Connect with us

ಮಂಗಳೂರು

ಸುರತ್ಕಲ್‌ : ರೈಲು ನಿಲ್ದಾಣದಲ್ಲಿ ಮಚ್ಚು ಬೀಸಿ ಯುವಕನ ಅಟಾಟೋಪ – ಒಬ್ಬರಿಗೆ ಗಾಯ

Published

on

Ad Widget

Ad Widget

Ad Widget

Ad Widget

ಮಂಗಳೂರು,( Mangalore  ಆಗಸ್ಟ್ 19J  ಮಂಗಳೂರಿನ (Mangalore) ಹೊರವಲಯದ ಸುರತ್ಕಲ್‌ ರೈಲು ಸ್ಟೇಷನ್‌ ಬಳಿ ಯುವಕನೊಬ್ಬ ಕತ್ತಿ ಹಿಡಿದು ಅಟಾಟೋಪ  ಮೆರೆದು ಸಾರ್ವಜನಿಕರನ್ನು ಭಯಭೀತಗೊಳಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಾರ್ವಜನಿಕರ ಪೈಕಿ  ಒಬ್ಬರಿಗೆ ಬೆದರಿಕೆ ಒಡ್ಡಿದ್ದಾನೆ.   ಹಾಗೂ  ಇನ್ನೊಬ್ಬರಿಗೆ ಕತ್ತಿ ಬೀಸಿ ಗಾಯಗೊಳಿಸಿದ್ದಾನೆ.   ಈತನ ವರ್ತನೆ  ಸಾರ್ವಜನಿಕ ವಲಯದಲ್ಲಿ ಭೀತಿಗೆ ಕಾರಣವಾಗಿತ್ತು.

Ad Widget

Ad Widget

Ad Widget

Ad Widget

ಬಳಿಕ ಸಾರ್ವಜನಿಕರು ಆ ಯುವಕನನ್ನು ಹಿಡಿದು ಎರಡೇಟು ಬಿಗಿದು  ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆತ ಜಾರ್ಖಂಡ್‌ ಮೂಲದವನೆಂದು ಹಾಗೂ  ಆತನ ಹೆಸರು ಅತುಲ್ ಕಲ್ಲು (30)   ಎಂದು ತಿಳಿದು ಬಂದಿದೆ. ಈತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ, ರೈಲು ಸುರತ್ಕಲ್‌ ರೈಲು ನಿಲ್ದಾಣದ  ಬಳಿ ತಲುಪುತ್ತಲೇ ಅಲ್ಲಿ ಇದ್ದಕ್ಕಿದಂತೆ ಇಳಿದಿದ್ದಾನೆ.

Ad Widget

Ad Widget alt="Ad Widget"/>

Ad Widget

ಆ ಬಳಿಕ ಮಾನಸಿಕ ಸ್ಥಿಮಿತ ಕಳಕೊಂಡವರಂತೆ  ಅಲ್ಲಿದ್ದ  ಸಾರ್ವಜನಿಕರ ಜತೆ ಉದ್ದಟತನದಿಂದ ವರ್ತಿಸಿದ್ದಾನೆ. ಸ್ಥಳೀಯ ನಿವಾಸಿ ವೆಂಕಪ್ಪ ಎಂಬವರನ್ನು ಬೆದರಿಸಿ ಅವರ ಕೈ ಯಿಂದ ಕತ್ತಿಯನ್ನು ಎಳಕೊಂಡಿದ್ದಾನೆ. ಬಳಿಕ ಕತ್ತಿಯನ್ನು ಜಳಪಿಸುತ್ತ ಭಯ ಸೃಷ್ಟಿಸಿದ್ದಾನ . ಅಲ್ಲದೇ, ಗ್ಯಾರೇಜ್‌ ನಲ್ಲಿ ಕೆಲಸ ಮಾಡುವ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು  ಅವರಿಗೆ ಗಾಯವಾಗಿದೆ . ಅವರು ಅಪಾಯದಿಂ ಪಾರಾಗಿರುವುದ್ದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

Watch Video: ಭೀಕರ ಕಾದಾಟದಲ್ಲಿ ಮೊಸಳೆಯನ್ನು ಸೋಲಿಸುವ ಜಾಗ್ವಾರ್ – ಎರಡು ಬಲಿಷ್ಟ ಪ್ರಾಣಿಗಳ ಯುದ್ದಕ್ಕೆ ನೆಟ್ಟಿಗರು ಮಂತ್ರಮುಗ್ದ  

ಇಮ್ರಾನ್‌ ಹಾಗೂ ಅತುಲ್‌ ಕಲ್ಲು (ಎಡದಿಂದ ಬಲಕ್ಕೆ )

ಈತನ ಆಟಾಟೋಪ ನೋಡಿದ ಸ್ಥಳೀಯರು ಧೈರ್ಯ ಮಾಡಿ ಅವನನ್ನು ಹಿಡಿದಿದ್ದು ಬಳಿಕ ಥಳಿಸಿದ್ದಾರೆ. ಈ ವೇಳೆ ಆತ ಮಾನಸಿಕ ಅಸ್ವಸ್ಥನಂತೆ ವರ್ತಿಸಿದ್ದಾನೆ ಎನ್ನಲಾಗಿದೆ.  ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಫತ್ರೆಗೆ ದಾಖಲಿಸಿದ್ದಾರೆ. ಆತನ ಮಾನಸಿಕ ಸ್ಥಿತಿಯ ಬಗ್ಗೆಯು ಪೊಲೀಸರು ವೈದಕೀಯ ವರದಿ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಳಿಕ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Click to comment

Leave a Reply

ಮಂಗಳೂರು

Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

Published

on

Ad Widget

Ad Widget

Ad Widget

Ad Widget

ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget

Ad Widget

Ad Widget

ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

Ad Widget

Ad Widget alt="Ad Widget"/>

Ad Widget

​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

Ad Widget

Ad Widget <> Ad Widget

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.

Ad Widget

Ad Widget

“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:

ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.

ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

Ad Widget

Ad Widget <> Ad Widget

ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ad Widget

Ad Widget

ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಹಾಗೂ ಹೇಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಘಟನೆಯ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದರೆ ತಡೆಯಲು ಸಾಧ್ಯವಾಗುತ್ತಿತ್ತು. ಇದೀಗ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು. ಯುವತಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ

Published

on

Ad Widget

Ad Widget

Ad Widget

Ad Widget

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಹೊಣೆಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು. ಎಫ್‌ಐಆರ್ ದಾಖಲಾದ ಸಂದರ್ಭದಲ್ಲಿ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಬಂಧನ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಬಂಧನ
ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಫಾದರ್ ಸಿಪ್ರಿಯನ್ ಪಿಂಟೊ ವಿರುದ್ಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

Ad Widget

Ad Widget

ಈ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪೆರ್ಮನ್ನೂರು ಚರ್ಚ್‌ನ 13 ವರ್ಷದ ಬಾಲಕನ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದು, ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!