ಬಿಗ್ ನ್ಯೂಸ್
crab Species : ಜೀವ ವೈವಿಧ್ಯಗಳ ತಾಣ ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಪತ್ತೆಯಾಯಿತು ವಿಶಿಷ್ಟ ದ್ವಿವರ್ಣದ ಏಡಿ – ಇಲ್ಲಿದೆ ಅದರ ವಿಶೇಷತೆ, ಏಡಿ ಜಗತ್ತಿನ ಸ್ವಾರಸ್ಯಕರ ಮಾಹಿತಿ
ಉತ್ತರ ಕನ್ನಡ (Uttara Kannada ಅ 19) ಜೀವ ವೈವಿಧ್ಯದ ತಾಣವಾಗಿ ವಿಶ್ವದಲ್ಲೆ ಖ್ಯಾತಿ ಹೊಂದಿರುವ ಭಾರತದ ಪಶ್ಚಿಮ ಘಟ್ಟ (Western Ghat) ಶ್ರೇಣಿಯಲ್ಲಿ ಹೊಸ ಜಾತಿಯ ಏಡಿ ( New crab Species ) ಪತ್ತೆಯಾಗಿದೆ. ಸಿಹಿ ನೀರಿನಲ್ಲಿ ಕಂಡು ಬರುವ ಹೊಸ ಜಾತಿಯ ಘಟಿಯಾನ ದ್ವಿವರ್ಣದ ಏಡಿ ಇದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿರುವ ಪರ್ವತ ಶ್ರೇಣಿಯಲ್ಲಿ ಈ ವಿಶಿಷ್ಟ ಜೀವ ವೈವಿಧ್ಯ ಕಂಡು ಬಂದಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ, ನಿಸರ್ಗ ತಜ್ಞರಾದ ಗೋಪಾಲಕೃಷ್ಣ ಹೆಗಡೆ, ಸಮೀರಕುಮಾರ ಪಾಟಿ ಮತ್ತು ತೇಜಸ್ ಥಾಕರೆ ತಂಡದವರು ಏಡಿಯನ್ನು ಸಂಶೋಧಿಸಿದ್ದಾರೆ. ಈ ಏಡಿಗೆ ಇದೀಗ ಘಾಟಿಯಾನ ದ್ವಿವರ್ಣ ಎಂದು ಬ್ರೆಜಿಲ್‌ನ ಅಂತರಾಷ್ಟ್ರೀಯ ಸಂಸ್ಥೆ ಮತ್ತು ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಅಧಿಕೃತ ಮಾನ್ಯತೆ ನೀಡಿದೆ.
ನೋಡಲು ಹೇಗುಂಟು ?
ಪತ್ತೆಯಾದ ಈ ಹೊಸ ಜಾತಿಯ ಏಡಿ ಎರಡು ವರ್ಣಗಳಿಂದ ಕೂಡಿದೆ. ಇದರ ದೇಹದ ಬಣ್ಣ ಬಿಳಿ ಮತ್ತು ಕಾಲುಗಳು ಚಾಕಲೇಟ್ ಬಣ್ಣದಿಂದ ಕೂಡಿದೆ. ಪಶ್ಚಿಮ ಘಟ್ಟದ ಬಂಡೆಗಳಲ್ಲಿನ ಅಡಿಯಲ್ಲಿನ ರಂಧ್ರಗಳಲ್ಲಿ ಈ ಏಡಿಗಳು ವಾಸಿಸುತ್ತವೆ. ಸಣ್ಣಪುಟ್ಟಹುಳುಗಳು ಮತ್ತು ಪಾಚಿಯೇ ಇವುಗಳ ಆಹಾರವಾಗಿದೆ.
ಏಡಿ ಜಗತ್ತಿನ ಸ್ವಾರಸ್ಯಕರ ಮಾಹಿತಿ
ದೇಶದಲ್ಲಿ ಇದು ಸೇರಿದಂತೆ ಇವರೆಗೆ ಒಟ್ಟು 75ನೇ ಜಾತಿಯ ಏಡಿಗಳನ್ನುಪತ್ತೆ ಹಚ್ಚಲಾಗಿದೆ. ಜೀವಿಗಳನ್ನು ಅಧ್ಯಯನ ಮಾಡುತ್ತಿರುವ ವಿಜ್ಞಾನಿಗಳ ಪ್ರಕಾರ ಜಗತ್ತಿನಲ್ಲಿ ಈವರೆಗೆ ಅಂದಾಜು 4 ಸಾವಿರ ಜಾತಿಯ ಏಡಿಗಳನ್ನು ಗುರುತಿಸಲಾಗಿದೆ ಇದರಲ್ಲಿ ಭಾರತ ಒಂದರಲ್ಲಿಯೇ 125 ಜಾತಿಯ ಏಡಿಗಳನ್ನು ಗುರುತಿಸಲಾಗಿದೆ. ಆ ಪೈಕಿ 74 ಜಾತಿಯ ಏಡಿಗಳು ಪಶ್ಚಿಮ ಘಟ್ಟ ಒಂದರಲ್ಲಿಯೇ ಇದೆ. ಘಟಿಯಾನ ಪ್ರಭೇದದಲ್ಲಿ ಇದು ಸೇರಿದಂತೆ ಒಟ್ಟು 14 ವಿವಿಧ ಜಾತಿಯ ಸಿಹಿ ನೀರಿನ ಏಡಿಗಳನ್ನು ಪತ್ತೆ ಹಚ್ಚಲಾಗಿದೆ
ಆಹಾರ ಸರಪಳಿಯಲ್ಲಿ ಏಡಿಗಳು ಮಹತ್ವದ ಪಾತ್ರ ವಹಿಸುವುದರ ಮೂಲಕ ಪರಿಸರ ವವ್ಯಸ್ಥೆಯ ಸಮತೋಲನವನ್ನು ಕಾಯ್ದುಕೊಳ್ಳಲು ಸಹಾಯವಾಗುತ್ತವೆ. ಆವಾಸ ಸ್ಥಾನ ನಾಶದಿಂದಾಗಿ ಹಲವಾರು ಪ್ರಭೇದದ ಜೀವಿಗಳು ವಿನಾಶದಂಚು ತಲುಪುತ್ತಿವೆ. ಇವುಗಳ ಉಳಿವಿಗೆ ಪಶ್ಚಿಮಘಟ್ಟದ ಸಂರಕ್ಷಣೆ ಆಗಬೇಕು. ಈ ಸಂಶೋಧನೆಯು ಇಲಾಖೆಯ ಸಿಬ್ಬಂದಿಗೆ ಪ್ರೇರಣೆಯಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ಮಂಜುನಾಥ ಎಸ್.ನಾಯಕ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಪರಶುರಾಮ ಭಜಂತ್ರಿ ಸೇರಿದಂತೆ ಸಂಶೋಧನಾ ತಂಡವನ್ನು ಸಿಸಿಎಫ್ ವಸಂತರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ, ಯಲ್ಲಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತುರಾಜ, ಅಣಶಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡಕರ ಅಭಿನಂದಿಸಿದ್ದಾರೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
-
ಮಂಗಳೂರು17 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್15 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ15 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಅಪರಾಧ20 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಮಂಗಳೂರು16 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಸ್ಥಳೀಯ22 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್22 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ17 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















