ಮಂಗಳೂರು
Road Issue: ಸೂಕ್ತ ರಸ್ತೆ ಸೇತುವೆಯಿಲ್ಲದೆ ವಯೋವೃದ್ದೆಯನ್ನು ಬಡಿಗೆಗೆ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಅಘಾತಕಾರಿ ಘಟನೆಗೆ ಸಾಕ್ಷಿಯಾದ ಸುಳ್ಯ – ವಿಡಿಯೋ ವೈರಲ್ | ಪಿಡಿಒ ಹಾಗೂ ಮನೆಯವರು ಹೇಳಿದ್ದೆನು ?
ಸುಳ್ಯ : ಆ 20 : ವಾಹನ ಸಂಚರಕ್ಕೆ ಸುರಕ್ಷಿತ ಹಾಗೂ ಸರ್ವಋತು ರಸ್ತೆಯಿಲ್ಲದೇ ಕಾಲು ನೋವಿನಿಂದ ಬಳಲುತ್ತಿದ್ದ ವಯೋವೃದ್ದೆಯನ್ನು ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಕರುಣಾಜನಕ ಘಟನೆ ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಕಡಬ(kadaba) ದಲ್ಲಿ ಜೂ 19 ರಂದು ನಡೆದ ಬಗ್ಗೆ ವರದಿಯಾಗಿದೆ. ಈ ಬಗೆಗಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (Azadi ka amruith mahotsav) ಆಚರಿಸುತ್ತಿರುವ ಭಾರತದಲ್ಲಿ ಗ್ರಾಮೀಣ ಭಾಗದ (Rural India) ಸ್ಥಿತಿ ಇನ್ನು ಕೂಡ ಸುಧಾರಿಸಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ
ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ (sullia) ಒಳಪಟ್ಟ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳ್ಳಕ್ಕ ಎಂಬಲ್ಲಿ ಈ ಘಟನೆ ನಡೆದಿದೆ. ಬಳಕ್ಕ ನಿವಾಸಿ 70 ವರ್ಷದ ಮಹಿಳೆ ಕಮಲಮ್ಮ ಕಾಲು ನೋವಿಗೆ ತುತ್ತಾಗಿದ್ದರು. ಮಂಗಳೂರಿನಿಂದ ಉಪ್ಪಿನಂಗಡಿಯ ಕ್ಲಿನಿಕ್ ಬರುವ ತಜ್ಞ ವೈದ್ಯರಲ್ಲಿಗೆ ಅವರನ್ನು ಶುಕ್ರವಾರ ಕರೆದುಕೊಂಡು ಹೋಗಲು ಮನೆಯವರು ಪಡಬಾರದ ಪಾಡು ಪಟ್ಟಿದ್ದಾರೆ. ಕಡಬದಲ್ಲಿ ಇನ್ನು ಕೂಡ ಗುಣಮಟ್ಟದ ವೈದಕೀಯ ಸೌಲಭ್ಯ ಸಿಗದಿರುವುದರಿಂದ ಇಲ್ಲಿನ ರೋಗಿಗಳು ಉಪ್ಪಿನಂಗಡಿ , ಪುತ್ತೂರು , ಮಂಗಳೂರು ಹೀಗೆ ದೂರದ ಊರುಗಳನ್ನೆ ಅಶ್ರಯಿಸ ಬೇಕಾದ ಸ್ಥಿತಿಯಿದೆ.
ಕಾಡಾನೆ ಹಾವಳಿ
ಉದನೆ – ಬಳಕ್ಕ ಪ್ರದೇಶಕ್ಕೆ ಕಡಬ ವನ್ನು ತಲುಪಲು ಎರಡು ರಸ್ತೆಗಳಿವೆ. ಆದರಲ್ಲಿ ಒಂದು ರಸ್ತೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗಬೇಕಿದೆ. ಅಲ್ಲಿ ಕಾಡಾನೆಗಳು ಪುಂಡು ಪುಂಡಾಗಿ ಅಲೆದಾಡುತ್ತಿರುತ್ತವೆ. ಕೆಲ ದಿನಗಳ ಹಿಂದೆ ಅಲ್ಲಿ ರೊಚ್ಚಿಗೆದ್ದ ಕಾಡಾನೆಗಳು 40 ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶ ಮಾಡಿತ್ತು . ಹೀಗಾಗಿ ಈ ರಸ್ತೆಯಲ್ಲಿ ರಾತ್ರಿ ವೇಳೆ ಸಂಚರಿಸಲು ಗ್ರಾಮಸ್ಥರು ಭಯ ಪಡುತ್ತಿದ್ದು ಹಿಂದೇಟು ಹಾಕುತ್ತಿದ್ದಾರೆ.
ಸುಳ್ಯದ ರಸ್ತೆ ಸಮಸ್ಯೆ ಎತ್ತಿದ ಅರ್ ಜೆ ತ್ರಿಶೂಲ್ ಮಣಿಸಲು ದೂರು ಅಸ್ತ್ರ – ಪೊಲೀಸರ ಮೂಲಕ ಬಾಯ್ಮಿಚ್ಚಿಸುವ ತಂತ್ರ?
ಮಳೆ ಬಂದರೆ ಅಧೋಗತಿ
ಇನ್ನು ಹಗಲು ಸಮಯದಲ್ಲೂ ಈ ರಸ್ತೆ ಎಲ್ಲ ಕಾಲದಲ್ಲೂ ಓಡಾಟಕ್ಕೆ ಅನುಕೂಲಕರವಾಗಿರುವುದಿಲ್ಲ. ಧಾರಕಾರ ಮಳೆ ಸುರಿದ ವೇಳೆ ಈ ರಸ್ತೆ ಸಂಚಾರ ಅಯೋಗ್ಯ ಎನಿಸಿಕೊಳ್ಳುತ್ತವೆ. ಕಳೆದೊಂದು ತಿಂಗಳು ಇಲ್ಲಿ ನಿರಂತರವಾಗಿ ಮಳೆ ಸುರಿದಿತ್ತು. ಈ ವೇಳೆ ಆ ಋಸ್ತೆಯಲ್ಲಿ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿರಲಿಲ್ಲ ಎನ್ನಲಾಗುತ್ತಿದೆ. ಬಿಸಿಲು ಬೀಳುತ್ತಿರುವ ಈ ಹೊತ್ತಿನಲ್ಲೂ ರಸ್ತೆಯಲ್ಲಿ ಜೀಪು ಇತ್ಯಾದಿ ವಾಹನಗಳು ಮಾತ್ರ ಓಡಾಡುತ್ತವೆಯೇ ಹೊರತು ಬಾಕಿ ವಾಹನ ಚಾಲಕರು ಸಂಚಾರ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಆನೆ ಹಾವಳಿ ಹಾಗೂ ರಸ್ತೆಯ ದುರ್ಗತಿಯಿಂದಾಗಿ ಈ ಮಾರ್ಗ ಗ್ರಾಮಸ್ಥರಿಗೆ ದೊಡ್ಡ ಮಟ್ಟದಲ್ಲಿ ಉಪಯೋಗಕ್ಕೆ ಬರುತ್ತಿಲ್ಲ ಎನ್ನುವುದು ವಾಸ್ತವ ಸತ್ಯ.
ಬದಲಿ ರಸ್ತೆಯೇ ಉಪಯುಕ್ತ
ಹೀಗಾಗಿ ಬಹುತೇಕ ಗ್ರಾಮಸ್ಥರು ತಮ್ಮ ಓಡಾಟಕ್ಕೆ ನೂಜಿಬಾಳ್ತಿಲ-ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಬದಲಿ ರಸ್ತೆಯನ್ನೆ ಅವಲಂಬಿಸಿದ್ದಾರೆ. ಈ ಭಾಗದ ಜನರಿಗೆ ಎಂಜಿರ ಹತ್ತಿರದ ಪೇಟೆಯಾಗಿದೆ. ಹಾಗಾಗಿ ಈ ರಸ್ತೆ ಅವರಿಗೆ ಅನುಕೂಲಕರವಾಗಿ ಪರಿಣಮಿಸಿದೆ. ಆದರೇ ಈ ರಸ್ತೆಯಲ್ಲಿ ಸುಮಾರು 50 ಮೀಟರ್ ನಷ್ಟು ಅಗಲವಿರುವ ತೋಡು ಇದ್ದು ಅದಕ್ಕೆ ಇನ್ನು ಸೇತುವೆ ನಿರ್ಮಾಣವಾಗಿಲ್ಲ . ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಪಂಚಾಯತ್ ಸಹಿತ ಸರಕಾರದ ವಿವಿಧ ಇಲಾಖೆಗೆ ಮನವಿ ನೀಡಿದ್ದಾರೆ. ಈ ಭಾಗಕ್ಕೆ ಸೇರಿದ ಪಂಚಾಯತ್ ಸದಸ್ಯನಿಂದ ಹಿಡಿದು ಶಾಸಕ, ಸಂಸದರವರೆಗೂ ಸ್ಥಳೀಯರು ರಸ್ತೆಗಾಗಿ ಬೇಡಿಕೆ ಸಲ್ಲಿಸಿದ್ದರು . ಆದರೇ ಇವರೆಗೆ ಸೇತುವೆ ನಿರ್ಮಿಸುವ ಕೊಡುವ ಬಗ್ಗೆ ಯಾರು ಗಮನ ಹರಿಸಿಲ್ಲ. ಹೀಗಾಗಿ ಕಮಲಮ್ಮನವರ ಪಾಡು ದೇವರಿಗೆ ಪ್ರೀತಿ ಎಂಬಂತಾಗಿದೆ.
ಇನ್ನು ಇತ್ತೀಚೆಗೆ ಸುರಿದ ಮಹಾ ಮಳೆಗೆ ಈ ರಸ್ತೆ ಕೂಡ ಕೆಸರುಮಯವಾಗಿತ್ತು. ಆ ವೇಳೆ ಈ ಭಾಗದ ಜನ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ಕಿ.ಮೀ ಗಟ್ಟಲೆ ನಡೆದುಕೊಂಡು ಹೋಗಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಪಿಡಿಒ ಹೇಳಿದ್ದೆನು?
ಈ ರಸ್ತೆ ವಿವಾದದ ಬಗ್ಗೆ ನಿಖರ ನ್ಯೂಸ್ ನೂಜಿ ಬಾಳ್ತಿಳ ಪಿಡಿಒ ಅವರನ್ನು ಸಂಪರ್ಕಿಸಿತ್ತು. “ ಬಳಕ್ಕ ದಿಂದ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಅಂದಾಜು 5 ಕಿಮೀ ದೂರವಿರುವ ರಸ್ತೆಯಿದೆ. ಕಮಲಮ್ಮನ ಮನೆಯವರು ಆ ರಸ್ತೆಯನ್ನು ಬಳಸದೇ ತೋಡು ಇರುವ ರಸ್ತೆಯನ್ನು ಉಪಯೋಗಿಸಿದ್ದಾರೆ. ನಾನು , ಪಂಚಾಯತ್ ಅಧ್ಯಕ್ಷರಾದ ಗಂಗಮ್ಮ ಹಾಗೂ ವಾರ್ಡ್ ಸದಸ್ಯೆ ವಿನಯ ಕುಮಾರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಇಂದು ಬೆಳಿಗ್ಗೆ ರಸ್ತೆ ಪರಿಶೀಲಿಸಲು ಜೀಪಿನಲ್ಲಿ ತೆರಳಿ ಆ ಮನೆಗೆ ಭೇಟಿ ನೀಡಿದ್ದೇವು. ಜೀಪಿನಲ್ಲಿ ಮನೆಯವರೆಗೆ ಹೋಗಲು ಯಾವುದೇ ತೊಂದರೆ ಕಂಡು ಬಂದಿಲ್ಲ ಇನ್ನು ಆ ರಸ್ತೆಯಲ್ಲಿ ಕಾಡಾನೆ ಓಡಾಟ ನಡೆಸುತ್ತದೆ ಎಂದು ಮನೆಯವರು ಹೇಳುತ್ತಾರೆ . ಅದಕ್ಕೆ ಪಂಚಾಯತ್ ನಿಂದ ಏನು ಮಾಡಲು ಸಾಧ್ಯ” ಎಂದು ಪಿಡಿಒ ಮರು ಪ್ರಶ್ನಿಸಿದರು.

“ರಸ್ತೆ ಸಂಪೂರ್ಣ ಸರಿ ಇದೆ ಎಂದು ನಾನು ಹೇಳುವುದಿಲ್ಲ. ಭಾರಿ ಮಳೆಯ ಸಂದರ್ಭ ಈ ರಸ್ತೆಯಲ್ಲಿ ಓಡಾಟಕ್ಕೆ ಅನುಕೂಲವಾಗುವುದು ನಿಜ. ಆದರೇ ಈಗ ಒಂದು ವಾರದಿಂದ ಈ ರಸ್ತೆಯಲ್ಲಿ ವಾಹನ ಓಡಾಡಲು ಸಮಸ್ಯೆಯಿಲ್ಲ. ಮಳೆ ಬಂದಾಗ ಗ್ರಾಮೀಣ ಭಾಗದ ಯಾವ ರಸ್ತೆಯು ಸರಿ ಇರುವುದಿಲ್ಲ” ಎಂದು ಪಿಡಿಒ ತಿಳಿಸಿದ್ದಾರೆ.

ಮಹಿಳೆಯ ಪುತ್ರ ಹೇಳಿದ್ದೆನು?
ಇನ್ನು ಈ ಬಗ್ಗೆ ನಿಖರ ನ್ಯೂಸ್ ಗಂಗಮ್ಮನವರ ಪುತ್ರ ಗಂಗಾಧರ ಬಳಕ ರವರನ್ನು ಸಂಪರ್ಕಿಸಿ ಪಿಡಿಒಯವರು ವಾಹನದಲ್ಲಿ ಬೇಟಿ ನೀಡಿದ ಬಗ್ಗೆ ಹಾಗೂ ಅವರು ಸೂಚಿಸುತ್ತಿರುವ ರಸ್ತೆಯಲ್ಲಿ ತಾಯಿಯನ್ನು ಕರೆದುಕೊಂಡು ಯಾಕೇ ಹೋಗಿಲ್ಲ ಎಂಬ ಬಗ್ಗೆ ವಿವರ ಕೇಳಿತು. “ ಈ ವಿವಾದ ಮಾದ್ಯಮಗಳಲ್ಲಿ ವರದಿಯಾಗುತ್ತಲೇ ಅಧ್ಯಕ್ಷರು ಹಾಗೂ ಪಿಡಿಒ ಜೀಪಿನಲ್ಲಿ ಬಂದಿದ್ದಾರೆ. ಈ ರಸ್ತೆಯಲ್ಲಿ ಜೀಪಿನಂತಹ ಕಚ್ಚಾ ರಸ್ತೆ ಮಾಡಿದ ವಾಹನಗಳಷ್ಟೇ ಓಡಾಡುತ್ತದೆ. ಹಾಗಾಗಿಯೇ ಅವರು ಜೀಪಿನಲ್ಲಿ ಬಂದಿರುವುದು. ಅದು ಅವರಿಗು ಗೊತ್ತು. ಜೀಪಿನಲ್ಲಿ ಕೂಡ ಮಳೆ ನಿಂತಿರುವಾಗ ಮಾತ್ರ ಬರಲು ಸಾಧ್ಯವಿಲ್ಲ. ಇಲ್ಲದಿದ್ದರೇ ಅವರು ಹೇಳುತ್ತಿರುವ ರಸ್ತೆ ಕೂಡ ಕೆಸರುಮಯವಾಗಿ ವಾಹನ ಓಡಾಡಕ್ಕೆ ದುಸ್ತರವಾಗುತ್ತದೆ” ಎಂದರು.

” ಇನ್ನು ಪಿಡಿಒ ಸೂಚಿಸಿದ ರಸ್ತೆಯಲ್ಲಿ ಕಾಡಾನೆಗಳು ಓಡಾಟ ನಡೆಸುತ್ತವೆ. ನನ್ನ ತಾಯಿಗೆ ಸಂಜೆ 5 ಗಂಟೆಗೆ ಅಪಾಯಿಟ್ಮೆಂಟ್ ಸಿಕ್ಕಿದ್ದು. ಅಲ್ಲಿ ವೈದ್ಯರಿಗೆ ತೋರಿಸಿ ಕರೆದುಕೊಂಡು ಬರುವಾಗ ರಾತ್ರಿ 8 ಗಂಟೆಯಾಗಿತ್ತು. ಈ ವೇಳೆ ಕಾಡಾನೆಗಳ ಭಯದಿಂದ ಯಾರೂ ಆ ರಸ್ತೆಯಲ್ಲಿ ಸಂಚರಿಸುವುದಿಲ್ಲ. ಹೀಗಾಗಿ ಮಧ್ಯಾಹ್ನ ಕೂಡ ಅದೇ ರಸ್ತೆಯನ್ನು ಬಳಸಿ ಹೊದೇವು . ಸಂಜೆ ಬರುವಾಗಲೂ ಅದೇ ರಸ್ತೆಯನ್ನು ಬಳಸಿಕೊಂಡೆವು” ಎಂದರು.
ಸುಳ್ಯದಲ್ಲಿ ಇದೆಲ್ಲ ಮಾಮೂಲು
ಸುಳ್ಯದಲ್ಲಿ ಈ ರೀತಿ ರೋಗಿಗಳನ್ನು ಹೊತ್ತುಕೊಂಡು ಸಾಗುವ ವಿಷಯ ಹೊಸತೇನು ಅಲ್ಲ . ಈ ಹಿಂದೆ ಸಂಸದರ ಆದರ್ಶ ಗ್ರಾಮ ಬಳ್ಪದ ಊರಲ್ಲಿ ಹಾಗೂ ಪಕ್ಕದ ಇನ್ನೊಂದು ಊರಲ್ಲೂ ಈ ರೀತಿಯ ಘಟನೆ ನಡೆದು ರಾಷ್ಟ್ರ ಮಟ್ಟದ ಸುದ್ದಿಯಾಗಿತ್ತು. ಇನ್ನು ಈ ಸುಳ್ಯ ವಿಧಾನಸಭಾ ಕ್ಷೇತ್ರ ಸೇತುವೆ, ರಸ್ತೆ, ಕಸ ಇತ್ಯಾದಿಗಾಗಿ ನಡೆಯುವ ಹೋರಾಟಗಳಿಗೆ ಸದಾ ಸುದ್ದಿಯಲ್ಲಿರುತ್ತದೆ
ಮಂಗಳೂರು
Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್‌ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್‌ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.
ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್‌ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.
ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.
ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್‌ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.
ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್‌ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು
Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಅಪರಾಧ20 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್18 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ18 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು19 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ14 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ19 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು20 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ19 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















