Connect with us

ಕ್ರೀಡೆ

Asia Cup 2022 : ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಗೆ ಇಂದಿನಿಂದ ಚಾಲನೆ : ವೇಳಾಪಟ್ಟಿ, ಟಿವಿ ಹಾಗೂ ಮೊಬೈಲ್‌ ನೇರ ಪ್ರಸಾರ ವೀಕ್ಷಣೆಯ ವಿವರ ಇಲ್ಲಿದೆ

Published

on

Ad Widget

Ad Widget

Ad Widget

Ad Widget

ಇಂದಿನಿಂದ ( ಆಗಸ್ಟ್ 27 ) ಏಷ್ಯಾಕಪ್ ಕ್ರಿಕೆಟ್‌  ಟೂರ್ನಮೆಂಟ್ ( Asia Cup Cricket Tournament) ಆರಂಭಗೊಳ್ಳುತ್ತಿದೆ.  ದುಬೈ (dubai) ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಕ್ರೀಡಾಕೂಟಕ್ಕೆ ಚಾಲನೆ ದೊರಕಲಿದೆ. ಸಂಜೆ 7.30ಕ್ಕೆ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ  ಮೊದಲ ಪಂದ್ಯ ನಡೆಯಲಿದೆ. ಈ ಇದರ ನೇರಪ್ರಸಾರವನ್ನು ಟಿವಿ ಹಾಗೂ ಮೊಬೈಲ್‌ ನಲ್ಲಿ ಹೇಗೆ ವೀಕ್ಷಿಸಬಹುದು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

Ad Widget

Ad Widget

Ad Widget

Ad Widget

ಟೂರ್ನಿಯಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಇವುಗಳನ್ನು ಎರಡು ಗಂಪುಗಳಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಇತ್ತೀಚೆಗಷ್ಟೆ ಅರ್ಹತೆ ಪಡೆದುಕೊಂಡ ಹಾಂಗ್‌ಕಾಂಗ್ ಪಂದ್ಯಾಕೂಟದಲ್ಲಿ ಭಾಗವಹಿಸುವ ತಂಡಗಳು  ವಿಶೇಷವೆಂದರೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಪಾಕಿಸ್ತಾನ (India V/s Pakistan) ಒಂದೇ ಗುಂಪಿನಲ್ಲಿರುವುದು.

Ad Widget

Ad Widget alt="Ad Widget"/>

Ad Widget

ಭಾರತ ಹಾಗೂ  ಪಾಕಿಸ್ತಾನ ಮಧ್ಯದ ಹೈ ವೋಲ್ಟೆಜ್‌ ಪಂದ್ಯವು ನಾಳೆ ( ಆ 28) ನಡೆಯಲಿದೆ. ವಿಶ್ವದಾದ್ಯಂತ ಕ್ರಿಕೆಟ್‌ ಪ್ರಿಯರು ಈ ಪಂದ್ಯದ ವೀಕ್ಷಣೆಗೆ ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿ ಎರಡು ತಂಡಗಳು ಸಾಕಷ್ಟು ಬಲಿಷ್ಟವಾಗಿದ್ದು ವಿಶ್ವದರ್ಜೆಯ ಆಟಗಾರರನ್ನು ಹೊಂದಿದೆ. ಹೀಗಾಗಿ ಏಕಪಕ್ಷೀಯ ಪಂದ್ಯಕ್ಕಿಂತಲೂ ರೋಚಕ ಪಂದ್ಯ ನಡೆಯುವ ಸಾಧ್ಯತೆ ಅಧಿಕ.  

Ad Widget

Ad Widget <> Ad Widget

ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳಲ್ಲಿ ಉಭಯ ಗುಂಪುಗಳಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಳ್ಳಲಿರುವ ತಂಡಗಳು ಸೂಪರ್ 4 ಸುತ್ತಿಗೆ ಪ್ರವೇಶಿಸಲಿದ್ದು, ಇಲ್ಲಿ ಅತಿ ಹೆಚ್ಚು ಪಂದ್ಯ ಗೆಲ್ಲುವ 2 ತಂಡಗಳು ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲಿವೆ.

ಭಾರತದ ಸಾಧನೆ:

ಏಷ್ಯಾಖಂಡದ ಬಲಿಷ್ಠ ಕ್ರಿಕೆಟ್‌ ತಂಡಗಳು ಪಾಲ್ಗೊಳ್ಳುವ ಏಷ್ಯಾಕಪ್ ಟೂರ್ನಿಯು 1984ರಿಂದ ಆರಂಭವಾಯಿತು. ಚೊಚ್ಚಲ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿ ಸುನಿಲ್ ಗವಾಸ್ಕರ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಏಷ್ಯಾಕಪ್‌ ಟೂರ್ನಿಯಲ್ಲಿ ಭಾರತ ಕ್ರಿಕೆಟ್‌ ತಂಡವು ಪ್ರಾಬಲ್ಯ ಮೆರೆಯುತ್ತಾ ಬಂದಿದೆ. ಭಾರತ ತಂಡವು 7 ಬಾರಿ ಚಾಂಪಿಯನ್ ಆಗಿದೆ. ಇದಾದ ಬಳಿಕ ಟೀಂ ಇಂಡಿಯಾ, 1988, 1990-91, 1995, 2010, 2016 ಹಾಗೂ 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Ad Widget

Ad Widget
ದೂರದರ್ಶನದ ನೇರಪ್ರಸಾರದ ಮಾಹಿತಿ

ಏಷ್ಯಾಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ನೇರ ಪ್ರಸಾರ ಭಾರತದಲ್ಲಿ ಸ್ಟಾರ್ ಸ್ಪೋರ್ಟ್ ನೆಟ್‌ವರ್ಕ್ ಚಾನೆಲ್‌ನಲ್ಲಿ ಲಭ್ಯವಿರಲಿದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ (ಇಂಗ್ಲಿಷ್), ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಮತ್ತು ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಎಚ್‌ಡಿ (ಹಿಂದಿ) ಈ ಚಾನೆಲ್‌ಗಳಲ್ಲಿ ಏಷ್ಯಾ ಕಪ್ ಪಂದ್ಯಗಳ ನೇರಪ್ರಸಾರ ಲಭ್ಯವಿರಲಿದೆ.

ಒಟಿಟಿ ನೇರಪ್ರಸಾರದ ಮಾಹಿತಿ

ಇನ್ನು ಡಿಸ್ನೆ ಪ್ಲಸ್ ಹಾಟ್‌ಸ್ಟಾರ್ ಒಟಿಟಿ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ನೇರಪ್ರಸಾರ ಲಭ್ಯವಿರಲಿದೆ. ಹೀಗಾಗಿ ನಿಮ್ಮ ಮೊಬೈಲ್‌ನಲ್ಲಿ ಹಾಟ್‌ಸ್ಟಾರ್ ಅಪ್ಲಿಕೇಷನ್ ಮೂಲಕ ಪಂದ್ಯಗಳ ನೇರ ಪ್ರಸಾರವನ್ನು ನೋಡಬಹುದಾಗಿದೆ

ಪಂದ್ಯಗಳ ವೇಳಾಪಟ್ಟಿ

27 ಆಗಸ್ಟ್‌: ಶ್ರೀಲಂಕಾ vs ಅಫ್ಘಾನಿಸ್ತಾನ (ದುಬೈ)

28 ಆಗಸ್ಟ್‌: ಭಾರತ vs ಪಾಕಿಸ್ತಾನ (ದುಬೈ)

30 ಆಗಸ್ಟ್‌: ಬಾಂಗ್ಲಾದೇಶ vs ಅಫ್ಘಾನಿಸ್ತಾನ (ದುಬೈ)

31 ಆಗಸ್ಟ್‌: ಭಾರತ vs ಹಾಂಗ್‌ಕಾಂಗ್ (ದುಬೈ)

1 ಸೆಪ್ಟೆಂಬರ್: ಶ್ರೀಲಂಕಾ vs ಬಾಂಗ್ಲಾದೇಶ (ದುಬೈ)

2 ಸೆಪ್ಟೆಂಬರ್: ಪಾಕಿಸ್ತಾನ vs ಹಾಂಗ್‌ಕಾಂಗ್ (ಶಾರ್ಜಾ)

3 ಸೆಪ್ಟೆಂಬರ್: B1 vs B2 (ಶಾರ್ಜಾ)

4 ಸೆಪ್ಟೆಂಬರ್: A1 vs A2 (ದುಬೈ)

6 ಸೆಪ್ಟೆಂಬರ್: A1 vs B1 (ದುಬೈ)

7 ಸೆಪ್ಟೆಂಬರ್: A2 vs B2 (ದುಬೈ)

8 ಸೆಪ್ಟೆಂಬರ್: A1 vs B2 (ದುಬೈ)

9 ಸೆಪ್ಟೆಂಬರ್: B1 vs A2 (ದುಬೈ)

11 ಸೆಪ್ಟೆಂಬರ್: ಫೈನಲ್‌ (ದುಬೈ)

ಟೀಮ್ ಇಂಡಿಯಾ ಏಷ್ಯಾಕಪ್ ಸ್ಕ್ವಾಡ್: 

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!