ಮಂಗಳೂರು
Mangalore Bangalore Express Train : ವಾರದಲ್ಲಿ 3 ದಿನ ಓಡುತ್ತಿದ್ದ ರೈಲು ಇನ್ನು ಮುಂದೆ 6 ದಿನ ಸಂಚಾರ
ಮಂಗಳೂರು( Mangalore ಆ 24) : ಈವರೆಗೆ ಬೆಂಗಳೂರು – ಮಂಗಳೂರು (Bangalore To mangalore) ನಡುವೆ ವಾರದಲ್ಲಿ 3 ದಿನ ಓಡಾಟ ನಡೆಸುತ್ತಿದ್ದ ವಿಶೇಷ ರಾತ್ರಿ ರೈಲು (Special Train) ಇನ್ನು ಮುಂದೆ ವಾರದ 6 ದಿನವೂ ಓಡಲಿದೆ. ನಂ.16585/86 ಬೆಂಗಳೂರು – ಮಂಗಳೂರು ಏಕ್ಸ್‌ಪ್ರೆಸ್(ವಯಾ ಮೈಸೂರು) ರೈಲು (Express Train) ವಾರದ 6 ದಿನ (weekly 6 days) ಸಂಚರಿಸಲು ಕೇಂದ್ರ ರೈಲ್ವೆ ಮಂಡಳಿ ಅನುಮತಿಸಿದೆ.
ಈ ಮಳೆಗಾಲದಲ್ಲಿ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿದಿತ್ತು . ಇದರಿಂದ ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರನ್ನು ಸಂಪರ್ಕಿಸುವ ರಸ್ತೆ ಸಂಚಾರಕ್ಕೆ ತೊಡಕು ಉಂಟಾಗಿತ್ತು . ರಾಜ್ಯದ ಈ ಎರಡು ಪ್ರಮುಖ ನಗರಗಳನ್ನು ಸಂಪರ್ಕಿಸುವ ಶಿರಾಡಿ ಹಾಗೂ ಮಡಿಕೇರಿ ರಸ್ತೆ ಭೂಕುಸಿತಕ್ಕೆ ತುತ್ತಾಗಿತ್ತು. ಇದರಿಂದ ಈ ಭಾಗದಲ್ಲಿ ಓಡಾಡ ನಡೆಸುವ ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸಿದರು
ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 75 (National Highway-75) ಎರಡು ನಗರಗಳನ್ನು ಜೋಡಿಸುವ ಪ್ರಮುಖ ಹೆದ್ದಾರಿಯಾಗಿತ್ತು. ಇಲ್ಲಿ ಸರಿ ಸುಮಾರು ಒಂದು ತಿಂಗಳುಗಳ ಕಾಲ ಸಂಚಾರ ಭಾದಿಸಿತ್ತು . ಈ ಹಿನ್ನೆಯಲ್ಲಿ ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ವಿಶೇಷ ರೈಲು ಆರಂಭಿಸಲು ಬೇಡಿಕೆ ಇಟ್ಟಿದ್ದರು . ಈ ಬಳಿಕ ವಾರದಲ್ಲಿ ಮೂರು ದಿನ ರಾತ್ರಿ ಓಡುವ ರೈಲು ಸಂಚಾರ ಮಂಗಳೂರು ಬೆಂಗಳೂರು ರೈಲು ಹಳಿಯಲ್ಲಿ ಓಡಲು ಆರಂಭಿಸಿತ್ತು
ನೈಋತ್ಯ ರೈಲ್ವೆಯಿದ ಜುಲೈ27ರಂದು ರೈಲ್ವೆ ಬೋರ್ಡ್‌ಗೆ ಕುರಿತಂತೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪತ್ರ ಬರೆಯಲಾಗಿತ್ತು ಇದೇ ವೇಳೆ ವಾರದಲ್ಲಿ ಮೂರು ಬಾರಿ ಸಂಚರಿಸುತ್ತಿದ್ದ ನಂ 066547/ 48 ಕೆಎಸ್‌ಆರ್ ಬೆಂಗಳೂರು – ಮಂಗಳೂರು ವಿಶೇಷ ಎಕ್ಸ್‌ಪ್ರೆಕ್ಸ್ ರೈಲನ್ನು ಈ ರೈಲಿನೊಂದಿಗೆ ವಿಲೀನಗೊಳಿಸಲಾಗಿದೆ.
ನಂ.16585/86 ಕೆಎಸ್‌ಆರ್ ಬೆಂಗಳೂರು – ಮಂಗಳೂರು ಏಕ್ಸ್‌ಪ್ರೆಸ್ ರೈಲಿನ ಟರ್ಮಿನಲ್ ಸದ್ಯ ಇರುವ ಕೆಎಸ್‌ಆರ್ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಸಿಟಿ ಜಂಕ್ಷನ್ ನಿಂದ ಎಸ್‌ಎಂವಿಬಿ (ಸರ್.ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೈಯಪ್ಪನ ಹಳ್ಳಿ)ಗೆ ವಿಸ್ತರಿಸಲಾಗಿದೆ. ಟರ್ಮಿನಲ್ ಬದಲಾವಣೆಯಾದರೂ ಬೆಂಗಳೂರು ಸಿಟಿ, ಕಂಟೋನ್ಮೆಂಟ್, ಸಿಟಿ ಮತ್ತು ಕೆಂಗೇರಿ ಸೇರಿದಂತೆ ಈ ಹಿಂದಿನ ಮಾರ್ಗದಲ್ಲಿಯೇ ಸಂಚರಿಸಲಿದೆ.
ವಿಸ್ತರಣೆಗೆ ಸಂಸದರ ಯತ್ನ
ಈ ರೈಲನ್ನು ಕಾರವಾರ ಅಥವಾ ವಾಸ್ಕೋ-ಡ-ಗಾಮ ನಿಲ್ದಾಣಕ್ಕೆ ವಿಸ್ತರಿಸುವ ಕುರಿತಾಗಿಯೂ ಬೇಡಿಕೆ ಕೇಳಿ ಬರುತ್ತಿದೆ. ಈಗಾಗಲೇ ಸಂಸದ ಪ್ರತಾಪಸಿಂಹ (Pratap Simha) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Railway Minister Ashvini Vaishnav) ಅವರಿಗೆಪತ್ರವ ಬರೆದು ವಾಸ್ಕೋ-ಡ-ಗಾಮ ನಿಲ್ದಾಣಕ್ಕೆ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಆ ಮೂಲಕ ಗೋವಾ ಮೈಸೂರು ನಡುವೆ ಪ್ರವಾಸಿಗರಿಗೆ ಸಂಚಾರ ಸುಲಭ ಸಾಧ್ಯವಾಗಲಿದೆ ಎನ್ನುವುದು ಸಂಸದರ ಅಭಿಪ್ರಾಯ
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
ನಿಧನ ವಾರ್ತೆ
Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.
ತರಬೇತಿ ಮುಗಿದ ಬಳಿಕ ಶ್ರೇಯಸ್ ಹಾಗೂ ಸ್ನೇಹಿತರು ಸ್ಟೇಟ್ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.
ಶ್ರೇಯಸ್ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್ ಕುಟುಂಬಸ್ಥರಿಗೆ ತಿಳಿದುಬಂದಿದೆ.
ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
-
ಬಿಗ್ ನ್ಯೂಸ್24 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ರಾಜಕೀಯ23 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized24 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ10 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು12 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
-
ಸ್ಥಳೀಯ10 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ12 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
-
ಮಂಗಳೂರು6 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್


















