ಉಡುಪಿ
ಅಶಕ್ತ ಬಡ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸಲು ಡೀ ಮನ್ ವೇಷದಲ್ಲಿ ವಿಜ್ರಂಬಿಸಿದ ರವಿ ಕಟಪಾಡಿ – ಬಡ ಕುಟುಂಬದ ಯುವಕನ ಬದುಕಿಗೆ ತಿರುವ ಕೊಟ್ಟ ಆ ಘಟನೆ ಯಾವುದು ಗೊತ್ತೆ ?
ಉಡುಪಿ : (Udupi ಆ 20) ಕೃಷ್ಣ ಜನ್ಮಾಷ್ಟಮಿಯ ಸಂದರ್ಭ ವಿಶಿಷ್ಟ ಶೈಲಿಯ, ಮನಮೋಹಕ ಹಾಗೂ ಚಿತ್ತಾಕರ್ಷಕ ವೇಷ ಧರಿಸಿ ಜನರಿಂದ ದುಡ್ಡು ಸಂಗ್ರಹಿಸಿ ಬಡಮಕ್ಕಳ ವೈದ್ಯಕೀಯ ನೆರವಿಗೆ ಅದನ್ನು ನೀಡುವ ಪುಣ್ಯದ ಕಾರ್ಯ ಮಾಡುತ್ತಿರುವ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ (Ravi katapadi) ಈ ಬಾರಿ ವಿನೂತನ ಮಾದರಿಯ ವೇಷದೊಂದಿಗೆ ಕಂಗೋಳಿಸಿದ್ದಾರೆ. ಆ 19 ರಂದು ಶ್ರೀ ಕೃಷ್ಣಾ ಜನ್ಮಾಷ್ಟಮಿಯಂದು (SriKrishna Janmashtami) “ಡೀ ಮನ್ ” (Demon) ರಾಕ್ಷಸ ವೇಷ ಧರಿಸಿ ಪ್ರತಿ ಬಾರಿಯಂತೆ ಅಶಕ್ತ ಮಕ್ಕಳಿಗಾಗಿ ಅವರು ಧನ ಸಂಗ್ರಹ ಮಾಡಿದ್ದಾರೆ.
ಹಾಲಿವುಡ್ ಸಿನಿಮಾದಿಂದ ಪ್ರೇರಿತವಾಗಿರುವ ಆವರ ವೇಷಗಳನ್ನು ನೋಡುವುದೆ ಕಣ್ಣಿಗೆ ಹಬ್ಬ. ಈ ಬಾರಿಯ ವೇಷದ ಮೂಲಕ ಅವರು ತನ್ನ ಒಟ್ಟು ಸಂಗ್ರಹದ ಮೊತ್ತವನ್ನು 1 ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿ ಇಟ್ಟುಕೊಂಡಿದ್ದಾರೆ. ಹೀಗೆ ಸಂಗ್ರಹಿಸಿದ ಹಣವನ್ನು ಬಡಮಕ್ಕಳ ವೈದ್ಯಕೀಯ ನೆರವಿಗೆ ನೀಡುವ ಕಟಪಾಡಿ ರವಿ ನೇತ್ರತ್ವದ ತಂಡಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಬೆಂಬಲ ಸಿಗುತ್ತಿದೆ. ಕಟಪಾಡಿ ಕೋಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರವಿ ಕಟಪಾಡಿ ವೇಷಕ್ಕೆ ಅ.19 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು
ಬಳಿಕ ರವಿಯವರು ಮಾಧ್ಯಮಗಳ ಜೊತೆ ಮಾತನಾಡಿದರು. ” ಕಳೆದ ಏಳು ವರ್ಷಗಳಿಂದ ಕೃಷ್ಣಾಷ್ಟಮಿಯಂದು ವೇಷ ಹಾಕಿ ನನ್ನ ತಂಡದೊಂದಿಗೆ ಪ್ರದರ್ಶನ ನೀಡುತ್ತಿದ್ದೇನೆ. ಈ ಬಾರಿ ಏಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದೇನೆ. ಇದುವರೆಗೆ ನಾವು ತೊಂಬತ್ತು ಲಕ್ಷ ರೂಪಾಯಿಯಷ್ಟು ಹಣವನ್ನು ಸಂಗ್ರಹಣೆ ಮಾಡಿದ್ದು, ಸಾಧಾರಣ 66 ಮಕ್ಕಳಿಗೆ ಚಿಕಿತ್ಸೆಗಾಗಿ ನೀಡಿದ್ದೇವೆ ” ಎಂದರು.

” ಈ ಬಾರಿಯು ಅನೇಕ ಅನಾರೋಗ್ಯ ಪೀಡಿತ ಮಕ್ಕಳ ಪಟ್ಟಿಗಳು ನಮಗೆ ಬಂದಿದೆ. ಅವರೆಲ್ಲರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನವನ್ನು ನಾವು ಮಾಡಲಿದ್ದೇವೆ. ಹೀಗಾಗಿ ಎಲ್ಲರೂ ಕೂಡ ಹೆಚ್ಚಿನ ರೀತಿಯ ಸಹಕಾರವನ್ನು ನೀಡಿ ಎಂದು ಮನವಿ ಮಾಡಿದ್ದಾರೆ. ಜನ ನಮ್ಮ ಮೇಲೆ ನಂಬಿಕೆ ಅವರು ದುಡಿದ ಹಣವನ್ನು ನಮಗೆ ಕೊಡ್ತಾರೆ.ಯಾರೂ ಕೂಡ ಹೀಗೆ ಜನರು ನಂಬಿಕೆಯಿಂದ ಕೊಟ್ಟ ಹಣವನ್ನು ನಿಗದಿತ ಉದ್ದೇಶ ಬಿಟ್ಟು ಬೇರೆಯದಕ್ಕೆ ಬಳಸಿ ಮೋಸ ಮಾಡಬೇಡಿ” ಎಂದು ಅವರು ಈ ಸಂದರ್ಭ ಮನವಿ ಮಾಡಿದ್ದಾರೆ.

ರವಿ ಕಟಪಾಡಿ ತಂಡದ ಮಾರ್ಗದರ್ಶಕ ಮಹೇಶ್ ಶೆಣೈ ಮಾತನಾಡಿ, ” ರವಿ ಕಟಪಾಡಿಯವರೊಂದಿಗೆ 2013ರಿಂದ ಇದ್ದೆನೆ. ಈ ತನಕ 90 ಲಕ್ಷ ರೂಪಾಯಿ ಸಂಗ್ರಹಿಸಿದ್ದು, ಅದನ್ನು ಬಡ ಮಕ್ಕಳ ಚಿಕೆತ್ಸೆಗಾಗಿ ನೀಡಿದ್ದಾರೆ. ಈ ಬಾರಿಯೂ 10 ಲಕ್ಷರೂ ಸಂಗ್ರಹಿಸಿ, 1 ಕೋಟಿ ರುಪಾಯಿಗೆ ಮುಟ್ಟುವ ಭರವಸೆ ಇದೆ ” ಎಂದರು.
ಇನ್ನು ರವಿ ಕಟಪಾಡಿಯವರ ವೇಷದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸ್ಮಾಟ್ ಆರ್ಟ್ ಸಂಸ್ಥೆಯ ಮುಖ್ಯಸ್ಥ ಆಕ್ಷಯ್ ಮಾತನಾಡಿ “ ಈ ವೇಷಕ್ಕಾಗಿ ಕಳೆದ ಮೂರು ತಿಂಗಳಿನಿಂದ ಶ್ರಮಿಸುತ್ತಿದ್ದೇವೆ. ದೇಹಕ್ಕೆ ಹಾನಿಕಾರಕವಲ್ಲದ ಬಣ್ಣವನ್ನು ಉಪಯೋಗಿಸುತ್ತಿದ್ದೇವೆ ” ಎಂದರು.
ಡೀ ಮನ್ ವಿಡಿಯೋ ನೋಡಿ
ಬಡ ಕುಟುಂಬದಿಂದ ಬಂದ ರವಿ
ರವಿ ಕಟಪಾಡಿಯವರು ಬಡ ಕುಟುಂಬಕ್ಕೆ ಸೇರಿದವರು. ಗಾರೆ ಕೆಲಸ ಮಾಡಿ ಜೀವನ ಸಾಗಿಸುವವರು. ಆದರೇ ಅವರ ಚಿಂತನೆ ಮಾತ್ರ ಉದಾತ್ತವಾದದ್ದು. ಕಳೆದ 10 ವರ್ಷಗಳಿಂ ಅವರು ದ ಕೃಷ್ಣಾಜನ್ಮಾಷ್ಟಮಿಯಂದು ವಿಭಿನ್ನ ವೇಷದ ಮೂಲಕ ಉಡುಪಿಯ ರಥ ಬೀದಿಯಲ್ಲಿ ಕಾಣಿಸಿಕೊಂಡು ಜನರನ್ನು ಆಕರ್ಷಿಸುತ್ತಾರೆ. ಆದರೆ ಕಳೆದ ಎಂಟು ವರ್ಷಗಳಿಂದ ಮಾತ್ರ ವೇಷದಲ್ಲಿ ಸಂಗ್ರಹವಾಗುವ ಹಣವನ್ನು ಅನಾರೋಗ್ಯ ಪೀಡಿತ ಬಡ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುತ್ತಾರೆ. ಇದಕ್ಕೆಲ್ಲ ಕಾರಣವಾದದ್ದು ಆ ಒಂದು ಘಟನೆ.
ಆ ಒಂದು ವರದಿ
ರವಿ ಕಟಪಾಡಿ ಹತ್ತು ವರ್ಷಗಳ ಹಿಂದೆ ಮನರಂಜನೆಗಾಗಿ ವೇಷ ಹಾಕುತ್ತಾ, ಜನರನ್ನು ರಂಜಿಸುತ್ತಿದ್ದರು. ಈ ಸಂದರ್ಭ ಅವರು ಪತ್ರಿಕೆಯಲ್ಲಿ ಓದಿದ ಒಂದು ವರದಿ ಅವರ ಮನಸ್ಸನ್ನು ತುಂಬ ಕಲಕಿತು. ಬಡ ಕುಟುಂಬದ ಮಗು ಕಾಯಿಲೆಯಿಂದ ನರಳುತ್ತಿದ್ದ ವರದಿ ಓದಿದ ಅವರು ಆ ಮಗುವಿಗೆ ತನ್ನಿಂದ ಸಾಧ್ಯವಾದಷ್ಟು ಸಹಾಯ ಮಾಡಬೇಕೆಂದು ಕೇಳಿಕೊಂಡರು.
ಕಾಡುವ ಬಡತನದ ನಡೆವೆಯೂ ಸಹಾಯ ಮಾಡುವ ಅಭಿಲಾಷೆ ಹೆಚ್ಚುತ್ತಲೇ ಹೋಯಿತು. ಇದಕ್ಕೆ ಏನು ಮಾಡುವುದು ಎಂದು ಅಲೋಚಿಸಿದಾಗ ಹೊಳೆದದ್ದೆ ತಾನು ಮನರಂಜನೆಗಾಗಿ ಹಾಕುತ್ತಿದ್ದ ಬಣ್ಣದ ವೇಷ. ಆ ಬಾರಿ ಈ ವೇಷವನ್ನು ಮಗುವಿಗಾಗಿ ಹಾಕಲು ಹೊರಟರು. ಸ್ನೇಹಿತರು ಸಾಥ್ ಕೊಟ್ಟರು. ಕಟಪಾಡಿ ಫ್ರೆಂಡ್ಸ್ ಸಂಘಟನೆಯ ಮೂಲಕ 15 ಮಂದಿ ಬೀದಿ ಬೀದಿ ಅಲೆದಾಡಿದರು. ಆ ವರ್ಷ ಸಂಗ್ರಹವಾದ 1.04 ಲಕ್ಷ ರೂ. ಮೊತ್ತವನ್ನು ಆ ಪುಟ್ಟ ಕಂದಮ್ಮ ಚಿಕಿತ್ಸೆಗಾಗಿ ಕೊಟ್ಟರು. ಇದರಿಂದ ಮಗುವಿನ ಜೀವ ಉಳಿಯಿತು. ರವಿ ಅವರ ಬದುಕು ಬದಲಾಯಿತು. ಆ ಮೇಲೆ ಪ್ರತಿ ವರ್ಷ ವೇಷ ಹಾಕಿ ಈ ವರೆಗೆ 90 ಲಕ್ಷ ರೂಪಾಯಿ ಸಂಗ್ರಹಿಸಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized10 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್11 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು11 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ8 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ9 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್3 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ















