ಆರೋಗ್ಯ
Health Tips flax seeds : ಅಗಸೆ ಬೀಜ ಹಲವು ಖಾಯಿಲೆಗಳಿಗೆ ರಾಮ ಬಾಣ – ಇದರ ಪ್ರಯೋಜನ ಕೇಳಿದ್ರೆ ವ್ಹಾರೇ ವ್ಹಾ ಅಂತೀರಾ
ಅನೇಕ ಗಂಭೀರ ಕಾಯಿಲೆಗಳಿಂದ ಮನುಷ್ಯನನ್ನು ದೂರವಿಡಲು ಅತ್ಯಂತ ಉಪಯುಕ್ತ ಆಹಾರ ಅಗಸೆ ಬೀಜ(Flax seeds) . ಈ ಬೀಜಗಳನ್ನು ಹೆಚ್ಚಾಗಿ ಉತ್ತರ ಕರ್ನಾಟಕದ ಜನರು ಬಳಸುತ್ತಾರೆ. ನಮ್ಮ ಪೂರ್ವಜರು ಅಗಸೆ ಬೀಜಗಳನ್ನು ಪ್ರತಿನಿತ್ಯವೂ ಸೇವಿಸುತ್ತಿದ್ದರು. ಆದರೆ ಈಗಿನ ಕಾಲದವರಿಗೆ ಅಗಸೆ ಬೀಜ ಅಂದರೆ ಅಸಡ್ಡೆ. ಬಹಳಷ್ಟು ಜನರಿಗೆ ಅದರ ಬಗ್ಗೆ ಗೊತ್ತು ಕೂಡ ಇಲ್ಲ.
ಅಗಸೆ ಬೀಜಗಳಲ್ಲಿ ಅತ್ಯಧಿಕ ಪೋಷಕಾಂಶವಿದೆ. ಅಗಸೆ ಬೀಜವನ್ನು ಪುಡಿ ಮಾಡಿ ಅದನ್ನು ಒಂದು ಟೀ ಚಮಚದಲ್ಲಿ ಹಾಕಿ ತೂಗಿದರೆ ಅದು 7 ಗ್ರಾಂ ಇರುತ್ತದೆ. ಇದರಲ್ಲಿ 1.28 ಗ್ರಾಂ ಪ್ರೋಟೀನ್, 2.95 ಗ್ರಾಂ ಕೊಬ್ಬು, 2.02 ಗ್ರಾಂ ಕಾರ್ಬೋಹೈಡ್ರೇಟ್, 1.91 ಗ್ರಾಂ ಫೈಬರ್, 17.8 ಮಿಗ್ರಾಂ ಕ್ಯಾಲ್ಸಿಯಂ, 27.4 ಮಿಗ್ರಾಂ ಮೆಗ್ನೀಷಿಯಮ್, 44.9 ಮಿಗ್ರಾಂ ರಂಜಕ, 56.9 ಮಿಗ್ರಾಂ ಪೊಟ್ಯಾಸಿಯಮ್, 6.09 ಮೈಕ್ರೊಗ್ರಾಂ ಫೋಲೇಟ್ ಮತ್ತು 45.6 ಮೈಕ್ರೊಗ್ರಾಂ ಲುಟೀನ್ ಮತ್ತು ಗ್ಯಾಕ್ಸಾಂಟಿನ್ ಹ್ಯಾಪನ್ಸ್ ಇದೆ.
ಇಲ್ಲಿ ಆಗಸೆ ಬೀಜದಿಂದ ಆಗುವ ಕೆಲವು ಆರೋಗ್ಯ ಪ್ರಯೋಜನಗಳು(Health tips) ಹಾಗೂ ಮನೆ ಮದ್ದಾಗಿ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ನೀಡಲಾಗಿದೆ.
Back Pain: ಬೆನ್ನು ನೋವಿಗೆ ಕಾರಣ – ಸುಲಭ ಪರಿಹಾರೋಪಾಯ ಹಾಗೂ ಮನೆಮದ್ದು | ಇಲ್ಲಿದೆ ಸಂಪೂರ್ಣ ಮಾಹಿತಿ
ಅಗಸೆ ಬೀಜಗಳಲ್ಲಿ ನಾರಿನಂಶ ತುಂಬಾ ಸಮೃದ್ಧವಾಗಿ ಇರುವುದರಿಂದ ಅಧಿಕ ದೇಹದ ತೂಕವನ್ನು ಸುಲಭವಾಗಿ ಇಳಿಸುತ್ತದೆ. ಹಾಗಾಗಿ ಯಾರಿಗೆ ಅಧಿಕ ದೇಹ ತೂಕ ಇರುತ್ತದೆ ಅಂತಹವರು ತಮ್ಮ ಡಯಟ್ ನಲ್ಲಿ ಅಗಸೆ ಬೀಜಗಳನ್ನು ಸೇರಿಸಬೇಕು.ಇದರಲ್ಲಿ ಕಬ್ಬಿಣಾಂಶ ಮತ್ತು ಪ್ರೋಟಿನ್ ಅಂಶಗಳು ತುಂಬ ಸಮೃದ್ಧವಾಗಿ ಇರುವ ಕಾರಣ ದೇಹದಲ್ಲಿರುವ ಕೆಟ್ಟ ಕೊಬ್ಬನ್ನು ಕರಗಿಸುತ್ತದೆ. ಪ್ರತಿದಿನ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಶೇ. 6 ರಿಂದ ಶೇ.11 ರಷ್ಟು ಕಡಿಮೆ ಮಾಡಬಹುದು.
ಸಕಲ ರೋಗಗಳ ಮೂಲ ಈ ಜೀರ್ಣಕ್ರಿಯೆಯೇ ಆಗಿರುತ್ತದೆ. ಒಮೆಗಾ -3 ಕೊಬ್ಬಿನಾಮ್ಲಗಳು, ಪ್ರೋಟೀನ್ಸ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಇದರಲ್ಲಿವೆ. ಅಗಸೆ ಬೀಜಗಳು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಅಕಾಲಿಕ ವೃದ್ಧಾಪ್ಯ ನಿಯಂತ್ರಣಅಗಸೆಬೀಜದಲ್ಲಿ ಆಂಟಿ-ಆಕ್ಸಿಡೆಂಟ್ಸ್ ಮತ್ತು ಫೈಟೊಕೆಮಿಕಲ್ಸ್ ಗುಣ ಲಕ್ಷಣಗಳಿವೆ, ಇದು ಹೆಚ್ಚುತ್ತಿರುವ ವಯಸ್ಸಿನಲ್ಲಿ ಮುಖದ ಚರ್ಮವನ್ನು ವ್ವನಯುಕ್ತವಾಗಿರಿಸುತ್ತದೆ. ಸುಕ್ಕುಗಳು ಸಮಸ್ಯೆ ದೂರವಾಗಿಸಿ ಮತ್ತು ಚರ್ಮವು ಹೊಳೆಯುವಂತೆ ಮಾಡುತ್ತದೆ.
ಮೊಡವೆ ನಿವಾರಣೆಗೆ ಇಲ್ಲಿದೆ ಮನೆ ಮದ್ದು
ಅಗಸೆ ಬೀಜದಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಇದ್ದು, ಇದು ಜೀರ್ಣಕಾರಿ ಶಕ್ತಿಯನ್ನು ಹೆಚ್ಚಿಸುವ ಮೂಲಕ ಮಲಬದ್ಧತೆಯನ್ನು ಹೋಗಲಾಡಿಸುತ್ತದೆ.ಉರಿಯೂತದ ಕಾಯಿಲೆ, ಹೃದಯ ಕಾಯಿಲೆ, ಹಾರ್ಮೋನುಗಳ ಅಸಮತೋಲನ, ಹೊಟ್ಟೆ ಉಬ್ಬರ ಮತ್ತು ಎಡಿಮಾವನ್ನು ಕಡಿಮೆ ಮಾಡುತ್ತದೆ. ಆಗಸೆ ಬೀಜಗಳು ಟೈಪ್ 2 ಡಯಾಬಿಟಿಸ್, ಕ್ಯಾನ್ಸರ್ ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬಲ್ಲದು
ಪ್ರತಿನಿತ್ಯವೂ ಅಗಸೆ ಬೀಜಗಳನ್ನು ಸೇವಿಸಿದರೆ ಹೃದಯಕ್ಕೆ ಸಂಬಂಧಿಸಿದ ತೊಂದರೆಗಳನ್ನು ತಡೆಯುತ್ತದೆ ಮತ್ತು ನಿವಾರಿಸುತ್ತದೆ. ಇದರಲ್ಲಿ ಒಮೆಗಾ 3 ಫ್ಯಾಟಿ ಆಸಿಡ್ಸ್ ಇರುವುದರಿಂದ ಕಣ್ಣಿನ ಆರೋಗ್ಯವನ್ನು ತುಂಬ ಚೆನ್ನಾಗಿ ಇಡುತ್ತದೆ. ಅಗಸೆ ಬೀಜಗಳನ್ನು ಸೇವಿಸಿದರೆ ಸ್ತನ ಮತ್ತು ರಕ್ತದ ಕ್ಯಾನ್ಸರ್ ಅನ್ನು ತಡೆಯುವ ಶಕ್ತಿ ಇದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
Uncategorized14 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು11 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ಬಿಗ್ ನ್ಯೂಸ್8 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
Uncategorized12 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ12 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ13 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ12 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್13 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















