ರಾಷ್ಟ್ರೀಯ
Airtel Plans : ಜಿಯೋ ಇಂಡಿಪೆಂಡೆನ್ಸ್ ಪ್ಯಾಕ್ ಗೆ ಏರ್ʼಟೆಲ್ ನಿಂದ ಸಡ್ಡು – ಎರಡು ಹೊಸ ಪ್ಯಾಕ್ ಬಿಡುಗಡೆ | ದರ ಸಮರದಲ್ಲಿ ಗ್ರಾಹಕನಿಗೆ ಲಾಭ – ಹೊಸ ಪ್ಲ್ಯಾನ್ ನಲ್ಲಿ ಏನೇನಿದೆ ಗೊತ್ತಾ?
ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ರಾರಾಜಿಸುತ್ತಿರುವ ಎರಡು ಹೆಸರುಗಳೇಂದರೆ ಜಿಯೋ ಹಾಗೂ ಏರ್‌ಟೆಲ್ ಇವರ ಜಿದ್ದಾಜಿದ್ದಿನ ಪೈಪೋಟಿಗೆ ಈಗ ಮತ್ತೊಮ್ಮೆ ವೇದಿಕೆ ಸಿದ್ದವಾಗಿದೆ. ಈ ಬಾರಿಯ ಭಾರತದ ಸ್ವಾತಂತ್ರ್ಯೋತ್ಸವದ ಸಂದರ್ಭ ಜಿಯೋ ಹಲವು ರಿಚಾರ್ಜ್ ಆಫರ್ ಗಳನ್ನು ತನ್ನ ಗ್ರಾಹಕರಿಗೆ ನೀಡಿತ್ತು . ಇದೀಗ ಇದಕ್ಕೆ ಸಡ್ಡುಹೊಡೆಯಲು ನಿರ್ಧರಿಸಿರುವ ಏರ್ ಟೆಲ್ ಹೊಸ ಪ್ಲ್ಯಾನ್ ಲಾಂಚ್ (Airtel Plan) ಮಾಡಿದೆ . ಹೀಗಾಗಿ ಟೆಲಿಕಾಂ ವಲಯದಲ್ಲಿ ಇದೀಗ ದರ ಪೈಪೋಟಿಯ ಸಮಯ
ಜಿಯೋಗೆ ವಿರುದ್ಧವಾಗಿ ಏರ್‌ಟೆಲ್ ಎರಡು ಭರ್ಜರಿ ಪ್ರೀಪೇಡ್ ರಿಚಾರ್ಜ್ ಯೋಜನೆಗಳನ್ನು( airtel recharge Prepaid) ಇದೀಗ ಬಿಡುಗಡೆ ಮಾಡಿದೆ. 1.5GB ದೈನಂದಿನ ಹೈ-ಸ್ಪೀಡ್ ಡೇಟಾ ಪ್ರೀಪೇಡ್ ಯೋಜನೆಗಳ ದರದಲ್ಲಿ ಬದಲಾವಣೆ ಮಾಡಿರುವ ಏರ್ ಟೆಲ್ ಈ ಮೂಲ ಜಿಯೋ ಗೆ ಠಕ್ಕರ್ ಕೊಡಲು ಮುಂದಾಗಿದೆ. ಭಾರತದಲ್ಲಿ ಅತೀ ಹೆಚ್ಚು ಮಾರಾಟವಾಗುವ ಪ್ಲ್ಯಾನ್ 1.5GB ಪ್ರತಿ ದಿನದ ಪ್ಯಾಕ್. ಇದಕ್ಕಾಗಿ 519 ರೂ. ಮತ್ತು 779 ರೂ.ಗಳ ಎರಡು ಹೊಸ ಯೋಜನೆಗಳನ್ನು ಏರ್ʼಟೆಲ್ ಪರಿಚಯಿಸಿದೆ.
ಏರ್‌ಟೆಲ್ ಬಿಡುಗಡೆ ಮಾಡಿರುವ ಈ ಎರಡು ಪ್ರಿಪೇಯ್ಡ್ ಯೋಜನೆಗಳಲ್ಲಿ ಬಳಕೆದಾರರಿಗೆ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 1.5GB ದೈನಂದಿನ ಡೇಟಾ, ದಿನಕ್ಕೆ 100 SMS ಆಫರ್ ಒದಗಿಸಿದೆ. ಇದರ ಜತೆಗೆ ಇನ್ನು ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆಯಲು ಅವಕಾಶ ಕಲ್ಪಿಸಿದೆ.
519 ರೂ. ಪ್ಯಾಕ್
519 ರೂ.ಗಳ ಹೊಸ ದೈನಂದಿಕ ಪ್ರೀಪೇಯ್ಡ್ ಪ್ಯಾಕ್ ನಲ್ಲಿ ಈ ಕೆಳಗಿನ ಸೌಲಭ್ಯ ನೀಡಲಾಗಿದೆ.
ಅನಿಯಮಿತ ಉಚಿತ ಕರೆಗಳು, (Airtel Call)
ಪ್ರತಿದಿನ 100 ಉಚಿತ ಎಸ್ಎಮ್ಎಸ್
ಪ್ರತಿದಿನ 1.5 GB ಡೇಟಾವನ್ನು ಒದಗಿಸಲಿದೆ.
ಯೋಜನೆಯ ವ್ಯಾಲಿಡಿಟಿ : 60 ದಿನ
ಗ್ರಾಹಕರಿಗೆ ಒಟ್ಟು 90 GB ಡೇಟಾ ಸಿಗಲಿದೆ.
ಇದಲ್ಲದೆ 3 ತಿಂಗಳವರೆಗೆ ಅಪೊಲೊ 24|7 ಚಂದಾದಾರಿಕೆ, 1 ವರ್ಷದವರೆಗೆ ಶಾ ಅಕಾಡೆಮಿಯೊಂದಿಗೆ ಅಪ್‌ಸ್ಕಿಲ್‌ನಿಂದ ಉಚಿತ ಆನ್‌ಲೈನ್ ಕೋರ್ಸ್‌ಗಳು, ಉಚಿತ ಹಲ್ಯೂಟ್ಯೂನ್, ಉಚಿತ Wynk ಮ್ಯೂಸಿಕ್ ಮತ್ತು FASTag ನಲ್ಲಿ ರೂ.100 ಕ್ಯಾಶ್‌ಬ್ಯಾಕ್ ನಂತಹ ಪ್ರಯೋಜನಗಳು ಏರ್‌ಟೆಲ್ ಗ್ರಾಹಕರಿಗೆ ದೊರೆಯಲಿವೆ.
779 ರೂ. ಪ್ಯಾಕ್
779 ರೂ. ದೈನಂದಿಕ ಪ್ರೀಪೇಯ್ಡ್ ಯೋಜನೆಯ ಸೌಲಭ್ಯಗಳು
ಅನಿಯಮಿತ ಉಚಿತ ಕರೆಗಳು,
ಪ್ರತಿದಿನ 100 ಉಚಿತ ಎಸ್ಎಮ್ಎಸ್
ಪ್ರತಿದಿನ 1.5 GB ಡೇಟಾ
ಯೋಜನೆಯ ವ್ಯಾಲಿಡಿಟಿ 90 ದಿನ
ಏರ್‌ಟೆಲ್ ಗ್ರಾಹಕರಿಗೆ ಒಟ್ಟು 135 GB ಡೇಟಾ ಸಿಗಲಿದೆ.
ಈ ಯೋಜನೆಯಲ್ಲಿಯೂ ಸಹ 3 ತಿಂಗಳವರೆಗೆ ಅಪೊಲೊ 24|7 ಚಂದಾದಾರಿಕೆ, 1 ವರ್ಷದವರೆಗೆ ಶಾ ಅಕಾಡೆಮಿಯೊಂದಿಗೆ ಅಪ್‌ಸ್ಕಿಲ್‌ನಿಂದ ಉಚಿತ ಆನ್‌ಲೈನ್ ಕೋರ್ಸ್‌ಗಳು, ಉಚಿತ ಹಲ್ಯೂಟ್ಯೂನ್, ಉಚಿತ Wynk ಮ್ಯೂಸಿಕ್ ಮತ್ತು FASTag ನಲ್ಲಿ ರೂ.100 ಕ್ಯಾಶ್‌ಬ್ಯಾಕ್ ನಂತಹ ಪ್ರಯೋಜನಗಳು ಏರ್‌ಟೆಲ್ ಗ್ರಾಹಕರಿಗೆ ದೊರೆಯಲಿವೆ.
ಈಗಾಗಲೇ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಗೂ ಏರ್‌ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್‌ನಲ್ಲಿ ಈ ಎರಡೂ ಹೊಸ ಏರ್‌ಟೆಲ್ ಯೋಜನೆಗಳನ್ನು ಪಟ್ಟಿ ಮಾಡಲಾಗಿದೆ
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಮಂಗಳೂರು16 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized11 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening


















