Connect with us

ಕ್ರೀಡೆ

Asia Cup 2022 : ಶ್ರೀಲಂಕಾ ಬೌಲರ್ ಗಳ ಚಿಂದಿ ಉಡಾಯಿಸಿದ ಅಫ್ಘಾನ್ ಆರಂಭಿಕರು – ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನಕ್ಕೆ ಜಯ

Published

on

Ad Widget

Ad Widget

Ad Widget

Ad Widget

ದುಬಾಯಿ : ಆ 28 : ಏಷ್ಯಾದ ಕ್ರಿಕೆಟ್ (cricket) ದಿಗ್ಗಜರ ಕದನಕ್ಕೆ ಸಾಕ್ಷಿಯಾಗಲಿರುವ ಪ್ರತಿಷ್ಟಿತ ಏಷ್ಯಾಕಪ್ ಟೂರ್ನಿಗೆ (Asia Cup 2022) ಆ 27 ರಂದು ಚಾಲನೆ ಸಿಕ್ಕಿದೆ. ಯುಎಇ ನೆಲದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಶಿಶು ಆಫ್ಘಾನಿಸ್ತಾನ (Afghanistan) ತಂಡವು ಶ್ರೀಲಂಕಾ (Srilanka) ತಂಡವನ್ನು ಹೊಸಕಿ ಹಾಕುವ ಮೂಲಕ ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಿದೆ. ಶ್ರೀಲಂಕಾ ನೀಡಿದ 106 ರನ್ ಗಳ ಗುರಿಯನ್ನು ಕೇವಲ 10 ಓವರ್ ಗಳಲ್ಲಿ ತಲುಪುವ ಮೂಲಕ ಅಫ್ಘಾನ್ ತಂಡವು ಟೆಸ್ಟ್ ಆಡುವ ದೇಶದ ಎದುರು ಅಧಿಕಾರಯುತ ಗೆಲುವು ಸಂಪಾದಿಸಿತ್ತು.

Ad Widget

Ad Widget

Ad Widget

Ad Widget

ದುಬೈ ( Dubai) ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ಥಾನ ತಂಡದ ನಾಯಕ ಮೊಹಮ್ಮದ್ ನಬಿ ಫೀಲ್ಡಿಂಗ್ ಆಯ್ದುಕೊಂಡು ಮೊದಲು ಶ್ರೀಲಂಕಾ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಶ್ರೀಲಂಕಾ 19.4 ಓವರ್‌ಗಳಲ್ಲಿ ಅಫ್ಘಾನ್ ತಂಡದ ಬೌಲರ್ ಗಳ ತೀಕ್ಷ್ಣ ಬೌಲಿಂಗ್ ಗೆ ರನ್ ಗಳಿಸಲು ಒದ್ದಾಡಿ ಕೇವಲ 105 ರನ್ ಕಲೆ ಹಾಕಲಷ್ಟೆ ಶಕ್ತವಾಯಿತು. ಈ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಆಫ್ಘಾನಿಸ್ತಾನ 10.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್‌ ಕಲೆಹಾಕಿ 8 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ದೊಡ್ಡ ನೆಟ್ ರನ್ ರೇಟ್ ಜತೆಗೆ ಅಂಕಪಟ್ಟಿಯಲ್ಲಿ ಗೆಲುವಿನ ಖಾತೆ ತೆರೆದು ಶುಭಾರಂಭ ಮಾಡಿದೆ.

Ad Widget

Ad Widget alt="Ad Widget"/>

Ad Widget

ಶ್ರೀಲಂಕಾ ಇನ್ನಿಂಗ್ಸ್

ಶ್ರೀಲಂಕಾ ಇನ್ನಿಂಗ್ಸ್ ದಯನೀಯವಾಗಿ ಆರಂಭಗೊಂಡಿತ್ತು. ಫಾಜಲ್ ಹಕ್ ಫಾರೂಕಿ ಎಸೆದ ಮೊದಲ ಓವರ್‌ನಲ್ಲೇ 2 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಮೊದಲ ಓವರ್‌ನ ಐದನೇ ಎಸೆತದಲ್ಲಿ ಕುಸಲ್ ಮೆಂಡಿಸ್ 2 ರನ್ ಕಲೆಹಾಕಿ ಔಟ್ ದರು. ಬಳಿಕ ಬಂದ ಚರಿತ ಅಸಲಂಕಾ ಮೊದಲ ಎಸೆತದಲ್ಲೆ ಸೊನ್ನೆ ಸುತ್ತಿದ್ದರು.

Ad Widget

Ad Widget <> Ad Widget

ಇನ್ನೊರ್ವ ಆರಂಭಿಕ ಆಟಗಾರ ಪಾತುಮ್ ನಿಸ್ಸಾಂಕ 3, ಧನುಷ್ಕಾ ಗುಣತಿಲಕ 17, ಭಾನುಕ ರಾಜಪಕ್ಸೆ 38, ವನಿಂದು ಹಸರಂಗ 2, ನಾಯಕ ದಾಸುನ್ ಶನಕ 0, ಚಾಮಿಕ ಕರುಣಾರತ್ನೆ 31, ಮಹೀಶ್ ತೀಕ್ಷಣ ಡೈಮಂಡ್ 0, ಮತೀಶ ಪತಿರಾಣಾ 5 ರನ್ ಮತ್ತು ದಿಲ್ಶಾನ್ ಮಧುಶಂಕ ಅಜೇಯ 1 ರನ್ ಕಲೆಹಾಕಿದರು.

Asia Cup 2022 : ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಗೆ ಇಂದಿನಿಂದ ಚಾಲನೆ : ವೇಳಾಪಟ್ಟಿ, ಟಿವಿ ಹಾಗೂ ಮೊಬೈಲ್‌ ನೇರ ಪ್ರಸಾರ ವೀಕ್ಷಣೆಯ ವಿವರ ಇಲ್ಲಿದೆ

Ad Widget

Ad Widget

ಅಫ್ಘಾನಿಸ್ತಾನದ ಪರ ಫಜಲ್ ಹಕ್ ಫರೂಕಿ 3 ವಿಕೆಟ್ ಪಡೆದು ಶ್ರೀಲಂಕಾ ಬ್ಯಾಟಿಂಗಿನ ನಡು ಮುರಿದರು. ನಾಯಕ ಮೊಹಮ್ಮದ್ ನಬಿ ಹಾಗೂ ಮುಜೀಬ್ ಉರ್ ರೆಹಮಾನ್ ತಲಾ 2 ವಿಕೆಟ್ ಹಾಗೂ ನವೀನ್ ಉಲ್ ಹಕ್ 1 ವಿಕೆಟ್ ಸಂಪಾದಿಸಿದರು.

ಅಫ್ಘಾನಿಸ್ತಾನ ಇನ್ನಿಂಗ್ಸ್

ಆಫ್ಘಾನಿಸ್ತಾನ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಹಜರತ್‌ಉಲ್ಲಾ ಜಝೈ ಹಾಗೂ ರಹ್ಮನುಲ್ಲ ಗುರ್ಬಜ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪವರ್ ಪ್ಲೇಯ ಕೇವಲ 6 ಒವರ್ ಗಳಲ್ಲಿ 83 ರನ್‌ಗಳನ್ನು ಇವರಿಬ್ಬರು ಬಾಚಿದರು. ಉಳಿದ 23 ರನ್ ಗಳನ್ನು ಗಳಿಸಲು 5 ಒವರ್ ವ್ಯಯಿಸಿದ ಅಫ್ಘಾನ್ ತಂಡ ಅದಕ್ಕೆ ಎರಡು ವಿಕೆಟ್ ಕೂಡ ಕಳೆದುಕೊಂಡಿತ್ತು.

Apple IPhone 11 : ಈಗ ಕೇವಲ 25,000 ರೂಪಾಯಿಗೆ ಲಭ್ಯ ! ಈ ಅದ್ಭುತ ಬೆಲೆಯಲ್ಲಿ ಮೊಬೈಲ್‌ ಅನ್ನು ಪಡೆಯುವುದು ಹೇಗೆ ಗೊತ್ತೆ?  ಇಲ್ಲಿದೆ ವಿವರ

ಅಫ್ಘಾನಿಸ್ತಾನದ ಪರ ರಹ್ಮನುಲ್ಲ ಗುರ್ಬಜ್ 18 ಎಸೆತಗಳಲ್ಲಿ 40 ರನ್ ಬಾರಿಸಿದರೆ, ಇಬ್ರಾಹಿಂ ಜದ್ರಾನ್ 15 ರನ್ ಕಲೆಹಾಕಿದರು. ಇನ್ನುಳಿದಂತೆ ನಜಿಬುಲ್ಲಾ ಜದ್ರಾನ್ ಅಜೇಯ 2 ರನ್ ಹಾಗೂ ಹಜರತ್‌ಉಲ್ಲಾ ಜಝೈ ಅಜೇಯ 37 ರನ್ ಬಾರಿಸಿದರು.

ಇಂದು ಭಾರತ – ಪಾಕ್ ಪಂದ್ಯ

ಶ್ರೀಲಂಕಾ ಪರ ವನಿಂದು ಹಸರಂಗ ಒಂದು ವಿಕೆಟ್ ಪಡೆದದ್ದು ಬಿಟ್ಟರೆ ಉಳಿದ ಯಾವುದೇ ಬೌಲರ್ ಸಹ ವಿಕೆಟ್ ಪಡೆಯಲಿಲ್ಲ.

ಇಂದು ವಿಶ್ವದ ಕ್ರಿಕೆಟ್ ಪ್ರಿಯರು ಬಾರಿ ಆಸಕ್ತಿಯಿಂದ ಕಾಯುತ್ತಿರುವ ಭಾರತ – ಪಾಕಿಸ್ತಾನ ತಂಡಗಳ ಮಧ್ಯ ಸಂಜೆ 7. 30 ಕ್ಕೆ ಪಂದ್ಯ ನಡೆಯಲಿದೆ.

Sex Education ಮಿಲನ ಮಹೋತ್ಸವಕ್ಕೆ ಹುಡುಗಿಯರನ್ನು ತಯಾರು ಮಾಡುವುದು ಹೇಗೆ ? ಇಲ್ಲಿದೆ ಟಿಪ್ಸ್‌

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!