Connect with us

ಸುಳ್ಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಬ್ರಹ್ಮವಾಹಕರಾಗಿದ್ದ,  ವೇದ ಮೂರ್ತಿ ಕಣಿಪುರ ವಾಸುದೇವ ಅಡಿಗ ಕುಂಬಳೆ ನಿಧನ

Published

on

Ad Widget

Ad Widget

Ad Widget

Ad Widget

ಪುತ್ತೂರು : ಆ 23 : ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ (Puttur Sri Mahalingeshwara Temple) ಬ್ರಹ್ಮವಾಹಕರಾಗಿದ್ದ,  ಕುಂಬಳೆಯ ಪ್ರಸಿದ್ದ ಅಡಿಗ ಮನೆತನದವರಾದ  ನಿವೃತ್ತ ಅರ್ಚಕ, ಕುಲ ಪುರೋಹಿತ, ವೇದ ಮೂರ್ತಿ ಕಣಿಪುರ ವಾಸುದೇವ ಅಡಿಗ(80)ರವರು(Vasudeva Adiga) ಇಂದು ಬೆಳಿಗ್ಗೆ ನಿಧನರಾದರು.ಇವರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಬಳೆ ಸಮೀಪದ ಕೊಯಿಪ್ಪಾಡಿ ಗ್ರಾಮದ ಕಣಿಪುರ ಗೋಪಾಲಕೃಷ್ಣ ದೇವಸ್ಥಾನದ ಬಳಿ ನಿವಾಸಿ.

Ad Widget

Ad Widget

Ad Widget

Ad Widget

ನಾಲ್ಕು ದಿನಗಳ ಹಿಂದೆ ಅವರು ಅನಾರೋಗ್ಯ ತುತ್ತಾಗಿದ್ದು ಕಾಸರಗೋಡಿನ ಜನಾರ್ಧನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.  ಆಸ್ಪತ್ರೆಗೆ ಸೇರಿಸುವ ಹಿಂದಿನ ದಿನದವರೆಗೂ ಕ್ರಿಯಾಶೀಲರಾಗಿದ್ದರು. ವಾರದ ಹಿಂದೆ ಬಂಟ್ವಾಳ ತಾಲೂಕಿನ ಮಂಚಿಯಲ್ಲಿ ನಡೆದ ಮಗನ ಉಪನಯನ ಕಾರ್ಯಕ್ರಮಕ್ಕೂ ಬಂದು ಹೋಗಿದ್ದರು.

Ad Widget

Ad Widget alt="Ad Widget"/>

Ad Widget

ಇವರ ತಂದೆ  ದಿ. ಶಂಕರ ನಾರಾಯಣ ಅಡಿಗರವರು ಕುಂಬಳೆ ಗೋಪಾಲಕೃಷ್ಣ ದೇವಸ್ಥಾನದ (Kumbale gopala Krishna Temple) ಪ್ರಧಾನ ಅರ್ಚಕರು ಹಾಗೂ ಬ್ರಹ್ಮವಾಹಕರಾಗಿದ್ದರು.  ಅವರ ಹಾದಿಯನ್ನೆ ಅನುಸರಿಸಿದ  ವಾಸುದೇವ ಅಡಿಗರವರು ಆ ವೃತ್ತಿಯನ್ನು ಜೀವನೂಪಾಯಕ್ಕೆ ಅನುಸರಿಸಿದವರು. ಎಳವೆಯಲ್ಲೆ ಶೃಂಗೇರಿ ಮತ್ತು ಸಾಲಿಗ್ರಾಮದಲ್ಲಿ ಗುರು ಮುಖೇನ ನಾಲ್ಕು ವೇದಗಳನ್ನು ಅಭ್ಯಸಿಸಿ ವೇದ ಮೂರ್ತಿ ಎನಿಸಿಕೊಂಡಿದ್ದರು.

Ad Widget

Ad Widget <> Ad Widget

ಪುತ್ತೂರಿನ ಫೇಮಸ್ ಪ್ರಭು ಚರುಂಬುರಿ ಖ್ಯಾತಿಯ ಪ್ರಭು ಕ್ಯಾಟರರ್ಸ್ ಮ್ಹಾಲಕ ಪ್ರಭಾಕರ ಪ್ರಭು ಹೃದಯಘಾತದಿಂದ ನಿಧನ

ಸುಮಾರು ಐದು ದಶಕಗಳ ಕಾಲ ವಂಶಪಾರಂಪರ್ಯ ನೆಲೆಯಲ್ಲಿ ಬ್ರಹ್ಮವಾಹಕರಾಗಿ ಹಾಗೂ ಕಾಸರಗೋಡು ವಲಯ ಕೂಟ ಬಂಧುಗಳ ಕುಲ ಪುರೋಹಿತರಾಗಿ ಅವರು ಸೇವೆ ಸಲ್ಲಿಸಿದ್ದಾರೆ.  ಕುಂಬಳೆ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರಾಗಿಯೂ  ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ದೇವಸ್ಥಾನಗಳ ಜಾತ್ರೋತ್ಸವದ ಸಂದರ್ಭ ನಡೆಯುವ ದರ್ಶನ ಬಲಿಯಲ್ಲಿ ಬ್ರಹ್ಮವಾಹಕರಾಗಿ ಅವರು ಖ್ಯಾತಿಯನ್ನು ಪಡೆದಿದ್ದರು.  ಪುತ್ತೂರು , ಅಡೂರು ಸೇರಿದಂತೆ ಕುಂಬಳೆ ಹಾಗೂ ಅಸುಪಾಸಿನ ಸುಮಾರು 50 ದೇವಸ್ಥಾನಗಳಲ್ಲಿ ಅವರು  ಬ್ರಹ್ಮವಾಹಕರಾಗಿ ನಿವೃತ್ತಿಯವರೆಗೂ ಸೇವೆ ಸಲ್ಲಿಸಿದ್ದಾರೆ.

Ad Widget

Ad Widget

 ಕುಂಬಳೆ ಅಡಿಗ ಮನೆತನಕ್ಕೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೂ ಅವಿನಭಾವ ಸಂಬಂಧವಿದೆ. ಈ ಮನೆತನದ ಹಲವರು ಇಲ್ಲಿನ ದೇವಸ್ಥಾನದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ. ಪುತ್ತೂರಿನ ರಥೋತ್ಸವದಂದು (ಏ 17) ಬೆಳಿಗ್ಗೆ ದೇವಸ್ಥಾನದ ಅವರಣದಲ್ಲಿ  ದೇವರ ಉತ್ಸವ ಬಲಿ ಹೊರಟು  ದರ್ಶನ ಬಲಿ  ನಡೆಯುತ್ತದೆ. ಈ ದರ್ಶನ ಬಲಿಯನ್ನು ಅಡಿಗ ಮನೆತನದವರು ಅನುಚೂನವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ವಾಸುದೇವ ಅಡಿಗರು ಕೂಡ ಹಲವು ವರ್ಷಗಳ ಕಾಲ ದರ್ಶನ ಬಲಿ ಸೇವೆಯ ಬ್ರಹ್ಮವಾಹಕರಾಗಿ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ.

Sakleshpur | ಸಕಲೇಶಪುರದಲ್ಲಿ ಬಜರಂಗದಳದ ವಿರುದ್ಧ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ ದಲಿತಪರ ಸಂಘಟನೆಗಳು – ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಒತ್ತಾಯ

ಪುತ್ತೂರಿನಲ್ಲಿ ದರ್ಶನ ಬಲಿ ದಿನ ಬ್ರಹ್ಮವಾಹಕರಾಗಿ ಇವರ ಸೇವೆ ಅವಿಸ್ಮರಣೀಯವಾಗಿತ್ತು . ಪುಷ್ಪಕನ್ನಡಿಯಿಂದ ಎರಡು ಕೈಗಳನ್ನು ಬಿಟ್ಟು ದೇವಳದ ಒಳಾಂಗಣದಲ್ಲಿ ಸುತ್ತು ಬಲಿ ನೆರವೇರಿಸಿ ಭಕ್ತ ಜನರು ಭಕ್ತಿಯ ಪರಕಾಷ್ಟೆಯನ್ನು ತಲುಪುವಂತೆ ಮಾಡಿ ಶ್ರೀ ದೇವರ ದ್ಯಾನದಲ್ಲಿ ಮಿಂದೇಳುವಂತೆ ಮಾಡುತ್ತಿದ್ದರು.  ದೇವರ ಪುಷ್ಪ ಕನ್ನಡಿಗೆ (ಬಲಿ ಮೂರ್ತಿ) ಹೂವಿನ ಶೃಂಗಾರ ವನ್ನು ಕೂಡಾ ವಿಶೇಷ ರೀತಿಯಲ್ಲಿ ಅಲಂಕರಿಸುವುದರಲ್ಲಿ ಅವರು ನಿಸ್ಸೀಮರು

ವಾಸುದೇವ ಅಡಿಗರು  ಹಲವರು ಶಿಷ್ಯರಿಗೆ ವೇದಭ್ಯಾಸ ಮಾಡಿಸುತ್ತಿದ್ದರು. ಮೃತರು ಪತ್ನಿ ಶ್ರೀದೇವಿ, ಪುತ್ರಿಯರಾದ ವಿದ್ಯಾಲಕ್ಷ್ಮೀ. ಪದ್ಮಪಲ್ಲವಿ, ಪುತ್ರ ಶಂಕರ ನಾರಾಯಣ ( ಯೋಗೀಶ) ರನ್ನು ಹಾಗೂ ಅಪಾರ ಶಿಷ್ಯರನ್ನು  ಅಗಲಿದ್ದಾರೆ.

Ad Widget
Click to comment

Leave a Reply

ಸುಳ್ಯ

Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

Published

on

Ad Widget

Ad Widget

Ad Widget

Ad Widget

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget

Ad Widget

Ad Widget

ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.

Ad Widget

Ad Widget

ರೈನಾ ಮಡಿಕೇರಿಯ ಲೀಲಾ ಪ್ಯಾಲೇಸ್ ಗೆ ತೆರಳಿದರು.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!