ರಾಷ್ಟ್ರೀಯ
Ghulam Nabi Azad Resigns: ʼದುರಾದೃಷ್ಟವಶಾತ್ ರಾಹುಲ್ ಗಾಂಧಿ ರಾಜಕಾರಣಕ್ಕೆ ಪ್ರವೇಶಿಸಿದ ನಂತರ ಕಾಂಗ್ರೇಸ್ʼನ ಅದ:ಪತನ ಆರಂಭ : ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಗುಲಾಂ ನಬಿ ಅಜಾದ್
ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. (Ghulam Nabi Azad Resigns To Congress) ಈ ಮೂಲಕ ಹಲವು ದಶಕಗಳ ಕಾಲ ಜಮ್ಮು ಕಾಶ್ಮೀರದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ನ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಹಿರಿಯ ನಾಯಕ ಪಕ್ಷದಿಂದ ಹೊರ ಬಂದಿದ್ದಾರೆ. ಇದರಿಂದ ಈಗಾಗಲೇ ಕುಸಿತದತ್ತ ಮುಖ ಮಾಡಿರುವ ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಮತ್ತಷ್ಟು ಆಘಾತ ಎರಗಿದಂತಾಗಿದೆ.
ಅಜಾದ್ ಅವರು ಇಂದಿರಾ ಗಾಂಧಿ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ (Sonia Gandhi) ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆಗಸ್ಟ್ 16 ರಂದು ಗುಲಾಂ ನಬಿ ಆಜಾದ್ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸಿದ್ದರು. ಆಗಲೇ ಅವರು ಇನ್ನಷ್ಟು ಮಹತ್ವದ ನಿರ್ಧಾರ ಕೈಗೊಳ್ಳುವ ಸುಳಿವು ಲಭ್ಯವಾಗಿತ್ತು. ರಾಜೀನಾಮೆಯ ಜತೆಗೆ ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಉದ್ದೇಶಿ ಸುದೀರ್ಘ ಪತ್ರ ಬರೆದಿದ್ದಾರೆ.
ಅದರಲ್ಲಿ ರಾಹುಲ್ ಗಾಂಧಿಯ ಮೇಲೆ ಹರಿಹಾಯ್ದಿದ್ದಾರೆ. ಕಾಂಗ್ರೇಸ್ ಅದ:ಪತನಕ್ಕೆ ರಾಹುಲ್ ಗಾಂಧಿ ಹಾಗೂ ಅವರ ಚೇಲಾಗಳು ಕಾರಣ ಎಂದು ಖಾರವಾಗಿ ಪತ್ರದಲ್ಲಿ ವಿವರಿಸಿದ್ದಾರೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಅಜಾದ್ ಸೇರಿದಂತೆ ಕಾಂಗ್ರೆಸ್ ನ ಮೂವರು ಹಿರಿಯ ನಾಯಕರನ್ನು ಪಕ್ಷವನ್ನು ತ್ಯಜಿಸಿದರು. ಹರಿಯಾಣ ರಾಜ್ಯದ ಹಿರಿಯ ನಾಯಕ ಅನಂದ್ ಸಿಂಗ್ ಹಾಗೂ ದೇಶದ ಹಿರಿಯ ನ್ಯಾಯವಾದಿ ಕಪಿಲ್ ಸಿಬ್ಬಲ್ ಪಕ್ಷ ತೊರೆದ ಇನ್ನಿಬ್ಬರು ಹಿರಿಯರು . ಆದರೇ ಅವರ್ಯಾರು ಕೂಡ ಈ ರೀತಿ ರಾಹುಲ್ ಗಾಂಧಿ ಮೇಲಾಗಲಿ ಅಥಾವ ಗಾಂಧಿ ಕುಟುಂಬ ಸದಸ್ಯರ ಮೇಲಾಗಲಿ ದಾಳಿ ಮಾಡಿರಲಿಲ್ಲ.
ಪತ್ರದ ಪೂರ್ಣಪಾಠ ಇಂತಿದೆ
ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರೇ ಎಂದು ಆರಂಭವಾಗುವ ಆ ಪತ್ರದ ಪೂರ್ಣ ಪಾಠ ಇಂತಿದೆ. “ನಾನು ಕಾಂಗ್ರೆಸ್ ಪಕ್ಷಕ್ಕೆ 1970ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇರಿದೆ. ಆಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಅಂಥ ಒಳ್ಳೇ ಭಾವನೆ ಇರಲಿಲ್ಲ. ಸೇಖ್ ಮೊಹಮದ್ ಅಬ್ದುಲ್ಲಾ ಅವರನ್ನು 8ನೇ ಆಗಸ್ಟ್ 1953ರಲ್ಲಿ ಬಂಧಿಸಿದ ನಂತರ ಕಾಂಗ್ರೆಸ್ ಬಗ್ಗೆ ರಾಜ್ಯದ ಜನರಲ್ಲಿ ಅಸಮಾಧಾನವಿತ್ತು. ಇದ್ಯಾವುದನ್ನೂ ನಾನು ಗಮನದಲ್ಲಿ ಇರಿಸಿಕೊಳ್ಳಲಿಲ್ಲ. ನನ್ನ ವಿದ್ಯಾರ್ಥಿ ದೆಸೆಯಲ್ಲಿ ಮಹಾತ್ಮಾ ಗಾಂಧಿ, ಜವಾಹರ್ಲಾಲ್ ನೆಹರು, ಸರ್ದಾರ್ ವಲ್ಲಭಭಾಯ್ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಸುಭಾಷ್ ಚಂದ್ರಬೋಸ್ ಸೇರಿದಂತೆ ಹಲವು ಸ್ವಾತಂತ್ರ್ಯ ಹೋರಾಟಗಾರರಿಂದ ಪ್ರೇರಣೆ ಪಡೆದಿದ್ದೆ. ಸಂಜಯ್ ಗಾಂಧಿ ಅವರ ಸೂಚನೆ ಮೇರೆಗೆ 1975-76ರಲ್ಲಿ ಜಮ್ಮು ಮತ್ತು ಕಾಶ್ಮೀರ ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದೆ.
1977ರ ನಂತರ ಸಂಜಯ್ ಗಾಂಧಿ ಅವರೊಂದಿಗೆ ನಾನು ಜೈಲಿನಿಂದ ಜೈಲಿಗೆ ತಿರುಗಿದೆ. ಇಂದಿರಾಗಾಂಧಿ ಅವರ ಬಂಧನ ಖಂಡಿಸಿ ಮೆರವಣಿಗೆ ನಡೆಸಿದ ಕಾರಣಕ್ಕೆ ನನ್ನನ್ನು ತಿಹಾರ್ ಜೈಲಿನಲ್ಲಿ ಇಟ್ಟಿದ್ದರು. ಜನತಾ ಪಕ್ಷದ ವಿರುದ್ಧ ನಿರಂತರ ಹೋರಾಟದ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟಿಸುವಲ್ಲಿ ಸತತವಾಗಿ ತೊಡಗಿಸಿಕೊಂಡಿದ್ದೆ. ಸಂಘಟಿತ ಪ್ರಯತ್ನದಿಂದಾಗಿ 1980ರಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂತು.
ಭಾರತದ ಯುವ ಕಣ್ಮಣಿ ಸಂಜಯ್ ಗಾಂಧಿ ನಿಧನದ ನಂತರ ನಾನು ಯುವ ಕಾಂಗ್ರೆಸ್ ಅಧ್ಯಕ್ಷನಾಗಿ 1980ರಲ್ಲಿ ಅಧಿಕಾರ ವಹಿಸಿಕೊಂಡೆ. ನಿಮ್ಮ ಪತಿ ದಿವಂಗತ ರಾಜೀವ್ ಗಾಂಧಿ ಅವರನ್ನು ಸಂಜಯ್ ಗಾಂಧಿ ಅವರ ಮೊದಲ ಪುಣ್ಯತಿಥಿಯಂದು ಯುವ ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳುವ ಅವಕಾಶವೂ ನನಗೆ ಸಿಕ್ಕಿತ್ತು. ಬೆಂಗಳೂರಿನಲ್ಲಿ 1981ರ ಡಿಸೆಂಬರ್ 29, 30ರಲ್ಲಿ ನಡೆದ ಸಮಾವೇಶದಲ್ಲಿ ನನ್ನಿಂದಲೇ ರಾಜೀವ್ ಗಾಂಧಿ ಅವರು ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ವೀಕರಿಸಿದ್ದರು.
ಇಂದಿರಾಗಾಂಧಿ, ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಅವರ ಆಡಳಿತದಲ್ಲಿ 1982ರಿಂದ 2014ರವರೆಗೆ ಕೇಂದ್ರ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿತ್ತು. 1980ರ ನಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸಂಸದೀಯ ಮಂಡಳಿ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಒಂದಲ್ಲ ಒಂದು ಸಂದರ್ಭದಲ್ಲಿ ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಾನು ಉಸ್ತುವಾರಿಯಾಗಿದ್ದೆ. ಈ ಅವಧಿಯಲ್ಲಿ ಶೇ 90ರಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.
ಕಾಂಗ್ರೆಸ್ ಎಂಬ ಮಹಾನ್ ಸಂಸ್ಥೆಗೆ ನಾನು ಹಲವು ವರ್ಷಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ರಾಜ್ಯಸಭೆಯಲ್ಲಿ 7 ವರ್ಷ ವಿರೋಧ ಪಕ್ಷ ನಾಯಕನಾಗಿ ಕೆಲಸ ಮಾಡಿದೆ. ಪ್ರೌಢನಾದ ನಂತರ ಪ್ರತಿಕ್ಷಣವನ್ನೂ ಪಕ್ಷಕ್ಕಾಗಿ ದುಡಿದಿದ್ದೇನೆ. ಇದು ನನ್ನ ಆರೋಗ್ಯ ಮತ್ತು ಕುಟುಂಬದ ಮೇಲೆಯೂ ಪರಿಣಾಮ ಬೀರಿತು.
ರಾಹುಲ್ ಗಾಂಧಿ ರಾಜಕೀಯ ಪ್ರವೇಶ ಎಲ್ಲ ಹಾಳು ಮಾಡಿತು
ಯುಪಿಎ-1 ಮತ್ತು ಯುಪಿಎ-2 ಸರ್ಕಾರ ಬರುವಲ್ಲಿ ನಿಮ್ಮ ಪಾತ್ರ ದೊಡ್ಡದು ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಪಕ್ಷದ ಸಾಧನೆಗೆ ತಮ್ಮೊಂದಿಗೆ ಇದ್ದ ಹಿರಿಯ ನಾಯಕರು, ಅವರಿಗೆ ನೀವು ಕೊಟ್ಟಿದ್ದ ಜವಾಬ್ದಾರಿ ಮತ್ತು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದ ರೀತಿಯೂ ಮುಖ್ಯ ಕಾರಣವಾಗಿದೆ. ಆದರೆ, ದುರಾದೃಷ್ಟವಶಾತ್ ಜನವರಿ 2013ರಲ್ಲಿ ರಾಹುಲ್ ಗಾಂಧಿ ಅವರು ರಾಜಕಾರಣಕ್ಕೆ ಪ್ರವೇಶಿಸಿದ ನಂತರ, ನೀವು ಅವರಿಗೆ ಉಪಾಧ್ಯಕ್ಷನ ಜವಾಬ್ದಾರಿ ನೀಡಿದ ನಂತರ ಸಮಾಲೋಚನೆಯ ವ್ಯವಸ್ಥೆಯನ್ನೇ ಅವರು ಹಾಳು ಮಾಡಿದರು.
ರಾಹುಲ್ ಗಾಂಧಿಯ ದಡ್ಡತನದ ಕೆಲಸ
ಹಿರಿಯ ನಾಯಕರನ್ನು ಬದಿಗೊತ್ತಲಾಯಿತು. ಅನನುಭವಿ ಹೊಸಬರ ತಂಡವು ಪಕ್ಷವನ್ನು ಮುನ್ನಡೆಸಲು ಆರಂಭಿಸಿತು. ರಾಹುಲ್ ಗಾಂಧಿ ಅವರು ರಾಜಕಾರಣವನ್ನು ಮಕ್ಕಳಾಟದಂತೆ ನಿರ್ವಹಿಸಿದರು. ರಾಷ್ಟ್ರಪತಿಗಳು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಅವರು ಮಾಧ್ಯಮಗಳ ಎದುರು ಹರಿದುಹಾಕಿದ್ದು ಅವರ ದಡ್ಡತನದ ವರ್ತನೆಗೆ ದೊಡ್ಡ ನಿದರ್ಶನ. ಈ ಸುಗ್ರೀವಾಜ್ಞೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿತ್ತು, ಪಕ್ಷದ ಕೋರ್ ಗ್ರೂಪ್ ಅದನ್ನು ಸಿದ್ಧಪಡಿಸಿತ್ತು.ರಾಹುಲ್ ಗಾಂಧಿ ಅವರ ಈ ದಡ್ಡತನದ ಕೆಲಸವು ರಾಷ್ಟ್ರಪತಿ ಮತ್ತು ಪ್ರಧಾನಿಯ ಅಧಿಕಾರವನ್ನೇ ಪ್ರಶ್ನಿಸಿತ್ತು. 2014ರಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ರಾಹುಲ್ ಈ ನಡೆಯು ದೊಡ್ಡ ಕೊಡುಗೆ ಕೊಟ್ಟಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಲಪಂಥೀಯ ಸಂಘಟನೆಗಳು, ಕೆಲ ಕಾರ್ಪೊರೇಟ್ ಕಂಪನಿಗಳು ಈ ಘಟನೆಯನ್ನು ತಮ್ಮಿಷ್ಟದಂತೆ ಬಳಸಿಕೊಂಡವು.
2013ರಲ್ಲಿ ಜೈಪುರದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ನಾನು ಪಕ್ಷದ ಇತರ ನಾಯಕರ ನೆರವಿನಿಂದ ಪ್ರಸ್ತಾವವೊಂದನ್ನು ನೀಡಿದ್ದೆ. ಕಾಂಗ್ರೆಸ್ನ ಪುನರುಜ್ಜೀವನಕ್ಕೆ ಏನೆಲ್ಲಾ ಮಾಡಬೇಕು ಎಂಬ ವಿವರಗಳು ಅದರಲ್ಲಿ ಇತ್ತು. 2014ರ ಲೋಕಸಭೆ ಚುನಾವಣೆಯ ಕಾಲಮಿತಿಯಲ್ಲಿ ಜಾರಿಗೊಳಿಸಬೇಕಿದ್ದ ಶಿಫಾರಸುಗಳು ಅದರಲ್ಲಿತ್ತು. ಆದರೆ ಕಳೆದ 9 ವರ್ಷಗಳಿಂದ ಇದು ಪಕ್ಷದ ಕೇಂದ್ರ ಕಚೇರಿಯ ಗೋದಾಮಿನಲ್ಲಿ ಕೊಳೆಯುತ್ತಿದೆ. ತಮಗೆ ಮತ್ತು ಪಕ್ಷದ ಅಂದಿನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹಲವು ಬಾರಿ ನಾನು ವೈಯಕ್ತಿಕವಾಗಿ ನೆನಪಿಸಿದ್ದೆ. ಆದರೂ ಪ್ರಯೋಜನವಾಗಲಿಲ್ಲ.
‘ರಿಮೋಟ್ ಕಂಟ್ರೋಲ್ ಮಾಡೆಲ್
ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 2014 ಮತ್ತು 2019ರ ಲೋಕಸಭಾ ಚುನಾವಣೆಗಳನ್ನು ಸೋತೆವು. 2014ರಿಂದ 2022ರ ನಡುವೆ ನಡೆದ 49 ವಿಧಾನಸಭಾ ಚುನಾವಣೆಗಳ ಪೈಕಿ 39ರಲ್ಲಿ ಸೋಲನುಭವಿಸಿದೆವು. 2019ರ ನಂತರ ಪಕ್ಷದ ಪರಿಸ್ಥಿತಿ ಇನ್ನಷ್ಟು ಕೆಟ್ಟಿದೆ. ಏಕಾಏಕಿ ರಾಹುಲ್ ಗಾಂಧಿ ನಾಯಕತ್ವದಿಂದ ಕೆಳಗಿಳಿದರು. ಪಕ್ಷಕ್ಕಾಗಿ ತಮ್ಮ ಜೀವನವನ್ನೇ ಧಾರೆ ಎರೆದಿದ್ದ ಹಿರಿಯ ನಾಯಕರ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡಿದರು. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ‘ರಿಮೋಟ್ ಕಂಟ್ರೋಲ್ ಮಾಡೆಲ್’ ಎನ್ನುವ ಮಾತು ಪ್ರಚಲಿತದಲ್ಲಿತ್ತು. ಇಂದಿಗೂ ಅದು ಬದಲಾಗಿಲ್ಲ. ನೀವು ಅಧಿಕಾರದಲ್ಲಿದ್ದೀರಿ. ಆದರೆ ಎಲ್ಲ ನಿರ್ಧಾರಗಳನ್ನೂ ರಾಹುಲ್ ಗಾಂಧಿ ಅಥವಾ ಅವರ ಸೆಕ್ಯುರಿಟಿ ಗಾರ್ಡ್ ಮತ್ತು ಪಿಎಗಳು ತೆಗೆದುಕೊಳ್ಳುತ್ತಿದ್ದರು.
ಆಗಸ್ಟ್ 2020ರಲ್ಲಿ ನಾನು ಮತ್ತು ಪಕ್ಷದ ಇತರ 22 ನಾಯಕರು (ಮಾಜಿ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು) ನಿಮಗೆ ಪತ್ರ ಬರೆದು ಪಕ್ಷದಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಪ್ರಸ್ತಾಪಿಸಿದ್ದೆವು. ಆದರೆ ಈ ಪತ್ರಕ್ಕಾಗಿ ನಮ್ಮನ್ನು ಅಪ್ರಬುದ್ಧರು ವಾಚಾಮಗೋಚರ ನಿಂದಿಸಿದರು. ತೀರಾ ಕೆಟ್ಟದಾಗಿ ಮಾತನಾಡಿದರು. ಇಂದು ಎಐಸಿಸಿ ಮುನ್ನಡೆಸುತ್ತಿರುವ ಹಲವರು ಅಂದು ನನ್ನ ಅಣಕು ಶವಯಾತ್ರೆ ಮಾಡಿದ್ದರು. ನಿಮ್ಮನ್ನು ಮತ್ತು ನಿಮ್ಮ ಮಕ್ಕಳು, ಸಂಬಂಧಿಕರನ್ನು ನ್ಯಾಯಾಲಯಗಳಲ್ಲಿ ಸಮರ್ಥಿಸಿಕೊಳ್ಳುವ ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಮನೆ ಮೇಲೆ ದಾಳಿ ನಡೆಸಲಾಯಿತು.
ಬೇನಾಮಿ’ಗಳು
ನಾವು, ಕಾಂಗ್ರೆಸ್ ಪಕ್ಷದ 23 ಹಿರಿಯರು ಮಾಡಿದ ಒಂದೇ ಒಂದು ತಪ್ಪೆಂದರೆ ಪಕ್ಷದ ಸುಧಾರಣೆಗಾಗಿ ನೇರವಾಗಿ ತಮಗೆ ಪತ್ರ ಬರೆದಿದ್ದು. ಪತ್ರದಲ್ಲಿದ್ದ ಅಂಶಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುವುದು ಬಿಟ್ಟು ವಿಶೇಷ ಸಭೆಯಲ್ಲಿಯೂ ನಮ್ಮ ಮೇಲೆ ವಾಗ್ದಾಳಿ ನಡೆಯಿತು.
ಕಾಂಗ್ರೆಸ್ ಪಕ್ಷವು ಇಂದು ಮತ್ತೆಂದು ಸರಿಪಡಿಸಲು ಆಗದ ಸ್ಥಿತಿ ತಲುಪಿದೆ. ‘ಬೇನಾಮಿ’ಗಳು ಹುಟ್ಟಿಕೊಂಡಿದ್ದಾರೆ. ಅವರೇ ಪಕ್ಷದ ನಾಯಕತ್ವವನ್ನು ನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಪುನರುಜ್ಜೀವನ ಸಾಧ್ಯವೇ ಇಲ್ಲ ಎನ್ನುವ ಸ್ಥಿತಿಗೆ ಬಂದಿದೆ. ಪಕ್ಷವು ಸಮಗ್ರವಾಗಿ ನಾಶವಾಗಿದೆ, ಪರಿಸ್ಥಿತಿ ಸಂಪೂರ್ಣ ವ್ಯತಿರಿಕ್ತವಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಪಕ್ಷದ ನಾಯಕತ್ವ ವಹಿಸಿಕೊಳ್ಳುವವರು ಸೂತ್ರದ ಗೊಂಬೆಯಂತೆ ವರ್ತಿಸುತ್ತಿದ್ದಾರೆ.
ರಾಷ್ಟ್ರಮಟ್ಟದಲ್ಲಿ ನಮ್ಮ ಅವಕಾಶವನ್ನು ಬಿಜೆಪಿ ಒತ್ತೆಯಿಟ್ಟಿದ್ದೇವೆ. ರಾಜ್ಯಗಳ ಮಟ್ಟದಲ್ಲಿ ಗೆಲುವಿನ ಅವಕಾಶವನ್ನು ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಟ್ಟಿದ್ದೇವೆ. ಕಳೆದ 8 ವರ್ಷಗಳಲ್ಲಿ ಗಾಂಭೀರ್ಯವೇ ಇಲ್ಲದ ವ್ಯಕ್ತಿಯ ಮೇಲೆ ಉನ್ನತ ನಾಯಕತ್ವ ಹಲವು ಪ್ರಯೋಗಗಳನ್ನು ನಡೆಸಿದ್ದೇ ಇದಕ್ಕೆ ಮುಖ್ಯ ಕಾರಣ.
ಪಳೆಯುಳಿಕೆಯಂತಾಗಿದೆ
ಪಕ್ಷದ ಸಂಘಟನೆಯ ಯಾವುದೇ ಹಂತಕ್ಕೆ ದೇಶದಲ್ಲಿ ಎಲ್ಲಿಯೂ ಚುನಾವಣೆಗಳು ನಡೆಯಲಿಲ್ಲ. ಎಐಸಿಸಿ ಆರಿಸಿಕೊಂಡ ಕೆಲವೇ ನಾಯಕರು 24, ಅಕ್ಬರ್ ರೋಡ್ ನಲ್ಲಿ ಕುಳಿತು ಪಟ್ಟಿಗಳಿಗೆ ಸಹಿ ಹಾಕಬೇಕಿದೆ. ಬೂತ್, ಬ್ಲಾಕ್, ಜಿಲ್ಲೆ ಅಥವಾ ರಾಜ್ಯಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮತ ಹಾಕಬೇಕಾದ ಮತದಾರರ ಪಟ್ಟಿ ಪ್ರಕಟಿಸಿಲ್ಲ. ಭಾರತದ ಸ್ವಾತಂತ್ರ್ಯಕ್ಕೆ ಶ್ರಮಿಸಿದ ಮಹಾನ್ ಸಂಘಟನೆಯು ಇಂದು ಒಂದು ಪಳೆಯುಳಿಕೆಯಂತಾಗಿದೆ. ಈ ಪಳೆಯುಳಿಕೆಯ ಆಳ್ವಿಕೆಗಾಗಿ ಉನ್ನತ ನಾಯಕತ್ವವು ಮೋಸದ ಮೇಲೆ ಮೋಸ ಮಾಡುತ್ತಿದೆ. ಸ್ವತಂತ್ರ ಭಾರತದ 75ನೇ ಸಂಭ್ರಮದಲ್ಲಿ ಇಂಥ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬೇಕಿತ್ತೇ ಎಂಬ ಪ್ರಶ್ನೆಯನ್ನು ಪಕ್ಷದ ಉನ್ನತ ನಾಯಕತ್ವ ಕೇಳಿಕೊಳ್ಳಬೇಕಿದೆ.
ನನಗೆ ತಮ್ಮ ಕುಟುಂಬದೊಂದಿಗೆ ಅತ್ಯಂತ ಹತ್ತಿರದ ಸಂಬಂಧವಿದೆ. ದಿವಂಗತರಾದ ಇಂದಿರಾ ಗಾಂಧಿ, ಸಂಜಯ್ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ನನಗೆ ಆಪ್ತ ಒಡನಾಟವಿತ್ತು. ವೈಯಕ್ತಿಕವಾಗಿ ನಿಮ್ಮ ವ್ಯಕ್ತಿತ್ವದ ಬಗ್ಗೆ ನನಗೆ ಗೌರವ ಇದೆ. ಮುಂದಿನ ದಿನಗಳಲ್ಲಿಯೂ ಅದು ಮುಂದುವರಿಯುತ್ತದೆ. ನಾನು ಮತ್ತು ನನ್ನ ಕೆಲ ಮಿತ್ರರು ಕಾಂಗ್ರೆಸ್ ಪಕ್ಷದ ಸಾರ್ವಕಾಲಿಕ ಆದರ್ಶ ಮತ್ತು ಗುರಿಗಳನ್ನು ನಮ್ಮ ಜೀವನದ ಭಾಗವೇ ಆಗಿಸಿಕೊಂಡಿದ್ದೇವೆ. ಅದಕ್ಕಾಗಿ ನಮ್ಮ ಇಡೀ ಜೀವನ ಮುಡಿಪಾಗಿಟ್ಟಿದ್ದೇವೆ.
ಮೇಲೆ ಉಲ್ಲೇಖಿಸಿದ ಎಲ್ಲ ಕಾರಣಗಳಿಂದ, ಮುಖ್ಯವಾಗಿ ಎಐಸಿಸಿಯನ್ನು ನಿರ್ವಹಿಸುತ್ತಿರುವ ಕೂಟದ ಸಾಮರ್ಥ್ಯ ಮತ್ತು ಇಚ್ಛಾಶಕ್ತಿಯ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದೇನೆ. ಪಕ್ಷವು ಈಗ ಭಾರತ್ ಜೋಡೋ ಯಾತ್ರೆ ಆರಂಭಿಸಿದೆ. ಅದಕ್ಕಿಂತ ಮೊದಲು ಕಾಂಗ್ರೆಸ್ ಜೋಡೋ ಯಾತ್ರೆ ನಡೆಯಬೇಕಿತ್ತು. ಅತ್ಯಂತ ವಿಷಾದದಿಂದ ಪಕ್ಷದೊಂದಿಗಿನ ನನ್ನ 50 ವರ್ಷಗಳ ಸಂಬಂಧವನ್ನು ಕಡಿದುಕೊಳ್ಳುತ್ತಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಗಳಿಗೂ ರಾಜೀನಾಮೆ ಕೊಡುತ್ತಿದ್ದೇನೆ.
ಗುಲಾಂ ನಬಿ ಆಜಾದ್ ಅವರ ರಾಜೀನಾಮೆಯ ಕುರಿತು ಪ್ರತಿಕ್ರಿಯೆ ನೀಡಿರುವ ಓಮರ್ ಅಬ್ದುಲ್ಲಾ, “ದೀರ್ಘ ಕಾಲದಿಂದಲೂ ಕಾಂಗ್ರೆಸ್ಗೆ ಹೊಡೆತ ಬೀಳಲಿದೆ ಎಂದು ವದಂತಿಗಳಿತ್ತು. ಬಹುಶಃ ಇತ್ತೀಚಿನ ದಿನಗಳಲ್ಲಿ ಪಕ್ಷವನ್ನು ತೊರೆದ ಅತ್ಯಂತ ಹಿರಿಯ ನಾಯಕ ಗುಲಾಂ ನಬಿ ಆಜಾದ್. ಅವರ ರಾಜೀನಾಮೆ ಪತ್ರವು ತುಂಬಾ ನೋವಿನಿಂದ ಕೂಡಿದೆ. ಭಾರತದ ಭವ್ಯವಾದ ಹಳೆಯ ಪಕ್ಷವು ಸ್ಫೋಟಗೊಳ್ಳುವುದನ್ನು ನೋಡಲು ದುಃಖಕರವಾಗಿದೆ ಮತ್ತು ಸಾಕಷ್ಟು ಭಯಾನಕವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಜಿ 23 ಗುಂಪಿನ ಪ್ರಮುಖ ಸದಸ್ಯ
ಆಜಾದ್ ಅವರು ಕಾಂಗ್ರೆಸ್ ನ ಬಂಡಾಯ ಗುಂಪು ‘ಜಿ23’ ಗುಂಪಿನ ಪ್ರಮುಖ ಸದಸ್ಯರಾಗಿದ್ದಾರೆ. ಈ ಗುಂಪು ಪಕ್ಷದ ನಾಯಕತ್ವವನ್ನು ಟೀಕಿಸುತ್ತಿದೆ ಮತ್ತು ಸಂಘಟನೆಯ ಬದಲಾವಣೆಗೆ ಒತ್ತಾಯಿಸುತ್ತಿದೆ. ರಾಜ್ಯಸಭೆಯಿಂದ ನಿವೃತ್ತರಾದ ನಂತರ ಆಜಾದ್ ಅವರನ್ನು ಮತ್ತೆ ಮೇಲ್ಮನೆಗೆ ಕಳುಹಿಸಿಲ್ಲ ಎಂಬುವುದು ಉಲ್ಲೇಖನೀಯ
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
Uncategorized20 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized12 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
Uncategorized20 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ14 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಅಪರಾಧ27 minutes agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಬಿಗ್ ನ್ಯೂಸ್8 minutes agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ


















