ರಾಷ್ಟ್ರೀಯ
ATM Card ಬಳಕೆದಾರರಿಗೆ ಬ್ಯಾಂಕ್‍ಗಳು ಬಿಗ್ ಶಾಕ್ – ಹಣ ವಿತ್ ಡ್ರಾ ಇನ್ನಷ್ಟು ದುಬಾರಿ
ನವದೆಹಲಿ: (New Delhi: ಆ 18:) ಎಟಿಎಂ ಕಾರ್ಡ್ ಬಳಕೆದಾರರಿಗೆ ಬ್ಯಾಂಕ್‍ಗಳು (Bank) ಬಿಗ್ ಶಾಕ್ ನೀಡಿವೆ. ಎಟಿಎಂ(ATM) ವಿತ್‌ಡ್ರಾ ಹಾಗೂ ಟ್ರಾನ್ಸಕ್ಷನ್ ಗಳ ಮೇಲೆ ಹೆಚ್ಚುವರಿ ಶುಲ್ಕ ವಸೂಲಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (rbi) ಸೂಚನೆ ಮೇರೆಗೆ ಬ್ಯಾಂಕ್‍ಗಳು ಮುಂದಾಗಿವೆ. ಆಗಸ್ಟ್ 1 ರಿಂದ ಈ ಹೊಸ ಶುಲ್ಕ ವಸೂಲಿ ಜಾರಿಗೆ ಬಂದಿದೆ.
ಮೆಟ್ರೋ ಪಾಲಿಟಿನ್ ಪ್ರದೇಶಗಳನ್ನು ಹೊರತು ಪಡಿಸಿ ಉಳಿದ ಕಡೆ, ಬೇರೆ ಬ್ಯಾಂಕಿನ ಎಟಿಎಂ ಬಳಸಿ ತಿಂಗಳಿನಲ್ಲಿ ಐದು ಟ್ರಾನ್ಸಾಕ್ಷನ್‍ಗಳ ಮಿತಿಯನ್ನು ದಾಟಿದರೇ ಪ್ರತಿ ವಿತ್‌ಡ್ರಾಗೆ ಇಂಟರ್‌ಚೇಂಜ್ ಶುಲ್ಕ 17 ರೂಪಾಯಿ ಪಾವತಿಸ ಬೇಕಾಗುತ್ತದೆ. ಇನ್ನೊಂದು ಬ್ಯಾಂಕಿನ ಎಟಿಎಂನಿಂದ 5 ಕ್ಕಿಂತಲೂ ಹೆಚ್ಚಿನ ಬಾರಿ ಹಣ ತೆಗೆದರೆ ಇಂಟರ್‌ಚೇಂಜ್ ಶುಲ್ಕ ಅನ್ವಯವಾಗುತ್ತದೆ. ಮೆಟ್ರೂಪಾಲಿಟಿನ್ ನಗರಗಳಲ್ಲಿ ಈ ಮಿತಿ 3 ಟ್ರಾನ್ಸಕ್ಷನ್ ಗೆ ಸೀಮಿತ
ಹಣ ವಿತ್ ಡ್ರಾ ಹೊರತು ಪಡಿಸಿ ಮಾಡುವ ಉಳಿದ ಪ್ರತಿ ನಾನ್ ಫೈನಾನ್ಶಿಯಲ್ ಟ್ರಾನ್ಸಾಕ್ಷನ್‍ಗಳ ಮೇಲೆ 6 ರೂಪಾಯಿ ಶುಲ್ಕವನ್ನು ಬ್ಯಾಂಕ್‍ಗಳು ಇನ್ನು ಮುಂದೆ ವಸೂಲಿ ಮಾಡಲಿವೆ. ಇದು ಈ ಹಿಂದೆ 5 ರೂಪಾಯಿ ಆಗಿತ್ತು .ಆಗಷ್ಟ್ ನಿಂದ 1 ರೂ ಹೆಚ್ಚಳವಾಗಿದೆ.
ಕಳೆದ ವರ್ಷ ಜೂನ್‍ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಮಾಸಿಕ ಉಚಿತ ವಹಿವಾಟು ಮಿತಿಗಿಂತ ಹೆಚ್ಚು ವಿತ್‌ಡ್ರಾ ಮಾಡಿದರೆ ಎಟಿಎಂನಲ್ಲಿ ಪ್ರತಿ ವಹಿವಾಟಿಗೆ 21 ರೂಪಾಯಿ ಶುಲ್ಕ ವಿಧಿಸಲು ಬ್ಯಾಂಕ್‍ಗಳಿಗೆ ಅನುಮತಿಸಲಾಗಿದೆ, ಇದು 2022ರ ಜನವರಿ 1 ರಿಂದ ಜಾರಿಗೆ ಬಂದಿತ್ತು
ಎಟಿಎಂ ಸ್ಥಾಪನೆ, ನಿರ್ವಹಣಾ ವೆಚ್ಚ ಹೆಚ್ಚಾಗಿದೆ. ಹೀಗಾಗಿ ಇದರ ಭಾರವನ್ನು ಹೆಚ್ಚುವರಿ ಶುಲ್ಕ ವಿಧಿಸುವ ಮೂಲಕ ಗ್ರಾಹಕರ ಮೇಲೆ ಹಾಕಲು ಬ್ಯಾಂಕ್‍ಗಳು ಮುಂದಾಗಿವೆ. ಈ ಮೊದಲು, ಅಂತಹ ಪ್ರತಿಯೊಂದು ವಹಿವಾಟಿಗೆ 20 ರೂಪಾಯಿ ಶುಲ್ಕ ವಿಧಿಸಲು ಬ್ಯಾಂಕ್‍ಗಳಿಗೆ ಅವಕಾಶವಿತ್ತು.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಮಂಗಳೂರು15 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ20 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ20 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು22 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ16 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
Uncategorized10 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು


















