ಬಿಗ್ ನ್ಯೂಸ್
Adani Group Loan | ಆಕ್ರಮಣಕಾರಿ ಹೂಡಿಕೆಗಾಗಿ ಭಾರೀ ಸಾಲದ ಮಾಡುತ್ತಿರುವ ಏಷ್ಯಾದ ನಂ.1 ಶ್ರೀಮಂತ ಅದಾನಿ ಸಮೂಹ – ಸ್ವಲ್ಪ ಎಡವಟ್ಟಾದರೂ ದೇಶದ ಬ್ಯಾಂಕಿಂಗ್ ವ್ಯವಸ್ಥೆಯೇ ಅಡಿಮೇಲು..? ಎಚ್ಚರಿಕೆ ನೀಡಿದ ಹಣಕಾಸು ವಿಶ್ಲೇಷಣಾ ಸಂಸ್ಥೆ
ನವದೆಹಲಿ: ಏಷ್ಯಾದ ನಂ.1(RichestPerson) ಶ್ರೀಮಂತ ಗೌತಮ್ ಅದಾನಿ (Adani) ಒಡೆತನದ ಅದಾನಿ ಸಮೂಹವು ಮಿತಿ ಮೀರಿ ಸಾಲ ಮಾಡಿದ್ದು(Adani Group Loan), ಸಾಲದ ಹಣದಲ್ಲೇ ಹೊಸ ಉದ್ದಿಮೆಗಳಲ್ಲಿ ಆಕ್ರಮಣಕಾರಿಯಾಗಿ ಹೂಡಿಕೆ ಮಾಡುತ್ತಿದೆ. ಹೀಗಾಗಿ ಯಾವುದೇ ಒಂದು ವಲಯದಲ್ಲಿನ ಸಣ್ಣ ಅಪಾಯವು ಇಡೀ ಸಮೂಹವನ್ನೇ ಮತ್ತು ಸಾಲ ನೀಡಿದ ಬ್ಯಾಂಕಿಂಗ್ ವಲಯವನ್ನೇ ಅಪಾಯಕ್ಕೆ ಸಿಲುಕಿಸಬಲ್ಲದು. ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿ ಸಮೂಹವನ್ನು ದಿವಾಳಿ ಅಂಚಿಗೂ ಕೊಂಡೊಯ್ಯಬಲ್ಲದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಶ್ಲೇಷಣಾ ಸಂಸ್ಥೆಯಾದ ಫಿಚ್‌ನ ಅಂಗ ಸಂಸ್ಥೆ ಕ್ರೆಡಿಟ್ ಸೈಟ್ ತನ್ನ ವರದಿಯಲ್ಲಿ ಎಚ್ಚರಿಸಿದೆ.
ಮಂಗಳವಾರ ಷೇರುಪೇಟೆಯಲ್ಲಿ ಭಾರೀ ತಲ್ಲಣಕ್ಕೆ ಕಾರಣವಾಗಿದ್ದು, ಮುಂಬೈ ಷೇರುಪೇಟೆಯಲ್ಲಿ ನೊಂದಾಯಿತ ಆದಾನಿ ಸಮೂಹದ 7 ಕಂಪನಿಗಳ ಷೇರು ಮೌಲ್ಯ ಶೇ.2 ಶೇ.5ರವರೆಗೆ ಕುಸಿದಿದೆ.
ಹೀಗಾಗಿ ಅದಾನಿ ಸಮೂಹದ ಒಟ್ಟಾರೆ ಮಾರುಕಟ್ಟೆ ಬಂಡವಾಳದಲ್ಲಿ 94000 ಕೋಟಿ ರು.ನಷ್ಟು ಭಾರೀ ಇಳಿಕೆಯಾಗಿದೆ. ನಿನ್ನೆಯಷ್ಟೇ ಅದಾನಿ ಸಮೂಹ NDTV ಯ ಶೇ.29% ಶೇರ್ ಖರೀದಿಸಿದೆ.
1980ರ ದಶಕದಲ್ಲಿ ಸರಕುಗಳ ವರ್ತಕ ಆಗಿ ಆರಂಭವಾದ ಅದಾನಿ ಸಮೂಹವು ಈಗ ಗಣಿಗಾರಿಕೆ, ಬಂದರು, ವಿದ್ಯುತ್ ಉತ್ಪಾದನೆ, ವಿಮಾನ ನಿಲ್ದಾಣ ನಿರ್ವಹಣೆ, ದತ್ತಾಂಶ ಕೇಂದ್ರ, ರಕ್ಷಣೆಯಂತಹ ಕ್ಷೇತ್ರಗಳಲ್ಲಿಯೂ ಚಾಚಿಕೊಂಡಿದೆ. ಈಚೆಗೆ ಕಂಪನಿಯು ಸಿಮೆಂಟ್ ಉತ್ಪಾದನೆ ವಲಯವನ್ನೂ ಪ್ರವೇಶಿಸಿದೆ. ಸಮೂಹದ ಬಹುತೇಕ ವಿಸ್ತರಣಾ ಚಟುವಟಿಕೆಗಳು ಸಾಲವಾಗಿ ಪಡೆದ ಹಣವನ್ನು ಬಳಕೆ ಮಾಡಿಕೊಂಡಿವೆ.
ಭಾರೀ ಸಾಲ ಮಾಡಿದ ಅದಾನಿ: ದೇಶ-ವಿದೇಶಗಳ ಬಂದರು, ಕಲ್ಲಿದ್ದಲು ಗಣಿ, ವಿಮಾನ ನಿಲ್ದಾಣ, ಡೇಟಾ ಸೆಂಟರ್, ಸಿಮೆಂಟ್, ಮಾಧ್ಯಮ ಸೇರಿ ನಾನಾ ಉದ್ದಿಮೆಗಳಲ್ಲಿ ಅದಾನಿ ಸಮೂಹ ಹೂಡಿಕೆ ಮಾಡಿದೆ. ಹೀಗೆ ಆಕ್ರಮಣಕಾರಿ ರೀತಿ ಮಾಡುತ್ತಿರುವ ಹೂಡಿಕೆಯು, ಕಂಪೆನಿಯ ಸಾಲದ ಪ್ರಮಾಣ ಮತ್ತು ಹಣದ ಹರಿವಿನ ಮೇಲಿನ ಒತ್ತಡ ಹೆಚ್ಚಿಸಿದೆ.
ಮತ್ತೊಂದೆಡೆ ಅದಾನಿ ಸಮೂಹದ ಪ್ರತಿ ಕಂಪನಿಯಲ್ಲೂ ಪ್ರವರ್ತಕರ ಹೂಡಿಕೆ ಪಾಲು ಅತ್ಯಂತ ಕಡಿಮೆ ಇದೆ. ಕಂಪನಿಯ ಭಾರೀ ಸಾಲ ಕಡಿಮೆ ಮಾಡಲು ಪ್ರವರ್ತಕರ ಹೂಡಿಕೆ ಹೆಚ್ಚಳದ ಅವಶ್ಯಕತೆ ಇದೆ ಎಂದು ವರದಿ ಹೇಳಿದೆ.
ಅದಾನಿ ಸಮೂಹವು ಹೊಸ ಮತ್ತು ಒಂದಕ್ಕೊಂದು ನಂಟಿಲ್ಲದ ಉದ್ಯಮಗಳಲ್ಲಿ ಭಾರೀ ಹೂಡಿಕೆ ಮಾಡುತ್ತಿದೆ. ಇವೆಲ್ಲವೂ ಹೆಚ್ಚಾಗಿ ಬಂಡವಾಳ ಬಯಸುವಂಥ ಉದ್ಯಮ. ಇದು ಭವಿಷ್ಯದಲ್ಲಿ ಉದ್ಯಮಗಳ ಕುರಿತ ಕಳವಳ ಹೆಚ್ಚಳಕ್ಕೆ ಕಾರಣವಾಗಿದೆ. ಇದರ ಜೊತೆಗೆ ಮಾರುಕಟ್ಟೆಯಲ್ಲಿ ಅಧಿಪತ್ಯಕ್ಕಾಗಿ ಅಂಬಾನಿ ಒಡೆತನದ ರಿಲಯನ್ಸ್ ಕಂಪೆನಿಯಿಂದ ಪ್ರಬಲ ಪ್ರತಿಸ್ಪರ್ಧೆಯು, ಅದಾನಿ ಸಮೂಹದ ಕಂಪನಿಗಳ ಆರ್ಥಿಕ ಪರಿಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮಕ್ಕೂ ಕಾರಣವಾಗಬಲ್ಲದು. ಇದಲ್ಲದೆ ಕಂಪನಿಯ ಹಲವು ಉದ್ಯಮಗಳು ಪರಿಸರ, ಸಾಮಾಜಿಕ ಮತ್ತು ಆಡಳಿತದ ಅಪಾಯಗಳನ್ನು ಒಳಗೊಂಡಿದೆ ಎಂದು ವರದಿ ಹೇಳಿದೆ.
ಹೀಗಾಗಿ ಕೆಟ್ಟ ಪರಿಸ್ಥಿತಿಯಲ್ಲಿ ಕಂಪನಿ ಸಾಲದ ಜಾಲಕ್ಕೆ ಬೀಳುವ ಮತ್ತು ದಿವಾಳಿಯ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಹಾಗೇನಾದರೂ ಆದರೆ ಕಂಪನಿಗೆ ಸಾಲ ನೀಡಿರುವ ಬ್ಯಾಂಕ್‌ಗಳು ಕೂಡಾ ಭಾರೀ ಅಪಾಯಕ್ಕೆ ಸಿಲುಕಲಿವೆ’ ಎಂದು ವರದಿ ಎಚ್ಚರಿಸಿದೆ.
ಅದಾನಿ ಸಮೂಹದ ಆರು ಕಂಪನಿಗಳು ಷೇರುಪೇಟೆಯಲ್ಲಿ ನೋಂದಾಯಿತ ಆಗಿವೆ. ಈ ಆರು ಕಂಪನಿಗಳ ಒಟ್ಟು ಸಾಲವು ಈ ವರ್ಷದ ಮಾರ್ಚ್ 31ಕ್ಕೆ 2.30 ಲಕ್ಷ ಕೋಟಿ ಆಗಿತ್ತು. ಕಂಪನಿಗಳ ಬಳಿ ಇರುವ ನಗದನ್ನು ಪರಿಗಣಿಸಿದರೆ, ನಿವ್ವಳ ಸಾಲದ ಮೊತ್ತವು 1.72 ಲಕ್ಷ ಕೋಟಿ ಆಗುತ್ತದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಿಗ್ ನ್ಯೂಸ್
Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.
ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.
ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.
ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.
ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ
ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.
ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.
ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ
ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.
ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ
ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.
ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.
ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ
ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ
ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.
ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ
ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.
ಅಂತರ ರಾಜ್ಯ
Chennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ತಿರುಪತಿ: ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ಚೆನ್ನೈನ ವರ್ಧಮಾನ್ ಜೈನ್ ಮತ್ತು ರಾಧಿಕಾ ಜೈನ್ ದಂಪತಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅರ್ಚಕರು ಹಾಗೂ ಪ್ರತಿನಿಧಿಗಳಿಗೆ ಈ ಅಮೂಲ್ಯ ಆಭರಣಗಳನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು. ವಜ್ರಖಚಿತ ಚಿನ್ನಾಭರಣಗಳನ್ನು ಒಳಗೊಂಡ ಈ ಕಾಣಿಕೆ ದೇವಾಲಯದ ಇತಿಹಾಸದಲ್ಲಿನ ಗಮನಾರ್ಹ ದಾನಗಳಲ್ಲಿ ಒಂದಾಗಿದೆ.
ಸಮಾರಂಭದಲ್ಲಿ ದಂಪತಿಯ ಭಕ್ತಿಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, 206 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಶ್ರೀ ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿರುವುದು ಅಪರೂಪದ ಹಾಗೂ ಅಸಾಧಾರಣ ಭಕ್ತಿಯ ಪ್ರತೀಕವಾಗಿದೆ. ದೇವರ ಮೇಲಿನ ಅಪಾರ ಭಕ್ತಿ ಮತ್ತು ದೈವಿಕ ಪ್ರೇರಣೆಯಿಂದ ಈ ದಂಪತಿ ಇಂತಹ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ತಮ್ಮ ಸೌಭಾಗ್ಯ ಎಂದು ಹೇಳಿದರು.
ತಿರುಮಲವು ನಂಬಿಕೆ, ಭಕ್ತಿ ಹಾಗೂ ಆಧ್ಯಾತ್ಮಿಕ ಸಂತೃಪ್ತಿಯ ಸಂಕೇತವಾಗಿದ್ದು, ಶ್ರೀ ಕೃಷ್ಣದೇವರಾಯರ ಕಾಲದಿಂದ ಇಂದಿನವರೆಗೂ ಭಕ್ತರ ಕಾಣಿಕೆ ಮತ್ತು ಭಕ್ತಿಪರಂಪರೆ ನಿರಂತರವಾಗಿ ಮುಂದುವರಿದಿದೆ ಎಂದು ನಾಯ್ಡು ಹೇಳಿದರು. ಪಲ್ಲವರು, ಚೋಳರು, ಚೇರರು, ಪಾಂಡ್ಯರು ಹಾಗೂ ಮೈಸೂರು ಮತ್ತು ಮರಾಠಾ ಅರಸರು ಹಿಂದಿನ ಕಾಲದಲ್ಲಿ ದೇವಾಲಯಕ್ಕೆ ಬೆಲೆಬಾಳುವ ಆಭರಣಗಳು ಮತ್ತು ಕಾಣಿಕೆಗಳನ್ನು ಅರ್ಪಿಸಿ ಶ್ರೀಮಂತಗೊಳಿಸಿರುವುದನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಅಲಿಪಿರಿ ಬಾಂಬ್ ದಾಳಿಯಿಂದ ತಾವು ಪಾರಾದ ಘಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದವೇ ತಮಗೆ ಮರುಜನ್ಮ ನೀಡಿತು ಎಂದು ಭಾವುಕರಾಗಿ ನುಡಿದರು.
ದೇವಾಲಯದ ಪಾವಿತ್ರ್ಯ ಕಾಪಾಡುವುದರ ಜೊತೆಗೆ ಗೋರಕ್ಷಣೆ, ವೈದಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಟಿಟಿಡಿಗೆ ಸೂಚಿಸಿದ ನಾಯ್ಡು, ‘ವೃಕೋ ಗೋವಿಂದಂ’ ಉಪಕ್ರಮಕ್ಕೆ ಉತ್ತೇಜನ ನೀಡುವುದಾಗಿ ತಿಳಿಸಿದರು. ಅಲ್ಲದೆ, ದೇವಾಲಯದ ಮೂಲಸೌಕರ್ಯ ವಿಸ್ತರಣೆ ಹಾಗೂ ಟಿಟಿಡಿ ಸಹಯೋಗದೊಂದಿಗೆ ಆಂಧ್ರಪ್ರದೇಶದಾದ್ಯಂತ 5,000 ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನೂ ಪ್ರಕಟಿಸಿದರು.
‘ಮಾನವ ಸೇವೆಯೇ ಮಾಧವ ಸೇವೆ’ ಎಂಬ ತತ್ವದಡಿ ಅನ್ನದಾನ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಉಪಕ್ರಮಗಳನ್ನು ಸರ್ಕಾರ ಮತ್ತಷ್ಟು ಬಲಪಡಿಸಲಿದೆ. ಶ್ರೀಮಂತರು ತಮ್ಮ ಸಂಪತ್ತನ್ನು ಸಮಾಜ ಕಲ್ಯಾಣ, ಆಧ್ಯಾತ್ಮಿಕ ಕಾರ್ಯಗಳು ಹಾಗೂ ಬಡವರ ಸೇವೆಗೆ ಬಳಸುವಂತೆ ಜೈನ ದಂಪತಿಯ ದಾನವನ್ನು ಮಾದರಿಯಾಗಿ ಉಲ್ಲೇಖಿಸಿ ಮುಖ್ಯಮಂತ್ರಿ ಕರೆ ನೀಡಿದರು.
-
ನಿಧನ ವಾರ್ತೆ14 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಬಿಗ್ ನ್ಯೂಸ್9 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ14 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ14 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ14 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ14 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಬಿಗ್ ನ್ಯೂಸ್9 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ12 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















