Connect with us

ಉಡುಪಿ

Consumer Court ಯಾರದೋ ತಪ್ಪಿಗೆ ಪಿಂಚಣಿಯಲ್ಲಿ ಉಡುಪಿಯ ಬಡ ಮಹಿಳೆಗೆ ಅನ್ಯಾಯ – ಗ್ರಾಹಕ ನ್ಯಾಯಾಲಯದಿಂದ ದೊರಕಿತು ನ್ಯಾಯ

Published

on

Ad Widget

Ad Widget

Ad Widget

Ad Widget

ಉಡುಪಿ (Udupi ಆ 23) : ಬಡ ವಿಧವೆ ಮಹಿಳೆಯೊಬ್ಬರ ಪಿಂಚಣಿ ಕಡಿತಗೊಳಿಸಿದ ಹಾಗೂ ಹೆಚ್ಚುವರಿಯಾಗಿ ಹಣ ನೀಡಿದ್ದೇವೆ, ಅದನ್ನು ಕಾನೂನು ರೀತಿಯಾಗಿ ವಸೂಲಿ ಮಾಡುತ್ತೇವೆ ಎಂದು ಹೊರಟಿದ್ದ ಪ್ರಾವಿಡೆಂಟ್ ಫಂಢ್ (ಇಪಿಎಫ್‌̧ಒ EPFO) ಸಂಸ್ಥೆಗೆ ಉಡುಪಿ ಜಿಲ್ಲಾ ಬಳಕೆದಾರರ ನ್ಯಾಯಾಲಯವು (District consumer Forum) ಚಾಟಿ ಬೀಸಿದೆ. ಈ ಮೂಲಕ ತನ್ನದಲ್ಲದ ತಪ್ಪಿಗೆ ಪಿಂಚಣಿ ಕಡಿತ ಅನುಭವಿಸುತ್ತಿದ್ದ ಗೀತಾ ಕಾಂಚನ್ ಗೆ ಬಳಕೆದಾರರ ನ್ಯಾಯಾಲಯ ರಕ್ಷಣೆ ನೀಡಿದೆ. ಈ ಬಡ ಮಹಿಳೆಗೆ ಸಂಕಷ್ಟದ ಸಂದರ್ಭದಲ್ಲಿ ಕಂಗಾಲಾಗಿದ್ದಾಗ ಉಡುಪಿಯ ಡಾ| ರವೀಂದ್ರನಾಥ್ ಶ್ಯಾನುಭಾಗ್ (Dr Ravindranath Shanbhag) ಸಾರಥ್ಯದ ಮಾನವ ಹಕ್ಕುಗಳ ರಕ್ಷಣ ಪ್ರತಿಷ್ಠಾನ (Human Rights Protection Foundation Chairman ) ಅಗತ್ಯ ನೆರವು ನೀಡಿತ್ತು.

Ad Widget

Ad Widget

Ad Widget

Ad Widget

ಹೆಜಮಾಡಿಯ ವಿಧವೆ ಗೀತಾ ಕಾಂಚನ್(68) ಅವರು 17 ವರ್ಷಗಳ ಕಾಲ ಹೆಜಮಾಡಿಯ ಖಾಸಗಿ ಬ್ಯಾಂಕ್ನಲ್ಲಿ ಅಟೆಂಡರ್ ಆಗಿ ಸೇವೆ ಸಲ್ಲಿಸಿ 2014ರಲ್ಲಿ ನಿವೃತ್ತಿ ಹೊಂದಿದರು. ಈ ಅವಧಿಯಲ್ಲಿ ಅವರ ವೇತನದಿಂದ ಪಿಎಫ್ ಕಡಿತವಾಗುತ್ತಿತ್ತು. ನಿವೃತ್ತಿಯ ಬಳಿಕ ರೂ. 1,756 ಪಿಂಚಣಿ ಅವರಿಗೆ ಬರುತಿತ್ತು. ನಿವೃತ್ತಿಯ ವೇಳೆಗಾಗಲೇ ಕಷ್ಟಪಟ್ಟು ದುಡಿದು ತನ್ನ ಮೂವರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿದ್ದರು. ಈಗ ಸಿಗಲು ಆರಂಭಿಸಿದ ಅಲ್ಪ ಪಿಂಚಣಿ ಹಣದಲ್ಲಿ ಜೀವನ ಸಾಗಿಸುವುದು ಕಷ್ಟಕರವಾಗಿದ್ದರು, ಔಷಧ, ಮತ್ತಿತರೆ ಖರ್ಚಿಗೆ ಉಪಕಾರವಾಗುತಿತ್ತು.

Ad Widget

Ad Widget alt="Ad Widget"/>

Ad Widget
ಶಾಕಿಂಗ್‌ ಸೂಚನೆ

ಆದರೇ ಆಕೆ ನಿವೃತ್ತಿಗೊಂಡ 6 ವರ್ಷದ ಬಳಿಕ, 2020ರ ಮೇ ತಿಂಗಳಿನಲ್ಲಿ ಇಪಿಎಫ್ಒ ಕಚೇರಿ ಈ ವೃದ್ದ ಮಹಿಳೆಗೆ ಶಾಕಿಂಗ್ ಸೂಚನೆಯೊಂದನ್ನು ರವಾನಿಸಿತು. ಗೀತಾ ಅವರಿಗೆ ಸಂಬಂಧಿಸಿದ ಜಂಟಿ ಡಿಕ್ಲರೇಶನ್ (ಕಾರ್ಮಿಕರ ಪಿಂಚಣಿ ವಂತಿಗೆಯನ್ನು ಪ್ರಾವಿಡೆಂಟ್ ಫಂಡ್ ಕಚೇರಿಗೆ ಸಲ್ಲಿಸುವ ಮೊದಲು ಉದ್ಯೋಗದಾತರು ಅವರ ಅನುಮತಿ ಪಡೆಯುವ ಪತ್ರ) ) ದಾಖಲೆ ನಮ್ಮ ಕಡತದಲ್ಲಿಲ್ಲ. ಆಡಿಟ್ನಲ್ಲಿ ಆಕ್ಷೇಪಣೆಯಾಗಿದೆ. ಆ ಪ್ರತಿಯನ್ನು ಕೂಡಲೆ ಒದಗಿಸಿ. ಇಲ್ಲದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಿಂಚಣಿಯಲ್ಲಿ ರೂ 500 ರಂತೆ ಕಡಿತಗೊಳಿಸಲಾಗುವುದು ಹಾಗೂ ಈಗಾಗಲೇ ಪ್ರತಿ ತಿಂಗಳು ಹೆಚ್ಚುವರಿಯಾಗಿ 500 ರೂಪಾಯಿಯಂತೆ ಕಳೆದ 6 ವರ್ಷದಿಂದ ಪಾವತಿಸಿರುವ ಒಟ್ಟು ಮೊತ್ತ 50,147 ರೂ.ಗಳನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಹಿಂದಿರುಗಿಸಬೇಕು ಎಂದು ಸೂಚಿಸಿದರು.

Ad Widget

Ad Widget <> Ad Widget

Whatsapp Feature : ಗ್ರೂಪ್‌ ಆಡ್ಮಿನ್‌ ಗೆ ಪರಮಾಧಿಕಾರ – ಚಾಟ್ ಲಿಸ್ಟ್‌ ನಲ್ಲಿಯೇ ಸ್ಟೇಟಸ್ ಅಪ್ಡೇಟ್

ಈ ದಾಖಲೆ ಬಗ್ಗೆ ಆಕೆ ತಾನು ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮೀ ಬ್ಯಾಂಕ್ನಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಆ ದಾಖಲೆ ನಮ್ಮ ಬಳಿ ಇಲ್ಲವೆಂದು ಅವರು ತಿಳಿಸಿದರು. ಕಾನೂನು ರೀತಿಯಲ್ಲಿ ಹಣ ವಸೂಲಿ ಮಾಡುವ ಬಗ್ಗೆ ಇಪಿ ಎ ಫ್ಒ ಎಚ್ಚರಿಕೆ ನೀಡಿದಾಗ ಮಹಿಳೆ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನವನ್ನು ಆಶ್ರಯಿಸಿದರು.

Ad Widget

Ad Widget

ಮಾನವ ಹಕ್ಕುಗಳ ರಕ್ಷಣ ಪ್ರತಿಷ್ಠಾನದ ನೆರವು

ಬ್ಯಾಂಕ್ನವರು ನೀಡಿದ್ದ ಜಂಟಿ ಡಿಕ್ಲರೇಶನ್ ದಾಖಲೆ ಆಧಾರದಲ್ಲಿಯೇ ಇಪಿಎಫ್ಒ ಸಂಸ್ಥೆ 1,755 ರೂ. ಪಿಂಚಣಿ ಎಂದು ನಿರ್ಧರಿಸಲಾಗಿದೆ. ಇಪಿಎಫ್ಒ ಅವರ ಕಡತದಿಂದ ದಾಖಲೆ ಕಾಣೆಯಾಗಿರುವುದಕ್ಕೆ ಗೀತಾ ಕಾಂಚನ್ ಅವರನ್ನು ಹೊಣೆಗಾರರನ್ನಾಗಿಸುವುದು ಸರಿಯಲ್ಲ. ದಾಖಲೆಯ ಪ್ರತಿಗಳು ಒಂದೋ ಅದನ್ನು ಈ ಹಿಂದೆ ತಯಾರಿಸಿದ ಖಾಸಗಿ ಬ್ಯಾಂಕ್ನಲ್ಲಿರಬೇಕು. ಅಥವಾ ಈ ಹಿಂದೆ ಅದನ್ನು ಪಡೆದಿದ್ದ ಪಿಂಚಣಿ ಕಚೇರಿಯಲ್ಲಿರಬೇಕು. ಯಾವುದೇ ಪರಿಸ್ಥಿತಿಯಲ್ಲಿ ಅದು ಅವಿದ್ಯಾವಂತೆಯಾಗಿರುವ ಗೀತಾ ಕಾಂಚನ್ರೊಂದಿಗೆ ಇರುವುದು ಸಾಧ್ಯವೇ ಇಲ್ಲ. ನಿವೃತ್ತಳಾಗಿ 7 ವರ್ಷದ ಅನಂತರ ಕಾಣೆಯಾದ ದಾಖಲೆಯ ಪ್ರತಿ ತಂದು ಕೊಡಿ ಎಂದು ವಯೋವೃದ್ಧೆ ಗೀತಾ ಕಾಂಚನ್ರನ್ನು ಸತಾಯಿಸುವುದು ನ್ಯಾಯವಲ್ಲ. ಈ ಅಭಿಪ್ರಾಯಕ್ಕೆ ಬಂದ ಮಾನವ ಹಕ್ಕುಗಳ ರಕ್ಷಣ ಪ್ರತಿಷ್ಠಾನ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಸೂಚಿಸಿತು . ಹಾಗೂ ಅಗತ್ಯ ನೆರವು ನೀಡಿತು.

ಕ್ರಿಕೆಟರ್‌ ಚಹಲ್‌ ಹಾಗೂ ಧನಶ್ರೀ ವರ್ಮಾ ದಾಂಪತ್ಯ ಜೀವನದಲ್ಲಿ ಬಿರುಕಿನ ವದಂತಿ-ಇವರಿಬ್ಬರ ಮದ್ಯೆ ಶ್ರೇಯಸ್ ಅಯ್ಯರ್ ಹೆಸರು ಎಳೆದು ತಂದಿರುವುದೇಕೆ ? ಏನಿದು ಗೊಂದಲ

ಕೋರ್ಟು ತೀರ್ಪು

ಒಂಬತ್ತು ತಿಂಗಳು ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವು ಮಹಿಳೆಗೆ 1,756 ರೂ. ಮಾಸಿಕ ಪಿಂಚಣಿ ಮುಂದುವರಿಸಬೇಕು ಎಂದು ಇಪಿಎಫ್ ಒಗೆ ಆದೇಶಿಸಿದೆ. ಕಳೆದೆರಡು ವರ್ಷಗಳಿಂದ ಕಡಿತಗೊಳಿಸಿದ್ದ 500 ರೂ, ಮಾಸಿಕ ಪಿಂಚಣಿ ಬಾಕಿ ಆಕೆಗೆ ಪಾವತಿಸಬೇಕು ಹಾಗೂ ಹೆಚ್ಚುವರಿಯಾಗಿ ಪಾವತಿಸಿದೆ ಎನ್ನಲಾದ 50,147 ರೂ. ಮೊತ್ತವನ್ನು ಆಕೆಯಿಂದ ವಸೂಲಿ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಕಳೆದ ಎರಡು ವರ್ಷಗಳಿಂದ ಮಾನಸಿಕವಾಗಿ ಜರ್ಝರಿತವಾಗಿರುವ ಗೀತಾ ಕಾಂಚನ್ರಿಗೆ ಪರಿಹಾರವಾಗಿ 25,000 ರೂ. ಹಾಗೂ ದಾವೆಗಾಗಿ ವ್ಯಯಿಸಿದ 10,000 ರೂ.ಗಳನ್ನು ಒಂದು ತಿಂಗಳೊಳಗಾಗಿ ನೀಡಬೇಕು ಎಂದು ಗ್ರಾಹಕ ನ್ಯಾಯಲಯವು ಸೂಚಿಸಿತು.

ಈ ಮಾಹಿತಿಯನ್ನು ಮಾನವ ಹಕ್ಕುಗಳ ರಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ| ರವೀಂದ್ರನಾಥ್ ಶ್ಯಾನುಭಾಗ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕೋರ್ಟ್ ಆದೇಶದಂತೆ ಮಹಿಳೆಗೆ ಸೂಕ್ತ ಪರಿಹಾರ ಕಲ್ಪಿಸಲು ಇಪಿಎಫ್ಒ ಮುಂದಾಗಬೇಕು. ಇಲ್ಲದಿದ್ದಲ್ಲಿ ನ್ಯಾಯಾಂಗ ನಿಂದನೆ ದಾವೆ ಹೂಡಲಾಗುವುದು ಎಂದು ಪ್ರತಿಷ್ಠಾನ ಎಚ್ಚರಿಸಿದೆ. ಗೀತಾ ಕಾಂಚನ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Ad Widget
Click to comment

Leave a Reply

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!