Connect with us

ಅಪರಾಧ

Sonali Phogat death : ಪಾನೀಯದಲ್ಲಿ ರಾಸಾಯನಿಕ ಬೆರೆಸಿ ಸೋನಾಲಿ ಫೋಗಟ್ ಗೆ ಕುಡಿಸಿದ್ದ ಆರೋಪಿಗಳು ಶೌಚಾಲಯಕ್ಕೆ ಕರೆದುಕೊಂಡು 2 ಗಂಟೆ ಕಾಲ ಕಳೆದಿದ್ದರು

Published

on

Ad Widget

Ad Widget

Ad Widget

Ad Widget

ಪಣಜಿ Panaji ಆ26 : ಟಿಕ್‌ಟಾಕ್ ಸ್ಟಾರ್‌ , ಬಿಗ್‌ ಬಾಸ್‌ ತಾರೆ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರು ಅಸ್ವಸ್ಥಗೊಳ್ಳುವುದಕ್ಕೆ ತುಸು ಮುಂಚೆ ಅವರಿಗೆ ಪಾನೀಯದಲ್ಲಿ ರಾಸಾಯನಿಕವನ್ನು ಬೆರೆಸಿ ಬಲವಂತವಾಗಿ ಕುಡಿಸಿರುವ ಸ್ಪೋಟಕ ಮಾಹಿತಿ ಹೊರಬಿದ್ದಿದೆ. (Sonali Phogat death Mystry) ಇದನ್ನು ಸ್ವತ: ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ,ಗೋವಾ ಐಜಿಪಿ ಓಂವೀರ್ ಸಿಂಗ್ ಬಿಷ್ನೋಯಿ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

‘ಆರೋಪಿ ಸುಧೀರ್ ಸಂಗ್ವಾನ್ ಮತ್ತು ಅತನ ಸಹವರ್ತಿ ಸುಖ್ವಿಂದರ್ ವಾಸಿ ಕ್ಲಬ್‌ನಲ್ಲಿ ಸೊನಾಲಿ ಫೋಗಟ್ ಅವರೊಂದಿಗೆ ಪಾರ್ಟಿ ಮಾಡುತ್ತಿರುವುದು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಇಬ್ಬರಲ್ಲಿ ಒಬ್ಬಾತ ಫೋಗಟ್ ಅವರಿಗೆ ಬಲವಂತವಾಗಿ ದ್ರವವೊಂದನ್ನು ಆಕೆಯ ಗಂಟಲಿಗೆ ಸುರಿಯುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ’ ಎಂದು ಐಜಿಪಿ ಓಂವೀರ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

Ad Widget

Ad Widget alt="Ad Widget"/>

Ad Widget

ಆ ಬಳಿಕ ಈ ಬಗ್ಗೆ ‘ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸುಖ್ವಿಂದರ್ ಮತ್ತು ಸುಧೀರ್ ಇಬ್ಬರೂ ಸೊನಾಲಿ ಫೋಗಟ್ ಅವರಿಗೆ ಉದ್ದೇಶಪೂರ್ವಕವಾಗಿ ರಾಸಾಯನಿಕವೊಂದನ್ನು (an obnoxious concoction of chemicals) ಪಾನೀಯದಲ್ಲಿ ಬೆರೆಸಿ ಕುಡಿಸಿದ್ದಾಗಿ ಒಪ್ಪಿಕೊಂಡರು’ ಎಂದು ಅವರು ತಿಳಿಸಿದ್ದಾರೆ. ರಾಸಯನಿಕ ದ್ರವ ಸೇವಿಸಿದ ಬಳಿಕ ಸೋನಾಲಿ ನಿಯಂತ್ರಣ ಕಳಕೊಂಡಿದ್ದರು.

Ad Widget

Ad Widget <> Ad Widget

Sonali Phogat Death :ಆಕ್ಷೇಪಾರ್ಹ ವಿಡಿಯೋ ಹಿಡ್ಕೊಂಡು ಆಕೆಯನ್ನು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾತ ರೇಪ್‌ ಮಾಡಿ ಹತ್ಯೆ ಮಾಡಿದ್ದಾನೆ : ದೂರು

2 ಗಂಟೆ ಕಾಲ ಶೌಚಾಲಯದಲ್ಲಿ…!

ಮುಂಜಾನೆ 4:30 ಗಂಟೆಯವರೆಗೂ ಆಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಆ ಬಳಿಕ ಶಂಕಿತ ವ್ಯಕ್ತಿ ಆಕೆಯನ್ನು ಶೌಚಾಲಯಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಎರಡು ಗಂಟೆಗಳ ಕಾಲ ಕಳೆದಿದ್ದಾರೆ. ಎರಡು ಗಂಟೆಗಳ ಕಾಲ ಅಲ್ಲಿ ಅವರು ಏನು ಮಾಡಿದರು ಎಂಬುದರ ಬಗ್ಗೆ ಆರೋಪಿಯು ಇವರೆಗೆ ಬಾಯ್ಬಿಟ್ಟಿಲ್ಲ. ಹಾಗಾಗಿ ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಎಫ್‌ಎಸ್‌ಎಲ್ ತಂಡವು ಪರಿಶೀಲನೆಗೆ ಅವರನ್ನು ವಿವಿಧ ಸ್ಥಳಗಳಿಗೆ ಕರೆದೊಯ್ಯಲಿದೆ. ಇಬ್ಬರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಡ್ರಗ್ ಒವರ್‌ ಡೋಸ್ ನ ಪರಿಣಾಮದಿಂದ ಅವರು ಮೃತಪಟ್ಟಿರುವಂತೆ ಕಾಣಿಸುತ್ತಿದೆ ಎಂದು ಐಜಿಪಿ ವಿವರಿಸಿದರು.

Ad Widget

Ad Widget

ಈ ಮೂವರನ್ನು ಗೋವಾದ ಹೊಟೇಲ್‌ ಗೆ ಕರಕೊಂಡು ಬಂದ ಟ್ಯಾಕ್ಸಿ ಚಾಲಕನಿಗೆ ಹುಡುಕಾಟ ನಡೆಸಲಾಗುತ್ತದೆ. ಆತ ಪತ್ತೆಯಾದರೆ ಆತನಿಂದಲೂ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುವುದು. ಆರೋಪಿಗಳಿಗೆ ಹಾಗೂ ಸೋನಾಲಿಗೆ ಒಂದಷ್ಟು ಹಣಕಾಸಿನ ವ್ಯವಹಾರಗಳಿದ್ದವು. ಇದೇ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ

ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ (42) ಸೋಮವಾರ ಗೋವಾದಲ್ಲಿ ಮೃತಪಟ್ಟಿದ್ದರು. ಸೋನಾಲಿ ಫೋಗಟ್ ಅವರನ್ನು ಅವರ ಇಬ್ಬರು ಸಹಚರರು ಆಗಸ್ಟ್ 23, 2022 ರಂದು ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಗೆ ಕರೆತಂದಿದ್ದರು . ಅಲ್ಲಿ ಆಕೆ ಮೃತಪಟ್ಟಿರುವುದಾಗಿ ಆಕೆಯನ್ನು ಪರೀಕ್ಷಿಸಿದ ವೈದ್ಯರು ತಿಳಿಸಿದ್ದರು.

Meghana raj : ಲಾಸ್ ವೇಗಾಸ್ ನಿಂದ ಮೇಘನಾ ರಾಜ್ ಶೇರ್ ಮಾಡಿದ ಭಾವನಾತ್ಮಕ ಪೋಸ್ಟ್ ಸಕ್ಕತ್ ಟ್ರೆಂಡಿಗ್ – ಅಂತಹದೇನಿದೆ ಅದರಲ್ಲಿ ? 2 ನೇ ಮದುವೆ ಬಗ್ಗೆ ಆಕೆ ಏನು ಹೇಳಿದ್ರು ?

ದೇಹದ ಮೇಲೆ ಗಾಯ:

ಹೃದಯಾಘಾತದಿಂದ ಅವರು ಸಾವಿಗೀಡಾಗಿರುವುದಾಗಿ ಮೊದಲಿಗೆ ಹೇಳಲಾಗಿತ್ತು. ಅದರೆ, ಅವರ ಮರಣೋತ್ತರ ಪರೀಕ್ಷೆ ವರದಿ ಗುರುವಾರ ಬಹಿರಂಗವಾಗಿದ್ದು, ಅವರ ದೇಹದ ಮೇಲೆ ಗಾಯಗಳಾಗಿರುವುದು ತಿಳಿದುಬಂದಿತ್ತು. ಹೀಗಾಗಿ ನಟಿ ಕೊಲೆಯಾಗಿರುವುದು ಖಚಿತವಾಗಿತ್ತು. ಆಕೆಯ ಪತಿ ಕೂಡ ಕೆಲವು ವರ್ಷಗಳ ಹಿಂದೆ ನಿಗೂಢವಾಗಿ ಸಾವನ್ನಪ್ಪಿದ್ದರು.

ಕೊಲೆ ಪ್ರಕರಣ

ಪ್ರಕರಣ ಸಂಬಂಧ ಗೋವಾ ಪೊಲೀಸರು ಸುಧೀರ್ ಸಂಗ್ವಾನ್ ಹಾಗೂ ಸುಖ್ವಿಂದರ್ ವಾಸಿ ಎಂಬುವರನ್ನು ಆರೋಪಿಗಳೆಂದು FIR ನಲ್ಲಿ ಉಲ್ಲೇಖಿಸಿದ್ದಾರೆ. .ಸೋನಾಲಿ ಸಹೋದರ ರಿಂಕು ಧಾಕಾ ಬುಧವಾರ ಅಂಜುನಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು. ಅದರಂತೆ ಗೋವಾ ಪೊಲೀಸರು ಆಕೆಯ ಇಬ್ಬರು ಸಹಚರರಾದ ಸುಧೀರ್ ಸಗ್ವಾನ್ ಮತ್ತು ಸುಖ್ವಿಂದರ್ ವಾಸಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು ಈ ಇಬ್ಬರೂ, ನಟಿಯೊಂದಿಗೆ ಗೋವಾಕ್ಕೆ ಆಗಮಿಸಿದ್ದರು. ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

Karnataka PU Lecturer Recruitment : ಪಿಯು ಉಪನ್ಯಾಸಕರ ನೇಮಕಾತಿ – 778 ಹುದ್ದೆಗೆ ಅಧಿಸೂಚನೆ | ಇಲ್ಲಿದೆ ವಿದ್ಯಾರ್ಹತೆ, ವಯೋಮಿತಿಯ ವಿವರ

ಅತ್ಯಾಚಾರಗೈದು ಕೊಲೆ

ಸಹೋದರ ರಿಂಕು ಧಾಕಾ ಸೋನಾಲಿಯ ಪಿಎ ಸುಧೀರ್ ಸಾಂಗ್ವಾನ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಸೋನಾಲಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. 2021ರಲ್ಲಿ ಸಾಂಗ್ವಾನ್ ಆತನ ಸ್ನೇಹಿತ ಸುಖ್ವಿಂದರ್ ಸಹಾಯದೊಂದಿಗೆ ಸೋನಾಲಿಗೆ ಆಹಾರದಲ್ಲಿ ಮತ್ತು ಬರುವ ಔಷಧ ನೀಡಿದ್ದಾನೆ. ಬಳಿಕ ಆಕೆಯ ಆಕ್ಷೇಪಾರ್ಹ ವೀಡಿಯೊ ಚಿತ್ರಿಕರಿಸಿ ಇಟ್ಟುಕೊಂಡಿದ್ದಾನೆ. ಇದನ್ನು ಹಿಡ್ಕೊಂಡು ಆಕೆಯನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದು ಅದನ್ನು ತೋರಿಸಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ಸಹೋದರ ಆರೋಪಿಸಿದ್ದರು . ಆಕೆಯ ಹತ್ಯೆಯ ಹಿಂದೆ ಕೆಲವು ರಾಜಕೀಯ ಪಿತೂರಿ ಇದೆ ಎಂದು ಆರೋಪಿಸಿದರು.

ಸೊನಾಲಿ ಅವರು 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‌ದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಸೊನಾಲಿ ಫೋಗಟ್, 14ನೇ ಆವೃತ್ತಿಯ ‘ಬಿಗ್‌ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

Swelling Feet : ಕಾಡುತ್ತಿದ್ದೆಯೇ ಕಾಲಿನ ಊತ – ಅದಕ್ಕಿದೆ ಇಲ್ಲಿ ಮನೆ ಮದ್ದು

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!