ ಪೊಲೀಸ್ ಠಾಣೆಯಲ್ಲಿ ತನ್ನ ಪತ್ನಿ ಕಾಣೆಯಾಗಿರುವ ಬಗ್ಗೆ ಮಿಸ್ಸಿಂಗ್ ಕಂಪ್ಲೇಟ್ ದಾಖಲಿಸಿದ. ಆಗಸ್ಟ್ 3 ರಿಂದ ತನ್ನ ಹೆಂಡತಿ ಕಾಣೆಯಾಗಿರುವುದಾಗಿ ತಿಳಿಸಿದ್ದ. ಕಳೆದೊಂದು ವಾರದಿಂದ ತವರು ಮನೆಗೆ ಹೋಗಲು ಪೀಡಿಸುತ್ತಿದ್ದಳು. ನಾನು ಕೆಲಸದ ಒತ್ತಡದಿಂದ ಹೋಗಲು ಒಪ್ಪಿರಲಿಲ್ಲ. ಈಗ ಆಕೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದ.
ಸಂದೇಹ
ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದಾಗ ದಂಪತಿ ಆಗಾಗ್ಗೆ ಜಗಳವಾಡುತ್ತಿದ್ದರು ಎಂಬ ವಿಚಾರ ಇವರಿಬ್ಬರ ಆತ್ಮೀಯರಿಂದ ಪೊಲೀಸರಿಗೆ ತಿಳಿದು ಬಂದಿತು. ದಂಪತಿ ನಡುವಿನ ಜಗಳಗಳ ಬಗ್ಗೆ ಪೃಥ್ವಿರಾಜನನ್ನು ಕೇಳಿದಾಗ ಹೇಳಿಕೆಯಲ್ಲಿ ಆಗಾಗ್ಗೆ ತನ್ನ ಕಥೆಯನ್ನು ಬದಲಾಯಿಸುತ್ತಿದ್ದನು. ಇದ್ದರಿಂದ ಪೊಲೀಸರಿಗೆ ಈತನ ವಿರುದ್ದವೇ ಸಂದೇಹ ಉಂಟಾಯಿತು.
ಸುಳಿವು ನೀಡಿದ ಸಿಸಿಟಿವಿ
ಅ. 1 ರಂದು ದಂಪತಿ ಹಾಗೂ ಅವರ ಸ್ನೇಹಿತ ಒಟ್ಟು ಮೂವರು ಕಾರನ್ನೇರಿ ತೆರಳುವ ದೃಶ್ಯವು ಸಿಸಿಟಿವಿ ಕ್ಯಾಮೆರಾವೊಂದರಲ್ಲಿ ಸೆರೆಯಾಗಿತ್ತು. ವಾಪಸ್ ಬರುವಾಗ ಇಬ್ಬರೇ ಬಂದಿದ್ದು ಸಹ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಆದರೇ ಆ 1 ರಿಂದ 3 ರವರೆಗೆ ಜ್ಯೋತಿಯ ಹಾಗೂ ಪೃಥ್ವಿ ರಾಜ್ ಮೊಬೈಲ್ ಲೊಕೇಶನಗ ಬೆಂಗಳೂರಿನ ಅವರ ನಿವಾಸದಲ್ಲೆ ತೋರಿಸುತಿತ್ತು. ಇಬ್ಬರು ಮೊಬೈಲ್ ಬಿಟ್ಟು ಹೋದದ್ದು ಎಲ್ಲಿಗೆ? ಬರುವಾಗ ಜ್ಯೋತಿ ಇರದಿದ್ದದ್ದು ಪೊಲೀಸರ ಅನುಮಾನ ಪೃಥ್ವಿ ರಾಜ್ ಕಡೆ ಹೊರಳಿತ್ತು. ಹೀಗಾಗಿ
ಪೃಥ್ವಿರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ.
ಸೆಕ್ಸ್ ನಿರಾಕರಣೆ ಕೊಲೆಗೆ ಕಾರಣ
ಜ್ಯೋತಿ ಪದವೀಧರೆಯಾಗಿದ್ದು ಈತ ಅಷ್ಟು ಕಲಿತಿರಲಿಲ್ಲ. ಇದು ಅವರೊಳಗಡೆ ವೈಮನಸ್ಸು ಉಂಟಾಗಲು ಕಾರಣವಾಗಿತ್ತು. ಅಲ್ಲದೇ ಮದುವೆಗಿಂತ ಮೊದಲು ಆಕೆ ತನ್ನ ವಯಸ್ಸು ಮರೆಮಾಚಿ 38 ವರ್ಷ ವಾಗಿದ್ದರೂ ತನಗೆ 28 ವರ್ಷ ಎಂದು ಸುಳ್ಳು ಹೇಳಿದ್ದಳು. ವಿವಾಹದ ಬಳಿಕ ಜ್ಯೋತಿ ಕುಮಾರಿ ಪೃಥ್ವಿರಾಜ್ನೊಂದಿಗೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿದಳು ಎಂದು ಪೃಥ್ವಿ ರಾಜ್ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.
ಅಕ್ರಮ ಸಂಬಂಧ
ಆಕೆ ಸದಾ ಫೋನಿನಲ್ಲಿ ಮಾತನಾಡುತ್ತಿದ್ದಳು. ಇದ್ದರಿಂದ ತಾನು ಬೇಸರಗೊಂಡಿದ್ದೆ ಅವಳಿಗೆ ಪುಟ್ಟರಾಜ್ ಎಂಬ ಯುವಕನ ಪರಿಚಯವಾಗಿದೆ. ಅವರಿಬ್ಬರ ನಡುವೆ ಪ್ರೀತಿ ಮೂಡಿತ್ತು. ಆಕೆ ಅವನೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಳು ಎಂದು ಪೃಥ್ವಿರಾಜ್ ಅನುಮಾನಿಸಿದ್ದ.
ಕೊಲ್ಲಲು ಟೂರ್
ಹೀಗಾಗಿ ಆಕೆಯನ್ನು ಬಿಹಾರದ ಸ್ನೇಹಿತ ಸಮೀರ್ಕುಮಾರ್ ಎಂಬಾತನೊಂದಿಗೆ ಸೇರಿಕೊಂಡು ಹತ್ಯೆ ಮಾಡಲು ಸಂಚು ರೂಪಿಸಿದ್ದಾನೆ. ಅದಕ್ಕೊಂದು ಪ್ಲ್ಯಾನ್ ಸಿದ್ದಪಡಿಸಿದ್ದಾನೆ. ಟೂರಿಗೆ ಕರಕೊಂಡು ಹೋಗಿ ಅಲ್ಲಿ ಎಲ್ಲಿಯಾದರೂ ಹರಿಯುವ ನೀರಿಗೂ ಪ್ರಪಾತಕ್ಕೂ ತಳ್ಳಿ ಆಕಸ್ಮಿಕ ಸಾವು ಎಂದು ಬಿಂಬಿಸುವುದು ಅವರಿಬ್ಬರ ಯೋಜನೆಯಾಗಿತ್ತು. ಅದರಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಸಕ್ಕೆ ಯೋಜನೆ ಸಿದ್ದಪಡಿಸಿ ಜ್ಯೋತಿಯನ್ನು ಕೂಡ ಒಪ್ಪಿಸಿದ್ದಾರೆ.
ಆಗಸ್ಟ್ 1ರಂದು ಮಲ್ಪೆಯ ಪ್ರವಾಸಕ್ಕೆ ಮೂವರೂ ಜೂಮ್ ಕಾರಿನಲ್ಲಿ ತೆರಳಿದ್ದರು.ಪ್ಲಾನ್ ಮಾಡಿದಂತೆ ಮನೆಯಲ್ಲೇ ಪ್ರಥ್ವಿರಾಜ ಮೊಬೈಲ್ ಬಿಟ್ಟು ಹೆಂಡತಿಯ ಮೊಬೈಲ್ ಕೂಡ ಮನೆಯಲ್ಲೇ ಬಿಟ್ಟು ಟ್ರಿಪ್ಗೆ ಕರೆದುಕೊಂಡು ಹೋಗಿದ್ದ. ಉಡುಪಿಯ ಮಲ್ಪೆ ಬೀಚ್ ಗೆ ಆಗಸ್ಟ್ 2 ರಂದು ಹೋಗಿದ್ದ ವೇಳೆ ಸುಮುದ್ರದಲ್ಲಿ ಮುಳುಗಿಸಿ ಕೊಲೆ ಮಾಡಿ ನ್ಯಾಚುರಲ್ ಡೆತ್ ಅಂತ ಮಾಡ್ಬೇಕು ಯೋಚನೆ ಮಾಡಿದ್ದ. ಅಲ್ಲಿ ಆಳ ಸಮುದ್ರಕ್ಕೆ ತಳ್ಳಿ ಕೊಲೆ ಮಾಡುವ ಯೋಜನೆಯಿತ್ತು. ಆದರೆ, ಆಗಸ್ಟ್ 2ರಂದು ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದರ ಪರಿಣಾಮ ಸಮುದ್ರಕ್ಕೆ ಇಳಿಯುವುದಕ್ಕೆ ನಿರ್ಬಂಧವಿತ್ತು. ಹೀಗಾಗಿ ಆತನ ಸ್ಕೆಚ್ ಫ್ಲಾಫ್ ಆಗಿತ್ತು ಎನ್ನಲಾಗಿದೆ.
ತಕ್ಷಣವೇ ತಮ್ಮ ಯೋಜನೆ ಬದಲಾಯಿಸಿ ಬೆಂಗಳೂರಿಗೆ ವಾಪಸ್ ಬರುವಾಗ ಶಿರಾಡಿ ಘಾಟ್ನ ರಾಜಘಟ್ಟ ಎಂಬಲ್ಲಿ ದುಪಟ್ಟಾದಿಂದ ಆಕೆಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಮೃತದೇಹವನ್ನು ಅರಣ್ಯ ಪ್ರದೇಶಕ್ಕೆ ಎಸೆದು ಸುಳಿವು ಸಿಗದಂತೆ ಮಾಡಲಾಗಿತ್ತು. ಬೆಂಗಳೂರಿಗೆ ವಾಪಸ್ ಬಂದು ಪತ್ನಿ ಕಾಣೆಯಾಗಿದ್ದಾರೆಂದು ಪೃಥ್ವಿರಾಜ್ ದೂರು ನೀಡಿದ್ದ. ಸಮೀರ್ಕುಮಾರ್ ತಲೆಮರೆಸಿಕೊಂಡಿದ್ದಾನೆ’ ಎಂದು ಮೂಲಗಳು ಹೇಳಿವೆ.
ಅಪರಾಧ
Excise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ನ ಫಾಸ್ಟ್ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್ಮೆಂಟ್ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್ಮೆಂಟ್ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅಂತರ ರಾಜ್ಯ
FIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ: ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ‘ಬಿಗ್ ಬಾಸ್ ತಮಿಳು ಸೀಸನ್-8’ರ ವಿಜೇತ ಮುತ್ತುಕುಮಾರನ್ ಜಗದೀಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ಫ್ಲುಯೆನ್ಸರ್ ವಹಿದಾ ಅಖ್ದರ್ (Wahidha Akdhar) ನೀಡಿದ ದೂರಿನ ಆಧಾರದಲ್ಲಿ ಚೆನ್ನೈನ ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 69ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮುತ್ತುಕುಮಾರನ್ ಅವರಿಗೆ ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದೇ ವೇಳೆ, ತಮ್ಮ ವಿರುದ್ಧ ದೂರು ನೀಡಿರುವ ವಹಿದಾ ವಿರುದ್ಧವೇ ಮುತ್ತುಕುಮಾರನ್ ಪ್ರತಿದೂರು ದಾಖಲಿಸಿದ್ದಾರೆ. ವಹಿದಾ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಏನಿದು ಪ್ರಕರಣ?
‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿಯ ಪ್ರಕಾರ, ಇನ್ಸ್ಟಾಗ್ರಾಮ್ ಮೂಲಕ ಮುತ್ತುಕುಮಾರನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು ಎಂದು ವಹಿದಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ದೈಹಿಕ ಸಂಪರ್ಕ ಬೆಳೆಸುವ ಮೊದಲು ಮುತ್ತುಕುಮಾರನ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬುದು ವಹಿದಾ ಅವರ ಆರೋಪವಾಗಿದೆ.
ಈ ಸಂಬಂಧ ವಹಿದಾ ಮೊದಲು ಚೆನ್ನೈ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಬಳಿಕ ದೂರನ್ನು ವಿರುಗಂಬಾಕ್ಕಂ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ, ಅತ್ಯಾಚಾರದ ವ್ಯಾಪ್ತಿಗೆ ಬಾರದಿದ್ದರೂ ಮದುವೆಯಾಗುವ ಸುಳ್ಳು ಭರವಸೆ ಸೇರಿದಂತೆ ವಂಚನೆಯ ಮಾರ್ಗಗಳ ಮೂಲಕ ದೈಹಿಕ ಸಂಪರ್ಕ ಬೆಳೆಸುವುದಕ್ಕೆ ಸಂಬಂಧಿಸಿದ ಅಪರಾಧವನ್ನು ಪರಿಗಣಿಸಲಾಗುತ್ತದೆ.
ನವೆಂಬರ್ 9ರಂದು ವಹಿದಾ ಅವರು ಮುತ್ತುಕುಮಾರನ್ ಜೊತೆಗಿನ ಸಂಬಂಧದ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡ ಬಳಿಕ ಈ ವಿಚಾರ ಬಹಿರಂಗವಾಗಿತ್ತು. ಇಬ್ಬರೂ ಜೊತೆಯಾಗಿರುವ ವಿಡಿಯೊವನ್ನು ಪ್ರಕಟಿಸಿದ್ದ ಅವರು, ಮುತ್ತುಕುಮಾರನ್ ನೀಡಿದ್ದ ಭರವಸೆಗಳ ಬಗ್ಗೆ ಪ್ರಶ್ನಿಸಿದ್ದರು. ತಮ್ಮ ಪೋಸ್ಟ್ನಲ್ಲಿ, “ನೀನು ಹೇಳಿದ್ದೆಲ್ಲವೂ ನಿನಗೆ ಕೇವಲ ತಮಾಷೆಯಾಗಿತ್ತು” ಎಂದು ಬರೆದುಕೊಂಡಿದ್ದರು.
ಇದರ ಬೆನ್ನಲ್ಲೇ ವಹಿದಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿದ್ದವು. ಈ ಪ್ರಕರಣದ ಕುರಿತು ಹಿರಿಯ ಗೀತರಚನೆಕಾರ ತಾಮರೈ ಕೂಡ ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿದ್ದು, ಮುತ್ತುಕುಮಾರನ್ ಅವರನ್ನು ಟೀಕಿಸಿ, ಆರೋಪಗಳ ಬಗ್ಗೆ ತಮ್ಮ ಕಡೆಯ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್-8’ರಲ್ಲಿ ಸ್ಪರ್ಧಿಸುವ ಮೂಲಕ ಮುತ್ತುಕುಮಾರನ್ ಜನಪ್ರಿಯತೆ ಗಳಿಸಿದ್ದರು. 2025ರ ಜನವರಿ 19ರಂದು ನಡೆದ ಫಿನಾಲೆಯಲ್ಲಿ ಅವರು ಕಾರ್ಯಕ್ರಮದ ವಿಜೇತರಾಗಿ ಹೊರಹೊಮ್ಮಿದ್ದರು.
ನಟ ವಿಜಯ್ ಸೇತುಪತಿ ನಿರೂಪಣೆಯ ‘ಬಿಗ್ ಬಾಸ್ ತಮಿಳು ಸೀಸನ್ 8’ರಲ್ಲಿ ಭಾಗವಹಿಸುವ ಮೂಲಕ ಮುತ್ತುಕುಮಾರನ್ ಅಪಾರ ಜನಪ್ರಿಯತೆ ಗಳಿಸಿದ್ದರು. ಜನವರಿ 19, 2025ರಂದು ನಡೆದ ಫಿನಾಲೆಯಲ್ಲಿ ಅವರು ಶೋನ ವಿಜೇತರಾಗಿ ಹೊರಹೊಮ್ಮಿದ್ದರು.
-
Uncategorized18 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ23 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಕ್ರೈಂ5 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಅಂತರ ರಾಜ್ಯ23 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ23 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ23 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ನಿಧನ ವಾರ್ತೆ5 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಬಿಗ್ ನ್ಯೂಸ್5 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
















