Connect with us

ಮಂಗಳೂರು

ನೆಹರೂ ನಿಜವಾಗಿ ಜೈಲಿನಲ್ಲಿ ಇದ್ದದ್ದು 11 ದಿನ ಮಾತ್ರ – ಸಾವರ್ಕರ್ 11 ವರ್ಷ ಕಾಲಾಪಾನಿ ಶಿಕ್ಷೆ ಅನುಭವಿಸಿದರು : ಚಕ್ರವರ್ತಿ ಸೂಲಿಬೆಲೆ

Published

on

Ad Widget

Ad Widget

Ad Widget

Ad Widget

ಮಂಗಳೂರು : (Mangalore ಆ 23) : “ಸೆಲ್ಯೂಲರ್ ಜೈಲಿನಲ್ಲಿ (cellular jail) ಜವಹರಲಾಲ್‌  ನೆಹರೂ ಒಂದು ದಿನವು ಇರಲಿಲ್ಲ. ನೆಹರೂ(jawaharlal nehru) ನಿಜವಾಗಿ ಜೈಲಿನಲ್ಲಿ ಇದ್ದದ್ದು ಹನ್ನೊಂದು ದಿನ ಮಾತ್ರ.ಅಷ್ಟರೊಳಗಾಗಲೇ ನೆಹರೂ ಅವರ ಅಪ್ಪ ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದು ಬಿಡುವಂತೆ ಗೋಗರೆದು ಬಿಡಿಸಿಕೊಂಡು ಹೋದ್ರು.ಆದರೆ ಸಾವರ್ಕರ್ (savarkar) ಹನ್ನೊಂದು ವರ್ಷ ಕಾಲಾಪಾನಿ (kalapani) ಶಿಕ್ಷೆ ಎದುರಿಸಿದರು. ಪ್ರತಿದಿನ ಅವರು ಬ್ರಿಟೀಷರಿಗೆ  30 ಪೌಂಡ್ ಎಣ್ಣೆ ತೆಗೆಯಬೇಕಿತ್ತು” ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(chakravarti sulibele) (ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರಿನ ಡೊಂಗರಕೇರಿಯಲ್ಲಿ ಸಾವರ್ಕರ್ ನಿಂದನೆಗೆ ಪ್ರತ್ಯುತ್ತರ ಸಂವಾದ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

Ad Widget

Ad Widget alt="Ad Widget"/>

Ad Widget

ಜವಹರ್ ಲಾಲ್ ಭಾಷಣ, ಬರಹಕ್ಕೆ ಬ್ರಿಟೀಷರು 25 ವರ್ಷ ಕಾಲಾಪಾನಿ ಶಿಕ್ಷೆ ನೀಡಿರಲಿಲ್ಲ. ಆದರೆ ಸಾವರ್ಕರ್ ಅವರ ಕೇವಲ ಎರಡು ಭಾಷಣಕ್ಕೆ ಬ್ರಿಟಿಷರು ಅವರಿಗೆ  ಎರಡೆರಡು ಜೀವಾವಧಿ ಶಿಕ್ಷೆ ನೀಡಿದರು. ಕಾಲಾಪಾನಿ ಶಿಕ್ಷೆ ಅಂದರೆ ಶವಯಾತ್ರೆ  ಎಂಬುವುದಾಗಿತ್ತು.ಈ ದೇಶ ಸಾವರ್ಕರ್ ರನ್ನು ಹೆಚ್ಚು ಗೌರವ,ತೂಕದಿಂದ ನೋಡುತ್ತದೆ ಎಂದು ಅವರು ಆಕ್ರೋಶಭರಿತರಾಗಿ ಹೇಳಿದರು.

Ad Widget

Ad Widget <> Ad Widget

ಸಾವರ್ಕರ್ ಕೇವಲ ಎರಡು ತಿಂಗಳಲ್ಲೇ ಕ್ಷಮಾಪಣೆ ಪತ್ರ ಬರೆದರು ಅಂತಾ ಕೆಲವರು ಹೇಳುತ್ತಾರೆ.  70 ಸಾವಿರ ಖೈದಿಗಳ ಪೈಕಿ ಸಾವರ್ಕರ್ ಒಬ್ಬರೇ ಪತ್ರ ಬರೆದಿದ್ದು ಅಂತಾ ಹೇಳಿದವನು ಮೂರ್ಖ. ಕೋರ್ಟ್ ನಲ್ಲಿ ವಾದ ಮಾಡಿದ ಹಾಗೇಯೇ ಕ್ಷಮಾಪಣಾ ಪತ್ರ ಬರೆಯೋದು. ಸಾವರ್ಕರ್ ಒಬ್ಬರೇ ಕ್ಷಮಾಪಣಾ ಪತ್ರ ಬರೆದಿರೋದಲ್ಲ. ಅನೇಕ ಜನರು ಕ್ಷಮಾಪಣಾ ಪತ್ರ ಬರೆದಿದ್ದಾರೆ ಎಂದು  ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಗಣೇಶೋತ್ಸವದಲ್ಲಿ ಗಣೇಶ ಕೂರಿಸುವ ಸ್ಥಳಗಳಲ್ಲಿ ಸಾವರ್ಕರ್ ಫೋಟೋ ಇಟ್ಟು ಸಾವರ್ಕರ್ ಉತ್ಸವವಾಗಿ ಆಚರಿಸಿ : ಸಂಘಟಕರಿಗೆ ಮುತಾಲಿಕ್‌ ಕರೆ

Ad Widget

Ad Widget

ವಿರೋಧಿಗಳ ನಡುವೆ ಸಿಡಿದೇಳುವ ಮನೋಭಾವ ಸಾವರ್ಕರ್ ಅವರದ್ದಾಗಿತ್ತು. ಇಂತಹ ಸಾವರ್ಕರ್ ಫೋಟೋ ವನ್ನು ಮುಸ್ಲಿಂ ಏರಿಯಾದಲ್ಲಿ ಇಡಬಾರದು ಎನ್ನುವ ಹೇಳಿಕೆಯನ್ನು ಸಹಿಸಲು ಅಸಾಧ್ಯ. ಅನೇಕರು 1942 ರ ನಂತರ ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ ಅಂತಾ ಹೇಳುತ್ತಾರೆ. ಸ್ವಾತಂತ್ರ್ಯ ಹೋರಾಟ ಅಂದರೇನು?  ಬೀದಿಯಲ್ಲಿ ಹೋರಾಟ ಮಾಡೋದು ಮಾತ್ರವಾ ಅಥವಾ ಜನರಲ್ಲಿ ಸ್ವಾತಂತ್ರ್ಯ ಕ್ಕಾಗಿ ಜನರ ಮನಸನ್ನು ತಯಾರು ಮಾಡೋದಾ ? ಸಾವರ್ಕರ್ ಬಗ್ಗೆ ಮಾಹಿತಿಯಿಲ್ಲದವರಿಗೆ ಸಾವರ್ಕರ್ ಜೀವನ ಅರ್ಥ ಆಗಲ್ಲ  ಎಂದು  ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.‌

ಸಾವರ್ಕರ್ ಫೋಟೋ ತೆರವು : ಶಿವಮೊಗ್ಗ ಉದ್ವಿಗ್ನ ಗುಂಪು ಘರ್ಷಣೆ ; ಲಾಠಿ ಚಾರ್ಜ್ , ನಿಷೇಧಾಜ್ಞೆ ಜಾರಿ

Ad Widget
Click to comment

Leave a Reply

ಮಂಗಳೂರು

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.26: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

Ad Widget

Ad Widget alt="Ad Widget"/>

Ad Widget

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್‌ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.

Ad Widget

Ad Widget <> Ad Widget

ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್‌ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್‌ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.

Ad Widget

Ad Widget

ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.

ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.

ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ

ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್‌ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.

ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.

ತಣ್ಣೀರ್‌ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್‌ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.

ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು

ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್‌ಅಪ್‌ಗಳು, ಡೀಪ್‌ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.

ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.

ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್‌ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.

Ad Widget
Continue Reading

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ನಿಧನ ವಾರ್ತೆ

ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget <> Ad Widget

ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Ad Widget

Ad Widget

ಕಮರಿದ ಕುಟುಂಬಕ್ಕೆ ಆಧಾರವಾಗುವ ಕನಸು
ಕಷ್ಟದ ಪರಿಸ್ಥಿತಿಯಲ್ಲಿ ಬೆಳೆದು ಬಂದಿದ್ದ ಜ್ಯೋತಿ ನರ್ಸ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕೆಂಬ ಕನಸು ಕಂಡಿದ್ದರು. ಆದರೆ, ರಸ್ತೆ ಅಪಘಾತ ಆಕೆಯ ಕನಸನ್ನು ನುಚ್ಚುನೂರಾಗಿಸಿದ್ದು, ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!