ನಿಧನ ವಾರ್ತೆ
Accident : ವಿಟ್ಲ : ದ್ವಿಚಕ್ರ ವಾಹನ ಅಪಘಾತ, ಮೃತಪಟ್ಟ ವಿಕಲಚೇತನ
ವಿಟ್ಲ, ಆ 22 : ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಸಹಸವಾರನೋರ್ವ ಮೃತಪಟ್ಟ ಘಟನೆ ವಿಟ್ಲದ ಕೋಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.
ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರರ ಪುತ್ರ ಚಂದ್ರಹಾಸ ಶೇಖರ್ (50) ಮೃತ ದುರ್ದೈವಿ. ವಿಕಲಚೇತನನಾಗಿದ್ದು, ವಾಹನದಲ್ಲಿ ಸಹಸವಾರನಾಗಿ ಪ್ರಯಾಣಿಸುತ್ತಿದ್ದರು.
ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿಧನ ವಾರ್ತೆ
Kerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕೊಟ್ಟಾಯಂ (ಕೇರಳ): ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ಮಾಲೀಕ ರಾಜೇಶ್ ಪಲ್ಲಟ್ ಅವರ ನಿವಾಸದ ಸಮೀಪದ ತಾತ್ಕಾಲಿಕ ಶೆಡ್‌ನಲ್ಲಿ ಬ್ರಹ್ಮದತ್ತನ್ ವಿಶ್ರಾಂತಿ ಪಡೆಯುತ್ತಿತ್ತು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿದೆ ಎನ್ನಲಾಗಿದೆ.
ಸುಮಾರು 28 ವರ್ಷಗಳ ಹಿಂದೆ ಅರುಣಾಚಲ ಪ್ರದೇಶದ ದಟ್ಟ ಕಾಡುಗಳಲ್ಲಿ ಮರದ ಆನೆಯಾಗಿ ಕೆಲಸ ಮಾಡುತ್ತಿದ್ದ ಬ್ರಹ್ಮದತ್ತನ್‌ನ್ನು ಕೊಟ್ಟಾಯಂನ ಪುತುಪ್ಪಳ್ಳಿಯ ಪೋಥನ್ ವರ್ಗೀಸ್ ಹಾಗೂ ಚಾಕೊ ಸಹೋದರರು ಕೇರಳಕ್ಕೆ ಕರೆತಂದಿದ್ದರು. ಆರಂಭದಲ್ಲಿ ‘ಪುತುಪ್ಪಳ್ಳಿ ಬ್ರಹ್ಮದತ್ತನ್’ ಎಂದು ಕರೆಯಲಾಗುತ್ತಿದ್ದ ಆನೆಯನ್ನು 16 ವರ್ಷಗಳ ಹಿಂದೆ ಪಲ್ಲಟ್ ಕುಟುಂಬ ಖರೀದಿಸಿದ ಬಳಿಕ ‘ಪಲ್ಲಟ್ಟು ಬ್ರಹ್ಮದತ್ತನ್’ ಎಂದು ಮರುನಾಮಕರಣ ಮಾಡಲಾಗಿತ್ತು.
10 ಅಡಿ 2 ಇಂಚು ಎತ್ತರ, ಅಗಲವಾದ ಹಣೆ ಹಾಗೂ ಉದ್ದನೆಯ ದಂತಗಳನ್ನು ಹೊಂದಿದ್ದ ಬ್ರಹ್ಮದತ್ತನ್ ಮಧ್ಯ ಕೇರಳದ ಪ್ರಮುಖ ದೇವಾಲಯ ಉತ್ಸವಗಳಲ್ಲಿ ಪ್ರಸಿದ್ಧಿ ಪಡೆದಿತ್ತು. ತ್ರಿಶೂರ್ ಪೂರಂನ ಪರಮೆಕ್ಕಾವು ದೇವಸ್ಥಾನದ ‘ರಾತ್ರಿ ಪೂರಂ’ನಲ್ಲಿ ದೇವರ ವಿಗ್ರಹವನ್ನು ಹೊತ್ತು ಸಾಗುತ್ತಿದ್ದ ಇದು, ಎಟ್ಟುಮನೂರು ಎಝರಪೊನ್ನನ ಹಾಗೂ ವೈಕಥಷ್ಟಮಿ ಉತ್ಸವಗಳ ಪ್ರಮುಖ ಆಕರ್ಷಣೆಯಾಗಿತ್ತು.
ತ್ರಿಶೂರ್ ಪೂರಂ ಬಳಿಕ ಗುರುವಾಯೂರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಸೊಂಡಿಲೆತ್ತಿ ನಮಸ್ಕರಿಸುತ್ತಿದ್ದ ದೃಶ್ಯವೂ ಭಕ್ತರ ಗಮನ ಸೆಳೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲೂ ‘ಗಜಕೌಸ್ತುಭಂ ಪಲ್ಲಟ್ಟು ಬ್ರಹ್ಮದತ್ತನ್’ ಹೆಸರಿನ ಇನ್‌ಸ್ಟಾಗ್ರಾಂ ಪುಟದ ಮೂಲಕ ಆನೆಗೆ ಅಪಾರ ಅಭಿಮಾನಿಗಳಿದ್ದರು.
ಮಾವುತನೊಂದಿಗೆ ಅಪರೂಪದ ಬಾಂಧವ್ಯ
ಬ್ರಹ್ಮದತ್ತನ್ ತನ್ನ ದೀರ್ಘಕಾಲದ ಮಾವುತ ದಾಮೋದರನ್ ನಾಯರ್ ಅವರೊಂದಿಗೆ ವಿಶೇಷ ಭಾವನಾತ್ಮಕ ಬಾಂಧವ್ಯ ಹೊಂದಿತ್ತು. ಆರಂಭದಲ್ಲಿ ಮಲಯಾಳಂ ಅರ್ಥವಾಗದಿದ್ದ ಆನೆಗೆ ದಾಮೋದರನ್ ಪ್ರೀತಿಯಿಂದ ಹಿಂದಿ ಭಾಷೆಯ ಮೂಲಕ ತರಬೇತಿ ನೀಡಿದ್ದರು.
ವಡನಪ್ಪಳ್ಳಿ ಗಣೇಶಮಂಗಲಂ ಉತ್ಸವದ ವೇಳೆ ಮತ್ತೊಂದು ಆನೆ ದಾಮೋದರನ್ ನಾಯರ್ ಅವರ ಮೇಲೆ ದಾಳಿ ಮಾಡಲು ಮುಂದಾದಾಗ, ಬ್ರಹ್ಮದತ್ತನ್ ಮಧ್ಯಪ್ರವೇಶಿಸಿ ಆ ಆನೆಯನ್ನು ಓಡಿಸಿ ತನ್ನ ಮಾವುತನನ್ನು ರಕ್ಷಿಸಿತ್ತು ಎನ್ನಲಾಗಿದೆ.
2021ರ ಜೂನ್‌ನಲ್ಲಿ ದಾಮೋದರನ್ ನಾಯರ್ (74) ನಿಧನರಾದಾಗ, ಬ್ರಹ್ಮದತ್ತನ್ ಅವರ ಪಾರ್ಥಿವ ಶರೀರದ ಬಳಿ ಸೊಂಡಿಲೆತ್ತಿ ಅಂತಿಮ ನಮನ ಸಲ್ಲಿಸಿದ್ದ ದೃಶ್ಯ ಭಾರೀ ವೈರಲ್ ಆಗಿತ್ತು. ಈ ಘಟನೆ ಆನೆ ಮತ್ತು ಮಾವುತನ ನಡುವಿನ ಅಪರೂಪದ ಬಾಂಧವ್ಯಕ್ಕೆ ಸಾಕ್ಷಿಯಾಗಿತ್ತು.
ಇದೀಗ ಬ್ರಹ್ಮದತ್ತನ್ ನಿಧನದ ಸುದ್ದಿ ತಿಳಿದು ಸಾವಿರಾರು ಅಭಿಮಾನಿಗಳು ಹಾಗೂ ಸ್ಥಳೀಯರು ಮೇಲಂಪಾರಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಗಜರಾಜನ ಅಕಾಲಿಕ ನಿಧನಕ್ಕೆ ಕೇರಳದ ದೇವಸ್ವಂ ಮಂಡಳಿ ಹಾಗೂ ಉತ್ಸವ ಪ್ರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಶಾಂತ ಸ್ವಭಾವದ ಬ್ರಹ್ಮದತ್ತನ್ ಜೊತೆ ಮಾವುತರು ಸಾಮಾನ್ಯವಾಗಿ ಅಂಕುಶ ಬಳಸುತ್ತಿರಲಿಲ್ಲ. ಜಾತ್ರೆ ಹಾಗೂ ಉತ್ಸವಗಳ ಸಂದರ್ಭಗಳಲ್ಲಿ ಮಾತ್ರ ನೆಪಕ್ಕಾಗಿ ಅಂಕುಶವನ್ನು ಕೈಯಲ್ಲಿ ಹಿಡಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಗಾಂಭೀರ್ಯದ ನಡೆ ಹಾಗೂ ಸೌಮ್ಯ ಸ್ವಭಾವದಿಂದ ‘ಗಜರಾಜ’ ಎಂಬ ಹೆಸರಿಗೆ ಅನ್ವರ್ಥವಾಗಿದ್ದ ಬ್ರಹ್ಮದತ್ತನ್‌ನ ದುರಂತ ಅಂತ್ಯ ಆನೆ ಪ್ರಿಯರಲ್ಲಿ ತೀವ್ರ ನೋವು ಮೂಡಿಸಿದೆ.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.
ತರಬೇತಿ ಮುಗಿದ ಬಳಿಕ ಶ್ರೇಯಸ್ ಹಾಗೂ ಸ್ನೇಹಿತರು ಸ್ಟೇಟ್ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.
ಶ್ರೇಯಸ್ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್ ಕುಟುಂಬಸ್ಥರಿಗೆ ತಿಳಿದುಬಂದಿದೆ.
ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
-
ದಕ್ಷಿಣ ಕನ್ನಡ16 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized22 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ23 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ24 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ16 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಅಪರಾಧ23 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್22 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು23 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















