Connect with us

ದಕ್ಷಿಣ ಕನ್ನಡ

RSS Baitak : 3 ದಿನಗಳ ದಕ್ಷಿಣ ಪ್ರಾಂತ ಬೈಠಕ್ ಪುತ್ತೂರಿನಲ್ಲಿ ಆರಂಭ : ಬಿಜೆಪಿ ನಾಯಕರಿಗೆ ಕ್ಲಾಸ್‌ ಹಾಗೂ ಖಡಕ್‌ ಸಂದೇಶ ರವಾನೆ ಸಾಧ್ಯತೆ

Published

on

Ad Widget

Ad Widget

Ad Widget

Ad Widget

ಪುತ್ತೂರು (ದ.ಕ):  RSS ನ ಮೂರು ದಿನಗಳ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ (puttur vivekananda college) ಸ್ವಯಂ ಸೇವಕರ ಸರ್ಪಗಾವಲಿನ ಮಧ್ಯೆ ಸೆ 26 ರಂದು ಆರಂಭಗೊಂಡಿತ್ತು. ವರ್ಷದೊಳಗೆ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆ, ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಯ ಬಳಿಕ ಸಂಘ ಪರಿವಾರದ ಕಾರ್ಯಕರ್ತರ ಮಧ್ಯೆ ಮಡ್ಡುಗಟ್ಟಿರುವ ನೋವು. ಬಿಜೆಪಿ ಕಾರ್ಯಕರ್ತರಿಗೆ ನಾಯಕರ ಮೇಲಿರುವ ಆಕ್ರೋಶ, ಅಡಳಿತ ಪಕ್ಷ ಬಿಜೆಪಿ ಮೇಲಿರುವ 40% ಕಮೀಷನ್‌ ಆರೋಪ , ಇವೆಲ್ಲ ವಿದ್ಯಮಾನಗಳ ನಡುವೆ ನಡೆಯುತ್ತಿರುವ RSS ಬೈಠಕ್‌ ನಿಂದ ಹೊರಹೊಮ್ಮುವ ಸಂದೇಶದ ಬಗ್ಗೆ ವ್ಯಾಪಕ ಕುತೂಹಲ ಸೃಷ್ಟಿಯಾಗಿದೆ.  ಸಂದೇಶ ಬಹಿರಂಗವಾಗಿ ನೀಡದಿದ್ದರೂ, ಆತಂರಿಕವಾಗಿ ನೀಡುವ ಈ ಸಂದೇಶ ಸಂಘ ಪರಿವಾರದ ಒಟ್ಟಾರೆ ಚಟುವಟಿಕೆ ಮೇಲೆ ದೊಡ್ಡ ಪರಿಣಾಮ ಬೀರುವುದರಿಂದ ಬೈಟಕ್‌ ಗೆ ಎಲ್ಲಿಲ್ಲದ ಮಹತ್ವ ದೊರೆತಿದೆ

Ad Widget

Ad Widget

Ad Widget

Ad Widget

ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶ ನಿಯಂತ್ರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು,  ಕರಾವಳಿಯಲ್ಲಿ ಬಿಜೆಪಿಯನ್ನು ಸಂಪೂರ್ಣ ಹಿಡಿತದಲ್ಲಿಡುವುದು ಈ ಬೈಠಕ್​ನ ಪ್ರಮುಖ ಉದ್ದೇಶ ಎಂದೇ ವಿಶ್ಲೇಷಿಸಲಾಗಿದೆ. ಮೊದಲ ದಿನ ಅರ್‌ ಎಸ್‌ ಎಸ್‌ ಶಾಖೆ,  ಅನ್ನು ಇನ್ನಷ್ಟು ವಿಸ್ತರಿಸುವ ಬಗ್ಗೆ  ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಬೈಠಕ್‌ ಹಿನ್ನಲೆಯಲ್ಲಿ ಕಾಲೇಜಿನ ಒಳಗೆ ಆಪೇಕ್ಷಿತರಿಗೆ ಹೊರತು ಪಡಿಸಿ, ಉಳಿದವರಿಗೆ ಕಡ್ಡಾಯವಾಗಿ ಪ್ರವೇಶ ನಿರ್ಬಂಧಿಸಲಾಗಿದೆ,  ವಾಹನಗಳ ಪ್ರವೇಶಕ್ಕೂ ಅನುಮತಿ ನಿರಾಕರಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ನೋಡಿಕೊಳ್ಳಲು ಸ್ವಯಂ ಸೇವಕರ ಪಹರೆ ಹಾಕಲಾಗಿದೆ

Ad Widget

Ad Widget alt="Ad Widget"/>

Ad Widget

  ಸಹ ಸರಕಾರ್ಯವಾಹ ಮುಕುಂದ ನೇತೃತ್ವದಲ್ಲಿ ನಡೆಯುವ ಈ ಬೈಠಕ್‌ ಪ್ರಮುಖವಾಗಿ  ಆರ್​ಎಸ್​ಎಸ್ ಬೆಳವಣಿಗೆಗೆ ಕಾರ್ಯತಂತ್ರರೂಪಿಸಲು ಆಯೋಜಿಸಲಾಗಿದೆ. ಅ.28 ರವರೆಗೆ ನಡೆಯುವ ಈ ಬೈಠಕ್​ನಲ್ಲಿ ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್, ಕ್ಷೇತ್ರೀಯ ಪ್ರಚಾರಕ ಸುಧೀರ್, ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಮೊದಲಾದ ಪ್ರಮುಖರು ಭಾಗವಹಿಸಲಿದ್ದಾರೆ. ಆರ್​ಎಸ್​ಎಸ್ ಅಖಿಲ ಭಾರತ ಪ್ರತಿನಿಧಿ ಸಭಾದ ಪ್ರಮುಖರೂ ಸೇರಿ 800 ಅಪೇಕ್ಷಿತರು ಆಗಮಿಸಲಿದ್ದಾರೆ.

Ad Widget

Ad Widget <> Ad Widget

Narendra Modi | Big Breaking: ಸೆ.2 ಕ್ಕೆ ಮೋದಿ ಮಂಗಳೂರಿಗೆ – ಸಂಸದ, ರಾಜ್ಯಾಧ್ಯಕ್ಷರ ಬದಲಾವಣೆಗೆ ಟ್ವೀಟ್ ಅಭಿಯಾನಕ್ಕೆ ಕೈ ಹಾಕಿದ ‘Post Card’ ‘ನಮೋ ಕರುನಾಡು’

ಈ ಬೈಠಕ್‌ ನಲ್ಲಿ ಸಂಘದ ಶಾಖೆ ವಿಸ್ತರಣೆ, ಮುಂದಿನ ಕಾರ್ಯಯೋಜನೆಯ ಬಗ್ಗೆ ,ವಿವಿಧ ಕ್ಷೇತ್ರಗಳ ಪ್ರಮುಖರಿಗೆ ಮಾಹಿತಿ ನೀಡಲಾಗುತ್ತದೆ. ಅಲ್ಲದೆ ಪರಿವಾರದ ಸಂಘಟನಾತ್ಮಕ ವರದಿ ಪಡೆಯಲಾಗುತ್ತದೆ.  ಆದರೇ ಈ ಬಾರಿ ಚುನಾವಣೆಯ ಕಾವು ಜೋರಾಗಿರುವುದರಿಂದ ಬಿಜೆಪಿಯ ಬಗ್ಗೆಯು ಸುದೀರ್ಘ ಚರ್ಚೆ ನಡೆಯುವ ಸಂಭವನೀಯತೆ ಅಧಿಕ. 

Ad Widget

Ad Widget
ಸಾಂಧರ್ಬಿಕ ಚಿತ್ರ

  ಇಂದು ಸಮನ್ವಯ ಬೈಠಕ್:

ಆ.27ರಂದು ಆರ್​ಎಸ್​ಎಸ್ ಮತ್ತು ಬಿಜೆಪಿ ಸಮನ್ವಯ ಬೈಠಕ್ ಜರುಲಿದ್ದು. ಇದು ಈ ಬೈಠಕ್​ನ ಕೇಂದ್ರಬಿಂದು. ಬಿಜೆಪಿ ರಾಜ್ಯಾಧ್ಯಕ್ಷರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಆದರೇ ನಳಿನ್‌ ಕುಮಾರ್‌ ಕಟೀಲ್‌ ಅವರು ಪ್ರಧಾನಿ ಮಂಗಳೂರು ಭೇಟಿಯ ಕಾರ್ಯಕ್ರಮದಲ್ಲಿ ವ್ಯಸ್ತರಾಗಿರುವುದರಿಂದ ಕೊನೆಯ ದಿನ ಕೆಲಕಾಲವಷ್ಟೆ ಭೇಟಿ ನೀಡಬಹುದು ಎಂದು ಮೂಲಗಳು ತಿಳಸಿವೆ. ಶೋಭಾ ಕರಂದ್ಲಾಜೆ ಹಾಗೂ ಸಿಟಿ ರವಿಯವರು ಬೇರೆ ರಾಜ್ಯಗಳ  ಪ್ರವಾಸದಲ್ಲಿರುವುದರಿಂದ ಬೈಠಕ್‌ ಗೆ ಬರುವ ಸಾಧ್ಯತೆ ಕಮ್ಮಿ ಎನ್ನಲಾಗುತ್ತಿದೆ. ರವಿ ಕುಮಾರ್‌ ಹಾಗೂ ರಾಜೇಶ್‌ ಅವರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

Honda Shine Celebration: ಹೋಂಡಾ ಶೈನ್ ಸೆಲೆಬ್ರೇಷನ್ ಎಡಿಷನ್ ಭಾರತದಲ್ಲಿ ಬಿಡುಗಡೆ ! ಬೆಲೆ, ಮೈಲೇಜ್ ಬಣ್ಣ ಹಾಗೂ ಉಳಿದ ವಿವರಗಳ ಮಾಹಿತಿ ಇಲ್ಲಿದೆ

ಪ್ರವೀಣ್ ನೆಟ್ಟಾರು ಕೊಲೆ ನಂತರ ಬಿಜೆಪಿ ನಾಯಕರು ಮತ್ತು ಹಿಂದು ಸಂಘಟನೆಗಳ ಮಧ್ಯೆ ಅಂತರ ಸೃಷ್ಟಿಯಾಗಿದೆ. ಹಿಂದು ಕಾರ್ಯಕರ್ತರು ಹಾಗೂ ಬಿಜೆಪಿ ನಾಯಕರ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ನಡೆಯುತ್ತಿವೆ. ಈ ವಿಚಾರದಲ್ಲಿ ಸಂಘ ಪರಿವಾರದ ನಾಯಕರು, ಹಿಂದು ಕಾರ್ಯಕರ್ತರ ಜತೆ ಪುತ್ತೂರು ಸಹಿತ ವಿವಿಧ ತಾಲೂಕುಗಳಲ್ಲಿ ಚರ್ಚೆ ನಡೆಸಿದ್ದಾರೆ. ಬಹುತೇಕ ಚರ್ಚೆಗಳಲ್ಲಿ ಅಧಿಕಾರ ಅನುಭವಿಸುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಾರ್ಯಕರ್ತರ ಓಟು ಪಡೆದು ಅಧಿಕಾರ ಅನುಭವಿಸುವ ಬಿಜೆಪಿ ನಾಯಕರನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರದಿಂದ ಕೆಳಗಿಳಿಸುವಷ್ಟರ ಮಟ್ಟಿನ ಕೋಪ ವ್ಯಕ್ತವಾಗಿತ್ತು. ಬಿಜೆಪಿ ಮತ್ತು ಹಿಂದು ಸಂಘಟನೆಗಳ ನಡುವಿನ ಈ ಮುಸುಕಿನ ಗುದ್ದಾಟಕ್ಕೆ ತಾತ್ಕಾಲಿಕ ತೆರೆ ಎಳೆಯುವ ಉದ್ದೇಶದಿಂದಲೇ ಈ ಸಮನ್ವಯ ಬೈಠಕ್ ಹಮ್ಮಿಕೊಳ್ಳಲಾಗಿದೆ.

ದಕ್ಷಿಣ ಪ್ರಾಂತದ ಜವಾಬ್ದಾರಿ ಬದಲಾವಣೆ:

ಮುಂದೆ ರಾಜ್ಯ ಬಿಜೆಪಿಯಲ್ಲೂ ಹೊಸ ತಂಡ ರಚನೆಗೊಳ್ಳಲಿದೆ. ಕೊನೆಯ ದಿನದ ಬೈಠಕ್​ನಲ್ಲಿ (ಆ.28) ಬಿಜೆಪಿಯನ್ನು ನಿಯಂತ್ರಿಸುವ ಉದ್ದೇಶದಿಂದ ಆರ್​ಎಸ್​ಎಸ್ ದಕ್ಷಿಣ ಪ್ರಾಂತದ ಜವಾಬ್ದಾರಿಗಳೂ ಬದಲಾಗಲಿವೆ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರ ಅನುಭವಿಸುತ್ತಿರುವ ಬಿಜೆಪಿ ನಾಯಕರಿಗೆ ಕ್ಲಾಸ್ ತೆಗೆದುಕೊಳ್ಳಲು ಸಮನ್ವಯ ಬೈಠಕ್​ನಲ್ಲಿ ನಿರ್ಧರಿಸಲಾಗಿದೆ ಎನ್ನಲಾಗಿದೆ. ಬೈಠಕ್​ನಲ್ಲಿ ಸಂಘದ ಕಾರ್ಯಚಟುವಟಿಕೆ ಹಾಗೂ ಬಿಜೆಪಿ ನಡೆ ಬಗ್ಗೆ ಚರ್ಚೆ ಸಾಧ್ಯತೆಯಿದೆ. ಕಾರ್ಯಕರ್ತರ ಹತ್ಯೆಗಳಿಗೆ ಕಡಿವಾಣ ಹಾಕುವ ವಿಷಯದಲ್ಲಿಯೂ ಬಿಜೆಪಿಗೆ ಆರ್​ಎಸ್​ಎಸ್ ಬಿಸಿ ಮುಟ್ಟಿಸುವ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

Modi Mangalore Visit : ಫಲಾನುಭವಿಗಳು, ಕಾರ್ಯಕರ್ತರು, ಸಾರ್ವಜನಿಕರು ಸೇರಿದಂತೆ ಪುತ್ತೂರಿನಿಂದ 25 ಸಾವಿರ ಮಂದಿ ಭಾಗಿ : ಮಠಂದೂರು

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!